Shuru
Apke Nagar Ki App…
ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡರು. ರಾಣೆಬೆನ್ನೂರು ತಾಲೂಕಿನ ತೆರದಲ್ಲಿ ಬೆಳೆ ಇರುವ ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡ ಶಿವಪುತ್ರಪ್ಪ ಮಲ್ಲಾಡದ ನ್ಯಾಯ ಸಿಗುವವರೆಗೂ ಈ ಕುಟುಂಬದ ಬೆನ್ನೆಲುಬಾಗಿ ನಿಲ್ಲುತ್ತೇವೆ.
H M ಹರಕುಣಿ
ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡರು. ರಾಣೆಬೆನ್ನೂರು ತಾಲೂಕಿನ ತೆರದಲ್ಲಿ ಬೆಳೆ ಇರುವ ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡ ಶಿವಪುತ್ರಪ್ಪ ಮಲ್ಲಾಡದ ನ್ಯಾಯ ಸಿಗುವವರೆಗೂ ಈ ಕುಟುಂಬದ ಬೆನ್ನೆಲುಬಾಗಿ ನಿಲ್ಲುತ್ತೇವೆ.
More news from ಕರ್ನಾಟಕ and nearby areas
- 📢 ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಕರ್ನಾಟಕ ರಾಜ್ಯದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ 📢 ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಕರ್ನಾಟಕ ರಾಜ್ಯದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ, ಅರಿವು–ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ ಹಾಗೂ ಕೌಶಲ್ಯ ತರಬೇತಿ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹರು ಸೆಪ್ಟೆಂಬರ್ 30, 2026ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಿ.1
- ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಕೆ.ಎಸ್. ಬಸವಂತಪ್ಪ ಕೂಡ್ಲಿಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವಾ ಆಂದೋಲನದ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಕೆ.ಎಸ್. ಬಸವಂತಪ್ಪ ಸೂಚಿಸಿದರು. ಪಟ್ಟಣದ ಎಸ್.ಎ.ವಿ.ಟಿ. ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಯ ನಿಮಿತ್ತ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಕಚೇರಿಗಳ ಸುತ್ತ ಅಲೆದಾಡಿಸುವ ಬದಲು, ಆಡಳಿತವೇ ಜನರ ಬಳಿಗೆ ತೆರಳಿ ಸ್ಪಂದಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಆಶಯವಾಗಿದೆ ಎಂದರು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನದ ಮೂಲಕ ತಾಲೂಕಿನ ಜನರ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರಕಿಸಲು ಅವಕಾಶ ಕಲ್ಪಿಸಲಾಗುತ್ತಿದೆ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಅವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಸಭಾ ಸ್ಥಳದಲ್ಲಿ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ಆಸನ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಇಲಾಖಾವಾರು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ,ಡ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ವರ್ಗದ ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿದೆ. ಇದೀಗ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವಾ’ ಎಂಬ ವಿನೂತನ ಆಂದೋಲನಕ್ಕೆ ಪ್ರತ್ಯೇಕ ಇಲಾಖೆಯನ್ನು ಆರಂಭಿಸಿರುವುದು ಮಹತ್ವದ ಹೆಜ್ಜೆಯಾಗಿದೆ. ರಾಜ್ಯಮಟ್ಟದಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನಕ್ಕೆ ತಮ್ಮ ಕೂಡ್ಲಿಗಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡುತ್ತಿರುವುದು ಕ್ಷೇತ್ರದ ಜನತೆ ಹಾಗೂ ತಮ್ಮ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಆಂದೋಲನದ ಮೂಲಕ ತಾಲೂಕಿನ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಈ ವೇಳೆ ಜಿಲ್ಲಾ ಅಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 48 ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸುಮಾರು 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 60 ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಅರ್ಜಿಗಳನ್ನು ಸ್ವೀಕರಿಸಲು 30 ಕೌಂಟರ್‌ಗಳನ್ನು ಕಾಯ್ದಿರಿಸಲಾಗಿದೆ. ತಾಲ್ಲೂಕಿನ ಎಲ್ಲಾ ಮನೆಗಳಿಗೆ ಮುಖ್ಯಮಂತ್ರಿಗಳ ಸಂದೇಶ ಪತ್ರ ಹಾಗೂ ಆಹ್ವಾನ ಪತ್ರಿಕೆ ಮತ್ತು ಸ್ವೀಕೃತಿ ಪತ್ರವನ್ನು ತಲುಪಿಸಲಾಗಿದೆ. ಸಿ.ಎಂ ಸಂದೇಶ ಹಾಗೂ ಕುಂದುಕೊರತೆಗಳ ಆಹ್ವಾನ ಪತ್ರಿಕೆಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಕುಂದು ಕೊರತೆ ಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳ ಕುರಿತು ಪಟ್ಟಿ ನೀಡಲಾಗಿದೆ. ಸಾರ್ವಜನಿಕರು ತಮ್ಮ ಅಗತ್ಯತೆಗಳಿಗೆ ತಕ್ಕಂತೆ ಭರ್ತಿ ಮಾಡಿ ಸೆ.5ರಂದು ಬೆಳಿಗ್ಗೆ 9 ಗಂಟೆಯೊಳಗೆ ನೋಂದಣಿ ಮಾಡಿಕೊಳ್ಳಬಹುದು. ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸ್ಥಳದಲ್ಲೇ ಡಿಜಿಟಲ್ ಹಾಗೂ ತಾಂತ್ರಿಕ ವ್ಯವಸ್ಥೆಯ ಮೂಲಕ ವಿಂಗಡಿಸಿ ತಕ್ಷಣವೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಮಟ್ಟದ ಸಿಬ್ಬಂದಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಬಳ್ಳಾರಿ ವಿಜಯನಗರ ಸಂಸದ ಈ ತುಕಾರಾಂ, ಹೊಸಪೇಟೆ ಶಾಸಕ ಎಚ್.ಆರ್ ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಜಿಲ್ಲಾ ಅಧಿಕಾರಿ ಕವಿತಾ ಮನ್ನಿಕೇರಿ, ಎಸ್.ಪಿ ಜಾಹ್ನವಿ, ಜಿಪಂ ಸಿಇಒ ನೊಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಎಡಿಸಿ ಪಿ.ಎನ್.ಲೋಕೇಶ್, ಗ್ಯಾರಂಟಿ ಅಧ್ಯಕ್ಷ ಕುರಿಮೂರ್ತಿ, ತಹಶೀಲ್ದಾರ್ ವಿ.ಕೆ ನೇತ್ರಾವತಿ, ಇಒ ನರಸಪ್ಪ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.1
