ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು ಪಡೆದುಕೊಳ್ಳಿ : ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು ಪಡೆದು ದೇಶಕ್ಕೆ ಒಳ್ಳೆಯ ಪ್ರಜೆಗಳಾಗಬೇಕು ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು ಹೇಳಿದರು. ಇಂದು ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ವೇದಿಕೆ 2025-26 ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹಾನ್ ಚೇತನಗಳ ದೂರದೃಷ್ಟಿಯೇ ಮೂಲ ಕಾರಣ. ಅವರ ಕೊಡುಗೆಯಿಂದಾಗಿ ಇಂದು ಮೈಸೂರು ಮಾದರಿ ನಗರವಾಗಿ ಬೆಳೆದಿದೆ. ಇಂದು ನಾವು ಸ್ವತಂತ್ರವಾಗಿ ವ್ಯವಹರಿಸಲು ಮತ್ತು ಮಾತನಾಡಲು ಶಕ್ತಿ ನೀಡಿದವರು ಡಾ. ಬಿ. ಆರ್. ಅಂಬೇಡ್ಕರ್. ಅವರು ನಮಗೆ ನೀಡಿದ ಬೃಹತ್ ಸಂವಿಧಾನವೇ ನಮ್ಮೆಲ್ಲರ ಶಕ್ತಿ. ಇಂದು ಸರ್ವೋಚ್ಚ ನ್ಯಾಯಾಲಯದಿಂದ ಹಿಡಿದು ಸಾಮಾನ್ಯ ಮಠಗಳವರೆಗೆ ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಕಡ್ಡಾಯವಾಗಿದೆ. ಇದು ನಮ್ಮ ಸಂವಿಧಾನಕ್ಕಿರುವ ಅಪ್ರತಿಮ ಮೌಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಶಾಸಕ ಕೆ.ಹರೀಶ್ ಗೌಡ ಮೈಸೂರು ವಿಭಾಗದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ಪ್ರತಿಭಾ ಡಿ.ಎಸ್, ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ಧನ್, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಶಿವಣ್ಣ ಉಪಸ್ಥಿತರಿದ್ದರು
ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು ಪಡೆದುಕೊಳ್ಳಿ : ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು ಪಡೆದು ದೇಶಕ್ಕೆ ಒಳ್ಳೆಯ ಪ್ರಜೆಗಳಾಗಬೇಕು ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು ಹೇಳಿದರು. ಇಂದು ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ವೇದಿಕೆ 2025-26 ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹಾನ್ ಚೇತನಗಳ ದೂರದೃಷ್ಟಿಯೇ ಮೂಲ ಕಾರಣ. ಅವರ ಕೊಡುಗೆಯಿಂದಾಗಿ ಇಂದು ಮೈಸೂರು ಮಾದರಿ ನಗರವಾಗಿ ಬೆಳೆದಿದೆ.
ಇಂದು ನಾವು ಸ್ವತಂತ್ರವಾಗಿ ವ್ಯವಹರಿಸಲು ಮತ್ತು ಮಾತನಾಡಲು ಶಕ್ತಿ ನೀಡಿದವರು ಡಾ. ಬಿ. ಆರ್. ಅಂಬೇಡ್ಕರ್. ಅವರು ನಮಗೆ ನೀಡಿದ ಬೃಹತ್ ಸಂವಿಧಾನವೇ ನಮ್ಮೆಲ್ಲರ ಶಕ್ತಿ. ಇಂದು ಸರ್ವೋಚ್ಚ ನ್ಯಾಯಾಲಯದಿಂದ ಹಿಡಿದು ಸಾಮಾನ್ಯ ಮಠಗಳವರೆಗೆ ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಕಡ್ಡಾಯವಾಗಿದೆ. ಇದು ನಮ್ಮ ಸಂವಿಧಾನಕ್ಕಿರುವ ಅಪ್ರತಿಮ ಮೌಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಶಾಸಕ ಕೆ.ಹರೀಶ್ ಗೌಡ ಮೈಸೂರು ವಿಭಾಗದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ಪ್ರತಿಭಾ ಡಿ.ಎಸ್, ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ಧನ್, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಶಿವಣ್ಣ ಉಪಸ್ಥಿತರಿದ್ದರು
