logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಧನ-ಧಾನ್ಯ ಸಮೃದ್ಧಿಗಾಗಿ ಕಂಬಳಿಪುರ ಕಾಟೇರಮ್ಮ ಸನ್ನಿಧಿಯಲ್ಲಿ ವಿಶೇಷ ಕುಬೇರ ಮಹಾಲಕ್ಷ್ಮೀ ಪೂಜೆ

1 hr ago
user_MSMEDIACHANNEL
MSMEDIACHANNEL
Social Media Manager ಪಾವಗಡ, ತುಮಕೂರು, ಕರ್ನಾಟಕ•
1 hr ago

ಧನ-ಧಾನ್ಯ ಸಮೃದ್ಧಿಗಾಗಿ ಕಂಬಳಿಪುರ ಕಾಟೇರಮ್ಮ ಸನ್ನಿಧಿಯಲ್ಲಿ ವಿಶೇಷ ಕುಬೇರ ಮಹಾಲಕ್ಷ್ಮೀ ಪೂಜೆ

More news from ಕರ್ನಾಟಕ and nearby areas
  • ಧನ-ಧಾನ್ಯ ಸಮೃದ್ಧಿಗಾಗಿ ಕಂಬಳಿಪುರ ಕಾಟೇರಮ್ಮ ಸನ್ನಿಧಿಯಲ್ಲಿ ವಿಶೇಷ ಕುಬೇರ ಮಹಾಲಕ್ಷ್ಮೀ ಪೂಜೆ
    1
    ಧನ-ಧಾನ್ಯ ಸಮೃದ್ಧಿಗಾಗಿ ಕಂಬಳಿಪುರ ಕಾಟೇರಮ್ಮ ಸನ್ನಿಧಿಯಲ್ಲಿ ವಿಶೇಷ ಕುಬೇರ ಮಹಾಲಕ್ಷ್ಮೀ ಪೂಜೆ
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    1 hr ago
  • ಇಂದು ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ: ನುಲಿಯ ಚಂದಯ್ಯನವರು ತಮ್ಮ ಕಾಯಕ, ಭಕ್ತಿ ಮತ್ತು ಸರಳ ಜೀವನದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ, ಕಾಯಕಕ್ಕೆ ಗೌರವ ನೀಡಬೇಕು ಎಂಬ ಸಂದೇಶವನ್ನು ಸಾರಿದರು. ಜೀವನದಲ್ಲಿ ಶ್ರಮ, ಪ್ರಾಮಾಣಿಕತೆ, ಭಕ್ತಿ ಮತ್ತು ಸಮಾನತೆಗೆ ವಿಶೇಷ ಸ್ಥಾನಮಾನ ನೀಡಿದ್ದರು. ಈ ಮಹಾನ್ ಶರಣರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. ಇಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ನುಲಿಯ ಚಂದಯ್ಯ ಹಾಗೂ ತತ್ವಜ್ಞಾನಿ, ಆಧ್ಯಾತ್ಮಿಕ ಗುರುಗಳಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ನುಲಿಯ ಚಂದಯ್ಯನವರು 12ನೇ ಶತಮಾನದ ಪ್ರಮುಖ ಶರಣರಲ್ಲಿ ಒಬ್ಬರು. ಅವರು ತಮ್ಮ ಕಾಯಕ, ಭಕ್ತಿ ಮತ್ತು ಸರಳ ಜೀವನದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ನುಲಿಯ ಚಂದಯ್ಯನವರು ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಜಾತಿ-ಭೇದ, ಅಹಂಕಾರ ಮತ್ತು ಮೂಢನಂಬಿಕೆಗಳನ್ನು ವಿರೋಧಿಸಿ, ಎಲ್ಲರೂ ಸಮಾನರು ಎಂಬ ಮಾನವೀಯ ಸಂದೇಶವನ್ನು ನೀಡಿದರು. ಅವರ ವಚನಗಳು ಮತ್ತು ಜೀವನಾದರ್ಶಗಳು ಇಂದಿಗೂ ನಮಗೆ ಸ್ಪೂರ್ತಿಯಾಗಿವೆ ಎಂದರು. ನಾವು ನುಲಿಯ ಚಂದಯ್ಯನವರ ಜೀವನದಿಂದ ಪ್ರಾಮಾಣಿಕವಾಗಿ ದುಡಿಯುವುದು, ಎಲ್ಲರನ್ನು ಸಮಾನವಾಗಿ ಗೌರವಿಸುವುದು ಮತ್ತು ಸಮಾಜದ ಒಳಿತಿಗಾಗಿ ಶ್ರಮಿಸುವುದು ಎಂಬ ಗುಣಗಳನ್ನು ಕಲಿಯಬೇಕು ಎಂದು ತಿಳಿಸಿದರು. ಮಹಾನ್ ಸಮಾಜ ಸುಧಾರಕ, ತತ್ವಜ್ಞಾನಿ ಹಾಗೂ ಆಧ್ಯಾತ್ಮಿಕ ಗುರುಗಳಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿದ್ದ ಜಾತಿ ಭೇದ, ಅಸಮಾನತೆ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಎಲ್ಲ ಮನುಷ್ಯರೂ ಸಮಾನರು ಎಂಬ ಸಂದೇಶವನ್ನು ತಮ್ಮ ಜೀವನದ ಮೂಲಕ ಸಾರಿದರು. "ಒಂದು ಜಾತಿ, ಒಂದು ಧರ್ಮ, ಒಬ್ಬ ದೇವರು ಮನುಷ್ಯನಿಗೆ" ಎಂಬ ಅವರ ಮಹತ್ವದ ಸಂದೇಶವು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಪ್ರಮುಖ ಸಾಧನ ಎಂದು ನಂಬಿದ್ದ ಅವರು, ಜನರಲ್ಲಿ ಶಿಕ್ಷಣ, ಸ್ವಾಭಿಮಾನ, ಸ್ವಚ್ಛತೆ ಮತ್ತು ಸಾಮಾಜಿಕ ಜಾಗೃತಿಯನ್ನು ಬೆಳೆಸಲು ಶ್ರಮಿಸಿದರು. ಅವರ ಸರಳ ಜೀವನ ಮತ್ತು ಉನ್ನತ ಚಿಂತನೆಗಳು ನಮಗೆ ಸದಾ ಸ್ಫೂರ್ತಿಯಾಗಿವೆ. ನಾವು ನಾರಾಯಣ ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಜಾತಿ-ಮತ ಭೇದವಿಲ್ಲದೆ ಎಲ್ಲರನ್ನು ಗೌರವಿಸೋಣ. ಶಿಕ್ಷಣ ಪಡೆದು, ಸಮಾಜದ ಒಳಿತಿಗಾಗಿ ಕೆಲಸ ಮಾಡೋಣ ಮತ್ತು ಸಮಾನತೆ ಹಾಗೂ ಸಹೋದರತ್ವವನ್ನು ಬೆಳೆಸೋಣ ಎಂದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ ಚಂದ್ರಣ್ಣ ಮಾತನಾಡಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನದ ಆದರ್ಶ, ಅವರ ಸೇವೆಯನ್ನು ಸ್ಮರಿಸಿದರು. ಸಮಾಜದಲ್ಲಿ ಅವರ ಆದರ್ಶ ತತ್ವಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ. ಕೃಷ್ಣಪ್ಪ ಮಾತನಾಡಿ ನುಲಿಯ ಚಂದಯ್ಯ ಅವರು ಹಗ್ಗ ಒಸೆದು ಸಂತೆಯಲ್ಲಿ ಮಾರಿ ಬಂದ ಹಣದಿಂದ ದಾಸೋಹ ಮಾಡುತ್ತಿದ್ದರು. ಕಾಯಕ ನಿಷ್ಠೆಗೆ ಮಹತ್ವವನ್ನು ನೀಡಿದ್ದರು ಎಂದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದು ಜಾತಿ, ಒಂದು ಧರ್ಮ, ಒಬ್ಬ ದೇವರು ಎಂಬ ಸಂದೇಶವನ್ನು ಸಾರಿದ್ದಾರೆ. ಅವರ ತತ್ವ ಆದರ್ಶಗಳು ಸಮಾಜಕ್ಕೆ ಎಂದೆಂದಿಗೂ ಪ್ರಸ್ತುತ ಎಂದರು. ಕಾರ್ಯಕ್ರಮದಲ್ಲಿ ಕೊರಮ ಜನಾಂಗ ಸಂಘದ ಉಪಾಧ್ಯಕ್ಷ ಚೆನ್ನಕೇಶವ, ಮಾಜಿ ಅಧ್ಯಕ್ಷ ಪ್ರಭಾಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕಲ್ಪನ ಆರ್, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
    3
    ಇಂದು ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಹಾಗೂ  ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ: ನುಲಿಯ ಚಂದಯ್ಯನವರು ತಮ್ಮ ಕಾಯಕ, ಭಕ್ತಿ ಮತ್ತು ಸರಳ ಜೀವನದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ, ಕಾಯಕಕ್ಕೆ ಗೌರವ ನೀಡಬೇಕು ಎಂಬ ಸಂದೇಶವನ್ನು ಸಾರಿದರು.  ಜೀವನದಲ್ಲಿ ಶ್ರಮ, ಪ್ರಾಮಾಣಿಕತೆ, ಭಕ್ತಿ ಮತ್ತು ಸಮಾನತೆಗೆ ವಿಶೇಷ ಸ್ಥಾನಮಾನ ನೀಡಿದ್ದರು. ಈ ಮಹಾನ್ ಶರಣರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.
ಇಂದು ಜಿಲ್ಲಾಡಳಿತ ಭವನದ  ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ  ಹಮ್ಮಿಕೊಂಡಿದ್ದ ಶ್ರೀ ನುಲಿಯ ಚಂದಯ್ಯ ಹಾಗೂ ತತ್ವಜ್ಞಾನಿ, ಆಧ್ಯಾತ್ಮಿಕ ಗುರುಗಳಾದ ಬ್ರಹ್ಮಶ್ರೀ  ನಾರಾಯಣ ಗುರುಗಳ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ನುಲಿಯ ಚಂದಯ್ಯನವರು 12ನೇ ಶತಮಾನದ ಪ್ರಮುಖ ಶರಣರಲ್ಲಿ ಒಬ್ಬರು. ಅವರು ತಮ್ಮ ಕಾಯಕ, ಭಕ್ತಿ ಮತ್ತು ಸರಳ ಜೀವನದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ನುಲಿಯ ಚಂದಯ್ಯನವರು ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಜಾತಿ-ಭೇದ, ಅಹಂಕಾರ ಮತ್ತು ಮೂಢನಂಬಿಕೆಗಳನ್ನು ವಿರೋಧಿಸಿ, ಎಲ್ಲರೂ ಸಮಾನರು ಎಂಬ ಮಾನವೀಯ ಸಂದೇಶವನ್ನು ನೀಡಿದರು. ಅವರ ವಚನಗಳು ಮತ್ತು ಜೀವನಾದರ್ಶಗಳು ಇಂದಿಗೂ ನಮಗೆ ಸ್ಪೂರ್ತಿಯಾಗಿವೆ ಎಂದರು.
ನಾವು ನುಲಿಯ ಚಂದಯ್ಯನವರ ಜೀವನದಿಂದ ಪ್ರಾಮಾಣಿಕವಾಗಿ ದುಡಿಯುವುದು, ಎಲ್ಲರನ್ನು ಸಮಾನವಾಗಿ ಗೌರವಿಸುವುದು ಮತ್ತು ಸಮಾಜದ ಒಳಿತಿಗಾಗಿ ಶ್ರಮಿಸುವುದು ಎಂಬ ಗುಣಗಳನ್ನು ಕಲಿಯಬೇಕು ಎಂದು ತಿಳಿಸಿದರು.
