Shuru
Apke Nagar Ki App…
#carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆರ್ ಅಂಬೇಡ್ಕರ್ ಜಯಂತಿ
True news kolar Ayub Pasha
#carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆರ್ ಅಂಬೇಡ್ಕರ್ ಜಯಂತಿ
More news from ಕರ್ನಾಟಕ and nearby areas
- ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.1
- ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.1
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. "ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.. ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.4
- *ಭಾರತ ನಲ್ಲಿ ವೈರಲ್*1
- ಹನೂರು :ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನ ಆಚರಣೆ ಮಾಡಲಾಯಿತು. ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೆಸ್ಕ್ ಕಚೇರಿಯ ಸಿಬ್ಬಂದಿಗಳು ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಇದೇ ಸಂದರ್ಭದಲ್ಲಿ aee ರಂಗಸ್ವಾಮಿ, ae ಆನಂದ್ ಕುಮಾರ್, ಜೈ ಗಳು,ಲೈನ್ ಮ್ಯಾನಗಳು ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.3
- ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಆರೋಪ ಹೊರಿಸಿದ್ದ ಮಹಿಳೆಯು ಸೋಮವಾರ ವಿಡಿಯೋ ಬಿಡುಗಡೆ ಮಾಡಿ ತನ್ನ ಹಿಂದಿನ ಹೇಳಿಕೆಯನ್ನು ಬದಲಾಯಿಸಿರುವುದಾಗಿ ತಿಳಿಸಿದ್ದಾರೆ. ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ಸ್ವಾಮೀಜಿ ಜೊತೆ ಗುರು–ಭಕ್ತಿಯ ಸಂಬಂಧ ಮಾತ್ರ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ತನ್ನ ಹೆಸರಿನಲ್ಲಿ ಯಾರೋ ಸುಳ್ಳು ದೂರು ದಾಖಲಿಸಿದ್ದಾರೆ, ಅದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಹೊಸ ಹೇಳಿಕೆ ಪ್ರಕರಣದ ತನಿಖೆಗೆ ಹೊಸ ಆಯಾಮ ನೀಡಿದ್ದು, ಪೊಲೀಸರು ವಿಡಿಯೋ ಹಾಗೂ ದೂರು ಸಂಬಂಧಿತ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ.1
- ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. "ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.4
- ಹನೂರು ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹನೂರು ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ಹನಿಹನಿ ನೀರಿಗೂ ಹಾಹಾಕಾರ ಉಂಟಾಗಿದೆ. 153 ದಿನಗಳ ಅಹೋರಾತ್ರಿ ಧರಣಿಯಲ್ಲಿ ಸಮರ್ಪಕ ಕುಡಿಯುವ ನೀರು, ನೀವು ಪೂರೈಕೆ ಮಾಡುವಂತೆ ಪ್ರತಿಭಟನೆ ಮಾಡಲಾಗಿತ್ತು. ಪ್ರತಿ ಮನುಷ್ಯನಿಗೆ ಸರ್ಕಾರ 70 ಲೀಟರ್ ನೀರು, ಪೂರೈಕೆ ಮಾಡಬೇಕು ಎಂಬ ನಿಯಮವಿದೆ ಆದರೆ ಗ್ರಾಮ ಪಂಚಾಯಿತಿ 7 ಲೀಟರ್ ಸಹ ನೀರು ನೀಡುತ್ತಿಲ್ಲ ಎಂದರು. ಇದಲ್ಲದೆ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಹನೂರು ತಾಲೂಕು ವ್ಯಾಪ್ತಿಯಲ್ಲಿ ರೈತರು ವ್ಯವಸಾಯದ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಒಂದು ಲೋಡ್ ಮೇವು ಖರೀದಿಸಲು ಹದಿನೈದು ಸಾವಿರ ಖರ್ಚಾಗುತ್ತಿದೆ. ಈಗಾಗಲೇ ಸಾಲದ ಸುಳಿಗೆ ಸಿಲುಕಿರುವ ರೈತ ಇಷ್ಟು ಹಣ ನೀಡಿ ಯಾವ ರೀತಿ ಮೇವು ಖರೀದಿಸಲು ಸಾಧ್ಯ ಈ ಕೂಡಲೇ ಜಿಲ್ಲಾಡಳಿತ ಗೋಶಾಲೆಗಳನ್ನು ತೆರೆದು ಹಸುಗಳಿಗೆ ಮೇವು ಪೂರೈಕೆ ಮಾಡಬೇಕು ಇದಲ್ಲದೆ ಇಲಾಖೆ ಹಸುಗಳಿಗೆ ರೈತರಿಗೆ ನೇರವಾಗಿ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ : ಕಳೆದ ಹಲವಾರು ವರ್ಷಗಳಿಂದ ಹನೂರು ತಾಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗಿದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ವಿಫಲರಾಗಿದ್ದಾರೆ. ಸಮರ್ಪಕ ಮಳೆಯಾಗದಿರುವ ಬಗ್ಗೆ ಹಾಗೂ ಮೇವಿನ ಕೊರತೆ ಇರುವ ಬಗ್ಗೆ ಅಧಿಕಾರಿಗಳು ಸರ್ಕಾರದ ಗಮನಕ್ಕೆ ಸಾರದೆ ಇರುವುದರಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಇದಲ್ಲದೆ ಈ ಸಂಬಂಧ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಾಗಿಲ್ಲ, ಈ ಕೂಡಲೇ ಸರ್ಕಾರ ಹನೂರು ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಹೆಚ್ಚಿನ ಅನುದಾನ ನೀಡಿ ಸಮರ್ಪಕ ಮೇವು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು. ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳ ನಿರ್ಲಕ್ಷದಿಂದ ಈ ಸ್ವತ್ತು ನೀಡುತ್ತಿಲ್ಲ ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಸಮಸ್ಯೆಯನ್ನು ಬಗೆಹರಿಸಬೇಕು. ಹನೂರು ತಾಲೂಕು ವ್ಯಾಪ್ತಿಯಲ್ಲಿ ಪಹಣಿಗಳಿಗೆ ಪ್ರತ್ಯೇಕ ಪೋಡು ಮಾಡದೇ ಇರುವುದರಿಂದ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ವರದಿ ನೀಡಬೇಕು : ಸರ್ಕಾರದ 42 ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರದಿಂದ ಯಾವೆಲ್ಲ ಸೌಲಭ್ಯಗಳು ಸಿಗುತ್ತಿದೆ ಎಂಬುದರ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಪ್ರತಿಭಟನೆಯ ದಿನ ಎಲ್ಲಾ ಇಲಾಖೆಯ ಅಧಿಕಾರಿಗಳು ತಾವೇ ಖುದ್ದು ಹಾಜರಾಗಿ ಮಾಹಿತಿ ನೀಡಬೇಕು ಎಂದರು. ಸಭೆಯಲ್ಲಿ ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಎಂ ಈ ಬಸವರಾಜು ವಸಂತ್ ಕುಮಾರ್,ಪುಟ್ಟಸ್ವಾಮಿ,ಡೇವಿಡ್ ಸಾಗಾಯರಾಜ್ , ಲಾರೆನ್ಸ್ ರಾಜಸ್ವಾಮಿ ವಲ್ಲಬದಾಸ್ ಸಂದನಮೇರಿ, ಜೆಸಿಂತಾ ಹಾಜರಿದ್ದರು.4