logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಮೋಡ ಬಿತ್ತನೆ ಕೈಗೊಂಡು ರೈತರ ಜೀವ ಮತ್ತು ಜೀವನೋಪಾಯ ರಕ್ಷಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಬಸವರಾಜ ಕ್ಯಾವಟರ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ. ಸರ್ಕಾರದ ಆಡಳಿತ ವೈಫಲ್ಯದಿಂದ ಅಚ್ಚುಕಟ್ಟು ಪ್ರದೇಶಗಳ ರೈತರೂ ಮುಂಗಾರು ಬೆಳೆ ಬೆಳೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ರೈತರು ಬಿತ್ತನೆ ಮಾಡದೇ ಉಳಿದಿದ್ದು, ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿವೆ. ಹೀಗಾಗಿ ಸರ್ಕಾರ ಗ್ರಾಮವಾರು ಹಾಗೂ ಬೆಳೆವಾರು ಸಮೀಕ್ಷೆ ನಡೆಸಿ ಬೆಳೆನಷ್ಟವನ್ನು ಅಂದಾಜಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಮೇಲೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಹಾವೇರಿ ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮೋಡ ಬಿತ್ತನೆಗೆ ಮುಂದಾದ ಮಾದರಿಯನ್ನು ಕೊಪ್ಪಳದಲ್ಲೂ ಅನುಸರಿಸಬೇಕು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳೀಯ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ, ಸಿಎಸ್‌ಆರ್ ನಿಧಿ ಹಾಗೂ ಇತರ ಮೂಲಗಳಿಂದ ಹಣ ಸಂಗ್ರಹಿಸಿ ಮೋಡ ಬಿತ್ತನೆ ಕಾರ್ಯ ಕೈಗೊಳ್ಳಬೇಕು. ಇದರೊಂದಿಗೆ ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಪರಿಹಾರ, ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ, ಬಡ್ಡಿ ಮನ್ನಾ ಹಾಗೂ ಹೊಸ ಬೆಳೆ ಸಾಲದ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಯ ವಿವಿಧ ಗ್ರಾಮಗಳಿಗೆ ಬಿಜೆಪಿ ತಂಡ ಭೇಟಿ ನೀಡಿ, ಬಿತ್ತನೆಯಾಗದ ಜಮೀನುಗಳು ಹಾಗೂ ಒಣಗಿರುವ ಬೆಳೆಗಳ ಕುರಿತು ಸಮೀಕ್ಷೆ ನಡೆಸಿ ವರದಿಯನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಬಸವರಾಜ ಕ್ಯಾವಟರ್ ತಿಳಿಸಿದ್ದಾರೆ. ಅಧಿಕಾರದ ಹಪಾಹಪಿಗೆ ಓಡಾಡುವ ಶಾಸಕರು ಮತ್ತು ಸಂಸದರಿಗೆ ರೈತರ ಬಗ್ಗೆ ಕಾಳಜಿಯಿಲ್ಲದಿರುವುದು ಬೇಸರದ ಸಂಗತಿಯಾಗಿದೆ ಎಂದು ವೈದ್ಯ ಬಸವರಾಜ ಕ್ಯಾವಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ್ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಅಧಿಕಾರದ ಹಪಾಹಪಿಗಾಗಿ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿಸುತ್ತಾರೆ, ಆದರೆ ಅದೇ ಜನರ ಉದ್ಧಾರಕ್ಕಾಗಿ ಶ್ರಮಿಸುತ್ತಿಲ್ಲ. ಸಚಿವ ಸ್ಥಾನ ಕೇಳುವ ಇವರು ರೈತರ ಉಳಿವಿಗಾಗಿ ಏಕೆ ಶ್ರಮಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, ಖಾಸಗಿ ಕಂಪನಿಗಳಿಂದ ಹಣ ಸಂಗ್ರಹಿಸಿ ಕ್ರೀಡೆ ಆಯೋಜಿಸುವ ಉತ್ಸಾಹ ಮೋಡ ಬಿತ್ತನೆ ವಿಚಾರದಲ್ಲೂ ಬರಲಿ ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾ ಎಸ್ಐಆರ್ ಸಂಚಾಲಕರಾದ ರಾಜು ಬಾಕಳೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಹೆಸ್ರೂರು ಪಾಲ್ಗೊಂಡಿದ್ದರು.

5 hrs ago
user_JUDI NEWS
JUDI NEWS
ಕೊಪ್ಪಳ, ಕೊಪ್ಪಳ, ಕರ್ನಾಟಕ•
5 hrs ago
2f36222d-ad0f-4d1e-a72b-01f96217deb1

ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಮೋಡ ಬಿತ್ತನೆ ಕೈಗೊಂಡು ರೈತರ ಜೀವ ಮತ್ತು ಜೀವನೋಪಾಯ ರಕ್ಷಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಬಸವರಾಜ ಕ್ಯಾವಟರ್ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ. ಸರ್ಕಾರದ ಆಡಳಿತ ವೈಫಲ್ಯದಿಂದ ಅಚ್ಚುಕಟ್ಟು ಪ್ರದೇಶಗಳ ರೈತರೂ ಮುಂಗಾರು ಬೆಳೆ ಬೆಳೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ರೈತರು ಬಿತ್ತನೆ ಮಾಡದೇ ಉಳಿದಿದ್ದು, ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿವೆ. ಹೀಗಾಗಿ ಸರ್ಕಾರ ಗ್ರಾಮವಾರು ಹಾಗೂ ಬೆಳೆವಾರು ಸಮೀಕ್ಷೆ ನಡೆಸಿ ಬೆಳೆನಷ್ಟವನ್ನು ಅಂದಾಜಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಮೇಲೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಹಾವೇರಿ ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮೋಡ ಬಿತ್ತನೆಗೆ ಮುಂದಾದ ಮಾದರಿಯನ್ನು ಕೊಪ್ಪಳದಲ್ಲೂ ಅನುಸರಿಸಬೇಕು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳೀಯ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ, ಸಿಎಸ್‌ಆರ್ ನಿಧಿ ಹಾಗೂ ಇತರ ಮೂಲಗಳಿಂದ ಹಣ ಸಂಗ್ರಹಿಸಿ ಮೋಡ ಬಿತ್ತನೆ ಕಾರ್ಯ ಕೈಗೊಳ್ಳಬೇಕು. ಇದರೊಂದಿಗೆ ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಪರಿಹಾರ, ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ, ಬಡ್ಡಿ ಮನ್ನಾ ಹಾಗೂ ಹೊಸ ಬೆಳೆ ಸಾಲದ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಯ ವಿವಿಧ ಗ್ರಾಮಗಳಿಗೆ ಬಿಜೆಪಿ ತಂಡ ಭೇಟಿ ನೀಡಿ, ಬಿತ್ತನೆಯಾಗದ ಜಮೀನುಗಳು ಹಾಗೂ ಒಣಗಿರುವ ಬೆಳೆಗಳ ಕುರಿತು ಸಮೀಕ್ಷೆ ನಡೆಸಿ ವರದಿಯನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಬಸವರಾಜ ಕ್ಯಾವಟರ್ ತಿಳಿಸಿದ್ದಾರೆ. ಅಧಿಕಾರದ ಹಪಾಹಪಿಗೆ ಓಡಾಡುವ ಶಾಸಕರು ಮತ್ತು ಸಂಸದರಿಗೆ ರೈತರ ಬಗ್ಗೆ ಕಾಳಜಿಯಿಲ್ಲದಿರುವುದು ಬೇಸರದ ಸಂಗತಿಯಾಗಿದೆ ಎಂದು ವೈದ್ಯ ಬಸವರಾಜ ಕ್ಯಾವಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ್ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಅಧಿಕಾರದ ಹಪಾಹಪಿಗಾಗಿ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿಸುತ್ತಾರೆ, ಆದರೆ ಅದೇ ಜನರ ಉದ್ಧಾರಕ್ಕಾಗಿ ಶ್ರಮಿಸುತ್ತಿಲ್ಲ. ಸಚಿವ ಸ್ಥಾನ ಕೇಳುವ ಇವರು ರೈತರ ಉಳಿವಿಗಾಗಿ ಏಕೆ ಶ್ರಮಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, ಖಾಸಗಿ ಕಂಪನಿಗಳಿಂದ ಹಣ ಸಂಗ್ರಹಿಸಿ ಕ್ರೀಡೆ ಆಯೋಜಿಸುವ ಉತ್ಸಾಹ ಮೋಡ ಬಿತ್ತನೆ ವಿಚಾರದಲ್ಲೂ ಬರಲಿ ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾ ಎಸ್ಐಆರ್ ಸಂಚಾಲಕರಾದ ರಾಜು ಬಾಕಳೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಹೆಸ್ರೂರು ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯು ಶುಕ್ರವಾರ ಕರಾಳ ದಿನಾಚರಣೆ ಆಚರಿಸಿ ಒಂದು ದಿನದ ಮುಷ್ಕರ ನಡೆಸಿದೆ. ಅಕ್ಷರ ದಾಸೋಹ (ಬಿಸಿಯೂಟ) ಯೋಜನೆ ಆರಂಭವಾಗಿ 25 ವರ್ಷಗಳು ಪೂರ್ಣಗೊಂಡಿದ್ದರೂ, ನೌಕರರ ಬದುಕಿನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸಂಘ ಆರೋಪಿಸಿದೆ. ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ನೌಕರರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು 2008ರಿಂದ ಕೇಂದ್ರ ಸರ್ಕಾರ ಬಿಸಿಯೂಟ ನೌಕರರಿಗೆ ಸಮರ್ಪಕ ವೇತನ ಹೆಚ್ಚಳ ಮಾಡದೆ ಶೋಷಣೆ ನಡೆಸುತ್ತಿದೆ ಎಂದು ದೂರಿದರು. ಜೊತೆಗೆ ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ಯೋಜನೆಯನ್ನು ಹಸ್ತಾಂತರಿಸುವ ಮೂಲಕ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಚುನಾವಣಾ ಭರವಸೆಯಂತೆ ಕಾರ್ಯಕರ್ತೆಯರ ಮಾಸಿಕ ವೇತನವನ್ನು ₹7,000ಕ್ಕೆ ಹೆಚ್ಚಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದರಲ್ಲಿ 6 ಗಂಟೆಗಳ ಕೆಲಸದ ಅವಧಿಯ ಕುರಿತು ಅಧಿಕೃತ ಆದೇಶ, ಎಲ್ಲರಿಗೂ ಆರೋಗ್ಯ ವಿಮೆ, ಮುಖ್ಯ ಅಡುಗೆ ನೌಕರರಿಂದ ಪಿ.ಡಿ.ಒ.ಗೆ ವರ್ಗಾಯಿಸಿರುವ ಜಂಟಿ ಖಾತೆ ಜವಾಬ್ದಾರಿಯನ್ನು ಹಿಂದಿನಂತೆ ಮರುಸ್ಥಾಪಿಸುವುದು, ಖಾಸಗಿ ಸಂಸ್ಥೆಗಳಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿರುವವರಿಗೆ ಉದ್ಯೋಗ ಭದ್ರತೆ ಮತ್ತು ಅಕ್ಷರ ದಾಸೋಹ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿವೆ. ಇದರೊಂದಿಗೆ ನಿವೃತ್ತ ನೌಕರರಿಗೆ ಮಾಸಿಕ ₹10,000 ಪಿಂಚಣಿ, ಬಾಕಿ ಹಣ ಬಿಡುಗಡೆ ಹಾಗೂ ಸುಸಜ್ಜಿತ ಮತ್ತು ಸ್ವಚ್ಛ ಅಡುಗೆ ಕೇಂದ್ರಗಳನ್ನು ನಿರ್ಮಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ.
