Shuru
Apke Nagar Ki App…
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಿಸ್ನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿವಾರ ರಾತ್ರಿ ಮಾವು ತುಂಬಿದ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಯ ಮೇಲೆಲ್ಲಾ ಚೆಲ್ಲಾಪಿಲ್ಲಿಯಾಗಿದ್ದು, ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. ಅಪಘಾತದ ಬಳಿಕ ಸ್ಥಳಕ್ಕೆ ಆಗಮಿಸಿದ ಜನರು ರಸ್ತೆಯ ಮೇಲೆ ಬಿದ್ದಿದ್ದ ಮಾವಿನ ಹಣ್ಣುಗಳನ್ನು ಮತ್ತು ಬಾಕ್ಸ್‌ಗಳನ್ನು ರಸ್ತೆಯ ಪಕ್ಕಕ್ಕೆ ಸರಿಸಿದ್ದಾರೆ. ಬಳಿಕ ರಸ್ತೆಯಲ್ಲಿ ಉಳಿದಿದ್ದ ಹಣ್ಣುಗಳನ್ನು ಮತ್ತೊಂದು ಲಾರಿಗೆ ತುಂಬಿಸಿ ಅಲ್ಲಿಂದ ಸಾಗಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು.
ಹೂಡೇಂ ಮಂಜುನಾಥ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಿಸ್ನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿವಾರ ರಾತ್ರಿ ಮಾವು ತುಂಬಿದ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಯ ಮೇಲೆಲ್ಲಾ ಚೆಲ್ಲಾಪಿಲ್ಲಿಯಾಗಿದ್ದು, ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. ಅಪಘಾತದ ಬಳಿಕ ಸ್ಥಳಕ್ಕೆ ಆಗಮಿಸಿದ ಜನರು ರಸ್ತೆಯ ಮೇಲೆ ಬಿದ್ದಿದ್ದ ಮಾವಿನ ಹಣ್ಣುಗಳನ್ನು ಮತ್ತು ಬಾಕ್ಸ್‌ಗಳನ್ನು ರಸ್ತೆಯ ಪಕ್ಕಕ್ಕೆ ಸರಿಸಿದ್ದಾರೆ. ಬಳಿಕ ರಸ್ತೆಯಲ್ಲಿ ಉಳಿದಿದ್ದ ಹಣ್ಣುಗಳನ್ನು ಮತ್ತೊಂದು ಲಾರಿಗೆ ತುಂಬಿಸಿ ಅಲ್ಲಿಂದ ಸಾಗಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು.
More news from Bengaluru and nearby areas
- ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.1
- ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.1
- ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್‌ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್‌ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)4
- ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅವರೊಂದಿಗೆ ಸೇರಿ ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ ಎಂ.ಹಾರೋಗೆರೆ ಅವರು ವಿವಿಧ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಹಾಗೂ ಕಾಡುಗೊಲ್ಲರ ಅಭಿವೃದ್ಧಿ ನಿಗಮದ 'ಸ್ವಾವಲಂಬಿ ಸಾರಥಿ' ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ ₹3 ಲಕ್ಷ ಸಬ್ಸಿಡಿಯುಳ್ಳ ₹13 ಲಕ್ಷ ಮೌಲ್ಯದ ಕಾರನ್ನು ವಿತರಿಸಲಾಯಿತು. ಬಳಿಕ ಶಾಸಕರ ಭವನದಲ್ಲಿ ಮಾತನಾಡಿದ ಮಹೇಶ ಎಂ.ಹಾರೋಗೆರೆ ಅವರು, ಕಾಂಗ್ರೆಸ್ ಆಡಳಿತದ ಕಾಳಜಿಯಿಂದಾಗಿ ಕಾಡುಗೊಲ್ಲರ ಜನಾಂಗದ ಸುಧಾರಣೆಗಾಗಿ ಪ್ರತ್ಯೇಕ ನಿಗಮವನ್ನು ಸ್ಥಾಪಿಸಲಾಗಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದಲ್ಲಿ ಈ ಸಮುದಾಯದ 10 ಲಕ್ಷ ಜನರಿದ್ದರೂ ಇದುವರೆಗೆ ಸಾಮಾಜಿಕ ಬದುಕಿನ ಸುಧಾರಣೆಯಾಗಿಲ್ಲ ಎಂದ ಅವರು, ಕಾಡುಮೇಡುಗಳಲ್ಲಿ ಕುರಿ ಕಾಯುವ ಮತ್ತು ಪಶುಪಾಲನೆ ಮಾಡುವ ಜನರ ರಕ್ಷಣೆ ಮಾಡಬೇಕಿದೆ ಎಂದು ಹೇಳಿದರು. ಕುರಿಗಳ ಹಿಂಡು ಕಟ್ಟಿಕೊಂಡು ದೂರದ ಊರುಗಳಿಗೆ ಹೋಗುವ ಅನುಕೂಲಕ್ಕಾಗಿ ಟ್ರ್ಯಾಕ್ಟರ್ ಕೊಡುವ ಚಿಂತನೆ ಇದೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಮತ್ತು ಸ್ವಯಂ ಉದ್ಯೋಗಕ್ಕೆ ನೇರ ಸಾಲ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಗೊಲ್ಲರ ಹಟ್ಟಿಗಳಿಗೆ ಅಗತ್ಯ ಸೌಕರ್ಯ ನೀಡುವಲ್ಲಿ ಸರ್ಕಾರದಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ನಿಗಮದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಇನ್ನು 15 ದಿನಗಳ ಒಳಗೆ 'ಕಾಡುಗೊಲ್ಲ' ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಗದ್ದಿಗೆ ತಿಪ್ಪೇಸ್ವಾಮಿ, ಜಿ.ಟಿ. ಶಶಿಧರ್, ಸಿ.ಟಿ. ಶ್ರೀನಿವಾಸ್, ಕೆ.ವೀರಭದ್ರಯ್ಯ, ಬಿ.ಟಿ. ರಮೇಶ್ ಗೌಡ, ತಬಲ ರಂಗಸ್ವಾಮಿ, ಎಸ್. ಮುಜೀಬುಲ್ಲಾ, ಅಧಿಕಾರಿ ಸಾತ್ವೀಕ್ ವಿರೇಶ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.1
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮತಕ್ಷೇತ್ರದ ಸುಲ್ತಾನಿಪುರ ಗ್ರಾಮದಲ್ಲಿ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ ಚಂದ್ರಪ್ಪ ಅವರು ಇಂದು ಚಾಲನೆ ನೀಡಿದ್ದಾರೆ. ₹1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ರಸ್ತೆ ಕಾಮಗಾರಿಯನ್ನು ಅತ್ಯಂತ ಉತ್ತಮ ಗುಣಮಟ್ಟದಲ್ಲಿ ಮಾಡಿ ಮುಗಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಶಾಸಕ ಎಂ ಚಂದ್ರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.1
- ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್‌ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.1