ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ✍️ವರದಿ: ಸುರೇಂದ್ರ ಶಿವಮೊಗ್ಗ.....
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ
ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ✍️ವರದಿ: ಸುರೇಂದ್ರ ಶಿವಮೊಗ್ಗ.....
- ಬೆಂಗಳೂರಿನ ಹೆಮ್ಮೆಯ ಸಂಕೇತ ವಿಧಾನಸೌಧದ ಮುಂಭಾಗದಲ್ಲೇ ಹೊರರಾಜ್ಯದ ಯುವತಿಯರ ಎರಡು ಗುಂಪುಗಳ ನಡುವೆ ಭೀಕರ ಜಗಳ ನಡೆದಿದೆ. ವೀಕೆಂಡ್ ಹಿನ್ನೆಲೆ ಪ್ರವಾಸಕ್ಕೆಂದು ಬಂದಿದ್ದ ಹಿಂದಿ ಭಾಷಿಕ ಯುವತಿಯರ ನಡುವೆ ಸಣ್ಣ ವಿಷಯಕ್ಕೆ ಶುರುವಾದ ಮಾತಿನ ಚಕಮಕಿ, ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಾಲ್ಕೈದು ಯುವತಿಯರು ಪರಸ್ಪರ ಜುಟ್ಟು ಹಿಡಿದು ಎಳೆದಾಡುತ್ತಾ ಹೊಡೆದಾಡಿಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿಯರ ಈ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.1
- ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಮ್.ಜಿ.ರಸ್ತೆಯಲ್ಲಿ ಶ್ರೀ ದ್ರೌಪದಿ ಧರ್ಮರಾಯ ಸ್ವಾಮಿಯ ಕರಗ ಮಹೋತ್ಸವನ್ನು ಅತಿ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಬಂದು ದ್ರೌಪದಿ ಧರ್ಮರಾಯಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿರುತ್ತಾರೆ2
- ಹಲಗೂರು ಭಾಗದಲ್ಲಿ ಕೈಗೊಂಡಿದ್ದ ಹಲವು ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಕಾರ್ಯಕ್ರಮದ ನಂತರ ನಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರು, ಮಳವಳ್ಳಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅಣ್ಣನವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.*1
- ಸಮ್ಮೇಳನ ತಯಾರಿ ಕೆಲಸ ಮುಗಿಸಿ ವಾಪಸ್ಸಾಗುವಾಗ ಕೆರೆಗೆ ಬಿದ್ದ ಕಾರು.1
- ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ ಫೋನ್ ಇನ್ ಕಾರ್ಯಕ್ರಮ ಬಾಗೇಪಲ್ಲಿ:- 2025-26 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಬಿಇಓ ಕಛೇರಿಯಲ್ಲಿ ಮಕ್ಕಳಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮಾ 9 ರಂದು ಸೋಮವಾರ ಬೆಳಗ್ಗೆ 10:30 ಮಧ್ಯಾಹ್ನ 3 ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿತ್ತು ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಪಟ್ಟಣದ ಬಿಇಓ ಕಛೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ನೇರ ‘ಫೋನ್ ಇನ್ ಕಾರ್ಯಕ್ರಮ’ ದಲ್ಲಿ ಭಾಗವಹಿಸಿದ ಬಿಇಓ ಎನ್ ವೆಂಕಟೇಶಪ್ಪ ಅವರು ಮಕ್ಕಳ ಚುಟುಕು ಪ್ರಶ್ನೆಗೆ ನೇರವಾಗಿ ಉತ್ತರಿಸಿ ಅವರ ಸಂದೇಹಗಳನ್ನು ನಿವಾರಿಸುವ ಪ್ರಯತ್ನ ಮಾಡಿದರು. ಅವರು ಮಕ್ಕಳ ಪ್ರಶ್ನೆಗೆ ಉತ್ತರಿಸುತ್ತಾ ಪರೀಕ್ಷೆಯನ್ನು ಖುಷಿ-ಖುಷಿಯಿಂದ ಬರೆಯಬೇಕು. ಯಾವುದೇ ಭಯ, ಒತ್ತಡಕ್ಕೆ ಒಳಗಾಗದೆ ತಪ್ಪು ಬರೆಯುವ ಪ್ರಯತ್ನ ಮಾಡಬೇಡಿ. ಸುಲಭ ಪ್ರಶ್ನೆಗಲಿಗೆ ಮೊದಲು ಉತ್ತರಿಸಿ. ಸಮಯ ಪರಿಪಾಲನೆ ತುಂಬಾ ಮುಖ್ಯ. ಫಲಿತಾಂಶ ಸುಧಾರಣೆಗೆ ಅವಕಾಶ ಉಂಟು ಎಂಬಿತ್ಯಾದಿ ಸಲಹೆಗಳನ್ನು ಮಕ್ಕಳಿಗೆ ನೀಡಿ ಪರೀಕ್ಷೆ ಭಯ ನಿವಾರಿಸುವ ಪ್ರಯತ್ಮ ಮಾಡಿದರು. ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕ-ಪೋಷಕರೂ ಸಹ ನೇರ ಫೋನ್ ಇನ್ ನಲ್ಲಿ ಭಾಗಿಯಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡರು. ಎಸ್. ಎಸ್.ಎಲ್.ಸಿ ನೀಡಲ್ ಅಧಿಕಾರಿ ಪಿ.ಎನ್.ನಾರಾಯಣ ಸ್ವಾಮಿ ಮಾತನಾಡಿ ಪ್ರಸಕ್ತ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆಗೆ ಕೈಗೊಳ್ಳಲಾದ ವ್ಯವಸ್ಥಿತವಾದ ಯೋಜಿತ ಅಂಶಗಳ ಬಗ್ಗೆ ಮಾತನಾಡಿದರು. ಬಾಗೇಪಲ್ಲಿ ತಾಲೂಕಿನಲ್ಲಿ 2025-26 ನೇ ಸಾಲಿನ ಎಸ್. ಎಸ್.ಎಲ್.ಸಿ. ಮಕ್ಕಳು ಮಾರ್ಚ್ ಪರೀಕ್ಷೆಗೆ ಒಟ್ಟು 2201 ವಿದ್ಯಾರ್ಥಿಗಳು ನೊಂದಾಯಿಸಿದ್ದು ಒಟ್ಟು 9 ಪರೀಕ್ಷಾ ಕೇಂದ್ರಗಳು ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು ಎಸ್. ಎಸ್. ಎಲ್.ಸಿ ಪರೀಕ್ಷೆ ಪೋನ್ ಇನ್ ಕಾರ್ಯಕ್ರಮದಲ್ಲಿ ಆರ್.ಸುಧಾಕರ್ ಕನ್ನಡ ಭಾಷೆ,ಮಂಜುನಾಥ. ಇ. ಆಂಗ್ಲ ಭಾಷೆ,ಈಶ್ವರಾಚಾರಿ ಹಿಂದಿ ಭಾಷೆ, ಎನ್.ಕುಮಾರ್ ಗಣಿತ, ಮಹಮ್ಮದ್ ಹಮೀದ್ ವಿಜ್ಞಾನ, ಗಂಗರಾಜು ಸಮಾಜ ವಿಜ್ಞಾನ ಇವರು ಎಸ್. ಎಸ್.ಎಲ್. ಸಿ.ಮಕ್ಕಳ ಪೋನ್ ಇನ್ ಕಾರ್ಯಕ್ರಮ ನಡೆಸಿಕೊಟ್ಟರು.1