    1
    ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯು ಶುಕ್ರವಾರ ಕರಾಳ ದಿನಾಚರಣೆ ಆಚರಿಸಿ ಒಂದು ದಿನದ ಮುಷ್ಕರ ನಡೆಸಿದೆ. ಅಕ್ಷರ ದಾಸೋಹ (ಬಿಸಿಯೂಟ) ಯೋಜನೆ ಆರಂಭವಾಗಿ 25 ವರ್ಷಗಳು ಪೂರ್ಣಗೊಂಡಿದ್ದರೂ, ನೌಕರರ ಬದುಕಿನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸಂಘ ಆರೋಪಿಸಿದೆ. ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ನೌಕರರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು 2008ರಿಂದ ಕೇಂದ್ರ ಸರ್ಕಾರ ಬಿಸಿಯೂಟ ನೌಕರರಿಗೆ ಸಮರ್ಪಕ ವೇತನ ಹೆಚ್ಚಳ ಮಾಡದೆ ಶೋಷಣೆ ನಡೆಸುತ್ತಿದೆ ಎಂದು ದೂರಿದರು. ಜೊತೆಗೆ ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ಯೋಜನೆಯನ್ನು ಹಸ್ತಾಂತರಿಸುವ ಮೂಲಕ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಚುನಾವಣಾ ಭರವಸೆಯಂತೆ ಕಾರ್ಯಕರ್ತೆಯರ ಮಾಸಿಕ ವೇತನವನ್ನು ₹7,000ಕ್ಕೆ ಹೆಚ್ಚಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದರಲ್ಲಿ 6 ಗಂಟೆಗಳ ಕೆಲಸದ ಅವಧಿಯ ಕುರಿತು ಅಧಿಕೃತ ಆದೇಶ, ಎಲ್ಲರಿಗೂ ಆರೋಗ್ಯ ವಿಮೆ, ಮುಖ್ಯ ಅಡುಗೆ ನೌಕರರಿಂದ ಪಿ.ಡಿ.ಒ.ಗೆ ವರ್ಗಾಯಿಸಿರುವ ಜಂಟಿ ಖಾತೆ ಜವಾಬ್ದಾರಿಯನ್ನು ಹಿಂದಿನಂತೆ ಮರುಸ್ಥಾಪಿಸುವುದು, ಖಾಸಗಿ ಸಂಸ್ಥೆಗಳಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿರುವವರಿಗೆ ಉದ್ಯೋಗ ಭದ್ರತೆ ಮತ್ತು ಅಕ್ಷರ ದಾಸೋಹ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿವೆ. ಇದರೊಂದಿಗೆ ನಿವೃತ್ತ ನೌಕರರಿಗೆ ಮಾಸಿಕ ₹10,000 ಪಿಂಚಣಿ, ಬಾಕಿ ಹಣ ಬಿಡುಗಡೆ ಹಾಗೂ ಸುಸಜ್ಜಿತ ಮತ್ತು ಸ್ವಚ್ಛ ಅಡುಗೆ ಕೇಂದ್ರಗಳನ್ನು ನಿರ್ಮಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬಾಗಲಕೋಟೆ ಮುಳುಗಡೆ ನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಹೆಚ್. ಶಿವರಾಮೇಗೌಡರ ಬಣವು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಮುಳುಗಡೆ ಸಂತ್ರಸ್ತರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಮೀಸಲಿಟ್ಟ ಕೈಗಾರಿಕಾ ನಿವೇಶನಗಳಲ್ಲಿ ಯಾವುದೇ ಉತ್ಪಾದನಾ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಸಂಘಟನೆ ದೂರಿದೆ. ಈ ನಿವೇಶನಗಳ ಬಳಕೆಯಾಗದಿರುವ ಕುರಿತು ತೃತೀಯ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂದು ಕರವೇ ಆಗ್ರಹಿಸಿದೆ. ನಿಯಮ ಉಲ್ಲಂಘಿಸಿದವರಿಂದ ನಿವೇಶನಗಳನ್ನು ವಾಪಸ್ ಪಡೆದು, ಅವುಗಳಲ್ಲಿ ಪರಿಸರ ಸ್ನೇಹಿ ಕೈಗಾರಿಕೆಗಳು ಮತ್ತು ಹೊಸ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. 'ಮುಳುಗಿದ್ದು ಬಾಗಲಕೋಟೆ... ಬೆಳೆದಿದ್ದು ವಿಜಯಪುರ' ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಂಘಟನೆಯು, ಈ ಸಂಬಂಧ ಸರ್ಕಾರಕ್ಕೆ ಮನವಿಯನ್ನು ಕೂಡ ಸಲ್ಲಿಸಿದೆ.
