ಅನಧಿಕೃತವಾಗಿ ಪಾರ್ಕಿಂಗ್ ಮಾಡಿರುವ 382 ವಾಹನಗಳಿಗೆ ನೋಟಿಸ್ ಜಾರಿ...ಮೈಸೂರು ಮಹಾನಗರ ಪಾಲಿಕೆಯಿಂದ ಕ್ರಮ... ಮೈಸೂರು :ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲುಗಡೆ ಮಾಡಿರುವ ಹಾಗೂ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 382ಅನುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಸದರಿ ವಾಹನಗಳ ಮೇಲೆ ನೋಟಿಸ್ ಅಂಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಸವಿತಾ ಎಂ.ಕೆ. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾರ್ವಜನಿಕ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಇಂತಹ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವುದರೊಂದಿಗೆ, ನಗರದ ಸ್ವಚ್ಛತೆ ಮತ್ತು ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. ಅಲ್ಲದೆ, ಕೆಲವು ವಾಹನಗಳು ತ್ಯಾಜ್ಯ ಸಂಗ್ರಹಣೆ, ಅಕ್ರಮ ಚಟುವಟಿಕೆ ಹಾಗೂ ಸೊಳ್ಳೆ ಸೇರಿದಂತೆ ರೋಗವಾಹಕಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆಯಿದೆ.ಹೀಗಾಗಿನೋಟಿಸ್ ಅಂಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಸಂಬಂಧಪಟ್ಟ ವಾಹನದ ಮಾಲೀಕರು ತಮ್ಮ ವಾಹನವನ್ನು ಸದರಿ ಸ್ಥಳದಿಂದ ತೆರವುಗೊಳಿಸಬೇಕು. ನಿಗದಿತ ಅವಧಿಯೊಳಗೆ ವಾಹನವನ್ನು ತೆರವುಗೊಳಿಸದಿದ್ದಲ್ಲಿ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976ರ ಕಲಂ 127 ಹಾಗೂ ಮೈಸೂರು ಮಹಾನಗರ ಪಾಲಿಕೆಯ ಉಪವಿಧಿಗಳು ಮತ್ತು ಪಾಲಿಕೆ ಪರಿಷತ್ತಿನ ನಿರ್ಣಯದನ್ವಯ, ವಾಹನವನ್ನು ಅನುಪಯುಕ್ತ ವಾಹನವೆಂದು ಪರಿಗಣಿಸಿ ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು. ವಾಹನ ತೆರವು ಹಾಗೂ ಸಾಗಾಣಿಕೆ ವೆಚ್ಚವನ್ನು ಸಂಬಂಧಪಟ್ಟ ವಾಹನದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಅಗತ್ಯವಿದ್ದಲ್ಲಿ ವಾಹನವನ್ನು ಹರಾಜು ಅಥವಾ ಸ್ಕ್ರ್ಯಾಪ್ ಮಾಡುವ ಕ್ರಮವನ್ನೂಕೈಗೊಳ್ಳಲಾಗುವುದು. ವಾಹನ ಮಾಲೀಕರು ಪಾಲಿಕೆಯ ಕ್ರಮಕ್ಕೆ ಅವಕಾಶ ನೀಡದೆ, ನಿಗದಿತ ಅವಧಿಯೊಳಗೆ ತಮ್ಮ ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳನ್ನು ಮುಕ್ತವಾಗಿಡಲು ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ...
ಅನಧಿಕೃತವಾಗಿ ಪಾರ್ಕಿಂಗ್ ಮಾಡಿರುವ 382 ವಾಹನಗಳಿಗೆ ನೋಟಿಸ್ ಜಾರಿ...ಮೈಸೂರು ಮಹಾನಗರ ಪಾಲಿಕೆಯಿಂದ ಕ್ರಮ... ಮೈಸೂರು :ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲುಗಡೆ ಮಾಡಿರುವ ಹಾಗೂ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 382ಅನುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಸದರಿ ವಾಹನಗಳ ಮೇಲೆ ನೋಟಿಸ್ ಅಂಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಸವಿತಾ ಎಂ.ಕೆ. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾರ್ವಜನಿಕ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಇಂತಹ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವುದರೊಂದಿಗೆ, ನಗರದ ಸ್ವಚ್ಛತೆ ಮತ್ತು ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. ಅಲ್ಲದೆ, ಕೆಲವು ವಾಹನಗಳು ತ್ಯಾಜ್ಯ ಸಂಗ್ರಹಣೆ, ಅಕ್ರಮ ಚಟುವಟಿಕೆ ಹಾಗೂ ಸೊಳ್ಳೆ ಸೇರಿದಂತೆ ರೋಗವಾಹಕಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆಯಿದೆ.ಹೀಗಾಗಿನೋಟಿಸ್ ಅಂಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಸಂಬಂಧಪಟ್ಟ ವಾಹನದ ಮಾಲೀಕರು ತಮ್ಮ ವಾಹನವನ್ನು ಸದರಿ ಸ್ಥಳದಿಂದ ತೆರವುಗೊಳಿಸಬೇಕು. ನಿಗದಿತ ಅವಧಿಯೊಳಗೆ ವಾಹನವನ್ನು ತೆರವುಗೊಳಿಸದಿದ್ದಲ್ಲಿ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976ರ ಕಲಂ 127 ಹಾಗೂ ಮೈಸೂರು ಮಹಾನಗರ ಪಾಲಿಕೆಯ ಉಪವಿಧಿಗಳು ಮತ್ತು ಪಾಲಿಕೆ ಪರಿಷತ್ತಿನ ನಿರ್ಣಯದನ್ವಯ, ವಾಹನವನ್ನು ಅನುಪಯುಕ್ತ ವಾಹನವೆಂದು ಪರಿಗಣಿಸಿ ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು. ವಾಹನ ತೆರವು ಹಾಗೂ ಸಾಗಾಣಿಕೆ ವೆಚ್ಚವನ್ನು ಸಂಬಂಧಪಟ್ಟ ವಾಹನದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಅಗತ್ಯವಿದ್ದಲ್ಲಿ ವಾಹನವನ್ನು ಹರಾಜು ಅಥವಾ ಸ್ಕ್ರ್ಯಾಪ್ ಮಾಡುವ ಕ್ರಮವನ್ನೂಕೈಗೊಳ್ಳಲಾಗುವುದು. ವಾಹನ ಮಾಲೀಕರು ಪಾಲಿಕೆಯ ಕ್ರಮಕ್ಕೆ ಅವಕಾಶ ನೀಡದೆ, ನಿಗದಿತ ಅವಧಿಯೊಳಗೆ ತಮ್ಮ ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳನ್ನು ಮುಕ್ತವಾಗಿಡಲು ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ...
- All About,Misappropriation of funds by highly influential person in #Hyderabad *ಭಾರತ ನಲ್ಲಿ ವೈರಲ್*1
- ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.1
- ಮೈಕ್ರೋ ಗ್ರೀನ್ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್, ಸ್ಯಾಂಡ್‌ವಿಚ್, ಸೂಪ್ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು1
- ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.1
