logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಿನಾಂಕ 15.06.2026 ರಂದು ಬೆಳಗ್ಗೆ, ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಮಾದಕ ವಸ್ತುವನ್ನು ಸೇವಿಸಿ ನಶೆಗೊಂಡು ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಮಾಹಿತಿ ಲಭಿಸಿತು. ಮಾಹಿತಿ ಆಧರಿಸಿ, ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಬಿ. ಮೂಡ ಗ್ರಾಮದ ಗಾಣದ ಪಡ್ಡು ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮೈದಾನಕ್ಕೆ ತೆರಳಿದರು. ಅಲ್ಲಿ ಪತ್ತೆಯಾದ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಸುರತ್ಕಲ್ ನಿವಾಸಿ ಮೊಹಮ್ಮದ್ ಹನೀಫ್ (42) ಎಂದು ತಿಳಿದುಬಂದಿದೆ. ಆತ ಯಾವುದೋ ಅಮಲು ಪದಾರ್ಥ ಅಥವಾ ಮಾದಕ ದ್ರವ್ಯವನ್ನು ಸೇವಿಸಿರುವಂತೆ ಕಂಡುಬಂದಿದ್ದು, ಈ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕವಸ್ತು ಸೇವನೆ ದೃಢಪಟ್ಟಿದೆ. ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 76/2026 ಕಲಂ 27(A) NDPS ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಮಾದಕವಸ್ತು ಸೇವಿಸಿದ್ದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

20 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
20 hrs ago

ದಿನಾಂಕ 15.06.2026 ರಂದು ಬೆಳಗ್ಗೆ, ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಮಾದಕ ವಸ್ತುವನ್ನು ಸೇವಿಸಿ ನಶೆಗೊಂಡು ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಮಾಹಿತಿ ಲಭಿಸಿತು. ಮಾಹಿತಿ ಆಧರಿಸಿ, ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಬಿ. ಮೂಡ ಗ್ರಾಮದ ಗಾಣದ ಪಡ್ಡು ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮೈದಾನಕ್ಕೆ ತೆರಳಿದರು. ಅಲ್ಲಿ ಪತ್ತೆಯಾದ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಸುರತ್ಕಲ್ ನಿವಾಸಿ ಮೊಹಮ್ಮದ್ ಹನೀಫ್ (42) ಎಂದು ತಿಳಿದುಬಂದಿದೆ. ಆತ ಯಾವುದೋ ಅಮಲು ಪದಾರ್ಥ ಅಥವಾ ಮಾದಕ ದ್ರವ್ಯವನ್ನು ಸೇವಿಸಿರುವಂತೆ ಕಂಡುಬಂದಿದ್ದು, ಈ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕವಸ್ತು ಸೇವನೆ ದೃಢಪಟ್ಟಿದೆ. ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 76/2026 ಕಲಂ 27(A) NDPS ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಮಾದಕವಸ್ತು ಸೇವಿಸಿದ್ದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

More news from ಕರ್ನಾಟಕ and nearby areas
  • ಭಾರತದಲ್ಲಿ ವೈರಲ್ ಆಗಿರುವ ಒಂದು ಸಂದೇಶವು, ವಿದ್ವಾಂಸರು ಮತ್ತು ಉಲೇಮಾಗಳು ಸ್ಥಳೀಯ ರಾಜಕಾರಣಿಗಳ ರಾಜಕೀಯ ನಿರ್ಧಾರಗಳಿಗೆ ಬಲಿಯಾಗಬಾರದು ಎಂದು ಸ್ಪಷ್ಟವಾಗಿ ಮನವಿ ಮಾಡಿದೆ.
