Shuru
Apke Nagar Ki App…
ಚಿಕ್ಕಬಳ್ಳಾಪುರ ಲೋಕಲ್ ನ್ಯೂಸ್ ಕ್ಷಣ ಕ್ಷಣದ ಮಾಹಿತಿ ನ್ಯೂಸ್ ನಲ್ಲಿ ಲಭ್ಯ.
Venkey Manu
ಚಿಕ್ಕಬಳ್ಳಾಪುರ ಲೋಕಲ್ ನ್ಯೂಸ್ ಕ್ಷಣ ಕ್ಷಣದ ಮಾಹಿತಿ ನ್ಯೂಸ್ ನಲ್ಲಿ ಲಭ್ಯ.
More news from Chikkaballapura and nearby areas
- ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ1
- ಹನೂರು: ತಾಲೂಕಿನ ಅಂಬಿಕಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆಯೊಂದು ಬಲಿಯಾದ ಘಟನೆ ನಡೆದಿದೆ. ಅಂಬಿಕಾಪುರ ಗ್ರಾಮದ ಕೃಷ್ಣ ಎಂಬುವವರು ತಮ್ಮ ಮೇಕೆಗಳನ್ನು ಅರಣ್ಯ ಸಮೀಪದ ಜಮೀನೊಂದರ ಬಳಿ ಮೇಯಲು ಬಿಟ್ಟಿದ್ದರು. ಈ ವೇಳೆ ಕಾಡಿನಿಂದ ಹೊರಬಂದ ಚಿರತೆಯೊಂದು ಮೇಕೆಯ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ ಮೇಕೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆ ಸಂಚರಿಸುತ್ತಿರುವ ಪ್ರದೇಶದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ರೈತರಿಗೆ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.1
- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- *ಭಾರತ ನಲ್ಲಿ ವೈರಲ್*1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಸ್ಮಶಾನಕ್ಕೆ ರಸ್ತೆ ಕಲ್ಪಿಸಿ ಕೊಡದಿದ್ದರೆ ಉಗ್ರ ಹೋರಾಟ - ಗ್ರಾಮರಸ್ಥರು ಎಚ್ಚರಿಕೆ. ಹನೂರು: ತಾಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಸ್ಮಶಾನಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವ ರಸ್ತೆ ತೆರವು ಮಾಡದಿದ್ದರೆ ತಾಲೂಕು ಮಾದಿಗ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು. ತಾಲ್ಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ಇದೇ ಗ್ರಾಮದ ಲೋಕೇಶ್ ಎಂಬವರು ಒತ್ತುವರಿ ಮಾಡಿಕೊಂಡಿದ್ದರು. ಈ ಸಂಬಂಧ ಒತ್ತುವರಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ತಹಶೀಲ್ದಾರ್ ಕೆಎಸ್ ಚೈತ್ರ ರವರ ಸಮ್ಮುಖದಲ್ಲಿ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಬಂದು ಸರ್ವೆಮಾಡಿದರು. ಆ ಪ್ರಕಾರ ಹಿಂದೆ ಇದ್ದ ರೂಢಿಗತ ದಾರಿಯು ಖಾಸಗಿ ವ್ಯಕ್ತಿಗೆ ಸೇರಿದ ಪಟ್ಟಾ ಭೂಮಿಯಾಗಿದೆ. ಅದರ ಪಕ್ಕದಲ್ಲಿರುವ ಹಳ್ಳದಲ್ಲಿ ನಿಮಗೆ ದಾರಿ ಬಿಡಿಸಬೇಕು ಎಂದು ಭೂಮಾಪನ ಇಲಾಖೆ ಅಧಿಕಾರಿ ನಟರಾಜು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಅರಿತ ತಹಶೀಲ್ದಾರ್ ರವರು ಗ್ರಾಮಸ್ಥರು ಧೃತಿಗೆಡಬೇಡಿ. ನಿಮಗೆ ರಸ್ತೆ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮದು. ಒಂದು ವಾರ ಗಡುವು ನೀಡಿ, ಜಮೀನು ಮಾಲೀಕರ ಜೊತೆ ಮಾತನಾಡಿ ರಸ್ತೆಗೆ ಅಗತ್ಯವಾಗಿರುವ ಜಾಗ ಬಿಡಿಸಲು ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.4
- ಹನೂರು ತಾಲೂಕಿನ ಕುಡುವಾಳೆ ಗ್ರಾಮದ ಜಮೀನೊಂದಕ್ಕೆ ಹಾಡುಹಗಲೇ ಕಾಡಾನೆಯೊಂದು ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶಪಡಿಸಿರುವ ಘಟನೆ ನಡೆದಿದೆ. ಗ್ರಾಮದ ಸಿದ್ದಶೆಟ್ಟಿ ಎಂಬವರಿಗೆ ಸೇರಿದ ಜಮೀನಿಗೆ ಸಮೀಪದ ಅರಣ್ಯ ಪ್ರದೇಶದಿಂದ ಕಾಡಾನೆ ಹೊರಬಂದು, ಜಮೀನಿನಲ್ಲಿ ಬೆಳೆದಿದ್ದ ವಿವಿಧ ಬೆಳೆಗಳನ್ನು ತಿಂದು, ತುಳಿದು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ. ಇದರಿಂದ ರೈತ ಸಿದ್ದಶೆಟ್ಟಿಗೆ ಭಾರೀ ನಷ್ಟ ಉಂಟಾಗಿದೆ. ಈ ಬಗ್ಗೆ ರೈತ ಸಿದ್ದಶೆಟ್ಟಿ ಮಾತನಾಡಿ, “ಹಗಲಿನ ವೇಳೆಯಲ್ಲೇ ಕಾಡಾನೆ ಜಮೀನಿಗೆ ನುಗ್ಗಿದ್ದು, ನಾವು ಏನೂ ಮಾಡಲಾಗದೆ ನೋಡುತ್ತಲೇ ನಿಂತೆವು. ಬೆಳೆ ಸಂಪೂರ್ಣ ನಾಶವಾಗಿದ್ದು, ಇದರಿಂದ ನಮಗೆ ದೊಡ್ಡ ಆರ್ಥಿಕ ನಷ್ಟವಾಗಿದೆ. ಅಲ್ಲದೆ ಈ ಭಾಗದ ಜಮೀನಿಗೆ ನಿರಂತರವಾಗಿ ಜಮೀನುಗಳಿಗೆ ಲಗ್ಗೆ ಇಡುತ್ತಿದ್ದು ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು1