ಕರ್ನಾಟಕದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭ! ಸೆ.5ರಿಂದ ಸಚಿವರು ತಾಲೂಕುಗಳಿಗೆ ಭೇಟಿ — ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ? ಕರ್ನಾಟಕ ಸರ್ಕಾರವು ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಕಾನೂನು ಚೌಕಟ್ಟಿನಲ್ಲಿ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ಆರಂಭಿಸಲು ಮುಂದಾಗಿದೆ. ಸೆಪ್ಟೆಂಬರ್ 5, 2026ರಿಂದ ಪ್ರತಿ ಜಿಲ್ಲೆಯಲ್ಲಿ ಆಯ್ದ ತಾಲೂಕುಗಳಿಗೆ ಸಚಿವರು ಭೇಟಿ ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಶಾಸಕರು ತಮ್ಮ ವ್ಯಾಪ್ತಿಯ ಪಂಚಾಯಿತಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯೂ ಇರಲಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಸಚಿವರು ತಾಲೂಕುಗಳಿಗೆ ಭೇಟಿ ನೀಡುವ ವ್ಯವಸ್ಥೆ ಇರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 📌 ನಿಮ್ಮ ತಾಲೂಕಿನಲ್ಲೂ ಸಚಿವರ ಭೇಟಿ ಯಾವಾಗ? ಸುದ್ದಿ ನಿಮಗೆ ಉಪಯುಕ್ತವೆನಿಸಿದರೆ ಶೇರ್ ಮಾಡಿ. #PrajaSeva #PrajaSevaDepartment #Karnataka #KarnatakaGovernment #DKShivakumar #KarnatakaNews #BreakingNews #PublicGrievance #GovernmentNews #KannadaNews #IndiaNews #ಕರ್ನಾಟಕ #ಪ್ರಜಾಸೇವಾ #ಜನಸೇವೆ #ಸಾರ್ವಜನಿಕಸಮಸ್ಯೆ
ಕರ್ನಾಟಕದಲ್ಲಿ ‘ಪ್ರಜಾಸೇವಾ ಇಲಾಖೆ’ ಆರಂಭ! ಸೆ.5ರಿಂದ ಸಚಿವರು ತಾಲೂಕುಗಳಿಗೆ ಭೇಟಿ — ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ? ಕರ್ನಾಟಕ ಸರ್ಕಾರವು ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಕಾನೂನು ಚೌಕಟ್ಟಿನಲ್ಲಿ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ಆರಂಭಿಸಲು ಮುಂದಾಗಿದೆ. ಸೆಪ್ಟೆಂಬರ್ 5, 2026ರಿಂದ ಪ್ರತಿ ಜಿಲ್ಲೆಯಲ್ಲಿ ಆಯ್ದ ತಾಲೂಕುಗಳಿಗೆ ಸಚಿವರು ಭೇಟಿ ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಶಾಸಕರು ತಮ್ಮ ವ್ಯಾಪ್ತಿಯ ಪಂಚಾಯಿತಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯೂ ಇರಲಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಸಚಿವರು ತಾಲೂಕುಗಳಿಗೆ ಭೇಟಿ ನೀಡುವ ವ್ಯವಸ್ಥೆ ಇರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 📌 ನಿಮ್ಮ ತಾಲೂಕಿನಲ್ಲೂ ಸಚಿವರ ಭೇಟಿ ಯಾವಾಗ? ಸುದ್ದಿ ನಿಮಗೆ ಉಪಯುಕ್ತವೆನಿಸಿದರೆ ಶೇರ್ ಮಾಡಿ. #PrajaSeva #PrajaSevaDepartment #Karnataka #KarnatakaGovernment #DKShivakumar #KarnatakaNews #BreakingNews #PublicGrievance #GovernmentNews #KannadaNews #IndiaNews #ಕರ್ನಾಟಕ #ಪ್ರಜಾಸೇವಾ #ಜನಸೇವೆ #ಸಾರ್ವಜನಿಕಸಮಸ್ಯೆ
- ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಡಿಕೆಶಿಗೆ ಬಿ.ವೈ.ವಿಜಯೇಂದ್ರ ಸವಾಲು ದಲಿತರು, ಹಿಂದುಳಿದವರು ಹಾಗೂ ರೈತರಿಗೆ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಜನರ ತೀರ್ಪಿಗೆ ಹೋಗಿ: ಬಿಜೆಪಿ ರಾಜ್ಯಾಧ್ಯಕ್ಷ ಮಸ್ಕಿ (ರಾಯಚೂರು), ಸೆ. 2: ದಲಿತರು, ಹಿಂದುಳಿದ ವರ್ಗಗಳು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಿ ಚುನಾವಣೆ ಎದುರಿಸಲಿ. ಆಗ ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು. ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಮಸ್ಕಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದ ವರ್ಗಗಳ ಪರವಾಗಿ ಮಾತನಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ವರ್ಷಗಳಿಂದ ಇದೇ ಸಮುದಾಯಗಳಿಗೆ ಅನ್ಯಾಯ ಮಾಡುತ್ತಾ ಬಂದಿದೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ವಿಜಯೇಂದ್ರ, ನಿಗಮದ ಹಣದ ದುರ್ಬಳಕೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೀಸಲಾತಿ ವಿಚಾರದಲ್ಲಿಯೂ ಸರ್ಕಾರ ಸ್ಪಷ್ಟತೆ ತೋರಿಲ್ಲ. ಮೀಸಲಾತಿ ನೆಪದಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ದಲಿತರು ಮಾತ್ರವಲ್ಲದೆ ರಾಜ್ಯದ ಎಲ್ಲ ಸಮುದಾಯಗಳನ್ನೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು. ಡಿಕೆಶಿ ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳಲಿವೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟ ವಿಜಯೇಂದ್ರ, ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಿದರು. ಭ್ರಷ್ಟಾಚಾರವೇ ಈ ಸರ್ಕಾರಕ್ಕೆ ಉರುಳಾಗಲಿದೆ. ಅಧಿಕಾರವೇ ಶಾಶ್ವತ ಎಂಬ ಮನೋಭಾವದಿಂದ ವರ್ತಿಸುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದೆ. ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ರೈತರು ಸೇರಿದಂತೆ ವಿವಿಧ ವರ್ಗಗಳ ಜನರು ಬೆಂಬಲ ನೀಡುತ್ತಿದ್ದಾರೆ ಎಂದರು. ರೈತರ ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನೂ ಮುಖ್ಯಮಂತ್ರಿ ತೋರಿಸುತ್ತಿಲ್ಲ ಎಂದು ಟೀಕಿಸಿದ ಅವರು, ಅನ್ನದಾತರ ಸಂಕಷ್ಟದ ಬಗ್ಗೆ ಸರ್ಕಾರ ಇನ್ನಾದರೂ ಗಂಭೀರವಾಗಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಹೋರಾಟದ ಬಳಿಕವೇ ಬರ ವೀಕ್ಷಣೆ ಆರಂಭ ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಬಿಜೆಪಿ ಈಗಾಗಲೇ ವಿವಿಧ ಜಿಲ್ಲೆಗಳಿಗೆ ತೆರಳಿ ವಾಸ್ತವಾಂಶಗಳನ್ನು ಪರಿಶೀಲಿಸಿದೆ. ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈವರೆಗೆ ಬರಪೀಡಿತ ಪ್ರದೇಶಗಳಿಗೆ ಸಮರ್ಪಕವಾಗಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿರಲಿಲ್ಲ. ಇದೀಗ ಬಿಜೆಪಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಅನಿವಾರ್ಯವಾಗಿ ಬರ ವೀಕ್ಷಣೆಗೆ ಮುಂದಾಗಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು. ಇಷ್ಟು ದಿನ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತಿದ್ದವರು ಇದೀಗ ರೈತರ ಜಮೀನುಗಳಿಗೆ ಭೇಟಿ ನೀಡುವ ಪರಿಸ್ಥಿತಿ ಬಂದಿದೆ. ಬಿಜೆಪಿ ನಡೆಸುತ್ತಿರುವ ಹೋರಾಟದ ಪರಿಣಾಮವಾಗಿಯೇ ಸರ್ಕಾರ ರೈತರ ಸಮಸ್ಯೆಗಳತ್ತ ಗಮನ ಹರಿಸಲು ಮುಂದಾಗಿದೆ ಎಂದು ಅವರು ಹೇಳಿದರು. ‘ಮೂರು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ?’ ರಾಯಚೂರು ಭಾಗದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ರೈತರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸಭೆ ಕರೆಯಲಾಗಿದೆಯೇ ಅಥವಾ ಹಿಂದಿನ ಸರ್ಕಾರದ ವಿರುದ್ಧ ಆರೋಪ ಹುಡುಕಲು ಸಭೆ ನಡೆಸಲಾಗುತ್ತಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೇಳಿದರು. ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಈಗ ಹಿಂದಿನ ಸರ್ಕಾರದ ಹಗರಣಗಳನ್ನು ಹುಡುಕುವುದಾಗಿ ಹೇಳುತ್ತಿದೆ. ಇಷ್ಟು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ? ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ರಾಜಕೀಯ ದ್ವೇಷ ಸಾಧಿಸುವುದರಲ್ಲೇ ಕಾಲ ಕಳೆದಿದ್ದೀರಾ ಎಂದು ಪ್ರಶ್ನಿಸಿದರು. ಸರ್ಕಾರದ ಯಾವುದೇ ರೀತಿಯ ಬೆದರಿಕೆ, ಒತ್ತಡ ಅಥವಾ ಧಮ್ಕಿಗೆ ಬಿಜೆಪಿ ಹೆದರುವುದಿಲ್ಲ. ಜನರ ಪರವಾಗಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೋರ್‌ವೆಲ್‌ಗಳನ್ನು ನೂರಾರು, ಸಾವಿರಾರು ಅಡಿ ಆಳಕ್ಕೆ ಕೊರೆದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವು ದೊರೆಯುತ್ತಿಲ್ಲ. ಹಲವು ಕಡೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಕೊರತೆ ಇದೆ ಎಂದು ಅವರು ಹೇಳಿದರು. ರಾಜ್ಯದ ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು ಮುಖ್ಯಮಂತ್ರಿ ಬೆಂಗಳೂರಿನಲ್ಲೇ ಕುಳಿತು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪವನ್ನು ವಿಜಯೇಂದ್ರ ಮಾಡಿದರು. ಬೆಂಗಳೂರಿನ ಅಭಿವೃದ್ಧಿಯಷ್ಟೇ ರಾಜ್ಯದ ಅಭಿವೃದ್ಧಿಯಲ್ಲ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ಅಭಿವೃದ್ಧಿಯತ್ತ ಸರ್ಕಾರ ಸಮಾನ ಗಮನ ಹರಿಸಬೇಕು. ಇಲ್ಲವಾದರೆ ಜನರು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ‘ಎಲ್ಲ ಕೆಲಸಕ್ಕೂ ಲಂಚ ನೀಡಬೇಕಾದ ಪರಿಸ್ಥಿತಿ’ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸಾಮಾನ್ಯ ಜನರು ಯಾವುದೇ ಕೆಲಸ ಮಾಡಿಸಿಕೊಳ್ಳಬೇಕಾದರೂ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಲಂಚ ನೀಡದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಇದು ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನೇ ಕುಗ್ಗಿಸುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ವಾಸ್ತವವಾಗಿ ಇನ್ನೂ ಅನೇಕ ತಾಲೂಕುಗಳು ಬರದ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು. ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿಕೊಳ್ಳಲು ಕೂಡ ರೈತರು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಕೆ ರೈತರ ಸಂಕಷ್ಟ, ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ, ನಿರುದ್ಯೋಗ ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸುತ್ತಿದೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ದಲಿತರು, ಹಿಂದುಳಿದವರು, ರೈತರು ಹಾಗೂ ಯುವಕರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಲಿ. ಜನರ ತೀರ್ಪನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಾಗಿದೆಯೇ ಎಂದು ವಿಜಯೇಂದ್ರ ಪ್ರಶ್ನಿಸಿದರು.1
- ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಕೆ.ಎಸ್. ಬಸವಂತಪ್ಪ ಕೂಡ್ಲಿಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನದ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಕೆ.ಎಸ್. ಬಸವಂತಪ್ಪ ಸೂಚಿಸಿದರು. ಪಟ್ಟಣದ ಎಸ್.ಎ.ವಿ.ಟಿ. ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಯ ನಿಮಿತ್ತ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಕಚೇರಿಗಳ ಸುತ್ತ ಅಲೆದಾಡಿಸುವ ಬದಲು, ಆಡಳಿತವೇ ಜನರ ಬಳಿಗೆ ತೆರಳಿ ಸ್ಪಂದಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಆಶಯವಾಗಿದೆ ಎಂದರು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನದ ಮೂಲಕ ತಾಲೂಕಿನ ಜನರ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರಕಿಸಲು ಅವಕಾಶ ಕಲ್ಪಿಸಲಾಗುತ್ತಿದೆ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಅವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಸಭಾ ಸ್ಥಳದಲ್ಲಿ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ಆಸನ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಇಲಾಖಾವಾರು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ,ಡ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ವರ್ಗದ ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿದೆ. ಇದೀಗ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವಾ’ ಎಂಬ ವಿನೂತನ ಆಂದೋಲನಕ್ಕೆ ಪ್ರತ್ಯೇಕ ಇಲಾಖೆಯನ್ನು ಆರಂಭಿಸಿರುವುದು ಮಹತ್ವದ ಹೆಜ್ಜೆಯಾಗಿದೆ. ರಾಜ್ಯಮಟ್ಟದಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನಕ್ಕೆ ತಮ್ಮ ಕೂಡ್ಲಿಗಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡುತ್ತಿರುವುದು ಕ್ಷೇತ್ರದ ಜನತೆ ಹಾಗೂ ತಮ್ಮ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಆಂದೋಲನದ ಮೂಲಕ ತಾಲೂಕಿನ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಈ ವೇಳೆ ಜಿಲ್ಲಾ ಅಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 48 ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸುಮಾರು 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 60 ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಅರ್ಜಿಗಳನ್ನು ಸ್ವೀಕರಿಸಲು 30 ಕೌಂಟರ್‌ಗಳನ್ನು ಕಾಯ್ದಿರಿಸಲಾಗಿದೆ. ತಾಲ್ಲೂಕಿನ ಎಲ್ಲಾ ಮನೆಗಳಿಗೆ ಮುಖ್ಯಮಂತ್ರಿಗಳ ಸಂದೇಶ ಪತ್ರ ಹಾಗೂ ಆಹ್ವಾನ ಪತ್ರಿಕೆ ಮತ್ತು ಸ್ವೀಕೃತಿ ಪತ್ರವನ್ನು ತಲುಪಿಸಲಾಗಿದೆ. ಸಿ.