logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿ:- ಬೆಂಗೇರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ ಡಾ.ರಮೇಶ್ ಭಾಗಿ ಬೆಂಗೇರಿ ಯಂಗ್ ಕಮಿಟಿ ವತಿಯಿಂದ 1501ನೇ ಪವಿತ್ರ ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರವಾದಿ ಮಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನವನ್ನು ಸ್ಮರಿಸಿ, ಬೆಂಗೇರಿ ಸರ್ಕಲ್‌ನಲ್ಲಿ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಲ್ಲರಿಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ತಿಳಿಸಿ ಶರಬತ್ ವಿತರಿಸಿದರು. ಕಾರ್ಯಕ್ರಮದಲ್ಲಿ ಊರಿನ ಗುರು-ಹಿರಿಯರು, ಯುವಕ ಮಿತ್ರರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಮೂಲಕ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಾಯಿತು. ಈದ್ ಮಿಲಾದ್ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಸೌಹಾರ್ದತೆ, ಸಹೋದರತ್ವ ಹಾಗೂ ಸಮೃದ್ಧಿಯನ್ನು ತರಲಿ ಎಂದು ಈ ಸಂದರ್ಭದಲ್ಲಿ ಹಾರೈಸಲಾಯಿತು.

5 hrs ago
user_ಯಲ್ಲು...
ಯಲ್ಲು...
ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
5 hrs ago
260498f5-1042-4632-9b7c-22a05ce54420
8b970286-f835-4de8-b643-62929936ced7
1536be3f-806c-4cbe-b3b8-9cce3a1aa26f
167b89f8-dd88-4d2d-a142-0ccdc95f290c

ಹುಬ್ಬಳ್ಳಿ:- ಬೆಂಗೇರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ ಡಾ.ರಮೇಶ್ ಭಾಗಿ ಬೆಂಗೇರಿ ಯಂಗ್ ಕಮಿಟಿ ವತಿಯಿಂದ 1501ನೇ ಪವಿತ್ರ ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರವಾದಿ ಮಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನವನ್ನು ಸ್ಮರಿಸಿ, ಬೆಂಗೇರಿ ಸರ್ಕಲ್‌ನಲ್ಲಿ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಲ್ಲರಿಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ತಿಳಿಸಿ ಶರಬತ್ ವಿತರಿಸಿದರು. ಕಾರ್ಯಕ್ರಮದಲ್ಲಿ ಊರಿನ ಗುರು-ಹಿರಿಯರು, ಯುವಕ ಮಿತ್ರರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಮೂಲಕ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಾಯಿತು. ಈದ್ ಮಿಲಾದ್ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಸೌಹಾರ್ದತೆ, ಸಹೋದರತ್ವ ಹಾಗೂ ಸಮೃದ್ಧಿಯನ್ನು ತರಲಿ ಎಂದು ಈ ಸಂದರ್ಭದಲ್ಲಿ ಹಾರೈಸಲಾಯಿತು.

More news from ಕರ್ನಾಟಕ and nearby areas
  • ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    1
    ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ
ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    3 hrs ago
  • ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    4
    ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. 
ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಹಾವೇರಿ, ಹಾವೇರಿ, ಕರ್ನಾಟಕ•
    6 hrs ago
  • ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    1
    ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    16 hrs ago
  • ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ
    1
    ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ  ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ  ಆಸ್ಪತ್ರೆ ಎದುರು ಪ್ರತಿಭಟನೆ
ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು.
ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    18 hrs ago
  • ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    4
    ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ 
ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    user_Mahanagar news
    Mahanagar news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
  • ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್
    1
    ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ. [: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ. 📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ 📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏 [26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ. “ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
    1
    ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
[: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ.
ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ.
📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ
📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ
ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏
[26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ
ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ.
ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ.
“ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    1
    ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ
ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು.
ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು.
ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.