- ಹನೂರು ಪಟ್ಟಣ ಮೈಸೂರು ಮಾರಮ್ಮನ ಬೀದಿ ಹಿಂದೆ ನ್ಯಾಯಾಲಯ ಇದ್ದ ಸ್ಥಳದಲ್ಲಿ ನೂತನವಾಗಿ ತೆರೆದಿರುವ ಗುರು ಡಯಾಗ್ನಸ್ಟಿಕ್ ಸೆಂಟರ್ ಉಧ್ಘಟನೆ ನೆರವೇರಿಸಿ ಮಾತನಾಡಿದ ಶಾಸಕರು ತಾಲ್ಲೂಕು ಕೇಂದ್ರದಲ್ಲಿ ಎಲ್ಲಾ ರೀತಿ ಸೌಲಭ್ಯ ಹೊಂದಿರುವ ಡಯಾಗ್ನಸ್ಟಿಕ್ ಸೆಂಟರ್ ಪ್ರಾರಂಭ ಆಗಿರುವುದು ಸಂತೋಷವಾಗಿದೆ. ಅದೇ ರೀತಿಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜನ ಮನ್ನಣೆ ಪಡೆಯಲಿ. ಎಂದು ಹಾರೈಸಿ ಶುಭ ಕೋರಿದರು. ಗುರು ಡಯಾಗ್ನಸ್ಟಿಕ್ ಸೆಂಟರ್ ಮುಖ್ಯಸ್ಥರು ಆದ ನವೀನ್ ಕುಮಾರ್ ಮಾತನಾಡಿ ಜನರಿಗೆ ಉತ್ತಮ ಗುಣಮಟ್ಟ ಆರೋಗ್ಯ ಸೇವೆ ಒದಗಿಸುವಂಥ ಉದ್ದೇಶವನ್ನ ಹೊಂದಲಾಗಿದೆ. ನಮ್ಮಲ್ಲಿ ಹೆಮಟಾಲಜಿ, ಸೆರೋಲಜಿ, ಕ್ಲಿನಿಕಲ್ ಪ್ಯಾಥಾಲಜಿ, ಬಯೋ-ಕೆಮಿಸ್ಟ್ರಿ,ಇಮ್ಯುನೊಅಸ್ಸೇ, ಮೈಕ್ರೋಬಯಾಲಜಿ, ಇ.ಸಿ.ಜಿ. ಪ್ರಯೋಗಾಲಯಗಳ ಸೇವೆಗಳು ಲಭ್ಯ ಇರುತ್ತದೆ. ಹಾಗೆಯೇ ಅಲ್ಟಾಸೌಂಡ್ ಸ್ಕಾನಿಂಗ್, ಕಲರ್ ಡಾಕ್ಟರ್ ಡಿಜಿಟಲ್ ಎಕ್ಸ್ –ರೇ, 2ಡಿ ಎಕೋ / ಟಿ.ಎಂ.ಟಿ, ಫಸಿಯೋಥೆರಪಿ ಸೇವೆಗಳು ಒಂದು ಗಂಟೆ ಶೀಘ್ರದಲ್ಲೆ ಲಭ್ಯವಾಗುತ್ತದೆ. ವಿಶ್ವಸಾರ್ಹ ಪ್ರಯೋಗಲಯ ಫಲಿತಾಂಶಗಳಿಗಾಗಿ ಬುದ್ದಿವಂತಿಕೆಯ ಅನುಭವಯುಳ್ಳ ಸಿಬ್ಬಂಧಿಗಳಿದ್ದು ಜನರ ಸೇವೆಗೆ ಜನಾರ್ಧನ ಸೇವೆ ಆಗಿರುತ್ತದೆ. ಮತ್ತು ಸಮಯ : ಪ್ರತಿನಿತ್ಯ ಬೆಳಿಗ್ಗೆ 7-00 ರಿಂದ ರಾತ್ರಿ 9-00 ಗಂಟೆ ವರೆಗೆ ಸೇವೆ ಲಭ್ಯ ಇರುತ್ತದೆ. ಇದೆ ಸಮಯದಲ್ಲಿ ಚಾಮುಲ್ ನಿರ್ದೇಶಕ ರಾದ ಉದ್ದನೂರು ಪ್ರಸಾದ್,ಮಹದೇವ್,ಶಶಿ,ಸತ್ಯರಾಜ್, ವೆಂಕಟೇಗೌಡ,ಎಸ್ ಆರ್ ಮಹದೇವ್, ವಿಜಯ್ ಕುಮಾರ್,ಗುರುಸ್ವಾಮಿ, ಮೂರ್ತಿ,ಹಾಗೂ ಇನ್ನಿತರರು ಇದ್ದರು...4
- ಚಿಂತಾಮಣಿ:-ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಚೌಡರೆಡ್ಡಿ (ಚೇತನ್ ರೆಡ್ಡಿ) ಆಯ್ಕೆ2
- ಒಳಮೀಸಲಾತಿಯಿಂದ ಭೋವಿ ಮತ್ತು ಅಲೆಮಾರಿ ಸಮುದಾಯಗಳಿಗೆ ಆಗಲಿರುವ ಅನ್ಯಾಯವನ್ನು ಸರಿಪಡಿಸದೇ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ:ಮಾಜಿ ಜಿಲ್ಲಾ ಪಂಚಾಯತಿ ಅದ್ಯಕ್ಷ ಎಂ.ವಿ.ಕೃಷ್ಣಪ್ಪ ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ ವಿಭಾಗಿಸಿ 6:6:5 ಅನುಪಾತದಲ್ಲಿ ಮೀಸಲಾತಿ ಹಂಚಿರುವುದು ಅಸಮರ್ಪಕವಾಗಿದೆ . ಸಿ ವರ್ಗಕ್ಕೆ ಸೇರಿದ ಭೋವಿ, ಬಂಜಾರ, ಕೊರಮ, ಕೋರಚ ಸೇರಿ 59 ಅಲೆಮಾರಿ ಸಮುದಾಯಗಳಿಗೆ ಕೇವಲ 5% ಮೀಸಲಾತಿ ನೀಡಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಅದ್ಯಕ್ಷ ಎಂ.ವಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸೋಮವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರಕಾರ ಬಂಜಾರ, ಭೋವಿ, ಕೊರಮ, ಕೊರಚ ಸೇರಿ 63 ಜಾತಿಗಳಿಗೆ ಅನ್ಯಾಯ ಮಾಡಿದೆ. ಈ ಹಿಂದೆ ಕೇವಲ ನಾಲ್ಕು ಜಾತಿಗಳಿಗೆ ಬೊಮ್ಮಾಯಿ ಸರಕಾರ 4.5% ಮೀಸಲಾತಿ ನೀಡಿತ್ತು. ಈಗ ಕಾಂಗ್ರೆಸ್ ಸರಕಾರ ರದ್ದು ಪಡಿಸಿ, 63 ಜಾತಿಗಳಿಗೆ ಕೇವಲ 5% ಮೀಸಲಾತಿ ನೀಡಿದೆ. ಇದರ ವಿರುದ್ಧ ಪಕ್ಷಪಾತವಾಗಿ ಒಟ್ಟಾಗಿ ಹೋರಾಟ ಮಾಡಬೇಕು ಎಂದರು. ಒಳಮೀಸಲಾತಿಯಿಂದ ಭೋವಿ, ಬಂಜಾರ (ಲಂಬಾಣಿ), ಕೊರಮ, ಕೊರಚ, ಸಮಗಾರ, ಚರ್ಮಕಾರ ಮತ್ತು ಅಲೆಮಾರಿ ಸಮುದಾಯಗಳಿಗೆ ಆಗಲಿರುವ ಅನ್ಯಾಯವನ್ನು ಸರಿಪಡಿಸದೇ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗವುದು ಎಂದು ಅವರು ಎಚ್ಚರಿಕೆ ನೀಡಿದರು. ಒಳಮೀಸಲಾತಿಯಿಂದ ಈ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಈ ಬಗ್ಗೆ ಅಧ್ಯಯನ ನಡೆಸಲು ಒಂದು ಸಮಿತಿ ರಚಿಸಿ, ವರದಿಯನ್ನು ಸಿದ್ಧಪಡಿಸಬೇಕು. ಅದರ ಆಧಾರದಲ್ಲಿ ವಾಸ್ತವ ಸ್ಥಿತಿಯನ್ನು ರಾಜ್ಯ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು. ಈ ಕ್ರಿಯೆಯಲ್ಲಿ ಎಲ್ಲ ಸಮುದಾಯಗಳೂ ಒಟ್ಟಾಗಬೇಕು’ ಎಂದು ಕರೆ ನೀಡಿದರು. ಪರಿಶಿಷ್ಟ ಜಾತಿಗಳಿಗೆ ಶೇ 17ರಷ್ಟು ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 7 ರಷ್ಟು ಮೀಸಲಾತಿ ಘೋಷಣೆಯನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಮನವಿ ಮಾಡಬೇಕು ಎಂದು ಒತ್ತಾಯಿಸಬೇಕು ಎಂದು ಹೇಳಿದರು. ಬಾಗೇಪಲ್ಲಿ ತಾಲ್ಲೂಕು ಭೋವಿ ಸಂಘದ ಜಿಲ್ಲಾದ್ಯಕ್ಷ ಪಿ.ಡಿ.ವೆಂಕಟರವಣ ಮಾತನಾಡಿ ಒಳಮೀಸಲಾತಿ ರಹಿತ ಹಳೆ ಮೀಸಲಾತಿಗೆ ‘ಬಲಗೈ’ ಆಗ್ರಹ ‘ಒಳಮೀಸಲಾತಿ ಹಂಚಿಕೆ ಸಂಬಂಧಿಸಿದಂತೆ ಗೊಂದಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವವರೆಗೆ ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆ ಆಗುವವರೆಗೆ ಒಳ ಮೀಸಲಾತಿರಹಿತವಾಗಿ ಹಳೆ ಮೀಸಲಾತಿಯನ್ನು (ಶೇ 15) ಜಾರಿಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರ ಮನವಿ ಮಾಡಿದರು ‘ಒಟ್ಟು ಮೀಸಲಾತಿಯನ್ನು ಶೇ 56ಕ್ಕೆ ಹೆಚ್ಚಿಸಿರುವುದಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಶೇ 50ರ ಮೀಸಲಾತಿಯಲ್ಲಿ ನೇಮಕಾತಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ. ಒಳ ಮೀಸಲಾತಿ ಹಂಚಿಕೆ ವಿಷಯವೂ ಹೈಕೋರ್ಟ್‌ನಲ್ಲಿದೆ. ಹೀಗಾಗಿ ಒಳ ಮಿಸಲಾತಿರಹಿತವಾಗಿ ಹಳೆ ಮೀಸಲಾತಿಯಡಿ ನೇಮಕಾತಿ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ. ‘ಹೊಸ ಜಾತಿ ಪ್ರಮಾಣಪತ್ರದ ಜೊತೆ ಹಳೆಯ ಜಾತಿ ಪ್ರಮಾಣಪತ್ರವನ್ನು ಪರಿಗಣಿಸುವಂತೆ ಆದೇಶ ಹೊರಡಿಸಬೇಕು ವಿವಿಧ ಇಲಾಖೆಗಳು ನೇಮಕಾತಿಗೆ ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ ಮರು ಅಧಿಸೂಚನೆ ಹೊರಡಿಸಲು ಸೂಕ್ತ ಆದೇಶ ಹೊರಡಿಸಬೇಕು ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳು ಬಲಗೈ ಗುಂಪಿನಲ್ಲಿ ಉದ್ಯೋಗ ಶಿಕ್ಷಣ ಮತ್ತು ಇತರ ಸೌಲಭ್ಯ ಪಡೆಯಲು ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿಯ ಸಮೀಕ್ಷೆ ನಡೆಸಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗ ಸಲ್ಲಿಸಿರುವ ವರದಿಯು ಅವೈಜ್ಞಾನಿಕ ಹಾಗೂ ಪಕ್ಷಪಾತದಿಂದ ಕೂಡಿರುವುದರಿಂದ ಅದನ್ನು ತಿರಸ್ಕರಿಸಬೇಕು’ ಎಂದೂ ಆಗ್ರಹಿಸಿದ್ದಾರೆ. ಬಾಗೇಪಲ್ಲಿ ತಾಲ್ಲೂಕು ಭೋವಿ ಸಂಘದ ಅದ್ಯಕ್ಷ ವಿನಯ್ ಕುಮಾರ್ ಮಾತನಾಡಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಸಮುದಾಯಗಳಿಗೆ ಸಿದ್ದರಾಮಯ್ಯ ಸರಕಾರ ಅನ್ಯಾಯ ಮಾಡಿದೆ. ಸಮೀಕ್ಷೆ ಸಮರ್ಕಪವಾಗಿ ಮಾಡಿಲ್ಲ. ನಾಗಮೋಹನ ದಾಸ್ ವರದಿ ಸರಿಯಾಗಿ ಆಗಿಲ್ಲ. ಮತ್ತೊಮ್ಮೆ ಸೂಕ್ತ ಸಮೀಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರವು ನ್ಯಾ. ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ 6:6:5 ಅನುಪಾತದಲ್ಲಿ ಮೀಸಲಾತಿ ಹಂಚಿರುವುದು ಸಮಾಜದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಅಶ್ವತ್ಥಪ್ಪ ಶ್ರೀರಾಮ ನಾಯಕ್, ಶ್ರೀನಿವಾಸ್, ರಮೇಶ್, ನರೇಂದ್ರ, ಚಲಪತಿ, ತಿಪ್ಪಣ್ಣ, ಚನ್ನರಾಯಣಪಲ್ಲಿ ಅಚ್ಚಪ್ಪ, ವೇಣು, ಈರಪ್ಪ ಸೇರಿದಂತೆ ಹಲವಾರು ಭೋವಿ ಸಂಘದ ಮುಖಂಡರು ಹಾಜರಿದ್ದರು.1
- Post by BABU BANNUR Social Media4