ಮಹಾನ್ ಸಮಾಜ ಸುಧಾರಕ, ತತ್ವಜ್ಞಾನಿ ಹಾಗೂ ಆಧ್ಯಾತ್ಮಿಕ ಗುರುಗಳಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿದ್ದ ಜಾತಿ ಭೇದ, ಅಸಮಾನತೆ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಎಲ್ಲ ಮನುಷ್ಯರೂ ಸಮಾನರು ಎಂಬ ಸಂದೇಶವನ್ನು ತಮ್ಮ ಜೀವನದ ಮೂಲಕ ಸಾರಿದರು. "ಒಂದು ಜಾತಿ, ಒಂದು ಧರ್ಮ, ಒಬ್ಬ ದೇವರು ಮನುಷ್ಯನಿಗೆ" ಎಂಬ ಅವರ ಮಹತ್ವದ ಸಂದೇಶವು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ.
ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಪ್ರಮುಖ ಸಾಧನ ಎಂದು ನಂಬಿದ್ದ ಅವರು, ಜನರಲ್ಲಿ ಶಿಕ್ಷಣ, ಸ್ವಾಭಿಮಾನ, ಸ್ವಚ್ಛತೆ ಮತ್ತು ಸಾಮಾಜಿಕ ಜಾಗೃತಿಯನ್ನು ಬೆಳೆಸಲು ಶ್ರಮಿಸಿದರು. ಅವರ ಸರಳ ಜೀವನ ಮತ್ತು ಉನ್ನತ ಚಿಂತನೆಗಳು ನಮಗೆ ಸದಾ ಸ್ಫೂರ್ತಿಯಾಗಿವೆ. ನಾವು ನಾರಾಯಣ ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಜಾತಿ-ಮತ ಭೇದವಿಲ್ಲದೆ ಎಲ್ಲರನ್ನು ಗೌರವಿಸೋಣ. ಶಿಕ್ಷಣ ಪಡೆದು, ಸಮಾಜದ ಒಳಿತಿಗಾಗಿ ಕೆಲಸ ಮಾಡೋಣ ಮತ್ತು ಸಮಾನತೆ ಹಾಗೂ ಸಹೋದರತ್ವವನ್ನು ಬೆಳೆಸೋಣ ಎಂದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ ಚಂದ್ರಣ್ಣ ಮಾತನಾಡಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನದ ಆದರ್ಶ, ಅವರ ಸೇವೆಯನ್ನು ಸ್ಮರಿಸಿದರು.  ಸಮಾಜದಲ್ಲಿ ಅವರ ಆದರ್ಶ ತತ್ವಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ. ಕೃಷ್ಣಪ್ಪ ಮಾತನಾಡಿ ನುಲಿಯ ಚಂದಯ್ಯ ಅವರು ಹಗ್ಗ ಒಸೆದು ಸಂತೆಯಲ್ಲಿ ಮಾರಿ ಬಂದ ಹಣದಿಂದ ದಾಸೋಹ ಮಾಡುತ್ತಿದ್ದರು. ಕಾಯಕ ನಿಷ್ಠೆಗೆ ಮಹತ್ವವನ್ನು ನೀಡಿದ್ದರು ಎಂದರು. 
ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದು ಜಾತಿ, ಒಂದು ಧರ್ಮ, ಒಬ್ಬ ದೇವರು ಎಂಬ ಸಂದೇಶವನ್ನು ಸಾರಿದ್ದಾರೆ. ಅವರ ತತ್ವ ಆದರ್ಶಗಳು ಸಮಾಜಕ್ಕೆ ಎಂದೆಂದಿಗೂ ಪ್ರಸ್ತುತ ಎಂದರು.