- ರಾಜ್ಯದಲ್ಲಿ ತಾಪಮಾನ ಏರಿಕೆ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಸನ್ ಸ್ಟ್ರೋಕ್ ವಾರ್ಡ್ ನಿರ್ಮಾಣ ಮಾಡಲಾಗಿದೆ. ಕೆ ಆರ್ ಆಸ್ಪತ್ರೆಯ ಕಲ್ಲುವಾರ್ಡ್ ನಲ್ಲಿ 30 ಬೆಡ್ ಗಳ ವಿಸೇಷ ವಾರ್ಡ್ ಮೀಸಲಿಟ್ಟಿದ್ದು ಸನ್ ಸ್ಟ್ರೋಕ್ ನಿಂದ ಬಂದವರಿಗೆ ತುರ್ತು ಚಿಕಿತ್ಸೆ ನೀಡಲು ವೈದ್ಯರೊಂದಿಗೆ ಇಬ್ಬರು ಸಿಬ್ಬಂದಿಗಳನ್ನು ನಿಯೊಜಿಸಲಾಗಿದೆ ಎಂದು ಕೆ ಆರ್ ಆಸ್ಪತ್ರೆಯ ಅಧೀಕ್ಷಕಿ ಶೋಭಾ ತಿಳಿಸಿದರು ಅಲ್ಲದೆ ಸಾಮಾನ್ಯವಾಗಿ ಬೇಸಿಗೆಯ ತಾಪಮಾನದಲ್ಲಿ ಸುಮಾರು 6-7 ಲೀಟರ್ ನೀರು ಕುಡಿಯಬೇಕು ಸುಸ್ತು ಆಗುವಾಗ ಹೆಚ್ಚು ನೀರು ಕುಡಿಯಬೇಕು ಮತ್ತು ಆಹಾರದಲ್ಲಿ ಹಣ್ಣುಗಳು, ಬೇಯಿಸಿದ ತರಕಾರಿ, ನೀರಿನಾಂಶವಿರುವ ಪದಾರ್ಥಗಳನ್ನು ಸೇವಿಸಿಬೇಕು ಆಹಾರ ಪದಾರ್ಥಗಳಲ್ಲಿ ಉಪ್ಪು, ಖಾರ ಹಾಗೂ ಸಕ್ಕರೆ ಅಂಶಗಳು ಕಡಿಮೆ ಇದ್ದರೆ ಸೂಕ್ತ ಎಂದ ಕೆ ಆರ್ ಆಸ್ಪತ್ರೆ ಅಧೀಕ್ಷಕಿ ಶೋಭಾ ಸಲಹೆ ನೀಡಿದ್ದಾರೆ.1
- ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.1
- ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ :ಉಸ್ಮಾನ್ ಖಾನ್1
- ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.1
- ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ, ಸಾಂಬಾರ್ ತಯಾರಿಸಬಹುದು | TOMATO GOJJU RECIPE | TOMATO CURRY | RECIPES #Tomatosambar #Tomatosaaru #Tomatokurma #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to I, Yogi , will give you tips that will put your min1
- ಕನಸಿನ ಕೆಟಿಎಂ ಬೈಕ್ ಕಳ್ಳರ ಪಾಲು ಸಿಸಿಟಿವಿಯಲ್ಲಿ ಸೆರೆಯಾದ ಕ್ಷಣಾರ್ಧ ಕಳ್ಳತನ1
- *ಭಾರತ ನಲ್ಲಿ ವೈರಲ್*1
- ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಕ್ರೂರವಾಗಿ ಕೊಲೆಗೈದ ಆರೋಪದ ಮೇಲೆ ಪ್ರೇಯಸಿ ಪ್ರೇಮಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗನನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮನಕಲಕುವಂತಿದೆ. ಪ್ರೇಮಾಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ನಿಜಾಸತ್ಯ ಹೊರಬರಬೇಕಿದೆ.1
- ದೇವನಹಳ್ಳಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ. ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ. ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ. ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ. ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ. ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ. ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ. ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ . ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.3