    1
    ಭಾರತದಲ್ಲಿ ವೈರಲ್ ಆಗಿರುವ ಒಂದು ಸಂದೇಶವು, ವಿದ್ವಾಂಸರು ಮತ್ತು ಉಲೇಮಾಗಳು ಸ್ಥಳೀಯ ರಾಜಕಾರಣಿಗಳ ರಾಜಕೀಯ ನಿರ್ಧಾರಗಳಿಗೆ ಬಲಿಯಾಗಬಾರದು ಎಂದು ಸ್ಪಷ್ಟವಾಗಿ ಮನವಿ ಮಾಡಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    22 hrs ago
  • ಬ್ಯಾಡಗಿ ನಗರದಲ್ಲಿ ಸಾಯಂಕಾಲ ಧಾರಾಕಾರ ಮಳೆ ಸುರಿದಿದ್ದು, ಇದರ ಪರಿಣಾಮವಾಗಿ ಚಾವಡಿ ರಸ್ತೆ ಮತ್ತು ಮುಖ್ಯ ರಸ್ತೆಗಳು ನೀರಿನಿಂದ ಆವೃತವಾಗಿ ಸಂಪೂರ್ಣವಾಗಿ ಮುಳುಗಿವೆ. ಈ ಪರಿಸ್ಥಿತಿಯನ್ನು ಗಮನಿಸಿದ ಪುರಸಭೆಯು ತಕ್ಷಣವೇ ಕ್ಷಿಪ್ರ ಕಾರ್ಯಾಚರಣೆಯನ್ನು ಆರಂಭಿಸಿದೆ.
    1
    ಬ್ಯಾಡಗಿ ನಗರದಲ್ಲಿ ಸಾಯಂಕಾಲ ಧಾರಾಕಾರ ಮಳೆ ಸುರಿದಿದ್ದು, ಇದರ ಪರಿಣಾಮವಾಗಿ ಚಾವಡಿ ರಸ್ತೆ ಮತ್ತು ಮುಖ್ಯ ರಸ್ತೆಗಳು ನೀರಿನಿಂದ ಆವೃತವಾಗಿ ಸಂಪೂರ್ಣವಾಗಿ ಮುಳುಗಿವೆ. ಈ ಪರಿಸ್ಥಿತಿಯನ್ನು ಗಮನಿಸಿದ ಪುರಸಭೆಯು ತಕ್ಷಣವೇ ಕ್ಷಿಪ್ರ ಕಾರ್ಯಾಚರಣೆಯನ್ನು ಆರಂಭಿಸಿದೆ.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    19 hrs ago
  • ರಾಜ್ಯದ ರೈತರಿಗೆ ಸಂಕಷ್ಟ ಉಂಟುಮಾಡುವ ವಿದ್ಯುತ್ ಖಾಸಗೀಕರಣಕ್ಕೆ ಟಾಟಾ ಕಂಪನಿ ಅರ್ಜಿ ಸಲ್ಲಿಸಿದೆ ಎಂದು ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಆಗ್ರಹಿಸಲಾಗಿದೆ. ಈ ಖಾಸಗೀಕರಣದಿಂದ 'ಭಾಗ್ಯ ಲಕ್ಷ್ಮಿ', 'ಗೃಹಜ್ಯೋತಿ' ಯೋಜನೆಗಳು ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸರ್ಕಾರ ನೀಡುವ ವಿದ್ಯುತ್ ಕಡಿತಗೊಳ್ಳಲಿದೆ ಎಂದು ರೈತ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ಈ ಸಂಬಂಧ ರಾಜ್ಯ ಸರ್ಕಾರವು ಟಾಟಾ ಕಂಪನಿಯ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ. ಈ ಸಭೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ, ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ರವಿಚಂದ್ರ ಗಂಜಾಂ, ಹತ್ತಳ್ಳಿ ದೇವರಾಜ್ ಮತ್ತು ಮಿಲಿಟರಿ ಕುಮಾರ ಮುಂತಾದವರು ಉಪಸ್ಥಿತರಿದ್ದರು. ರೈತರಿಗೆ ತೀವ್ರ ಸಂಕಷ್ಟ ತಂದೊಡ್ಡುವ ವಿದ್ಯುತ್ ಖಾಸಗೀಕರಣದ ಹಿಂದಿನ ಟಾಟಾ ಕಂಪನಿಯ ಹುನ್ನಾರವನ್ನು ಖಂಡಿಸಲಾಯಿತು.
