ಪ್ರತಿ ವಿದ್ಯಾರ್ಥಿಗೆ ಒಟಿಪಿ ಕಡ್ಡಾಯ: ಮುಖ್ಯಶಿಕ್ಷಕರಿಗೆ ಹೆಚ್ಚಿದ ತಲೆನೋವು ಪರೀಕ್ಷೆಗಳು ಮುಗಿದು ಫಲಿತಾಂಶ ಪ್ರಕಟವಾದ ಹಿನ್ನೆಲೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳನ್ನು ಒಂದು ತರಗತಿಯಿಂದ ಮತ್ತೊಂದು ತರಗತಿಗೆ ಸ್ಯಾಟ್ಸ್ (Student Achievement Tracking System) ತಂತ್ರಾಂಶದಲ್ಲಿ ಪ್ರಮೋಟ್ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಆದರೆ ಪ್ರತಿಯೊಂದು ವಿದ್ಯಾರ್ಥಿಯನ್ನು ಪ್ರಮೋಟ್ ಮಾಡುವಾಗ ಪ್ರತ್ಯೇಕ ಒಟಿಪಿ ನಮೂದಿಸುವ ವ್ಯವಸ್ಥೆ ಮುಖ್ಯಶಿಕ್ಷಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎಂದು ಶಿಕ್ಷಕರ ವಲಯದಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರಸ್ತುತ ಸ್ಯಾಟ್ಸ್ ತಂತ್ರಾಂಶದಲ್ಲಿ ಪ್ರತಿಯೊಂದು ವಿದ್ಯಾರ್ಥಿಯ ದಾಖಲೆ ಪರಿಶೀಲಿಸಿ ಪ್ರಮೋಟ್ ಮಾಡಲು ಪ್ರತ್ಯೇಕ ಒಟಿಪಿ ಕಡ್ಡಾಯವಾಗಿದ್ದು, ಒಂದೊಂದು ಶಾಲೆಯಲ್ಲಿ ನೂರಾರು ಹಾಗೂ ಸಾವಿರಾರು ವಿದ್ಯಾರ್ಥಿಗಳಿರುವ ಕಾರಣ ಮುಖ್ಯಶಿಕ್ಷಕರು ಗಂಟೆಗಟ್ಟಲೆ ಕಂಪ್ಯೂಟರ್ ಮುಂದೆ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಳ್ಳಿಗಳಲ್ಲಿ ಇಂಟರ್ನೆಟ್ ಸಮಸ್ಯೆ, ಸೆಷನ್ ಔಟ್ ಆಗುವುದು, ನೆಟ್‌ವರ್ಕ್ ವ್ಯತ್ಯಯ, ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ತಾಂತ್ರಿಕ ಅಡಚಣೆಗಳಿಂದ ಕಾರ್ಯ ಇನ್ನಷ್ಟು ಸಂಕೀರ್ಣವಾಗಿದೆ ಎಂದು ಶಿಕ್ಷಕರು ಹೇಳುತ್ತಿದ್ದಾರೆ. ಮುಖ್ಯಶಿಕ್ಷಕರು ಸ್ಯಾಟ್ಸ್ ಲಾಗಿನ್ ಆದ ನಂತರ ಒಂದು ದಿನಕ್ಕೆ ಒಂದೇ ಒಟಿಪಿ ಬಂದರೆ ಎಲ್ಲ ವಿದ್ಯಾರ್ಥಿಗಳನ್ನು ಒಂದೇ ಬಾರಿ ಪ್ರಮೋಟ್ ಮಾಡಲು ಅನುಕೂಲವಾಗುತ್ತದೆ. ಪ್ರತಿಯೊಂದು ವಿದ್ಯಾರ್ಥಿಗೆ ಪ್ರತ್ಯೇಕ ಒಟಿಪಿ ನೀಡುವ ವ್ಯವಸ್ಥೆಯನ್ನು ತೆಗೆದುಹಾಕಿ, ದಿನಕ್ಕೆ ಒಂದು ಒಟಿಪಿ ಜಾರಿ ಮಾಡುವಂತೆ ಶಿಕ್ಷಣ ಇಲಾಖೆ ಸ್ಯಾಟ್ಸ್ ತಂತ್ರಾಂಶದಲ್ಲಿ ತುರ್ತು ಬದಲಾವಣೆ ತರಬೇಕೆಂದು ಶಿಕ್ಷಕರು ಆಗ್ರಹಿಸಿದ್ದಾರೆ.

- ಮಾನ್ವಿ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಮಹಾ ಸಾಧ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ, ಪ್ರಜಾಕ್ಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸುಖದೇವ್ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.1
- ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ, ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯದಿಂದ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗುತ್ತಿತ್ತು. ಇದರಿಂದ ಬೇಸತ್ತ ಮಹಿಬೂಬಿ ಎಂಬ ಮಹಿಳೆ, ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ವತಃ ಚರಂಡಿ ನಿರ್ಮಿಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದ್ದಾರೆ.1
- BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ: ಅಧಿಕಾರ ಸ್ವೀಕಾರ ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಮತ್ತು ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಸಾಕ್ಷಿಯಾದರು.1
- ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.1
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕಬ್ಬು ಕೃಷಿಯು ಸ್ಥಳೀಯ ರೈತರ ಪ್ರಮುಖ ಆದಾಯ ಮೂಲವಾಗಿದೆ. ಸದ್ಯ ಕಬ್ಬು ಬೆಳೆಗಾರರು ಇಳುವರಿ ಮತ್ತು ಬೆಲೆಯಂತಹ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷ ಉತ್ತಮ ಇಳುವರಿ ಹಾಗೂ ಲಾಭದಾಯಕ ಬೆಲೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.1
- ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಪೊಲೀಸ್ ಇಲಾಖೆ ಘೋಷಿಸಿದೆ. ರಸ್ತೆ ಅಪಘಾತಗಳಿಂದ ಜೀವಹಾನಿ ತಡೆಯಲು ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.1
- ರಾಯಚೂರು ಜಿಲ್ಲೆಯ ಮಾನ್ವಿ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಮಹಾ ಸಾಧ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಲು ವಿಶೇಷ ಉಪನ್ಯಾಸ ಆಯೋಜಿಸಲಾಗಿತ್ತು.1