- ಶಿವಮೊಗ್ಗ-ತಹಶೀಲ್ದಾರ್ ರವರ ಕಾರ್ಯ ವೈಖರಿ: ಸಾಗರ ಶಾಸಕ ಬೇಳೂರು ಅಸಮಾಧಾನ ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಿರಂತರ ದಾಳಿ ಹಾಗೂ ಕಾರ್ಯಾಚರಣೆ ನಡೆಸುತ್ತಿರುವ ತಹಶೀಲ್ದಾರ್ ಪ್ರತೀಭಾ ಅವರ ಕಾರ್ಯ ವೈಖರಿ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ನಿನ್ನೆ ಸಾಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ನಡೆಸುವ ವೇಳೆ ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ನೀಡುವ ಮೂಲಕ ಪ್ರಚಾರ ಪಡೆಯುವ ಕ್ರಮವನ್ನು ತಕ್ಷಣವೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದ್ದಾರೆ. ಪ್ರಚಾರ ಮೊದಲು ಅಲ್ಲ, ಕೆಲಸ ಮೊದಲು. ಕಾರ್ಯಾಚರಣೆಗಳ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡುವುದನ್ನು ನಿಲ್ಲಿಸಿ. ಪ್ರಚಾರದ ಧಾಟಿ ಬಿಟ್ಟು ನಿಯಮಾನುಸಾರ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿ” ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ಸಭೆಯಲ್ಲಿ ಗಮನ ಸೆಳೆಯಿತು.1
- ಬೆಳಗಾವಿ ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3 ರಂದು ಆಯೋಜಿಸಿರುವ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಬೆಳಗಾವಿ ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3 ರಂದು ಆಯೋಜಿಸಿರುವ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ದ ಕುರಿತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ನೀಡಿರುವ ಸಂದೇಶ.1
- ರಾಯಬಾಗ್ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಯಬಾಗ್ ತಾಲೂಕ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜನೆ *ಇಂದು ಬೃಹತ್ ರಕ್ತದಾನ ಶಿಬಿರ* ರಾಯಬಾಗ/ಹಾರೂಗೇರಿ: ರಕ್ತದಾನ ಶ್ರೇಷ್ಠ ದಾನ, ಪುಣ್ಯ ಕಾರ್ಯವಾಗಿದೆ. ರಕ್ತದಾನ ಆರೋಗ್ಯಕ್ಕೆ ಒಳ್ಳೆಯದು. ರಕ್ತ ನೀಡುವುದರಿಂದ ಶರೀರದಲ್ಲಿ ರಕ್ತವು ಹೆಚ್ಚು ಉತ್ಪತ್ತಿ ಆಗುವುದರ ಜೊತೆಗೆ ನವ ಚೈತನ್ಯ ಉಂಟು ಮಾಡುತ್ತದೆ, ಹೇಗೆಂದರೆ ನಾವು ಕೂದಲನ್ನು ಕತ್ತರಿಸುತ್ತೆವೆ ಆದರೂ ಕೂದಲು ಮತ್ತೆ ಬೆಳೆಯುತ್ತದೆ ಅದೇ ರೀತಿ ರಕ್ತವು ಕೂಡಾ ಉತ್ಪತ್ತಿಗೊಳ್ಳುತ್ತದೆ. ರಕ್ತದಾನ ದಿಂದ ಇನ್ನೊಂದು ಜೀವವನ್ನು ಉಳಿಸಿದಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಯಬಾಗ ತಾಲೂಕಾಧ್ಯಕ್ಷ ಉಮೇಶ ಭೂಪಾಲ ಪೋಳ ಹೇಳಿದರು, ಶಿಕ್ಷಕರ ದಿನಾಚರಣೆ ಅಂಗವಾಗಿ ನಾಳೆ ದಿನಾಂಕ:03.09.2026ರಂದು ತಾಲೂಕು ಆಸ್ಪತ್ರೆ ರಾಯಬಾಗ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಹಾರೂಗೇರಿಯಲ್ಲಿ ಮುಂಜಾನೆ:08.00ಘಂಟೆಯಿಂದ ಸಂಜೆ:06.00ಘಂಟೆವರೆಗೆ *ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು* ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಶ್ರೀ.