    1
    ರಾಜ್ಯದ ರೈತರಿಗೆ ಸಂಕಷ್ಟ ಉಂಟುಮಾಡುವ ವಿದ್ಯುತ್ ಖಾಸಗೀಕರಣಕ್ಕೆ ಟಾಟಾ ಕಂಪನಿ ಅರ್ಜಿ ಸಲ್ಲಿಸಿದೆ ಎಂದು ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಆಗ್ರಹಿಸಲಾಗಿದೆ. ಈ ಖಾಸಗೀಕರಣದಿಂದ 'ಭಾಗ್ಯ ಲಕ್ಷ್ಮಿ', 'ಗೃಹಜ್ಯೋತಿ' ಯೋಜನೆಗಳು ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸರ್ಕಾರ ನೀಡುವ ವಿದ್ಯುತ್ ಕಡಿತಗೊಳ್ಳಲಿದೆ ಎಂದು ರೈತ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ಈ ಸಂಬಂಧ ರಾಜ್ಯ ಸರ್ಕಾರವು ಟಾಟಾ ಕಂಪನಿಯ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಭೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ, ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ರವಿಚಂದ್ರ ಗಂಜಾಂ, ಹತ್ತಳ್ಳಿ ದೇವರಾಜ್ ಮತ್ತು ಮಿಲಿಟರಿ ಕುಮಾರ ಮುಂತಾದವರು ಉಪಸ್ಥಿತರಿದ್ದರು. ರೈತರಿಗೆ ತೀವ್ರ ಸಂಕಷ್ಟ ತಂದೊಡ್ಡುವ ವಿದ್ಯುತ್ ಖಾಸಗೀಕರಣದ ಹಿಂದಿನ ಟಾಟಾ ಕಂಪನಿಯ ಹುನ್ನಾರವನ್ನು ಖಂಡಿಸಲಾಯಿತು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    24 min ago
  • ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮತ್ತು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರು ಬಸವಣ್ಣನನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಕರೆ ನೀಡಿದರು. ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ ಮತ್ತು ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಿಪ್ಪೇಸ್ವಾಮಿ ಅವರು, ಯುದ್ಧ ನಿಲ್ಲಿಸದೆ ಹಠಕ್ಕೆ ಬಿದ್ದಿರುವ ದೇಶಗಳಿಗೆ ಬುದ್ಧನ 'ವೈರಿಯಿಂದ ವೈರಿ ನಾಶವಾಗುವುದಿಲ್ಲ. ಆ ವೈರಿಯಿಂದ ವೈರಿ ನಾಶವಾಗುತ್ತದೆ' ಎಂಬ ಸತ್ಯ ಸಂದೇಶವನ್ನು ತಲುಪಿಸಬೇಕು ಎಂದು ಹೇಳಿದರು. ಅಲ್ಲದೆ, ಲೋಕ ಬದುಕಿನ ಧರ್ಮವನ್ನು ಸಾರುವ ಶಿವಶರಣರ ವಚನಗಳನ್ನು ವಿಶ್ವ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದೂ ಪ್ರತಿಪಾದಿಸಿದರು. ಅಂಬೇಡ್ಕರ್ ಜಯಂತಿಯು ವರ್ಣರಂಜಿತ ಮತ್ತು ಡಿಜೆ ಸಂಭ್ರಮದಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪ್ರತಿದಿನದ ವ್ಯವಹಾರಿಕ ಕ್ಷೇತ್ರ ಸೇರಿ ಆಡಳಿತ ಮತ್ತು ವಿದೇಶಾಂಗ ವ್ಯವಹಾರದಲ್ಲಿ ಉಲ್ಲೇಖಿತರಾಗುವ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ನಿತ್ಯವೂ ಜಯಂತಿ ಇದ್ದಂತೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಯಲ್ಲಪ್ಪ, ನ್ಯಾಯ ಬೆಲೆ ಅಂಗಡಿ ಮಾಲೀಕ ಎಚ್. ಚನ್ನಿಗರಾಮಯ್ಯ, ಸಾಮಾಜಿಕ ಹೋರಾಟಗಾರ ಎಸ್.ಎಸ್. ಸೈಯದ್, ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ, ಬಿ.ಸಿ. ವೆಂಕಟೇಶ್ ಮೂರ್ತಿ, ಬಿ.ಸಿ. ಸತೀಶ್ ಕುಮಾರ್, ಕಾರ್ತಿಕ್, ಅಜ್ಮತ್ ವುಲ್ಲಾ, ಪಿ. ಚಿದಾನಂಯ್ಯ, ಎಂ. ಶೇಖರಪ್ಪ, ಕೆ. ರುದ್ರಮುನಿ, ಲಕ್ಷ್ಮಿಪುರ ರಾಜಶೇಖರಪ್ಪ, ದ್ಯಾಮಣ್ಣ, ನಾಗರಾಜ್, ಲೋಹಿತ್, ಎಂ.ಎನ್. ಮೃತ್ಯುಂಜಯ, ವಿಷ್ಣುಮೂರ್ತಿ ರಾವ್, ಗುತ್ತಿಗೆದಾರ ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮತ್ತು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರು ಬಸವಣ್ಣನನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಕರೆ ನೀಡಿದರು. ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ ಮತ್ತು ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಿಪ್ಪೇಸ್ವಾಮಿ ಅವರು, ಯುದ್ಧ ನಿಲ್ಲಿಸದೆ ಹಠಕ್ಕೆ ಬಿದ್ದಿರುವ ದೇಶಗಳಿಗೆ ಬುದ್ಧನ 'ವೈರಿಯಿಂದ ವೈರಿ ನಾಶವಾಗುವುದಿಲ್ಲ. ಆ ವೈರಿಯಿಂದ ವೈರಿ ನಾಶವಾಗುತ್ತದೆ' ಎಂಬ ಸತ್ಯ ಸಂದೇಶವನ್ನು ತಲುಪಿಸಬೇಕು ಎಂದು ಹೇಳಿದರು. ಅಲ್ಲದೆ, ಲೋಕ ಬದುಕಿನ ಧರ್ಮವನ್ನು ಸಾರುವ ಶಿವಶರಣರ ವಚನಗಳನ್ನು ವಿಶ್ವ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದೂ ಪ್ರತಿಪಾದಿಸಿದರು. ಅಂಬೇಡ್ಕರ್ ಜಯಂತಿಯು ವರ್ಣರಂಜಿತ ಮತ್ತು ಡಿಜೆ ಸಂಭ್ರಮದಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪ್ರತಿದಿನದ ವ್ಯವಹಾರಿಕ ಕ್ಷೇತ್ರ ಸೇರಿ ಆಡಳಿತ ಮತ್ತು ವಿದೇಶಾಂಗ ವ್ಯವಹಾರದಲ್ಲಿ ಉಲ್ಲೇಖಿತರಾಗುವ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ನಿತ್ಯವೂ ಜಯಂತಿ ಇದ್ದಂತೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಯಲ್ಲಪ್ಪ, ನ್ಯಾಯ ಬೆಲೆ ಅಂಗಡಿ ಮಾಲೀಕ ಎಚ್. ಚನ್ನಿಗರಾಮಯ್ಯ, ಸಾಮಾಜಿಕ ಹೋರಾಟಗಾರ ಎಸ್.ಎಸ್. ಸೈಯದ್, ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ, ಬಿ.ಸಿ. ವೆಂಕಟೇಶ್ ಮೂರ್ತಿ, ಬಿ.ಸಿ. ಸತೀಶ್ ಕುಮಾರ್, ಕಾರ್ತಿಕ್, ಅಜ್ಮತ್ ವುಲ್ಲಾ, ಪಿ. ಚಿದಾನಂಯ್ಯ, ಎಂ. ಶೇಖರಪ್ಪ, ಕೆ. ರುದ್ರಮುನಿ, ಲಕ್ಷ್ಮಿಪುರ ರಾಜಶೇಖರಪ್ಪ, ದ್ಯಾಮಣ್ಣ, ನಾಗರಾಜ್, ಲೋಹಿತ್, ಎಂ.ಎನ್. ಮೃತ್ಯುಂಜಯ, ವಿಷ್ಣುಮೂರ್ತಿ ರಾವ್, ಗುತ್ತಿಗೆದಾರ ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    47 min ago
  • ರಾಜ್ಯಾಧ್ಯಕ್ಷರಾದ ಹೆಚ್ ಎಂ ರೇವಣ್ಣ ಅವರು ಚಿತ್ರದುರ್ಗದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ಕಚೇರಿಗೆ ಭೇಟಿ ನೀಡಿದ್ದಾರೆ. ಬುಧವಾರ ಮಧ್ಯಾಹ್ನ 12.15 ಕ್ಕೆ ಕಚೇರಿಗೆ ಭೇಟಿ ನೀಡಿದ ಹೆಚ್ ಎಂ ರೇವಣ್ಣ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ವತಿಯಿಂದ ಹೆಚ್ ಎಂ ರೇವಣ್ಣ ಅವರನ್ನು ಸನ್ಮಾನಿಸಿ ಶುಭಕೋರಲಾಯಿತು.
    1
