ಹಿರಿಯರ ಆಶೀರ್ವಾದಿಂದ ಕುಟುಂಬದ ಅಭಿವೃದ್ಧಿ ಹೊಂದಲು ಸಾಧ್ಯ-ಎಂ. ಆನಂದ್ ಮಂಡ್ಯ- ಹಿರಿಯರು ಕುಟುಂಬದ ಶಕ್ತಿಯಾಗಿದ್ದು, ಯುವಜನರು ಉತ್ತಮವಾಗಿ ಬೆಳೆಯಲು ಅವರ ಆಶೀರ್ವಾದ, ಅನುಭವ ಹಾಗೂಮಾರ್ಗದರ್ಶನ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಎಂ. ಆನಂದ್ ತಿಳಿಸಿದರು. ಮಂಡ್ಯ ನಗರದ ಸರ್.ಎಂ.ವಿ. ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸರ್ಕಾರಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧಾಕಾರ್ಯಕ್ರಮಉದ್ಘಾಟಿಸಿಮಾತನಾಡಿದರು. ಹಿರಿಯರು ತಮ್ಮ ಜೀವನದಲ್ಲಿ ಎದುರಿಸಿದ ಕಷ್ಟ-ಸವಾಲುಗಳು ಹಾಗೂ ಗಳಿಸಿದ ಅನುಭವದ ಮೂಲಕ ಕುಟುಂಬದ ಸದಸ್ಯರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಕುಟುಂಬದಲ್ಲಿ ಹಿರಿಯರ ಉಪಸ್ಥಿತಿ ಇದ್ದಾಗ ಸಾಮರಸ್ಯ ಕಾಪಾಡುವುದರ ಜೊತೆಗೆ ಹಲವು ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸಲು ಸಹಕಾರಿಯಾಗುತ್ತದೆ ಎಂದರು. ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆ ಯುವ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯ ಗಳನ್ನು ಅರ್ಹರು ಪಡೆದುಕೊಳ್ಳಬೇಕು. ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಅರ್ಹ ಹಿರಿಯ ನಾಗರಿಕರಿಗೆ ಸೌಲಭ್ಯ ದೊರೆಯ ದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯಗಳು ಹಿರಿಯ ನಾಗರಿಕರ ಹಕ್ಕಾಗಿದ್ದು, ಅವುಗಳನ್ನು ಪಡೆಯಲು ಯಾರ ಮುಂದೆಯೂ ಬೇಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಆಸ್ತಿ ವಿಚಾರದಲ್ಲಿ ಮುನ್ನೆಚ್ಚರಿಕೆ ಅಗತ್ಯ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆಯ ಕುರಿತು ಮಾಹಿತಿ ನೀಡಿದ ಅವರು, ಹಿರಿಯರು ತಮ್ಮ ಆಸ್ತಿ ಹಾಗೂ ಆರ್ಥಿಕ ಭದ್ರತೆಯ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಜೀವನ ನಿರ್ವಹಣೆಗೆ ಅಗತ್ಯವಿರುವ ಆಸ್ತಿ ಅಥವಾ ಹಣವನ್ನು ಜೀವಿತಾವಧಿಯಲ್ಲಿ ಸುರಕ್ಷಿತವಾಗಿ ಉಳಿಸಿಕೊಳ್ಳಬೇಕು. ಮಕ್ಕಳಿಗೆ ಆಸ್ತಿ ವರ್ಗಾಯಿಸುವ ಸಂದರ್ಭದಲ್ಲಿ ತಮ್ಮ ಜೀವನ ನಿರ್ವಹಣೆ ಹಾಗೂ ಆರೈಕೆಗೆ ಅಗತ್ಯವಿರುವ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ ಎಂದರು. ಹಿರಿಯ ನಾಗರಿಕರಿಗೆ ಕಾನೂನು ಸಮಸ್ಯೆಗಳು ಎದುರಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ಇಲ್ಲಿ ಉಚಿತ ಕಾನೂನು ಸಲಹೆ, ವಕೀಲರ ಸೇವೆ ಹಾಗೂ ಕಾನೂನು ಅರಿವು ನೀಡಲಾಗುತ್ತದೆ. ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆಯಡಿ ಲಭ್ಯವಿರುವ ಕಾನೂನು ಪರಿಹಾರಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಹಿರಿಯ ನಾಗರಿಕರಿಗಾಗಿ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ಚಿಂತೆಗಳನ್ನು ಬದಿಗೊತ್ತಿ ಸಕಾರಾತ್ಮಕ ಚಿಂತನೆಯೊಂದಿಗೆ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಹಿರಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಕುಟುಂಬದಲ್ಲಿ ಸಾಮರಸ್ಯ ಮೂಡಿಸುವ ರೀತಿಯಲ್ಲಿ ನಡೆದುಕೊಳ್ಳಬೇಕು. ಕಿರಿಯರು ತಪ್ಪು ಮಾಡಿದಾಗ ಸೂಕ್ತ ಮಾರ್ಗದರ್ಶನ ನೀಡಿ ತಿದ್ದುವ ಶಕ್ತಿ ಮತ್ತು ತಾಳ್ಮೆಯನ್ನು ಹೊಂದಿರಬೇಕು. ಹಿರಿಯರ ಅನುಭವ ಮತ್ತು ಮಾರ್ಗದರ್ಶನವನ್ನು ಯುವಜನರು ಸದುಪಯೋಗಪಡಿಸಿಕೊಂಡಾಗ ಕುಟುಂಬದ ಏಳಿಗೆ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಸಹಕಾರಿಯಾಗುತ್ತದೆ ಎಂದರು. ಹಿರಿಯರು ದೇಶದ ಹಾಗೂ ಕುಟುಂಬದ ಅಮೂಲ್ಯ ಸಂಪತ್ತಾಗಿದ್ದು, ಅವರ ಅನುಭವಕ್ಕೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಯ ಹಿರಿಯರ ಗೌರವ, ಆರೋಗ್ಯ ಮತ್ತು ಆರೈಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗೀತಾಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವೈ.ಸಿ. ಮನುಜಶ್ರೀ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಕೋಮಲ್ ಕುಮಾರ್, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಬಿ. ಶಿವಲಿಂಗಯ್ಯ, ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಿಕ್ಕಹುಚ್ಚಯ್ಯ, ಕಸ್ತೂರಬಾ ಗಾಂಧಿ ವೃದ್ಧಾಶ್ರಮದ ನಿರ್ದೇಶಕ ನಟರಾಜು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಆಶ್ರಯಧಾಮದ ನಿರ್ದೇಶಕ ಕುಮಾರ್ ಉಪಸ್ಥಿತರಿದ್ದರು.

- ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- All About,#MujahidAliBaba Founder #SadaeEttihadKarnataka creating awareness among public to question the Responsible authority *ಭಾರತ ನಲ್ಲಿ ವೈರಲ್*1
- ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ. ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು1
- ನಂಜನಗೂಡಿನ ಸರಕಾರಿ ಹಿರಿಯ ದಳವಾಯಿ ಪ್ರಾಥಮಿಕ ಶಾಲೆಯಲ್ಲಿ ಎಲ್ಕೆಜಿ ಮಕ್ಕಳಿಂದ ಚದ್ಮವೇಷ ಸ್ಪರ್ಧೆ. ನಂಜನಗೂಡು ತಾಲೂಕಿನ : ಪಟ್ಟಣದ ಅತಿ ದೊಡ್ಡ ದಳವಾಯಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಎಲ್ಕೆಜಿ ಮಕ್ಕಳಿಂದ ಚದ್ಮ ವೇಷ ಸ್ಪರ್ಧೆ ನಡೆಯಿತು . ಮಕ್ಕಳು ಹಣ್ಣಿನ ಹಾಗೂ ತರಕಾರಿ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ ನೀಡಿದರು. ಈಸ್ಪರ್ಧೆಯನ್ನು ಉದ್ದೇಶಿಸಿ ಸಹ ಶಿಕ್ಷಕಿಯಾದ ಮಮತಾ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ನಾಗೇಶ್ ಸಿಬ್ಬಂದಿ ವರ್ಗ ಹಾಜರಿದ್ದರು. ಎಲ್ಲಾ ಶಿಕ್ಷಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಪ್ರದರ್ಶನದಲ್ಲಿ ಮಾರ್ಗದರ್ಶಿ ಶಿಕ್ಷಕಿಯಾಗಿ ಶಿಲ್ಪಾ ಅವರು ಭಾಗವಹಿಸಿದ್ದರು. ಶಿಲ್ಪ ಅವರು ಎಲ್ಲ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.4
- ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.1
- ಹಿರಿಯರ ಆಶೀರ್ವಾದಿಂದ ಕುಟುಂಬದ ಅಭಿವೃದ್ಧಿ ಹೊಂದಲು ಸಾಧ್ಯ-ಎಂ. ಆನಂದ್ ಮಂಡ್ಯ- ಹಿರಿಯರು ಕುಟುಂಬದ ಶಕ್ತಿಯಾಗಿದ್ದು, ಯುವಜನರು ಉತ್ತಮವಾಗಿ ಬೆಳೆಯಲು ಅವರ ಆಶೀರ್ವಾದ, ಅನುಭವ ಹಾಗೂಮಾರ್ಗದರ್ಶನ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಎಂ. ಆನಂದ್ ತಿಳಿಸಿದರು. ಮಂಡ್ಯ ನಗರದ ಸರ್.ಎಂ.ವಿ. ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸರ್ಕಾರಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧಾಕಾರ್ಯಕ್ರಮಉದ್ಘಾಟಿಸಿಮಾತನಾಡಿದರು. ಹಿರಿಯರು ತಮ್ಮ ಜೀವನದಲ್ಲಿ ಎದುರಿಸಿದ ಕಷ್ಟ-ಸವಾಲುಗಳು ಹಾಗೂ ಗಳಿಸಿದ ಅನುಭವದ ಮೂಲಕ ಕುಟುಂಬದ ಸದಸ್ಯರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಕುಟುಂಬದಲ್ಲಿ ಹಿರಿಯರ ಉಪಸ್ಥಿತಿ ಇದ್ದಾಗ ಸಾಮರಸ್ಯ ಕಾಪಾಡುವುದರ ಜೊತೆಗೆ ಹಲವು ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸಲು ಸಹಕಾರಿಯಾಗುತ್ತದೆ ಎಂದರು. ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆ ಯುವ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯ ಗಳನ್ನು ಅರ್ಹರು ಪಡೆದುಕೊಳ್ಳಬೇಕು. ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಅರ್ಹ ಹಿರಿಯ ನಾಗರಿಕರಿಗೆ ಸೌಲಭ್ಯ ದೊರೆಯ ದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯಗಳು ಹಿರಿಯ ನಾಗರಿಕರ ಹಕ್ಕಾಗಿದ್ದು, ಅವುಗಳನ್ನು ಪಡೆಯಲು ಯಾರ ಮುಂದೆಯೂ ಬೇಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಆಸ್ತಿ ವಿಚಾರದಲ್ಲಿ ಮುನ್ನೆಚ್ಚರಿಕೆ ಅಗತ್ಯ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆಯ ಕುರಿತು ಮಾಹಿತಿ ನೀಡಿದ ಅವರು, ಹಿರಿಯರು ತಮ್ಮ ಆಸ್ತಿ ಹಾಗೂ ಆರ್ಥಿಕ ಭದ್ರತೆಯ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಜೀವನ ನಿರ್ವಹಣೆಗೆ ಅಗತ್ಯವಿರುವ ಆಸ್ತಿ ಅಥವಾ ಹಣವನ್ನು ಜೀವಿತಾವಧಿಯಲ್ಲಿ ಸುರಕ್ಷಿತವಾಗಿ ಉಳಿಸಿಕೊಳ್ಳಬೇಕು. ಮಕ್ಕಳಿಗೆ ಆಸ್ತಿ ವರ್ಗಾಯಿಸುವ ಸಂದರ್ಭದಲ್ಲಿ ತಮ್ಮ ಜೀವನ ನಿರ್ವಹಣೆ ಹಾಗೂ ಆರೈಕೆಗೆ ಅಗತ್ಯವಿರುವ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ ಎಂದರು. ಹಿರಿಯ ನಾಗರಿಕರಿಗೆ ಕಾನೂನು ಸಮಸ್ಯೆಗಳು ಎದುರಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ಇಲ್ಲಿ ಉಚಿತ ಕಾನೂನು ಸಲಹೆ, ವಕೀಲರ ಸೇವೆ ಹಾಗೂ ಕಾನೂನು ಅರಿವು ನೀಡಲಾಗುತ್ತದೆ. ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆಯಡಿ ಲಭ್ಯವಿರುವ ಕಾನೂನು ಪರಿಹಾರಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಹಿರಿಯ ನಾಗರಿಕರಿಗಾಗಿ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ಚಿಂತೆಗಳನ್ನು ಬದಿಗೊತ್ತಿ ಸಕಾರಾತ್ಮಕ ಚಿಂತನೆಯೊಂದಿಗೆ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಹಿರಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಕುಟುಂಬದಲ್ಲಿ ಸಾಮರಸ್ಯ ಮೂಡಿಸುವ ರೀತಿಯಲ್ಲಿ ನಡೆದುಕೊಳ್ಳಬೇಕು. ಕಿರಿಯರು ತಪ್ಪು ಮಾಡಿದಾಗ ಸೂಕ್ತ ಮಾರ್ಗದರ್ಶನ ನೀಡಿ ತಿದ್ದುವ ಶಕ್ತಿ ಮತ್ತು ತಾಳ್ಮೆಯನ್ನು ಹೊಂದಿರಬೇಕು. ಹಿರಿಯರ ಅನುಭವ ಮತ್ತು ಮಾರ್ಗದರ್ಶನವನ್ನು ಯುವಜನರು ಸದುಪಯೋಗಪಡಿಸಿಕೊಂಡಾಗ ಕುಟುಂಬದ ಏಳಿಗೆ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಸಹಕಾರಿಯಾಗುತ್ತದೆ ಎಂದರು. ಹಿರಿಯರು ದೇಶದ ಹಾಗೂ ಕುಟುಂಬದ ಅಮೂಲ್ಯ ಸಂಪತ್ತಾಗಿದ್ದು, ಅವರ ಅನುಭವಕ್ಕೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಯ ಹಿರಿಯರ ಗೌರವ, ಆರೋಗ್ಯ ಮತ್ತು ಆರೈಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗೀತಾಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವೈ.ಸಿ. ಮನುಜಶ್ರೀ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಕೋಮಲ್ ಕುಮಾರ್, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಬಿ. ಶಿವಲಿಂಗಯ್ಯ, ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಿಕ್ಕಹುಚ್ಚಯ್ಯ, ಕಸ್ತೂರಬಾ ಗಾಂಧಿ ವೃದ್ಧಾಶ್ರಮದ ನಿರ್ದೇಶಕ ನಟರಾಜು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಆಶ್ರಯಧಾಮದ ನಿರ್ದೇಶಕ ಕುಮಾರ್ ಉಪಸ್ಥಿತರಿದ್ದರು.1
- ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.1
- All About,Irregularities/Misuse of #WaqfProperties related with #JamiaNizamia *ಭಾರತ ನಲ್ಲಿ ವೈರಲ್*1