ರಾಹುಲ ಶಿಂಧೆ IAS ರವರ *ಗುರು-ಶಿಕ್ಷಕರ ನಮನ* ಸೃಜನಶೀಲ ವಿಚಾರಧಾರೆ ಹಾಗೂ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದೆ.ರಾಯಬಾಗ ತಾಲೂಕಿನ ಸಮಸ್ತ ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು, ಗ್ರಾಮ ಪಂಚಾಯತ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಯಾವತ್ತೂ ಸಾರ್ವಜನಿಕರು, ಸೇವಾ ಸಂಘ, ಸಂಸ್ಥೆಗಳು ಈ ಶಿಬಿರದಲ್ಲಿ ಪಾಲ್ಗೊಂಡು ಸ್ವಯಂಪ್ರೇರಿತ ರಕ್ತದಾನ ಮಾಡಬೇಕೆಂದು ವಿನಂತಿಸಿದರು. ಮುಂದುವರೆದು ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಅಲ್ಲದೆ ಉತ್ತಮ ಆರೋಗ್ಯ ಹೊಂದಬಹುದು, ರಕ್ತದಾನದಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿನ ಕೊಬ್ಬಿನಾಂಶ ಕಡಿಮೆ ಮಾಡುತ್ತದೆ. ಮತ್ತು ಹೃದಯಾಘಾತವನ್ನು ಶೇ 80% ರಷ್ಟು ಕಡಿಮೆ ಮಾಡುತ್ತದೆ. ರಕ್ತದ ಒತ್ತಡ ಹಾಗೂ ಮದುಮೇಹ ತಡೆಯುವಲ್ಲಿ ರಕ್ತದಾನ ಸಹಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅರುಣ ನಿಂಗಪ್ಪ ಮಾಚಕನೂರ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ ರಾಯಬಾಗ, ಬಸವರಾಜಪ್ಪ ಆರ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಾಯಬಾಗ, ಡಾ.ಸತೀಶ್ ಕಲ್ಲಟ್ಟಿ ತಾಲೂಕ ಆರೋಗ್ಯ ಅಧಿಕಾರಿಗಳು ರಾಯಬಾಗ, ರವಿ ಪಾಟೀಲ್ ಸಹಾಯಕ ನಿರ್ದೇಶಕರು ಮಧ್ಯಾಹ್ನ ಬಿಸಿಯೂಟ ಯೋಜನೆ ರಾಯಬಾಗ ರವರು ಉಪಸ್ಥಿತರಿದ್ದರು.1
- ನಾಗೇಂದ್ರ ಇನ್ನು ಸ್ವಲ್ಪ ದಿನಗಳಲ್ಲಿ ಮೈಮೇಲಿನ ಬಟ್ಟೆ ಹರಿದುಕೊಂಡು ತಿರುಗುವ ಪರಿಸ್ಥಿತಿ ಬಂದ್ರು ಬರಬಹುದು - ಮಾಜಿ ಸಂಸದ ಸಣ್ಣ ಪಕ್ಕೀರಪ್ಪ1
- ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಡಿಕೆಶಿಗೆ ಬಿ.ವೈ.ವಿಜಯೇಂದ್ರ ಸವಾಲು ದಲಿತರು, ಹಿಂದುಳಿದವರು ಹಾಗೂ ರೈತರಿಗೆ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಜನರ ತೀರ್ಪಿಗೆ ಹೋಗಿ: ಬಿಜೆಪಿ ರಾಜ್ಯಾಧ್ಯಕ್ಷ ಮಸ್ಕಿ (ರಾಯಚೂರು), ಸೆ. 2: ದಲಿತರು, ಹಿಂದುಳಿದ ವರ್ಗಗಳು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಿ ಚುನಾವಣೆ ಎದುರಿಸಲಿ. ಆಗ ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು. ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಮಸ್ಕಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದ ವರ್ಗಗಳ ಪರವಾಗಿ ಮಾತನಾಡಿಕೊಂಡೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ವರ್ಷಗಳಿಂದ ಇದೇ ಸಮುದಾಯಗಳಿಗೆ ಅನ್ಯಾಯ ಮಾಡುತ್ತಾ ಬಂದಿದೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ವಿಜಯೇಂದ್ರ, ನಿಗಮದ ಹಣದ ದುರ್ಬಳಕೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೀಸಲಾತಿ ವಿಚಾರದಲ್ಲಿಯೂ ಸರ್ಕಾರ ಸ್ಪಷ್ಟತೆ ತೋರಿಲ್ಲ. ಮೀಸಲಾತಿ ನೆಪದಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿಫಲವಾಗಿದೆ. ದಲಿತರು ಮಾತ್ರವಲ್ಲದೆ ರಾಜ್ಯದ ಎಲ್ಲ ಸಮುದಾಯಗಳನ್ನೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು. ಡಿಕೆಶಿ ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳಲಿವೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟ ವಿಜಯೇಂದ್ರ, ಸರ್ಕಾರದ ಇನ್ನೂ ಎರಡು-ಮೂರು ವಿಕೆಟ್‌ಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಿದರು. ಭ್ರಷ್ಟಾಚಾರವೇ ಈ ಸರ್ಕಾರಕ್ಕೆ ಉರುಳಾಗಲಿದೆ. ಅಧಿಕಾರವೇ ಶಾಶ್ವತ ಎಂಬ ಮನೋಭಾವದಿಂದ ವರ್ತಿಸುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದೆ. ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ರೈತರು ಸೇರಿದಂತೆ ವಿವಿಧ ವರ್ಗಗಳ ಜನರು ಬೆಂಬಲ ನೀಡುತ್ತಿದ್ದಾರೆ ಎಂದರು. ರೈತರ ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನೂ ಮುಖ್ಯಮಂತ್ರಿ ತೋರಿಸುತ್ತಿಲ್ಲ ಎಂದು ಟೀಕಿಸಿದ ಅವರು, ಅನ್ನದಾತರ ಸಂಕಷ್ಟದ ಬಗ್ಗೆ ಸರ್ಕಾರ ಇನ್ನಾದರೂ ಗಂಭೀರವಾಗಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಹೋರಾಟದ ಬಳಿಕವೇ ಬರ ವೀಕ್ಷಣೆ ಆರಂಭ ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಬಿಜೆಪಿ ಈಗಾಗಲೇ ವಿವಿಧ ಜಿಲ್ಲೆಗಳಿಗೆ ತೆರಳಿ ವಾಸ್ತವಾಂಶಗಳನ್ನು ಪರಿಶೀಲಿಸಿದೆ. ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈವರೆಗೆ ಬರಪೀಡಿತ ಪ್ರದೇಶಗಳಿಗೆ ಸಮರ್ಪಕವಾಗಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿರಲಿಲ್ಲ. ಇದೀಗ ಬಿಜೆಪಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಅನಿವಾರ್ಯವಾಗಿ ಬರ ವೀಕ್ಷಣೆಗೆ ಮುಂದಾಗಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು. ಇಷ್ಟು ದಿನ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತಿದ್ದವರು ಇದೀಗ ರೈತರ ಜಮೀನುಗಳಿಗೆ ಭೇಟಿ ನೀಡುವ ಪರಿಸ್ಥಿತಿ ಬಂದಿದೆ. ಬಿಜೆಪಿ ನಡೆಸುತ್ತಿರುವ ಹೋರಾಟದ ಪರಿಣಾಮವಾಗಿಯೇ ಸರ್ಕಾರ ರೈತರ ಸಮಸ್ಯೆಗಳತ್ತ ಗಮನ ಹರಿಸಲು ಮುಂದಾಗಿದೆ ಎಂದು ಅವರು ಹೇಳಿದರು. ‘ಮೂರು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ?’ ರಾಯಚೂರು ಭಾಗದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ರೈತರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸಭೆ ಕರೆಯಲಾಗಿದೆಯೇ ಅಥವಾ ಹಿಂದಿನ ಸರ್ಕಾರದ ವಿರುದ್ಧ ಆರೋಪ ಹುಡುಕಲು ಸಭೆ ನಡೆಸಲಾಗುತ್ತಿದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೇಳಿದರು. ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಈಗ ಹಿಂದಿನ ಸರ್ಕಾರದ ಹಗರಣಗಳನ್ನು ಹುಡುಕುವುದಾಗಿ ಹೇಳುತ್ತಿದೆ. ಇಷ್ಟು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದಿರಿ? ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ರಾಜಕೀಯ ದ್ವೇಷ ಸಾಧಿಸುವುದರಲ್ಲೇ ಕಾಲ ಕಳೆದಿದ್ದೀರಾ ಎಂದು ಪ್ರಶ್ನಿಸಿದರು. ಸರ್ಕಾರದ ಯಾವುದೇ ರೀತಿಯ ಬೆದರಿಕೆ, ಒತ್ತಡ ಅಥವಾ ಧಮ್ಕಿಗೆ ಬಿಜೆಪಿ ಹೆದರುವುದಿಲ್ಲ. ಜನರ ಪರವಾಗಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೋರ್‌ವೆಲ್‌ಗಳನ್ನು ನೂರಾರು, ಸಾವಿರಾರು ಅಡಿ ಆಳಕ್ಕೆ ಕೊರೆದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವು ದೊರೆಯುತ್ತಿಲ್ಲ. ಹಲವು ಕಡೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಕೊರತೆ ಇದೆ ಎಂದು ಅವರು ಹೇಳಿದರು. ರಾಜ್ಯದ ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು ಮುಖ್ಯಮಂತ್ರಿ ಬೆಂಗಳೂರಿನಲ್ಲೇ ಕುಳಿತು ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪವನ್ನು ವಿಜಯೇಂದ್ರ ಮಾಡಿದರು. ಬೆಂಗಳೂರಿನ ಅಭಿವೃದ್ಧಿಯಷ್ಟೇ ರಾಜ್ಯದ ಅಭಿವೃದ್ಧಿಯಲ್ಲ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ಅಭಿವೃದ್ಧಿಯತ್ತ ಸರ್ಕಾರ ಸಮಾನ ಗಮನ ಹರಿಸಬೇಕು. ಇಲ್ಲವಾದರೆ ಜನರು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ‘ಎಲ್ಲ ಕೆಲಸಕ್ಕೂ ಲಂಚ ನೀಡಬೇಕಾದ ಪರಿಸ್ಥಿತಿ’ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸಾಮಾನ್ಯ ಜನರು ಯಾವುದೇ ಕೆಲಸ ಮಾಡಿಸಿಕೊಳ್ಳಬೇಕಾದರೂ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಲಂಚ ನೀಡದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಇದು ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನೇ ಕುಗ್ಗಿಸುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ವಾಸ್ತವವಾಗಿ ಇನ್ನೂ ಅನೇಕ ತಾಲೂಕುಗಳು ಬರದ ಸಂಕಷ್ಟಕ್ಕೆ ಸಿಲುಕಿವೆ. ಅವುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು. ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿಕೊಳ್ಳಲು ಕೂಡ ರೈತರು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಕೆ ರೈತರ ಸಂಕಷ್ಟ, ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ, ನಿರುದ್ಯೋಗ ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸುತ್ತಿದೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ದಲಿತರು, ಹಿಂದುಳಿದವರು, ರೈತರು ಹಾಗೂ ಯುವಕರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಲಿ. ಜನರ ತೀರ್ಪನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಾಗಿದೆಯೇ ಎಂದು ವಿಜಯೇಂದ್ರ ಪ್ರಶ್ನಿಸಿದರು.1
- ಅಧಿಕಾರಿಗಳಿಗೆ ಅವಹೇಳನ: ಕಾನೂನು ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ ಮೊಳಕಾಲ್ಮೂರು: ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಗಸ್ಟ್ 29ರಂದು ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ತಹಶೀಲ್ದಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಅಧಿಕಾರಿಗಳ ಗೌರವ ಹಾಗೂ ಕರ್ತವ್ಯ ನಿರ್ವಹಣೆಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ರಾಮಚಂದ್ರಪ್ಪ, ಉಪಾಧ್ಯಕ್ಷ ಮಹೇಶ್, ವಿಜಯಾಂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.1
- 📺 ಶುರು ನ್ಯೂಸ್ ಇಂಪ್ಯಾಕ್ಟ್! ಸುದ್ದಿ ಕೇವಲ ಪ್ರಸಾರವಾಗುವುದಲ್ಲ… ಸಮಾಜದ ಗಮನ ಸೆಳೆದು, ಒಳ್ಳೆಯ ಕಾರ್ಯಗಳಿಗೆ ಪ್ರೇರಣೆಯಾಗಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. 🎙️ ವರದಿ: ಸಿಂಪಲ್ ಸಿದ್ದು 📰 ಶುರು ನ್ಯೂಸ್ 9743340230 📰 ಶುರು ನ್ಯೂಸ್ ಇಂಪ್ಯಾಕ್ಟ್: 35 ವರ್ಷಗಳಿಂದ ಮಣ್ಣಿನ ಗಣಪತಿ ತಯಾರಿಸುತ್ತಿರುವ ಕುಂಬಾರ ಕುಟುಂಬಕ್ಕೆ ಪೂಜ್ಯರ ಆಶೀರ್ವಾದ ಹಿಡಕಲ್: ಹಿಡಕಲ್ ಗ್ರಾಮದ ಕುಂಬಾರ ಸಮುದಾಯದವರು ಕಳೆದ 35 ವರ್ಷಗಳಿಂದ ಮಣ್ಣಿನಿಂದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಾ ತಮ್ಮ ಸಾಂಪ್ರದಾಯಿಕ ಕುಂಬಾರಿಕೆ ಕಲೆಯನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ಈ ಕುರಿತು ಶುರು ನ್ಯೂಸ್ನಲ್ಲಿ ವಿಡಿಯೋ ವರದಿ ಪ್ರಸಾರವಾಗಿತ್ತು. ವರದಿಯನ್ನು ವೀಕ್ಷಿಸಿದ ಬಳಿಕ ಬೈಲೂರು ಗ್ರಾಮದ ಪರಮಪೂಜ್ಯ ಶ್ರೀ ನಿಜಗುಣಾನಂದ ಸ್ವಾಮೀಜಿಯವರು ಕುಂಬಾರ ಕುಟುಂಬದವರನ್ನು ಭೇಟಿ ಮಾಡಿ, ಅವರ ಕಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವತಃ ಸಿದ್ದಪ್ಪ ಕುಂಬಾರ್ ಅವರ ಮನೆಗೆ ಭೇಟಿ ನೀಡಿದ ಪೂಜ್ಯರು, ಕುಂಬಾರಿಕೆಯ ಸಾಂಪ್ರದಾಯಿಕ ಕಲೆಯನ್ನು ಅರಿತುಕೊಳ್ಳುವ ಉದ್ದೇಶದಿಂದ ತಾವೇ ಸ್ವತಃ ಮಣ್ಣಿನಿಂದ ಹಂಚನ್ನು ತಯಾರಿಸಿ, ಕುಟುಂಬಕ್ಕೆ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಾಂಪ್ರದಾಯಿಕ ಕಲೆ, ಕುಂಬಾರಿಕೆ ವೃತ್ತಿ ಹಾಗೂ ಮಣ್ಣಿನ ಗಣಪತಿ ಮೂರ್ತಿಗಳ ತಯಾರಿಕೆಯ ಕುರಿತು ಪೂಜ್ಯರು ಮಾಹಿತಿ ಪಡೆದುಕೊಂಡರು. ವಿಶೇಷವೆಂದರೆ, ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡುವ ಸುದ್ದಿಗಳನ್ನು ಪೂಜ್ಯ ಶ್ರೀ ನಿಜಗುಣಾನಂದ ಸ್ವಾಮೀಜಿಯವರು ಗಮನವಿಟ್ಟು ವೀಕ್ಷಿಸುತ್ತಿದ್ದು, ಶುರು ನ್ಯೂಸ್‌ನಲ್ಲಿ ಪ್ರಸಾರವಾದ ಈ ವರದಿಯೂ ಅವರ ಗಮನ ಸೆಳೆದಿದೆ. 📺 ಶುರು ನ್ಯೂಸ್ ಇಂಪ್ಯಾಕ್ಟ್! ಸುದ್ದಿ ಕೇವಲ ಪ್ರಸಾರವಾಗುವುದಲ್ಲ… ಸಮಾಜದ ಗಮನ ಸೆಳೆದು, ಒಳ್ಳೆಯ ಕಾರ್ಯಗಳಿಗೆ ಪ್ರೇರಣೆಯಾಗಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. 🎙️ ವರದಿ: ಸಿಂಪಲ್ ಸಿದ್ದು 📰 ಶುರು ನ್ಯೂಸ್ 97433402301