- ಬಾಳೆಹೊನ್ನಿಗ ಗ್ರಾಮದಲ್ಲಿ ಬಾಳೆ ತೋಟಕ್ಕೆ ಕಾಡಾನೆಗಳ ಲಗ್ಗೆ ಮೂರು ಲಕ್ಷ ರೂ ನಷ್ಟ. ಮಳವಳ್ಳಿ: ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳು ಬಾಳೆಹೊನ್ನಿಗ ಗ್ರಾಮದ ಬಿ.ಕೆ.ಇಂದ್ರ ಮತ್ತು ಬಿ.ವಿ.ಕೃಷ್ಣಪ್ಪ ಎಂಬುವರಿಗೆ ಸೇರಿದ ಬಾಳೆ ತೋಟಕ್ಕೆ ಲಗ್ಗೆ ಇಟ್ಟು ಸುಮಾರು 400 ಪಸಲು ಭರಿತವಾದ ಬಾಳೆ ಗಿಡಗಳನ್ನು ಮುರಿದು ಅದರ ತಿರುಳನ್ನು ತಿಂದು ಸುಮಾರು ಮೂರು ಲಕ್ಷ ರೂ ನಷ್ಟ ಸಂಭವಿಸಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದ ಬಳಿ ನಡೆದಿದೆ ಮೂಲತಃ ಬಾಳೆಹೊನ್ನಿಗ ಗ್ರಾಮದ ವಾಸಿ ರಾಜು ಮಾತನಾಡಿ, ನಮ್ಮಮಾವನವರಾದ ಬಿ.ವಿ.ಕೃಷ್ಣಪ್ಪ ಮತ್ತು ನನ್ನ ಪತ್ನಿಯಾದ ಬಿ.ಕೆ.ಇಂದ್ರರಾಜ್ ರವರು ಮೂರು ಎಕರೆ ಜಮೀನಿನಲ್ಲಿ ಸುಮಾರು 2,784 ಯಾಲಕ್ಕಿಬಾಳೆ ಗಿಡಗಳನ್ನು ಹಾಕಿ ರಾತ್ರಿ ಹಗಲು ಎನ್ನದೆ ವಿದ್ಯುತ್ ಕಣ್ಣಮುಚ್ಚಾಲೆ ಆಟದಲ್ಲಿ ಜಮೀನಿಗೆ ನೀರು ಹಾಯಿಸಿ ಪಸಲು ಬೆಳೆದಿದ್ದು, ಇನ್ನು ಎರಡು ತಿಂಗಳೊಳಗೆ ಬಾಳೆ ಗೊನೆಗಳನ್ನು ಕಟಾವ್ ಮಾಡಿ ಮಾರಾಟ ಮಾಡಬೇಕಾಗಿತ್ತು. ಆದರೆ ಸೋಮವಾರ ತಡರಾತ್ರಿ ಕಬ್ಬಾಳು ಅರಣ್ಯ ಪ್ರದೇಶದಿಂದ ಬಂದ ಏಳು ಕಾಡಾನೆಗಳ ಗುಂಪು ನಮ್ಮ ಬಾಳೆ ತೋಟಕ್ಕೆ ನುಗ್ಗಿ ಫಲ ಬಿಟ್ಟಿದ್ದ ಸುಮಾರು 400 ಬಾಳೆ ಗಿಡಗಳನ್ನು ಮುರಿದು ಅದರ ತಿರುಳನ್ನು ತಿಂದು ಬೆಳೆಯನ್ನು ನಾಶಪಡಿಸಿರುತ್ತವೆ. ಸಮಯಕ್ಕೆ ಸರಿಯಾಗಿ ರಾಮನಗರ ವ್ಯಾಪ್ತಿಯ 30ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಟಾಕಿ ಸಿಡಿಸಿ ಮತ್ತೆ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. ಇವರು ರಾತ್ರಿ ಬರದಿದ್ದರೆ ನಮ್ಮ ಬಾಳೆ ತೋಟ ಪೂರ್ತಿ ಕಾಡಾನೆ ಗಳುತುಳಿದು ನಾಶವಾಗುತ್ತಿತ್ತು. ಹಲಗೂರು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಸಮಯಕ್ಕೆ ಸ್ಥಳಕ್ಕೆ ಬರದಿರುವುದಕ್ಕೆರಾಜು ಬೇಸರ ವ್ಯಕ್ತಪಡಿಸಿದರು. ನಾವು ಬೆಳೆದ ಪಸಲುಗಳು ಕೈ ಸೇರುವ ಮುನ್ನವೇ ಕಾಡಾನೆಗಳ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ನಾಶವಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯವರು ಕಾಡಂಚಿನಲ್ಲಿ ಆನೆ ಕಂದಕಗಳನ್ನು ತೆಗೆಯುವುದರ ಮುಖಾಂತರ ಹಾಗೂ ರೈಲ್ವೆ ಕಂಬಿ ಬ್ಯಾರಿಕೇಟ್ ಹಾಗೂ ತೂಗುವ ಸೋಲಾರ್ ಬೇಲಿ ಅಳವಡಿಸಿ ಕಾಡು ಪ್ರಾಣಿಗಳು ಬರದಂತೆ ತಡೆಯುವ ನಿಟ್ಟಿನಲ್ಲಿ ರೈತರ ಬೆಳೆ ಉಳಿಸುವಂತೆ ಆಗ್ರಹಿಸಿ, ಸರ್ಕಾರದಿಂದ ನಮಗೆ ಕೊಡುವಪರಿಹಾರದ ಹಣ ಸಾಲುವುದಿಲ್ಲ ಸೂಕ್ತವಾಗಿ ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಸಿಬ್ಬಂದಿಯವರೆಗೆ ಮನವಿ ಪತ್ರ ಸಲ್ಲಿಸಿದ್ದಾರೆ.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ವರದಿ: ಹೊಮ್ಮನಂಜುಂಡನಾಯಕ. ಜಿಲ್ಲೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ನೌಕರರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಕೇಂದ್ರ ನಮಿತಿ ಬೆಂಗಳೂರು ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8, ಶೃಂಗಾರ್ ಪ್ಯಾಲೇನ್‌ನಲ್ಲಿ ಬೆಳಿಗ್ಗೆ 10:30 ಗಂಟೆಗೆ ಆರಂಭವಾಗುವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಜೇತವನ ವಿಹಾರದ ಭೌದ್ಧ ಬಿಕ್ಕು ಮನೋರಕ್ಷಿತ ಬಂತೇಜಿ ವಹಿಸುವವರು, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸುವವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಚಿವರಾದ ಕೆ.ಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್‌ಖರ್ಗೆ, ಶಿವರಾಜ್ ತಂಗಡಗಿ : ಪಿ.ಎಂ.ನರೇಂದ್ರಸ್ವಾಮಿ.ಬಿ. ನಾಗೇಂದ್ರ ರುದ್ರಪ್ಪ ಲಮಾಣಿ, ಕೆ.ಎಸ್.ಬಸವಂತಪ್ಪ, ಟಿ.ರಘುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವವರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 5 ಬಸ್‌ಗಳಲ್ಲಿ ಹೊರಡಲು ವ್ಯವಸ್ಥೆ. ಮಾಡಲಾಗಿದೆ. ಚಾಮರಾಜೇಶ್ವರ ದೇವಸ್ಥಾನ ಮುಂಭಾಗ, ಹೌಸಿಂಗ್ ಬೋರ್ಡ್ ಹತ್ತಿರ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ, ಎಸ್‌ಟಿ ನೌಕರರು ಭಾಗವಹಿಸಿ ಯಶಸ್ವಿಕೊಳಿಸಿಕೊಡುವಂತೆ ಮನವಿ ಮಾಡಿದರು. ಮಾಜಿ ಅಧ್ಯಕ್ಷ ಮಂಜುನಾಥಪ್ರನನ್ನ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ನೌಕರರಿಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ನಾನು ಕೂಡ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ಮಾಡಿ ನೌಕರರು, ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 50 ಸಾವಿರ ಜನರು ಸೇರುತ್ತಾರೆ ನಮ್ಮ ಜಿಲ್ಲೆಯಿಂದ 500 ಮಂದಿ ಭಾಗವಹಿಸುತ್ತಾರೆ. ಈ ಸಮಾವೇಶದಲ್ಲಿ ನಮ್ಮ ಮುಖ್ಯ ಬೇಡಿಕೆಗಳಾದ ಎಸ್ ಸಿ, ಎಸ್‌ಟಿಗಳಿಗೆ ಬ್ಯಾಕ್‌ಲಾಕ್ ಹುದ್ದೆಗಳನ್ನು ಭರ್ತಿ ಮಾಡುವುದು ಮೊದಲು ಆಗಬೇಕು. ಕಾನೂನು ವಿದ್ಯಾರ್ಥಿಗಳು, ಇಂಜಿನಿಯರ್‌ರಿಂಗ್ ವಿದ್ಯಾರ್ಥಿಗಳು, ಮೆಡಿಕಲ್ ವಿದ್ಯಾರ್ಥಿಗಳಿಗೆ ಒಳ ಮೀಸಲಾತಿಯಿಂದ ತುಂಬಾ ಇಕ್ಕಟ್ಟಾಗಿದ್ದು, ಸರಿಯಾಗಿ ಜಾತಿ ಪ್ರಮಾಣ ಕೊಡುತ್ತಿಲ್ಲ. ಅದಕ್ಕಾಗೆ 1 ಸಾವಿರದಿಂದ 2 ಸಾವಿರ ರೂ .ವೆಚ್ಚವಾಗುತ್ತಿದೆ. ಅದನ್ನು ಕಡಿಮೆ ಮಾಡಬೇಕು. ಬಗರ್‌ಹುಕುಂ ಸಾಗುವಳಿಯಲ್ಲಿ ವಿಳಂಬವಾಗುತ್ತಿದೆ. ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳಿಗೆ ಮಂಡಿಸಲಾಗುತ್ತದೆ ಎಂದರು. ಡಾ. ಬಿ.ಆರ್.ಅಂಬೇಡ್ಕರ್ ಮಹಾಸಭಾದ ಜಿಲ್ಲಾಧ್ಯಕ್ಷ ಉಮೇಶ್‌ಕುದರ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ನಿರಂತರವಾಗಿ ಸಮುದಾಯಕ್ಕೆ ಆಗುವ ಎಲ್ಲ ಅನ್ಯಾಯಗಳನ್ನು ತಮ್ಮ ಧ್ವನಿಯ ಮುಖಾಂತರ, ಸಮಾವೇಶಗಳ ಮುಖಾಂತರ ಎಲ್ಲರಿಗೂ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಮ್ಮ ಸಂಘಟನೆಗಳ ವತಿಯಿಂದ ಎಲ್ಲ ರೀತಿ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯಾಧ್ಯಕ್ಷ ಶಿವಕುಮಾರಯ್ಯ, ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ವಾಸು, ಎಸ್ ಸಿ, ಎಸ್ ಟಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.4
- All About,Crores Means Crores in #WaqfCommittees Accounts statement by #Chairman *ಭಾರತ ನಲ್ಲಿ ವೈರಲ್*1