ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

- ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.1
- ತವರು-ಕೊಟ್ಟ ಮನೆಗಳ ಬೆಸುಗೆಯ ಗೌರಿ ಹಬ್ಬ: ಹೆಣ್ಣುಮಕ್ಕಳ ಮೊಗದಲ್ಲಿ ಹರಸುವ ಸಂಭ್ರಮ ತವರು-ಕೊಟ್ಟ ಮನೆಗಳ ಬೆಸುಗೆಯ ಗೌರಿ ಹಬ್ಬ: ಹೆಣ್ಣುಮಕ್ಕಳ ಮೊಗದಲ್ಲಿ ಹರಸುವ ಸಂಭ್ರಮ --------------------- ಹುಳಿಯಾರು ಪೇಪರ್ ಕಿರಣ್ ನ್ಯೂಸ್: ಗೌರಿ ಹಬ್ಬವೆಂದರೆ ಸಾಕು ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಸಂಭ್ರಮ-ಸಂತೋಷ. ಅದರಲ್ಲೂ ಮದುವೆಯಾಗಿ ಹೊಸ ಮನೆಗೆ ತೆರಳಿರುವ ಹೆಣ್ಣು ಮಕ್ಕಳಿಗೆ ಈ ಹಬ್ಬದ ತವರಿನ ನೆನಪುಗಳು ದುಪ್ಪಟ್ಟು ಖುಷಿ ನೀಡುತ್ತವೆ. ವರ್ಷಕ್ಕೊಮ್ಮೆ ತವರು ಮನೆಯಿಂದ ತಂದೆ-ತಾಯಿ, ಅಣ್ಣ-ತಮ್ಮಂದಿರು ಪ್ರೀತಿಯಿಂದ ಬಂದು ಬಾಗಿನ ನೀಡುವುದು, ಅಥವಾ ಹೆಣ್ಣು ಮಗಳನ್ನು ತವರಿಗೆ ಕರೆತಂದು ಉಪಚರಿಸುವುದು ಯುಗಯುಗಗಳಿಂದ ಬೆಳೆದುಬಂದ ಭಾವನಾತ್ಮಕ ಪರಂಪರೆಯಾಗಿದೆ. ಬಡತನವಿರಲಿ, ಸಿರಿತನವಿರಲಿ; ಪ್ರತಿಯೊಂದು ಕುಟುಂಬವೂ ತಮ್ಮ ಶಕ್ತಿಸಾರವಾಗಿ ಗೌರಿ ಹಬ್ಬವನ್ನು ಆಚರಿಸಿ ಮಗಳ ಸಂತೋಷಕ್ಕಾಗಿ ಶ್ರಮಿಸುತ್ತದೆ. ಈ ಹಬ್ಬವು ಹುಟ್ಟಿದ ಮನೆ ಹಾಗೂ ಕೊಟ್ಟ ಮನೆಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಕೊಂಡಿಯಾಗಿದೆ. ಬಾಗಿನದ ಮಹತ್ವ ಮತ್ತು ಶ್ರೀಮಂತ ಸಂಸ್ಕೃತಿ ಗೌರಿ ಹಬ್ಬದಲ್ಲಿ ನೀಡುವ 'ಬಾಗಿನ' ಕೇವಲ ವಸ್ತುಗಳ ಮೂಟೆಯಲ್ಲ, ಅದು ತವರಿನ ಅಕ್ಷಯ ಪ್ರೀತಿ ಮತ್ತು ಆಶೀರ್ವಾದದ ಸಂಕೇತ. ಬಾಗಿನದ ಸಾಮಗ್ರಿಗಳು: ಮೊರದಲ್ಲಿ ಅರಿಶಿನ, ಕುಂಕುಮ, ಬಳೆ, ಕನ್ನಡಿ, ಬಾಚಣಿಕೆ, ಕಪ್ಪು ದಾರ, ಅಕ್ಕಿ, ಬೇಳೆ ಧಾನ್ಯಗಳು, ಬೆಲ್ಲ, ತೆಂಗಿನಕಾಯಿ ಹಾಗೂ ಮಂಗಳ ದ್ರವ್ಯಗಳನ್ನು ಜೋಡಿಸಿ ಪೂಜಿಸಲಾಗುತ್ತದೆ. ಮಂಗಳ ಗೌರಿ ಪೂಜೆ: ಸುಮಂಗಲಿಯರು ತಮ್ಮ ಮುತ್ತೈದೆತನ, ಕುಟುಂಬದ ಕ್ಷೇಮ ಹಾಗೂ ಐಶ್ವರ್ಯಕ್ಕಾಗಿ ಸ್ವರ್ಣ ಗೌರಿಯನ್ನು ನಿಷ್ಠೆಯಿಂದ ಪೂಜಿಸಿ, ಹಿರಿಯ ಮುತ್ತೈದೆಯರಿಗೆ ಹಾಗೂ ತಾಯಿಗೆ ಬಾಗಿನ ನೀಡಿ ಆಶೀರ್ವಾದ ಪಡೆಯುತ್ತಾರೆ. ಭಾವನಾತ್ಮಕ ಬೆಸುಗೆ: ಮದುವೆಯಾಗಿ ಬೇರೆ ಮನೆಗೆ ಹೋದ ಮಗಳು ಕ್ಷೇಮವಾಗಿರಲಿ, ಆಕೆಯ ಸಂಸಾರದಲ್ಲಿ ಧಾನ್ಯ-ಧನ ಸಂಪತ್ತು ಸದಾ ಸಮೃದ್ಧವಾಗಿರಲಿ ಎಂಬ ಹಾರೈಕೆ ಈ ಬಾಗಿನದ ಹಿಂದಿರುವ ಮುಖ್ಯ ಉದ್ದೇಶ. ಸಂಪ್ರದಾಯದ ಉಳಿವಿಗೆ ಗ್ರಾಮೀಣ ಜನರ ಶ್ರಮ ಬದಲಾಗುತ್ತಿರುವ ಆಧುನಿಕ ಯುಗದಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರಗಳಲ್ಲಿ ಗೌರಿ ಹಬ್ಬದ ಕಳೆ ಕುಂದಿಲ್ಲ. ಹಬ್ಬದ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ, ಆಭರಣ ಹಾಗೂ ತವರಿನ ತಿನಿಸುಗಳನ್ನು ನೀಡಿ ಸತ್ಕರಿಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವೆಂದೇ ಭಾವಿಸಲಾಗಿದೆ. ಸಾಮಾಜಿಕವಾಗಿ ಎಷ್ಟೇ ಆಧುನಿಕತೆ ಬಂದರೂ, ತವರು ಮನೆಯಿಂದ ಬರುವ ಬಾಗಿನಕ್ಕಾಗಿ ಕಾಯುವ ಹೆಣ್ಣು ಮಗಳ ಕಣ್ಣಿನ ಕಾತುರ ಮತ್ತು ಅದನ್ನು ನೀಡುವಾಗ ಹೆತ್ತವರ ಮೊಗದಲ್ಲಿ ಮೂಡುವ ತೃಪ್ತಿ ನಮ್ಮ ಸಂಸ್ಕೃತಿಯ ಸಜೀವ ಸಾಕ್ಷಿಯಾಗಿದೆ. ಬಾಂಧವ್ಯದ ಬೆಸುಗೆಯಾಗಿರುವ ಈ ಗೌರಿ ಹಬ್ಬವು ನಾಡಿನಾದ್ಯಂತ ಸೌಹಾರ್ದತೆ ಮತ್ತು ಪ್ರೀತಿಯನ್ನು ಪಸರಿಸುತ್ತಿದೆ.1
- ಚಿಕ್ಕನಾಯಕನಹಳ್ಳಿ: ಅಗಸರಹಳ್ಳಿಯಲ್ಲಿ ಕಿರಾತಕ ಕಿಡಿಗೇಡಿಗಳಿಂದ ಅಡಿಕೆ ಸಸಿಗಳ ಸರ್ವ ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಅಗಸರಹಳ್ಳಿ ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿದ್ದ ನೂರಾರು ಅಡಿಕೆ ಸಸಿಗಳನ್ನು ಯಾರೋ ದುಷ್ಕರ್ಮಿಗಳು ಕಡಿದು ಹಾಕಿ ವಿಕೃತಿ ಮೆರೆದಿರುವ ಘಟನೆ ಬುಧವಾರ ನಡೆದಿದೆ. ಗ್ರಾಮದ ಪುಟ್ಟಬಸವಯ್ಯ ಅವರ ಮಗ ಚಂದ್ರಣ್ಣ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಕೃತ್ಯ ನಡೆದಿದೆ. ಚಂದ್ರಣ್ಣ ಅವರು ತಮ್ಮ ಜಮೀನಿನಲ್ಲಿ ಅತ್ಯಂತ ಮುತುವರ್ಜಿಯಿಂದ ಅಡಿಕೆ ಸಸಿಗಳನ್ನು ನೆಟ್ಟು ಪೋಷಿಸುತ್ತಿದ್ದರು. ಆದರೆ, ಇಂದು ಬೆಳಿಗ್ಗೆ ತೋಟಕ್ಕೆ ತೆರಳಿದಾಗ ಸಸಿಗಳನ್ನು ಕಡಿದು ಹಾಕಿರುವುದು ಬೆಳಕಿಗೆ ಬಂದಿದೆ. ಕಷ್ಟಪಟ್ಟು ಬೆಳೆಸಿದ್ದ ಸಸಿಗಳು ನಾಶವಾಗಿರುವುದನ್ನು ಕಂಡು ರೈತ ಚಂದ್ರಣ್ಣ ಕಣ್ಣೀರು ಹಾಕಿದ್ದು, ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. "ಯಾರೊಂದಿಗೂ ಹಗೆತನವಿರಲಿಲ್ಲ, ಈ ರೀತಿ ಬೆಳೆ ನಾಶ ಮಾಡಿ ಹೊಟ್ಟೆಗೆ ಹೊಡೆದಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ನನಗೆ ಪರಿಹಾರ ಕೊಡಿಸಬೇಕು" ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು ರೈತನಿಗೆ ಬೆಂಬಲವಾಗಿ ನಿಂತು, ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.1
- ಸಿಂಪಲ್ ಮ್ಯಾಚ್..1
- ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ! ಯಾರ ಆಚರಣೆಗೂ ಅಡ್ಡಿಪಡಿಸಬೇಡಿ: ಪ್ರಿಯಾಂಕ್ ಖರ್ಗೆ ಕಾನೂನುಬದ್ಧವಾಗಿ ಆಚರಣೆ ಮಾಡಿ, ಶಾಂತಿ ಕಾಪಾಡಿ!1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.1
- 25 ಸಾವಿರ ಲೀಟರ್ ಹಾಲುಮಣ್ಣಿನ ಪಾಲು ಹಾಲು ತುಂಬಿ ಕೊಳಲ ಜನ ಸಾಗರವೇ ಸೇರಿತ್ತು ಹಾಲಿನ ಲಾರಿ ತುಮಕೂರು ಕಡೆಯಿಂದ ಮುಂಬೈಗೆ ತೆರಳಲು ಶಿರಾ ಬೈಪಾಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಸಾವಿರಾರು ಲೀಟರ್ ಹಾಲು ರಸ್ತೆಯುದ್ದಕ್ಕೂ ಕ್ಷೀರ ಸಾಗರದಂತೆ ಹರಿದಿದೆ. ಟ್ಯಾಂಕರ್ ಪಲ್ಟಿಯಾದ ವಿಷಯ ತಿಳಿದ ಕೆಲವರು ಕವರ್, ಪ್ಲಾಸ್ಟಿಕ್ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಚೆಲ್ಲುತ್ತಿದ್ದ ಹಾಲನ್ನು ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.1