    ರಾಜ್ಯಾಧ್ಯಕ್ಷರಾದ ಹೆಚ್ ಎಂ ರೇವಣ್ಣ ಅವರು ಚಿತ್ರದುರ್ಗದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ಕಚೇರಿಗೆ ಭೇಟಿ ನೀಡಿದ್ದಾರೆ. ಬುಧವಾರ ಮಧ್ಯಾಹ್ನ 12.15 ಕ್ಕೆ ಕಚೇರಿಗೆ ಭೇಟಿ ನೀಡಿದ ಹೆಚ್ ಎಂ ರೇವಣ್ಣ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ವತಿಯಿಂದ ಹೆಚ್ ಎಂ ರೇವಣ್ಣ ಅವರನ್ನು ಸನ್ಮಾನಿಸಿ ಶುಭಕೋರಲಾಯಿತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಕರ್ನಾಟಕದಲ್ಲಿ ರೈತನೊಬ್ಬ ವಿದ್ಯುತ್ ಖಾಸಗೀಕರಣದ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ವಿದ್ಯುತ್ ಖಾಸಗೀಕರಣದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಆ ರೈತ, ಈ ಕ್ರಮದಿಂದ ರೈತರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದ್ದಾನೆ.
    1
    ಕರ್ನಾಟಕದಲ್ಲಿ ರೈತನೊಬ್ಬ ವಿದ್ಯುತ್ ಖಾಸಗೀಕರಣದ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ವಿದ್ಯುತ್ ಖಾಸಗೀಕರಣದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಆ ರೈತ, ಈ ಕ್ರಮದಿಂದ ರೈತರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದ್ದಾನೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    35 min ago
  • ಮಂಗಳವಾರದಂದು ಮಂಗಳೂರು ನಗರದ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ ಎದುರು ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಮೆಸ್ಕಾಂನ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಟಾಟಾ ಕಂಪನಿಯಂತಹ ಖಾಸಗಿ ಸಂಸ್ಥೆಗೆ ಹಸ್ತಾಂತರಿಸಲು ಅನುಮತಿ ಕೋರಿರುವ ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು. ಮೆಸ್ಕಾಂ ಅಧಿಕಾರಿಗಳು, ಗುತ್ತಿಗೆ ನೌಕರರು ಸೇರಿದಂತೆ ಇಡೀ ಕಾರ್ಮಿಕ ವೃಂದ ಈ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ. ಬಲರಾಮ್ ಅವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೆಸ್ಕಾಂ ಖಾಸಗೀಕರಣದ ವಿರುದ್ಧ ಹಂತ ಹಂತವಾಗಿ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರಸ್ತುತ ರಾಜ್ಯಾದ್ಯಂತ 'ದ್ವಾರ ಸಭೆ'ಗಳನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
    1
    ಮಂಗಳವಾರದಂದು ಮಂಗಳೂರು ನಗರದ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ ಎದುರು ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಮೆಸ್ಕಾಂನ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಟಾಟಾ ಕಂಪನಿಯಂತಹ ಖಾಸಗಿ ಸಂಸ್ಥೆಗೆ ಹಸ್ತಾಂತರಿಸಲು ಅನುಮತಿ ಕೋರಿರುವ ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು.

ಮೆಸ್ಕಾಂ ಅಧಿಕಾರಿಗಳು, ಗುತ್ತಿಗೆ ನೌಕರರು ಸೇರಿದಂತೆ ಇಡೀ ಕಾರ್ಮಿಕ ವೃಂದ ಈ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ. ಬಲರಾಮ್ ಅವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೆಸ್ಕಾಂ ಖಾಸಗೀಕರಣದ ವಿರುದ್ಧ ಹಂತ ಹಂತವಾಗಿ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರಸ್ತುತ ರಾಜ್ಯಾದ್ಯಂತ 'ದ್ವಾರ ಸಭೆ'ಗಳನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ರಾಜ್ಯ ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ನಿಗದಿಪಡಿಸಿದ್ದ ಹೆಚ್ಚುವರಿ ಹಣವನ್ನು ನೀಡದೆ ದಕ್ಷಿಣ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆಗಳು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಕ್ಕೆ ಕುರಬೂರು ಶಾಂತಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬಾಕಿ ಹಣ ಪಾವತಿಸುವವರೆಗೂ ಯಾವುದೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಅವರು ಕರೆ ನೀಡಿದ್ದಾರೆ. ರೈತರು ಸಹ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡುವುದನ್ನು ನಿಲ್ಲಿಸಿ, ಬಾಕಿ ಹಣವನ್ನು ವಸೂಲಿ ಮಾಡಿಕೊಳ್ಳಬೇಕು ಎಂದು ಶಾಂತಕುಮಾರ್ ಒತ್ತಾಯಿಸಿದ್ದಾರೆ.
    1
    ರಾಜ್ಯ ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ನಿಗದಿಪಡಿಸಿದ್ದ ಹೆಚ್ಚುವರಿ ಹಣವನ್ನು ನೀಡದೆ ದಕ್ಷಿಣ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆಗಳು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಕ್ಕೆ ಕುರಬೂರು ಶಾಂತಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬಾಕಿ ಹಣ ಪಾವತಿಸುವವರೆಗೂ ಯಾವುದೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಅವರು ಕರೆ ನೀಡಿದ್ದಾರೆ.