ಕಾರ್ಯಕ್ರಮದಲ್ಲಿ ಕೊರಮ ಜನಾಂಗ ಸಂಘದ ಉಪಾಧ್ಯಕ್ಷ ಚೆನ್ನಕೇಶವ, ಮಾಜಿ ಅಧ್ಯಕ್ಷ ಪ್ರಭಾಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕಲ್ಪನ ಆರ್, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    4 hrs ago
  • ಬರದ ನಾಡಿನಲ್ಲಿ ಬಡ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವೇದ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಚಿವ ಟಿ. ರಘುಮೂರ್ತಿ ಬಣ್ಣನೆ ಚಳ್ಳಕೆರೆ:ನಮ್ಮ ಈ ಬರದ ನಾಡಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ವೇದ ಶಿಕ್ಷಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಗ್ರಾಮೀಣ ಭಾಗದ ಬಡವರ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಶೈಕ್ಷಣಿಕವಾಗಿ ಈ ಭಾಗದ ಅಭಿವೃದ್ಧಿಗೆ ಸಂಸ್ಥೆಯ ಕೊಡುಗೆ ಅಪಾರ ಎಂದು ರಾಜ್ಯ ಸರ್ಕಾರದ ಸಚಿವ ಟಿ. ರಘುಮೂರ್ತಿ ಅವರು ಮುಕ್ತಕಂಠದಿಂದ ಪ್ರಶಂಸಿಸಿದರು. ಚಳ್ಳಕೆರೆ ತಾಲೂಕಿನ ಸಾಣಿಕೆರೆಯಲ್ಲಿರುವ ವೇದ ಶೈಕ್ಷಣಿಕ ಅಭಿವೃದ್ಧಿ ಅಕಾಡೆಮಿ ಹಾಗೂ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿದ ನೂತನ 'ಆದಿಯೋಗಿ' ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಸಂಸ್ಥಾಪಕರ ದಿನಾಚರಣೆ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಸಂಸ್ಥೆಯು ನೀಡುತ್ತಿರುವ ಶೈಕ್ಷಣಿಕ ಸೇವೆಯನ್ನು ಸಚಿವರು ಈ ಸಂದರ್ಭದಲ್ಲಿ ವಿಶೇಷವಾಗಿ ಶ್ಲಾಘಿಸಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತುಮಕೂರು ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, "ಶಿಕ್ಷಣವು ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ಏಕೈಕ ಮಾರ್ಗವಾಗಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ಸುಶಿಕ್ಷಿತವಾಗುತ್ತದೆ. ವಿದ್ಯಾರ್ಥಿಗಳು ಅಕ್ಷರ ಜ್ಞಾನದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳಿಗೆ ಒತ್ತು ನೀಡಬೇಕು" ಎಂದು ಕಿವಿಮಾತು ಹೇಳಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಮಹಾಸ್ವಾಮಿಗಳು ಸಹ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಶಾಸಕ ವೀರೇಂದ್ರ ಪಪ್ಪಿ ಅವರು ಸಹ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಈ ಸಮಾರಂಭದ ಅಧ್ಯಕ್ಷತೆಯನ್ನು ವೇದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ.ಟಿ. ರವೀಂದ್ರ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಕಿರಣ್, ಅಧೀಕ್ಷಕರಾದ ವಿರೂಪಾಕ್ಷಪ್ಪ ಸಿ., ಪ್ರಾಂಶುಪಾಲರಾದ ಸಂದೀಪ್, ಮುಖ್ಯೋಪಾಧ್ಯಾಯಿನಿಯಾದ ಪುಷ್ಪರಾಣಿ, ಹಾಗೂ ಪ್ರಮುಖರಾದ ರವಿಕುಮಾರ್, ಯೋಗೇಶ್, ಸತೀಶ್, ಸಾಗರ್ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
    1
    ಬರದ ನಾಡಿನಲ್ಲಿ ಬಡ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವೇದ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಚಿವ ಟಿ. ರಘುಮೂರ್ತಿ ಬಣ್ಣನೆ

ಚಳ್ಳಕೆರೆ:ನಮ್ಮ ಈ ಬರದ ನಾಡಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ವೇದ ಶಿಕ್ಷಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಗ್ರಾಮೀಣ ಭಾಗದ ಬಡವರ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಶೈಕ್ಷಣಿಕವಾಗಿ ಈ ಭಾಗದ ಅಭಿವೃದ್ಧಿಗೆ ಸಂಸ್ಥೆಯ ಕೊಡುಗೆ ಅಪಾರ ಎಂದು ರಾಜ್ಯ ಸರ್ಕಾರದ ಸಚಿವ ಟಿ. ರಘುಮೂರ್ತಿ ಅವರು ಮುಕ್ತಕಂಠದಿಂದ ಪ್ರಶಂಸಿಸಿದರು.
