ಮೌಲಾನಾ ಆಜಾದ್ ಶಾಲೆ ನೂತನ ಕಟ್ಟಡಕ್ಕೆ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ 📰 ಜಾಲಹಳ್ಳಿ–ದೇವದುರ್ಗ | ಬ್ರೇಕಿಂಗ್ ನ್ಯೂಸ್ ಮೌಲಾನಾ ಆಜಾದ್ ಶಾಲೆ ನೂತನ ಕಟ್ಟಡಕ್ಕೆ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ಜಾಲಹಳ್ಳಿ, ಸೆ.16: ಪಟ್ಟಣದ ಸರ್ಕಾರಿ ಮೌಲಾನಾ ಆಜಾದ್ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣಕುಮಾರ ಹಾಗೂ ಅಧಿಕಾರಿಗಳ ತಂಡ ಬುಧವಾರ ಸ್ಥಳ ಪರಿಶೀಲನೆ ನಡೆಸಿತು. ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ **ಸರ್ವೆ ನಂ.131/*/***ರಲ್ಲಿ ಗೋಪಾಲಕೃಷ್ಣ ತಂದೆ ವೇಂಕೋಬರಾಯ ಮೇಟಿ ಅವರ ಲೇಔಟ್‌ನಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟಿರುವ 100×100 ಅಡಿ ಜಾಗವನ್ನು ಅಧಿಕಾರಿಗಳು ಪರಿಶೀಲಿಸಿದರು. ಈ ಹಿಂದೆ ಸರ್ವೆ ನಂ.132/2/2ರ ಲೇಔಟ್‌ನಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಆಗ ಶಾಲೆಯಲ್ಲಿ 6ರಿಂದ 10ನೇ ತರಗತಿವರೆಗೆ ಮಾತ್ರ ತರಗತಿಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆ ಜಾಗವನ್ನು ಪರಿಗಣಿಸಲಾಗಿತ್ತು. ಇದೀಗ ಶಾಲೆಯನ್ನು ಕೆಪಿಎಸ್‌ಸಿ ಶಾಲೆಯಾಗಿ ಮೇಲ್ದರ್ಜೆಗೇರಿಸಿರುವುದರಿಂದ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಅಗತ್ಯ ಸೌಲಭ್ಯಗಳಿಗೆ ಅನುಗುಣವಾಗಿ ಸರ್ವೆ ನಂ.132/2/2ರ ಜಾಗ ಸಾಕಾಗುವುದಿಲ್ಲ ಎಂದು ಜಿಲ್ಲಾ ಅಧಿಕಾರಿ ಪ್ರವೀಣಕುಮಾರ ತಿಳಿಸಿದರು. ಈ ಹಿನ್ನೆಲೆಯಲ್ಲಿ ಸರ್ವೆ ನಂ.131/*/*ರಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟಿರುವ 100×100 ಅಡಿ ಜಾಗವನ್ನು ಪರಿಶೀಲಿಸಲಾಗಿದ್ದು, ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಈ ಸ್ಥಳ ಸೂಕ್ತವಾಗಿದೆ ಎಂದು ಅವರು ತಿಳಿಸಿದರು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಿದ ಬಳಿಕ, ಒಂದು ತಿಂಗಳೊಳಗೆ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಅಧಿಕಾರಿ ಪ್ರವೀಣಕುಮಾರ ಹೇಳಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ನರಸಿಂಹ, ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಅಷ್ಟಗಿ, ಕಾರ್ಯದರ್ಶಿ ಅಯ್ಯಪ್ಪ, ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಮ್ಯಾಗೇರಿ, ಮುಖಂಡರಾದ ಹುಸೇನ್ ನಾಶಿ, ಇಮಾಮ್ ಸಾಬ್, ಮಕ್ತುಮ್, ಸಂಘಟನೆಯ ಮುಖಂಡರಾದ ಶಬ್ಬೀರ್, ಮಹಾಲಿಂಗ ದೊಡ್ಡಮನಿ, ಮೌನೇಶ ದಾಸರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಹೀಮಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ: ಖಾಜಾ ಹುಸೇನ್ ಬಾಬಾ ಜಾಲಹಳ್ಳಿ

- ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ ಯಾದಗಿರಿ-ರಾಯಚೂರು ಹೆದ್ದಾರಿಯ ಆರ್. ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.1
- ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ1
- YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..! ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.1
- ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.1
- ಅವೈಜ್ಞಾನಿಕವಾಗಿ ಟೋಲ್ ಗೇಟ್ ನಿರ್ಮಾಣ ಮಾಡಿದ್ದು ತೆರವುಗೊಳಿಸಲು ಆಗ್ರಹ ಅವೈಜ್ಞಾನಿಕವಾಗಿ ಟೋಲ್ ತುರ್ತಾಗಿ ತೆರವುಗೊಳಿಸಿ ಮುಂದಾಗುವ ಅವಘಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಒತ್ತಾಯ. ಅವೈಜ್ಞಾನಿಕವಾಗಿ ಟೋಲ್‌ನಿಂದ ಸಾಕಷ್ಟು ಬಡ ಚಾಲಕರು ಜೀವ ಬಲಿಯಾಗಿದ್ದು ಇನ್ನಷ್ಟು ಜೀವ ಬಲಿಯಾಗಬೇಕು ? ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಯಾದಗಿರಿ : ಬಡ ವಾಹನ ಚಾಲಕರ ನಿರಂತರ ಜೀವ ತೆಗೆಯುತ್ತಿರುವ ಯಾದಗಿರಿ ರಾಯಚೂರು ಹೆದ್ದಾರಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್‌ನ್ನು ತುರ್ತಾಗಿ ತೆರವುಗೊಳ್ಳಿಸಿ ಇಂದೇ ಆದ ಅನಾವುತಗಳನ್ನು ಇನ್ನು ಮುಂದೇ ಅನಾವುತಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ ಯಾದಗಿರಿ ತಾಲ್ಲೂಕಿನ ಆರ್.ಹೊಸಳ್ಳಿ ಮತ್ತು ನಾಗಲಾಪುರ ಮಧ್ಯದಲ್ಲಿ ಬರುವ ಯಾದಗಿರಿ ರಾಯಚೂರು ಹೋಗುವ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಬೇಟಿ ನೀಡಿ ಪರಿಶೀಲಿಸಿದ ನಂತರ ರೈತರ ಮತ್ತು ವಾಹನ ಸವಾರರ ಜೊತೆ ಚರ್ಚಿಸಿ ನಂತರ ದೀಡಿರ್‌ನ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಈ ಟೋಲ್‌ನಲ್ಲಿ ವಿದ್ಯುತ್ ಲೈಟ್, ಸ್ಟೀಕರ್ ಸರಿಯಾಗಿ ಅಳವಡಸದೆ ಅವೈಜ್ಞಾನಿಕವಾಗಿ ನಿರ್ಮಿಸಿ ಈ ಟೋಲ್‌ನಲ್ಲಿ ಈಗಾಗಲೇ ಸಾಕಷ್ಟು ಜೀವಗಳು ಬಲಿಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷವಹಿಸಿರುವುದು ಇದು ನಾಚೀಗೇಡಿನ ಸಂಗತಿ ಎಂದು ದಿನ ನಿತ್ಯ ಈ ರಸ್ತೆಯಲ್ಲಿ ಸಾವಿರಾರೂ ವಾಹನಗಳು ಸಂಚಾರ ಮಾಡುತ್ತಿದ್ದು ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲನ ಕಾರಣ ಬಡವ ಜೀವಗಳು ಬಲಿಯಾಗುತ್ತಿದ್ದು ಸಂಬAಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತು ಇನ್ನೆಷ್ಟು ಬಡಜೀವಿಗಳನ್ನು ಬಲಿಪಶು ಮಾಡುತ್ತಿದ್ದಿರಿ ಎಂದು ಕಾರವಾಗಿ ಪ್ರಶ್ನಿಸಿದರು. ತಕ್ಷಣ ಟೋಲ್‌ನ್ನು ತೆರವುಗೊಳ್ಳಿಸಿ ಮುಂದಾಗುವ ಅವಗಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಟೋಲ್ ಸ್ಥಳದಲ್ಲೇ ಮುಖ್ಯ ರಸ್ತೆ ತಡೆದ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಬದಲ್ಲಿ ಮಲ್ಲೇಶಿ, ಪವನ. ತಿಪ್‌ಣ್ಣ, ಬಸಲಿಂಗಪ್ಪ, ಹಣಮಂತ, ಮರಲಿಂಗಪ್ಪ, ಮಹಾದೇವಪ್ಪ ಮೋನಪ್ಪ ಮಲ್ಲಪ್ಪ ಚಂದ್ರು ಸಿದ್ದು ತಿಮ್ಮಪ್ಪ ಮಲ್ಲಪ್ಪ ಆನಂದ ಭೀಮಪ್ಪ ಮಲ್ಲಪ್ಪ ಸಾಬು ಮಲ್ಲಪ್ಪ ಸೇರಿದಂತೆ ಅನೇಕು ಇದ್ದರು2
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.4
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ1