logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನಕಪುರದ ಬಳೆಬಸಪ್ಪದೊಡ್ಡಿ ಗ್ರಾಮದಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ರೈತ ಕುಟುಂಬಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಸಾಂತ್ವನ ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಬಳೆಬಸಪ್ಪನದೊಡ್ಡಿ ಗ್ರಾಮದಲ್ಲಿ ಶನಿವಾರ ಸಂಜೆ ರೈತ ಪರಶಿವಯ್ಯ ಅವರ ಸೀಮೆ ಹೆಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ತಗುಲಿ, ದವಸ-ಧಾನ್ಯ, ಬಟ್ಟೆಬರೆ, ಎಲೆಕ್ಟ್ರಾನಿಕ್ ಉಪಕರಣಗಳು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ಮನೆಯ ಬಹುತೇಕ ವಸ್ತುಗಳು ಸುಟ್ಟುಹೋಗಿರುವ ದುರ್ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ಅವಘಡದಿಂದ ಹಾನಿಗೊಳಗಾದ ರೈತ ಪರಶಿವಯ್ಯ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿ, ಘಟನೆಯ ಸಂಪೂರ್ಣ ವಿವರವನ್ನು ಪಡೆದು ಸಾಂತ್ವನ ಹೇಳಿದರು. ಕುಟುಂಬಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಧನ ಸಹಾಯದ ಜೊತೆಗೆ ದಿನನಿತ್ಯದ ಅಗತ್ಯ ವಸ್ತುಗಳು, ಹೊದಿಕೆ ಹಾಗೂ ಆಹಾರ ಪದಾರ್ಥಗಳನ್ನು ಒದಗಿಸಿದರು. ಇದೇ ವೇಳೆ ಸ್ಥಳದಲ್ಲಿದ್ದ ಕಂದಾಯ ಇಲಾಖೆ, ಬೆಸ್ಕಾಂ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದು, ಸರ್ಕಾರದ ವತಿಯಿಂದ ದೊರೆಯಬಹುದಾದ ಅಗತ್ಯ ನೆರವು ಹಾಗೂ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಚಿನ್ನಸ್ವಾಮಿ, ಬಿಜೆಪಿ ಮುಖಂಡರಾದ ಕುಮಾರ, ಜೆಡಿಎಸ್ ಮುಖಂಡರಾದ ಕಬ್ಬಾಳೇಗೌಡ, ಕನಕಪುರ ನಗರಸಭೆ ಸದಸ್ಯರಾದ ಸ್ಟುಡಿಯೋ ಚಂದ್ರು, ಜೆಡಿಎಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ಸೇರಿದಂತೆ ಹಲವು ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

1 day ago
user_ಶಿವು.ಎಸ್ ದೊಡ್ಡಆಲಹಳ್ಳಿ
ಶಿವು.ಎಸ್ ದೊಡ್ಡಆಲಹಳ್ಳಿ
Local News Reporter ಕನಕಪುರ, ರಾಮನಗರ, ಕರ್ನಾಟಕ•
1 day ago

ಕನಕಪುರದ ಬಳೆಬಸಪ್ಪದೊಡ್ಡಿ ಗ್ರಾಮದಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ರೈತ ಕುಟುಂಬಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಸಾಂತ್ವನ ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಬಳೆಬಸಪ್ಪನದೊಡ್ಡಿ ಗ್ರಾಮದಲ್ಲಿ ಶನಿವಾರ ಸಂಜೆ ರೈತ ಪರಶಿವಯ್ಯ ಅವರ ಸೀಮೆ ಹೆಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ತಗುಲಿ, ದವಸ-ಧಾನ್ಯ, ಬಟ್ಟೆಬರೆ, ಎಲೆಕ್ಟ್ರಾನಿಕ್ ಉಪಕರಣಗಳು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ಮನೆಯ ಬಹುತೇಕ ವಸ್ತುಗಳು ಸುಟ್ಟುಹೋಗಿರುವ ದುರ್ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ಅವಘಡದಿಂದ ಹಾನಿಗೊಳಗಾದ ರೈತ ಪರಶಿವಯ್ಯ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿ, ಘಟನೆಯ ಸಂಪೂರ್ಣ ವಿವರವನ್ನು ಪಡೆದು ಸಾಂತ್ವನ ಹೇಳಿದರು. ಕುಟುಂಬಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಧನ ಸಹಾಯದ ಜೊತೆಗೆ ದಿನನಿತ್ಯದ ಅಗತ್ಯ ವಸ್ತುಗಳು, ಹೊದಿಕೆ ಹಾಗೂ ಆಹಾರ ಪದಾರ್ಥಗಳನ್ನು ಒದಗಿಸಿದರು. ಇದೇ ವೇಳೆ ಸ್ಥಳದಲ್ಲಿದ್ದ ಕಂದಾಯ ಇಲಾಖೆ, ಬೆಸ್ಕಾಂ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದು, ಸರ್ಕಾರದ ವತಿಯಿಂದ ದೊರೆಯಬಹುದಾದ ಅಗತ್ಯ ನೆರವು ಹಾಗೂ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಚಿನ್ನಸ್ವಾಮಿ, ಬಿಜೆಪಿ ಮುಖಂಡರಾದ ಕುಮಾರ, ಜೆಡಿಎಸ್ ಮುಖಂಡರಾದ ಕಬ್ಬಾಳೇಗೌಡ, ಕನಕಪುರ ನಗರಸಭೆ ಸದಸ್ಯರಾದ ಸ್ಟುಡಿಯೋ ಚಂದ್ರು, ಜೆಡಿಎಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ಸೇರಿದಂತೆ ಹಲವು ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕೆಎಂಡಬ್ಲ್ಯೂಎ ವಿದ್ಯಾನಿಕೇತನದಲ್ಲಿ ನೂತನ ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ ಉದ್ಘಾಟನೆ ಬೆಂಗಳೂರು: ಮಹಾಲಕ್ಷ್ಮೀಪುರಂನ ಕೆಎಂಡಬ್ಲ್ಯೂಎ ವಿದ್ಯಾನಿಕೇತನದಲ್ಲಿ ನೂತನವಾಗಿ ಸ್ಥಾಪಿಸಿರುವ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯವನ್ನು ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಉದ್ಘಾಟಿಸಿದರು. ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಡಾ. ಅಶ್ವತ್ಥನಾರಾಯಣ ಅವರು, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ, ವಿಜ್ಞಾನ ಮತ್ತು ಜ್ಞಾನ ಸಂಪನ್ಮೂಲಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ತಾಂತ್ರಿಕ ಹಾಗೂ ವೈಜ್ಞಾನಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕೆಎಂಡಬ್ಲ್ಯೂಎ ವಿದ್ಯಾನಿಕೇತನವು ತನ್ನ ಶೈಕ್ಷಣಿಕ ಪ್ರಗತಿಗೆ ದೀಕ್ಷಾ–ವೇದಾಂತು ಸಂಸ್ಥೆಯನ್ನು ಶೈಕ್ಷಣಿಕ ಪಾಲುದಾರ ಹಾಗೂ ಮಾರ್ಗದರ್ಶಕ ಶಕ್ತಿಯಾಗಿ ಪರಿಗಣಿಸಿದೆ. ದೀಕ್ಷಾ–ವೇದಾಂತು ಮುಖ್ಯಸ್ಥ ಡಾ. ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ಬೋರ್ಡ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಸೇರಿದಂತೆ ಗಮನಾರ್ಹ ಫಲಿತಾಂಶಗಳನ್ನು ದಾಖಲಿಸಿದೆ ಎಂದು ಸಂಸ್ಥೆ ತಿಳಿಸಿದೆ. ನೂತನ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯವು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸುವುದರ ಜತೆಗೆ, ಪ್ರಾಯೋಗಿಕ ಜ್ಞಾನ ಮತ್ತು ಸಂಶೋಧನಾ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೆಎಂಡಬ್ಲ್ಯೂಎ ವಿದ್ಯಾನಿಕೇತನದ ಗೌರವ ಅಧ್ಯಕ್ಷರಾದ ಮನೋಜ್ ಕುಮಾರ್, ಅಧ್ಯಕ್ಷ ಸುನಿಲ್ ಎಸ್., ಪ್ರಧಾನ ಕಾರ್ಯದರ್ಶಿ ಶ್ರೀಧರ್ ಬಿ, ಖಜಾಂಚಿ ಗಣೇಶ್ ರಾವ್ ಕೇಸರ್ಕರ್, ವ್ಯವಸ್ಥಾಪಕ ಕಾರ್ಯದರ್ಶಿ ಸುರೇಶ್ ರಾವ್, ಮೇಘಲ ವೀರೇಶ್, ಕೃಷ್ಣ, ವೀಣಾ ಮೋಹನ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
    4
    ಕೆಎಂಡಬ್ಲ್ಯೂಎ ವಿದ್ಯಾನಿಕೇತನದಲ್ಲಿ ನೂತನ ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ ಉದ್ಘಾಟನೆ

ಬೆಂಗಳೂರು: ಮಹಾಲಕ್ಷ್ಮೀಪುರಂನ ಕೆಎಂಡಬ್ಲ್ಯೂಎ ವಿದ್ಯಾನಿಕೇತನದಲ್ಲಿ ನೂತನವಾಗಿ ಸ್ಥಾಪಿಸಿರುವ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯವನ್ನು ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಉದ್ಘಾಟಿಸಿದರು.
ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಡಾ. ಅಶ್ವತ್ಥನಾರಾಯಣ ಅವರು, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ, ವಿಜ್ಞಾನ ಮತ್ತು ಜ್ಞಾನ ಸಂಪನ್ಮೂಲಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ತಾಂತ್ರಿಕ ಹಾಗೂ ವೈಜ್ಞಾನಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಕೆಎಂಡಬ್ಲ್ಯೂಎ ವಿದ್ಯಾನಿಕೇತನವು ತನ್ನ ಶೈಕ್ಷಣಿಕ ಪ್ರಗತಿಗೆ ದೀಕ್ಷಾ–ವೇದಾಂತು ಸಂಸ್ಥೆಯನ್ನು ಶೈಕ್ಷಣಿಕ ಪಾಲುದಾರ ಹಾಗೂ ಮಾರ್ಗದರ್ಶಕ ಶಕ್ತಿಯಾಗಿ ಪರಿಗಣಿಸಿದೆ. ದೀಕ್ಷಾ–ವೇದಾಂತು ಮುಖ್ಯಸ್ಥ ಡಾ. ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ಬೋರ್ಡ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಸೇರಿದಂತೆ ಗಮನಾರ್ಹ ಫಲಿತಾಂಶಗಳನ್ನು ದಾಖಲಿಸಿದೆ ಎಂದು ಸಂಸ್ಥೆ ತಿಳಿಸಿದೆ.
ನೂತನ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಗ್ರಂಥಾಲಯವು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸುವುದರ ಜತೆಗೆ, ಪ್ರಾಯೋಗಿಕ ಜ್ಞಾನ ಮತ್ತು ಸಂಶೋಧನಾ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕೆಎಂಡಬ್ಲ್ಯೂಎ ವಿದ್ಯಾನಿಕೇತನದ ಗೌರವ ಅಧ್ಯಕ್ಷರಾದ ಮನೋಜ್ ಕುಮಾರ್, ಅಧ್ಯಕ್ಷ ಸುನಿಲ್ ಎಸ್., ಪ್ರಧಾನ ಕಾರ್ಯದರ್ಶಿ ಶ್ರೀಧರ್ ಬಿ, ಖಜಾಂಚಿ ಗಣೇಶ್ ರಾವ್ ಕೇಸರ್ಕರ್, ವ್ಯವಸ್ಥಾಪಕ ಕಾರ್ಯದರ್ಶಿ ಸುರೇಶ್ ರಾವ್, ಮೇಘಲ ವೀರೇಶ್, ಕೃಷ್ಣ, ವೀಣಾ ಮೋಹನ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
    user_Nataraj B P
    Nataraj B P
    ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11 ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. ‌ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ‌ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.
    1
    ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ
ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11  ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ    ಅಡಚಣೆ ಉಂಟಾಗಲಿದೆ. ‌ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ‌ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    3 hrs ago
  • ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ? ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?
    1
    ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ?
ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?
ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ?
ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    20 min ago
  • ನೀರು ಶುದ್ಧೀಕರಣ ಘಟಕ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಮಂಡ್ಯ-ಮಂಡ್ಯ ಮತ್ತು ಮದ್ದೂರು ತಾಲ್ಲೂಕಿನ ಜನವಸತಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಕುಮಾರ್ ಪರಿಶೀಲಿಸಿದರು. ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನೀರು ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಘಟಕಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಕಾಮಗಾರಿಯ ಪ್ರಸ್ತುತ ಹಂತ, ಪೂರ್ಣಗೊಳ್ಳಬೇಕಿರುವ ಕಾಮಗಾರಿಗಳು ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗದಂತೆ ಅಗತ್ಯ ಕ್ರಮವಹಿಸಿ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆ ಸಂಸ್ಥೆಯ ಸಿಬ್ಬಂದಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್ ಎನ್.ಜಿ., ಸಹಾಯಕ ಅಭಿಯಂತರ ಶ್ರೀಧರ್, ಗುತ್ತಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
    1
    ನೀರು ಶುದ್ಧೀಕರಣ ಘಟಕ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ
ಮಂಡ್ಯ-ಮಂಡ್ಯ ಮತ್ತು ಮದ್ದೂರು ತಾಲ್ಲೂಕಿನ ಜನವಸತಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಕುಮಾರ್ ಪರಿಶೀಲಿಸಿದರು.
ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ  ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನೀರು ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಘಟಕಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.
ಕಾಮಗಾರಿಯ ಪ್ರಸ್ತುತ ಹಂತ, ಪೂರ್ಣಗೊಳ್ಳಬೇಕಿರುವ ಕಾಮಗಾರಿಗಳು ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗದಂತೆ ಅಗತ್ಯ ಕ್ರಮವಹಿಸಿ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆ ಸಂಸ್ಥೆಯ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್ ಎನ್.ಜಿ., ಸಹಾಯಕ ಅಭಿಯಂತರ ಶ್ರೀಧರ್, ಗುತ್ತಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    24 min ago
  • ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,, ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ ಅಮದಜ್ ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    4
    ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,,
ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ  ಅಮದಜ್  ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    user_Suri suresh
    Suri suresh
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪ:ಸುಳ್ಳು ಅರ್ಜಿಗಳನ್ನ ಕೊಡಿಸಿರುವ ವ್ಯಕ್ತಿಗಳಿಗೆ ದಲಿತ ನಾಯಕ ನಂದಿಗುಂದ ವೆಂಕಟೇಶ ಎಚ್ಚರಿಕೆ ಬೆಂಗಳೂರು:ಜಮೀನು ಕೊಡದ ಹಿನ್ನಲೆ ದಲಿತ ರೈತರ ಜಮೀನಿನ ಮೇಲೆ ಭೂ ಮಾಫೀಯ ಕಣ್ಣು ಬಿದ್ದಿದೆ.ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪವನ್ನ ದಲಿತ ನಾಯಕ ನಂದಿಗುಂದ ವೆಂಕಟೇಶ್ ಮಾಡಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನ ಗೂಳ್ಯನಂದಿಗುಂದ ಗ್ರಾಮದ ದಲಿತ ರೈತರಿಗೆ ಸುಳ್ಳು ಅರ್ಜಿಗಳಿಂದ ಧಮ್ಕಿ.? ಹಾಕಲಾಗಿದೆ.ಗ್ರಾಮದ ಸರ್ವೇ ನಂಬರ್ 28 ಮತ್ತು 30ರ ಸುಮಾರು ಎಂಟು ಎಕರೆ ಜಮೀನಿನ ಮೇಲೆ ಕಣ್ಣು ಬಿದ್ದಿದ್ದು,ಜಮೀನು ಕಬಳಿಸಲು ನಮ್ಮ ಸಮುದಾಯದ ನಾಯಕರನ್ನ ಅರ್ಜಿ ಕೊಡಿಸಿದ್ದಾರೆ .ನಮ್ಮ ಜಮೀನಿನ ಸುತ್ತಲೂ ದಾಸರಥಿ ಎಂಬ ಬಿಲ್ಡರ್ ಜಮೀನುಗಳು ಇದ್ದಾವೆ,ನಾವು ದಾಸರಥಿ ಅವರಿಗೆ ಜಮೀನು ಕ್ರಯ ಮಾಡಲು ಒಪ್ಪಲಿಲ್ಲ,ಆಗ ನಮ್ಮ ಜಮೀನಿನ್ನು ಹೇಗಾದ್ರು ಪಡೆಯಬೇಕು ಎಂದು ಸುಳ್ಳು ಅರ್ಜಿಗಳನ್ನ ಕೊಡ್ತಿದ್ದಾರೆ,ನಾವು ನಮ್ಮ ತಂದೆಯವರ ಕಾಲದಿಂದಲೂ ಶಾಂತಿಯುತ ಸ್ವಾಧೀನದಲ್ಲಿ ಇದ್ದೇವೆ,ಈಗ ನಮ್ಮಿಂದ ಜಮೀನನ್ನು ಕಬಳಿಸಲು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ,ಸುತ್ತಮುತ್ತಲಿನ ಜಮೀನುಗಳಿಗೆ ರೈತರು ಹೋಗದಂತೆ ತಡೆಗೋಡೆ ನಿರ್ಮಿಸಿದ್ದಾರೆ,ಇದು ಈಗೆ ಮುಂದುವರೆದರೆ ಪ್ರತಿಭಟನೆ ಮಾಡಲಾವುದು ಎಂದು ನಂದಿಗುಂದ ವೆಂಕಟೇಶ್ ಎಚ್ಚರಿಕೆ ಕೊಟ್ಟಿದ್ದಾರೆ.
    1
    ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪ:ಸುಳ್ಳು ಅರ್ಜಿಗಳನ್ನ ಕೊಡಿಸಿರುವ ವ್ಯಕ್ತಿಗಳಿಗೆ ದಲಿತ ನಾಯಕ ನಂದಿಗುಂದ ವೆಂಕಟೇಶ ಎಚ್ಚರಿಕೆ
ಬೆಂಗಳೂರು:ಜಮೀನು ಕೊಡದ ಹಿನ್ನಲೆ ದಲಿತ ರೈತರ ಜಮೀನಿನ ಮೇಲೆ ಭೂ ಮಾಫೀಯ ಕಣ್ಣು ಬಿದ್ದಿದೆ.ದಲಿತರ ಜಮೀನು ಕಬಳಿಸಲು ಸುಳ್ಳು ಅರ್ಜಿಗಳಿಂದ ಎದುರಿಸುತ್ತಿರುವ ಆರೋಪವನ್ನ  ದಲಿತ ನಾಯಕ ನಂದಿಗುಂದ ವೆಂಕಟೇಶ್ ಮಾಡಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನ ಗೂಳ್ಯನಂದಿಗುಂದ ಗ್ರಾಮದ ದಲಿತ ರೈತರಿಗೆ ಸುಳ್ಳು ಅರ್ಜಿಗಳಿಂದ ಧಮ್ಕಿ.? ಹಾಕಲಾಗಿದೆ.ಗ್ರಾಮದ ಸರ್ವೇ ನಂಬರ್ 28 ಮತ್ತು 30ರ ಸುಮಾರು ಎಂಟು ಎಕರೆ ಜಮೀನಿನ ಮೇಲೆ ಕಣ್ಣು ಬಿದ್ದಿದ್ದು,ಜಮೀನು ಕಬಳಿಸಲು ನಮ್ಮ ಸಮುದಾಯದ ನಾಯಕರನ್ನ ಅರ್ಜಿ ಕೊಡಿಸಿದ್ದಾರೆ .ನಮ್ಮ ಜಮೀನಿನ ಸುತ್ತಲೂ ದಾಸರಥಿ ಎಂಬ ಬಿಲ್ಡರ್ ಜಮೀನುಗಳು ಇದ್ದಾವೆ,ನಾವು ದಾಸರಥಿ ಅವರಿಗೆ ಜಮೀನು ಕ್ರಯ ಮಾಡಲು ಒಪ್ಪಲಿಲ್ಲ,ಆಗ ನಮ್ಮ ಜಮೀನಿನ್ನು ಹೇಗಾದ್ರು ಪಡೆಯಬೇಕು ಎಂದು ಸುಳ್ಳು ಅರ್ಜಿಗಳನ್ನ ಕೊಡ್ತಿದ್ದಾರೆ,ನಾವು ನಮ್ಮ ತಂದೆಯವರ ಕಾಲದಿಂದಲೂ ಶಾಂತಿಯುತ ಸ್ವಾಧೀನದಲ್ಲಿ ಇದ್ದೇವೆ,ಈಗ ನಮ್ಮಿಂದ ಜಮೀನನ್ನು ಕಬಳಿಸಲು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ,ಸುತ್ತಮುತ್ತಲಿನ ಜಮೀನುಗಳಿಗೆ ರೈತರು ಹೋಗದಂತೆ ತಡೆಗೋಡೆ ನಿರ್ಮಿಸಿದ್ದಾರೆ,ಇದು ಈಗೆ ಮುಂದುವರೆದರೆ ಪ್ರತಿಭಟನೆ ಮಾಡಲಾವುದು ಎಂದು ನಂದಿಗುಂದ ವೆಂಕಟೇಶ್ ಎಚ್ಚರಿಕೆ ಕೊಟ್ಟಿದ್ದಾರೆ.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    1
    ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.

ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.
ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    8 hrs ago
  • ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.
    1
    ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ  ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು  ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ  ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.