ಚಳ್ಳಕೆರೆ ತಾಲೂಕಿನ ಸಾಣಿಕೆರೆಯಲ್ಲಿರುವ ವೇದ ಶೈಕ್ಷಣಿಕ ಅಭಿವೃದ್ಧಿ ಅಕಾಡೆಮಿ ಹಾಗೂ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿದ ನೂತನ 'ಆದಿಯೋಗಿ' ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಸಂಸ್ಥಾಪಕರ ದಿನಾಚರಣೆ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಸಂಸ್ಥೆಯು ನೀಡುತ್ತಿರುವ ಶೈಕ್ಷಣಿಕ ಸೇವೆಯನ್ನು ಸಚಿವರು ಈ ಸಂದರ್ಭದಲ್ಲಿ ವಿಶೇಷವಾಗಿ ಶ್ಲಾಘಿಸಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತುಮಕೂರು ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, "ಶಿಕ್ಷಣವು ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ಏಕೈಕ ಮಾರ್ಗವಾಗಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ಸುಶಿಕ್ಷಿತವಾಗುತ್ತದೆ. ವಿದ್ಯಾರ್ಥಿಗಳು ಅಕ್ಷರ ಜ್ಞಾನದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳಿಗೆ ಒತ್ತು ನೀಡಬೇಕು" ಎಂದು ಕಿವಿಮಾತು ಹೇಳಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಮಹಾಸ್ವಾಮಿಗಳು ಸಹ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಶಾಸಕ ವೀರೇಂದ್ರ ಪಪ್ಪಿ ಅವರು ಸಹ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಈ ಸಮಾರಂಭದ ಅಧ್ಯಕ್ಷತೆಯನ್ನು ವೇದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ.ಟಿ. ರವೀಂದ್ರ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಕಿರಣ್, ಅಧೀಕ್ಷಕರಾದ ವಿರೂಪಾಕ್ಷಪ್ಪ ಸಿ., ಪ್ರಾಂಶುಪಾಲರಾದ ಸಂದೀಪ್, ಮುಖ್ಯೋಪಾಧ್ಯಾಯಿನಿಯಾದ ಪುಷ್ಪರಾಣಿ, ಹಾಗೂ ಪ್ರಮುಖರಾದ ರವಿಕುಮಾರ್, ಯೋಗೇಶ್, ಸತೀಶ್, ಸಾಗರ್ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
    user_Kiran M J
    Kiran M J
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ. ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.
    1
    ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ
ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ.  ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು
ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    53 min ago
  • ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು. ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು. .
    1
    ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.

ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ

ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ್ದ  ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.
ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು.
.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು. ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.
    1
    ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ.
ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ.
ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು.  ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    6 hrs ago
  • ಶ್ರಾವಣ ಹುಣ್ಣಿಮೆ ವಿಶೇಷ: ಶ್ರೀ ಕಾಟೇರಮ್ಮ ದೇವಿಯ ಸನ್ನಿಧಿಯಲ್ಲಿ ಭಕ್ತಿ-ಶ್ರದ್ಧೆಯಿಂದ ವರಮಹಾಲಕ್ಷ್ಮಿ ಹೋಮ ಹಾಗೂ ಪೂಜೆ.
    1
    ಶ್ರಾವಣ ಹುಣ್ಣಿಮೆ ವಿಶೇಷ: ಶ್ರೀ ಕಾಟೇರಮ್ಮ ದೇವಿಯ ಸನ್ನಿಧಿಯಲ್ಲಿ ಭಕ್ತಿ-ಶ್ರದ್ಧೆಯಿಂದ ವರಮಹಾಲಕ್ಷ್ಮಿ ಹೋಮ ಹಾಗೂ ಪೂಜೆ.
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    4 hrs ago
  • ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ. ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
    1
    ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ 
ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ
ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ.
ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.