    1
    ಬಾಗಲಕೋಟೆ ಮುಳುಗಡೆ ನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಹೆಚ್. ಶಿವರಾಮೇಗೌಡರ ಬಣವು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಮುಳುಗಡೆ ಸಂತ್ರಸ್ತರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಮೀಸಲಿಟ್ಟ ಕೈಗಾರಿಕಾ ನಿವೇಶನಗಳಲ್ಲಿ ಯಾವುದೇ ಉತ್ಪಾದನಾ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಸಂಘಟನೆ ದೂರಿದೆ.

ಈ ನಿವೇಶನಗಳ ಬಳಕೆಯಾಗದಿರುವ ಕುರಿತು ತೃತೀಯ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂದು ಕರವೇ ಆಗ್ರಹಿಸಿದೆ. ನಿಯಮ ಉಲ್ಲಂಘಿಸಿದವರಿಂದ ನಿವೇಶನಗಳನ್ನು ವಾಪಸ್ ಪಡೆದು, ಅವುಗಳಲ್ಲಿ ಪರಿಸರ ಸ್ನೇಹಿ ಕೈಗಾರಿಕೆಗಳು ಮತ್ತು ಹೊಸ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. 'ಮುಳುಗಿದ್ದು ಬಾಗಲಕೋಟೆ... ಬೆಳೆದಿದ್ದು ವಿಜಯಪುರ' ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಂಘಟನೆಯು, ಈ ಸಂಬಂಧ ಸರ್ಕಾರಕ್ಕೆ ಮನವಿಯನ್ನು ಕೂಡ ಸಲ್ಲಿಸಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ಮಹಾರಾಷ್ಟ್ರದಲ್ಲಿ ಉಂಟಾಗಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ 1.30 ಲಕ್ಷ ಕ್ಯೂಸೆಕ್ಸ್ ಒಳಹರಿವು ಹರಿದುಬಂದಿದೆ. ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಒಟ್ಟು 10 ಸೇತುವೆಗಳು ಜಲಾವೃತಗೊಂಡಿವೆ.
    1
    ಮಹಾರಾಷ್ಟ್ರದಲ್ಲಿ ಉಂಟಾಗಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ 1.30 ಲಕ್ಷ ಕ್ಯೂಸೆಕ್ಸ್ ಒಳಹರಿವು ಹರಿದುಬಂದಿದೆ. ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಒಟ್ಟು 10 ಸೇತುವೆಗಳು ಜಲಾವೃತಗೊಂಡಿವೆ.
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • ಬಾಗಲಕೋಟೆ ಜಿಲ್ಲೆಯ ಬೀಳಗಿ ವಲಯದ ಅರಣ್ಯ ಅಧಿಕಾರಿಗಳ ನಡೆಗೆ ಕುರಿಗಾಯಿಗಳು ಹಾಗೂ ರೈತ ಸಂಘದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಅಧಿಕಾರಿಗಳ ಈ ವರ್ತನೆಯ ವಿರುದ್ಧ ರೈತ ಮುಖಂಡ ಸಿಪ್ಪದ ಅವರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ.
    1
    ಬಾಗಲಕೋಟೆ ಜಿಲ್ಲೆಯ ಬೀಳಗಿ ವಲಯದ ಅರಣ್ಯ ಅಧಿಕಾರಿಗಳ ನಡೆಗೆ ಕುರಿಗಾಯಿಗಳು ಹಾಗೂ ರೈತ ಸಂಘದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಅಧಿಕಾರಿಗಳ ಈ ವರ್ತನೆಯ ವಿರುದ್ಧ ರೈತ ಮುಖಂಡ ಸಿಪ್ಪದ ಅವರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ.

ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.
    2
    ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    1
    ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.