ಎಂ ಸಂದೇಶ ಹಾಗೂ ಕುಂದುಕೊರತೆಗಳ ಆಹ್ವಾನ ಪತ್ರಿಕೆಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಕುಂದು ಕೊರತೆ ಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳ ಕುರಿತು ಪಟ್ಟಿ ನೀಡಲಾಗಿದೆ. ಸಾರ್ವಜನಿಕರು ತಮ್ಮ ಅಗತ್ಯತೆಗಳಿಗೆ ತಕ್ಕಂತೆ ಭರ್ತಿ ಮಾಡಿ ಸೆ.5ರಂದು ಬೆಳಿಗ್ಗೆ 9 ಗಂಟೆಯೊಳಗೆ ನೋಂದಣಿ ಮಾಡಿಕೊಳ್ಳಬಹುದು. ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸ್ಥಳದಲ್ಲೇ ಡಿಜಿಟಲ್ ಹಾಗೂ ತಾಂತ್ರಿಕ ವ್ಯವಸ್ಥೆಯ ಮೂಲಕ ವಿಂಗಡಿಸಿ ತಕ್ಷಣವೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಮಟ್ಟದ ಸಿಬ್ಬಂದಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಬಳ್ಳಾರಿ ವಿಜಯನಗರ ಸಂಸದ ಈ ತುಕಾರಾಂ, ಹೊಸಪೇಟೆ ಶಾಸಕ ಎಚ್.ಆರ್ ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಜಿಲ್ಲಾ ಅಧಿಕಾರಿ ಕವಿತಾ ಮನ್ನಿಕೇರಿ, ಎಸ್.ಪಿ ಜಾಹ್ನವಿ, ಜಿಪಂ ಸಿಇಒ ನೊಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಎಡಿಸಿ ಪಿ.ಎನ್.ಲೋಕೇಶ್, ಗ್ಯಾರಂಟಿ ಅಧ್ಯಕ್ಷ ಕುರಿಮೂರ್ತಿ, ತಹಶೀಲ್ದಾರ್ ವಿ.ಕೆ ನೇತ್ರಾವತಿ, ಇಒ ನರಸಪ್ಪ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.1
- ಮನೆ ಮೇಲೆ ಮನೆ ಅಕ್ಕ ಪಕ್ಕ ಪಕ್ಷಿಗಳಿಗೆ ನೀರು ಕಾಳು ಇಡುವ ಮೂಲಕ ಪಕ್ಷಿ ಸಂಕುಲ ಉಳಿಸಿ.1
- ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ದುರಸ್ತಿ ಕುರಿತು ಸಚಿವ ಟಿ ರಘೂಮೂರ್ತಿ ಪ್ರತಿಕ್ರಿಯೆ ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ದುರಸ್ತಿ ಕುರಿತು ಸಚಿವ ಟಿ ರಘೂಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ನೆನ್ನೆ ತಾನೆ ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ಬಿರುಕು ಬಿಟ್ಟ ಬಗ್ಗೆ ಪಬ್ಲಿಕ್ ಆಪ್ ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ಈ ಬಗ್ಗೆ ಚಿತ್ರದುರ್ಗದಲ್ಲಿ ಅವರು ಮಾತನಾಡಿದ್ದು ಈಗಾಗಲೇ ಈ ಸಂಬಂದ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇನೆ. ಮುಂದಿನ ಕ್ಯಾಬಿನೆಟ್ ಬರಲಿದ್ದು ಡಿ ಪಿ ಆರ್ ಮಾಡಲು ತಿಳಿಸಿದ್ದೇನೆ. ಪಿ ಡಬ್ಲ್ಯೂ ಡಿ ಇಲಾಖೆ ವತಿಯಿಂದ ಡಿ ಪಿ ಆರ್ ಮಾಡಿ ಮುಂದಿನ ಸಭೆಯಲ್ಲಿ 35 ರಿಂದ 40 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರು ಡಿ ಪಿ ಆರ್ ಮಾಡಲು ನಿರ್ದೇಶನ ಕೊಟ್ಟಿದ್ದಾರೆ. ಮುಂದಿನ 15 ರ ಒಳಗೆ ಅದು ಅನುಮೋದನೆ ಆಗಿ ಟೆಂಡರ್ ಕರದು ಕಾಮಗಾರಿಗೆ ಚಾಲನೆ ಕೊಡಲಿದ್ದೇವೆ. ಸೇತುವೆ ಬಿರುಕು ಬಿಟ್ಟ ಕಡೆ ಸೂಕ್ತ ಅಧಿಕಾರಿಗಳ ತಂಡ ರಚಿಸಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಹಾಗೂ ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ಬೇಕಾದ ಸಿದ್ದತೆ ಮಾಡಿಕೊಳ್ಳುವುದಾಗಿ ಟಿ ರಘೂಮೂರ್ತಿ ಅವರು ಮಾಹಿತಿ ನೀಡಿದ್ದಾರೆ.1
- ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ ಬೆಂಗಳೂರಿನ ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.1
- ತುಂಗಭದ್ರಾ ನೀರು ಕಡಿತದ ಆತಂಕ! 🚨 ರೈತರು ಕಂಗಾಲು — ನವೆಂಬರ್ 22ರವರೆಗೆ ನೀರು ಸಿಗುತ್ತಾ? ತುಂಗಭದ್ರಾ ಜಲಾಶಯದಿಂದ ಎಲ್‌ಎಲ್‌ಸಿ (LLC) ಕಾಲುವೆಗೆ ನೀರು ಕಡಿತಗೊಳಿಸಲಾಗುತ್ತದೆ ಎಂಬ ಆತಂಕ ರೈತರಲ್ಲಿ ಮನೆಮಾಡಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶದ ರೈತರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ತುಂಗಭದ್ರಾ ರೈತ ಸಂಘದ ಪುರುಷೋತ್ತಮ ಗೌಡ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕರ್ನಾಟಕದ ರೈತರಿಗೆ ನವೆಂಬರ್ 22ರವರೆಗೆ ಯಾವುದೇ ವ್ಯತ್ಯಯವಿಲ್ಲದೆ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. #TungabhadraDam #Tungabhadra #TungabhadraWater #Farmers #KarnatakaFarmers #AndhraPradesh #LLCCanal #Irrigation #WaterCrisis #FarmersIssue #KarnatakaNews #Vijayanagara #Hoovinahadagali #Raitharu #BreakingNews #KannadaNews #ಕರ್ನಾಟಕ #ರೈತರು #ತುಂಗಭದ್ರಾ #ನೀರಿನಬಿಕ್ಕಟ್ಟು1
- ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್. ಅನ್ಯ ಉದ್ದೇಶಕ್ಕೆ ಲಾಲ್ ಬಾಗ್ ಜಾಗ ನೀಡಿಕೆ ಬಗ್ಗೆಯೂ ಪರಾಮರ್ಶೆ. ವಿಧಾನಸಭೆಯಲ್ಲಿ ಮತ್ತೊಮ್ಮೆ ಚರ್ಚೆಗೂ ಅವಕಾಶ. ಬರ ಘೋಷಣೆಯಲ್ಲಿ ತಾಂತ್ರಿಕ ಲೋಪಕ್ಕೆ ಅವಕಾಶವಿಲ್ಲ. ಈಗಾಗಲೇ 102 ತಾಲುಕು ಘೋಷಣೆ; ಇನ್ನಷ್ಟು ತಾಲುಕುಗಳ ಪರಿಶೀಲನೆ ಮುಂದುವರಿಕೆ. ಕೇಂದ್ರ ತಂಡದ ಮುಂದೆ ಸಮರ್ಥನೆಗೆ ಸಿದ್ಧತೆ.1
- ಅಧಿಕಾರಿಗಳಿಗೆ ಅವಹೇಳನ: ಕಾನೂನು ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮೊಳಕಾಲ್ಮೂರು: ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಗಸ್ಟ್ 29ರಂದು ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಅಧಿಕಾರಿಗಳ ಗೌರವ ಹಾಗೂ ಕರ್ತವ್ಯ ನಿರ್ವಹಣೆಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಉಪಾಧ್ಯಕ್ಷ ಮಹೇಶ್, ವಿಜಯಾಂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.1
- ಕಳಪೆ ಉಪಹಾರ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.ಮಾನ್ವಿ ಮುರಾರ್ಜಿ ವಸತಿ ನಿಲಯದಲ್ಲಿ ಘಟನೆ : ಪ್ರಾಚಾರ್ಯ, ವಾರ್ಡ್ ನಿರ್ಲಕ್ಷ್ಯದ ವಿರುದ್ದ ಪೋಷಕರ ಆಕ್ರೋಶ ಪಟ್ಟಣದ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣ ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ರವಾಗಿದೆ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾ ಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಹಲವು ಬಾರಿ ದೂರುಗಳು ಕೇಳಿಬಂದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದೇ ಇಂತಹ ಘಟನೆಗೆ ಕಾರಣವಾಗಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.1