logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

E-KYC ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ; ಶಾಶ್ವತ ಪರಿಹಾರ ಕಲ್ಪಿಸಿ: ಸಚಿವ ರಿಜ್ವಾನ್ ಆರ್ಷದ್ ಬೆಂಗಳೂರು: ಇ-ಕೆವೈಸಿ ಪ್ರಕ್ರಿಯೆ ವೇಳೆ ಉಂಟಾಗುತ್ತಿರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಆರ್ಷದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ Targeted Public Distribution System (Control) Amendment Order ಅನ್ವಯ ಅರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಹಾಗೂ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸುವ ವ್ಯವಸ್ಥೆ ಜಾರಿಯಲ್ಲಿದೆ. ರಾಜ್ಯದಲ್ಲಿ ಐದು ವರ್ಷ ಪೂರ್ಣಗೊಂಡಿರುವ ಒಟ್ಟು 2,67,64,276 ಫಲಾನುಭವಿಗಳ ಮರು ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕೆ ಸೆ.30, 2026 ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು ಇಂದು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆ ಕಂಡುಬಂದ ತಕ್ಷಣ ಸಮನ್ವಯದಿಂದ ಕ್ರಮ ಕೈಗೊಂಡು ಪರಿಹರಿಸುವಂತೆ ಸೂಚಿಸಿದರು. 📱 ಮೊಬೈಲ್‌ನಲ್ಲೇ ಇ-ಕೆವೈಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಪದೇಪದೇ ತೆರಳುವ ಅಗತ್ಯ ಕಡಿಮೆ ಮಾಡುವ ಉದ್ದೇಶದಿಂದ ಮೊಬೈಲ್ ಮೂಲಕ Face Authentication ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. Directorate of Electronic Delivery of Citizen Services ಸಹಯೋಗದಲ್ಲಿ ಅಭಿವೃದ್ಧಿಪಡಿಸುತ್ತಿರುವ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ನೊಂದು ವಾರದೊಳಗೆ ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಫಲಾನುಭವಿಗಳು ತಮ್ಮ ಮೊಬೈಲ್‌ನಲ್ಲಿಯೇ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ. ಇ-ಕೆವೈಸಿ ಪ್ರಕ್ರಿಯೆ ಸುಗಮಗೊಳಿಸಲು ಆಹಾರ ಇಲಾಖೆಯ ಅಪ್ಲಿಕೇಶನ್‌ನಲ್ಲಿ ಪ್ರತ್ಯೇಕ URLಗಳನ್ನೂ ಒದಗಿಸಲಾಗಿದೆ. ಅಲ್ಲದೆ, ಆಹಾರ ಇಲಾಖೆಯ ಸರ್ವರ್‌ನ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸಲು Load Testing ನಡೆಸಲಾಗುತ್ತಿದೆ. 📊 ಶೇ.37ರಷ್ಟು ಇ-ಕೆವೈಸಿ ಪೂರ್ಣ ಇ-ಕೆವೈಸಿ ಮಾಡಿಸಬೇಕಿರುವ 2.67 ಕೋಟಿ ಫಲಾನುಭವಿಗಳ ಪೈಕಿ 97,54,197 ಮಂದಿ ಇದುವರೆಗೆ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಒಟ್ಟಾರೆ ಶೇ.37ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರತಿದಿನ ಸರಾಸರಿ 5.40 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ. ಆಹಾರ ಇಲಾಖೆಯ ಸರ್ವರ್‌ಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಿಂದಿನಿಂದಲೂ ಇದ್ದು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ 3rd Party Agencyಯನ್ನು ನೇಮಕ ಮಾಡಲಾಗಿದೆ ಎಂದು ಸಚಿವ ರಿಜ್ವಾನ್ ಆರ್ಷದ್ ತಿಳಿಸಿದರು. ಮುಂದಿನ ಒಂದು ತಿಂಗಳೊಳಗೆ ಆಹಾರ ಇಲಾಖೆಯ ಸರ್ವರ್ ಹಾಗೂ ತಾಂತ್ರಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ಸರಳ, ವೇಗದ ಹಾಗೂ ಪರಿಣಾಮಕಾರಿಯಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು. ಸಭೆಯಲ್ಲಿ ಕಾರ್ಯದರ್ಶಿ ಕನಗವಲ್ಲಿ ಸೇರಿದಂತೆ ಆಹಾರ ಇಲಾಖೆ, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

59 min ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
59 min ago
50b47df4-b358-4baa-8385-bb2be114b790