ರೈತರು ಸಹ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡುವುದನ್ನು ನಿಲ್ಲಿಸಿ, ಬಾಕಿ ಹಣವನ್ನು ವಸೂಲಿ ಮಾಡಿಕೊಳ್ಳಬೇಕು ಎಂದು ಶಾಂತಕುಮಾರ್ ಒತ್ತಾಯಿಸಿದ್ದಾರೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    34 min ago
  • ಚಳ್ಳಕೆರೆ ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿ, ಇಂಜಿನಿಯರ್ ಕಾಲೇಜು, ಡಿಟಿಟಿಸಿ ಕೇಂದ್ರ, ಎಲ್ಲಾ ಸಮುದಾಯಗಳಿಗೆ ಸಮುದಾಯ ಭವನಗಳ ನಿರ್ಮಾಣ, ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ವೇದಾವತಿ ನದಿಯಲ್ಲಿ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಶಾಸಕ ಟಿ. ರಘುಮೂರ್ತಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಡುಗೊಲ್ಲ ಸಂಘ ಹಾಗೂ ಟಿ. ರಘುಮೂರ್ತಿ ಅಭಿಮಾನಿ ಬಳಗ ಒತ್ತಾಯಿಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲರು, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡುಗೊಲ್ಲ ಸಂಘದ ಉಪಾಧ್ಯಕ್ಷರಾದ ಜಿ.ಟಿ. ಶಶಿಧರ್ ಮತ್ತು ಸಿದ್ದಾಪುರ ಮಂಜುನಾಥ್, ರಘುಮೂರ್ತಿ ಅವರು ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಕೀಲರಾದ ಜಿ.ಟಿ. ಶಶಿಧರ್, ಸಣ್ವೀರಣ್ಣ, ತಿಪ್ಪೇಸ್ವಾಮಿ (ಜೋಗಿ), ಸಿದ್ದಾಪುರ ಮಂಜುನಾಥ್, ವೈ. ಕಾಂತರಾಜ್, ಶಿವಮೂರ್ತಿ, ಯೂತ್ ಕಾಂಗ್ರೆಸ್‌ನ ಬಾನು ಸ್ಟುಡಿಯೋ ವೀರೇಶ್, ಮಹೇಂದ್ರ, ಹೊಟ್ಟೆಪ್ಪನಹಳ್ಳಿ ನಾಗರಾಜ್, ಮಹಾಲಿಂಗಪ್ಪ ಸೇರಿದಂತೆ ಕಾಡುಗೊಲ್ಲ ಸಮುದಾಯದ ಯುವಕರು ಮತ್ತು ಮುಖಂಡರು ಉಪಸ್ಥಿತರಿದ್ದರು.
    1
    ಚಳ್ಳಕೆರೆ ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿ, ಇಂಜಿನಿಯರ್ ಕಾಲೇಜು, ಡಿಟಿಟಿಸಿ ಕೇಂದ್ರ, ಎಲ್ಲಾ ಸಮುದಾಯಗಳಿಗೆ ಸಮುದಾಯ ಭವನಗಳ ನಿರ್ಮಾಣ, ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ವೇದಾವತಿ ನದಿಯಲ್ಲಿ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಶಾಸಕ ಟಿ. ರಘುಮೂರ್ತಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಡುಗೊಲ್ಲ ಸಂಘ ಹಾಗೂ ಟಿ. ರಘುಮೂರ್ತಿ ಅಭಿಮಾನಿ ಬಳಗ ಒತ್ತಾಯಿಸಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲರು, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡುಗೊಲ್ಲ ಸಂಘದ ಉಪಾಧ್ಯಕ್ಷರಾದ ಜಿ.ಟಿ. ಶಶಿಧರ್ ಮತ್ತು ಸಿದ್ದಾಪುರ ಮಂಜುನಾಥ್, ರಘುಮೂರ್ತಿ ಅವರು ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಕೀಲರಾದ ಜಿ.ಟಿ. ಶಶಿಧರ್, ಸಣ್ವೀರಣ್ಣ, ತಿಪ್ಪೇಸ್ವಾಮಿ (ಜೋಗಿ), ಸಿದ್ದಾಪುರ ಮಂಜುನಾಥ್, ವೈ. ಕಾಂತರಾಜ್, ಶಿವಮೂರ್ತಿ, ಯೂತ್ ಕಾಂಗ್ರೆಸ್‌ನ ಬಾನು ಸ್ಟುಡಿಯೋ ವೀರೇಶ್, ಮಹೇಂದ್ರ, ಹೊಟ್ಟೆಪ್ಪನಹಳ್ಳಿ ನಾಗರಾಜ್, ಮಹಾಲಿಂಗಪ್ಪ ಸೇರಿದಂತೆ ಕಾಡುಗೊಲ್ಲ ಸಮುದಾಯದ ಯುವಕರು ಮತ್ತು ಮುಖಂಡರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    52 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.