E-KYC ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ; ಶಾಶ್ವತ ಪರಿಹಾರ ಕಲ್ಪಿಸಿ: ಸಚಿವ ರಿಜ್ವಾನ್ ಆರ್ಷದ್ ಬೆಂಗಳೂರು: ಇ-ಕೆವೈಸಿ ಪ್ರಕ್ರಿಯೆ ವೇಳೆ ಉಂಟಾಗುತ್ತಿರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಆರ್ಷದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ Targeted Public Distribution System (Control) Amendment Order ಅನ್ವಯ ಅರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಹಾಗೂ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸುವ ವ್ಯವಸ್ಥೆ ಜಾರಿಯಲ್ಲಿದೆ. ರಾಜ್ಯದಲ್ಲಿ ಐದು ವರ್ಷ ಪೂರ್ಣಗೊಂಡಿರುವ ಒಟ್ಟು 2,67,64,276 ಫಲಾನುಭವಿಗಳ ಮರು ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕೆ ಸೆ.30, 2026 ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು

1dc049fa-86c5-4a1b-bb6d-fb047b2e9f93

ಇಂದು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆ ಕಂಡುಬಂದ ತಕ್ಷಣ ಸಮನ್ವಯದಿಂದ ಕ್ರಮ ಕೈಗೊಂಡು ಪರಿಹರಿಸುವಂತೆ ಸೂಚಿಸಿದರು. 📱 ಮೊಬೈಲ್‌ನಲ್ಲೇ ಇ-ಕೆವೈಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಪದೇಪದೇ ತೆರಳುವ ಅಗತ್ಯ ಕಡಿಮೆ ಮಾಡುವ ಉದ್ದೇಶದಿಂದ ಮೊಬೈಲ್ ಮೂಲಕ Face Authentication ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. Directorate of Electronic Delivery of Citizen Services ಸಹಯೋಗದಲ್ಲಿ ಅಭಿವೃದ್ಧಿಪಡಿಸುತ್ತಿರುವ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ನೊಂದು ವಾರದೊಳಗೆ ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಫಲಾನುಭವಿಗಳು ತಮ್ಮ ಮೊಬೈಲ್‌ನಲ್ಲಿಯೇ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ. ಇ-ಕೆವೈಸಿ ಪ್ರಕ್ರಿಯೆ ಸುಗಮಗೊಳಿಸಲು ಆಹಾರ ಇಲಾಖೆಯ ಅಪ್ಲಿಕೇಶನ್‌ನಲ್ಲಿ ಪ್ರತ್ಯೇಕ URLಗಳನ್ನೂ ಒದಗಿಸಲಾಗಿದೆ. ಅಲ್ಲದೆ, ಆಹಾರ ಇಲಾಖೆಯ ಸರ್ವರ್‌ನ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸಲು Load Testing ನಡೆಸಲಾಗುತ್ತಿದೆ. 📊 ಶೇ.37ರಷ್ಟು ಇ-ಕೆವೈಸಿ ಪೂರ್ಣ ಇ-ಕೆವೈಸಿ ಮಾಡಿಸಬೇಕಿರುವ 2.67 ಕೋಟಿ ಫಲಾನುಭವಿಗಳ ಪೈಕಿ

cb368ec9-5f5f-433b-a8b2-c4dab36003e6

97,54,197 ಮಂದಿ ಇದುವರೆಗೆ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಒಟ್ಟಾರೆ ಶೇ.37ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರತಿದಿನ ಸರಾಸರಿ 5.40 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ. ಆಹಾರ ಇಲಾಖೆಯ ಸರ್ವರ್‌ಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಿಂದಿನಿಂದಲೂ ಇದ್ದು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ 3rd Party Agencyಯನ್ನು ನೇಮಕ ಮಾಡಲಾಗಿದೆ ಎಂದು ಸಚಿವ ರಿಜ್ವಾನ್ ಆರ್ಷದ್ ತಿಳಿಸಿದರು. ಮುಂದಿನ ಒಂದು ತಿಂಗಳೊಳಗೆ ಆಹಾರ ಇಲಾಖೆಯ ಸರ್ವರ್ ಹಾಗೂ ತಾಂತ್ರಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ಸರಳ, ವೇಗದ ಹಾಗೂ ಪರಿಣಾಮಕಾರಿಯಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು. ಸಭೆಯಲ್ಲಿ ಕಾರ್ಯದರ್ಶಿ ಕನಗವಲ್ಲಿ ಸೇರಿದಂತೆ ಆಹಾರ ಇಲಾಖೆ, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
    1
    ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    51 min ago
  • ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    1
    ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    13 hrs ago
  • ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    2
    ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು.
ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ  ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು.
ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು..
ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    12 hrs ago
  • ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    1
    ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್
ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು.
ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು.
ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು.
ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು.
3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು.
ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್  (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ  ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.
*ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    22 hrs ago
  • ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 
ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    41 min ago
  • ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    6 hrs ago
  • ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    1
    ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು 
ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ.
ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    13 hrs ago
  • "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "
    1
    "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.