logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಂಟಿ ಬಲೆಯಲ್ಲಿ ಬಿದ್ದ ಕಮಲಾಕರ ಭಟ್ರಿಗಿಲ್ಲ ಬೇಲ್! ಜೈಲಲ್ಲೇ ಮುದ್ದೆ ಮುರಿಯುತ್ತಿರುವ ಖ್ಯಾತ ಜ್ಯೋತಿಷಿ! ಆರೇ ಆರು ತಿಂಗಳ ಹಿಂದೆ ಇದೇ ಕಮಲಾಕರ ಭಟ್ ವೇದಿಕೆ ಏರಿದ್ರೆ ಸಾಕು, ಸಾವಿರಾರು ಜನ 'ಇವರ ಮಾತೇ ದೈವವಾಕ್ಯ' ಅಂತ ಕೈಮುಗಿದು ಕೇಳ್ತಿದ್ರು. ಅಂಗೈ ನೋಡಿ ಆಕಾಶ ತೋರಿಸ್ತಿದ್ದ ಈ 'ಅಡಿಕೆ ಭಟ್ರ' ಮಾತಿಗೆ ದೊಡ್ಡ ಅಭಿಮಾನಿ ಬಳಗವೇ ಇತ್ತು. ಆದರೆ, ಯಾವಾಗ ಈ ಜ್ಯೋತಿಷಿಗೆ ಆಂಟಿ ವ್ಯಾಮೋಹ ಶುರುವಾಯ್ತೋ... ಜ್ಯೋತಿಷ್ಯ ಶಾಸ್ತ್ರವೂ ಮರೆತು ಹೋಯ್ತು, ಭವಿಷ್ಯವೂ ಕತ್ತಲಾಯ್ತು! ಕೊನೆಗೆ ಇದೇ ಕುಂಟೆಬಿಲ್ಲೆ ಆಟ ಕಮಲಾಕರ ಭಟ್ರನ್ನು ಜೈಲು ಕಂಬಿ ಹಿಂದೆ ತಳ್ಳಿದೆ. ಜಾಮೀನು ಅರ್ಜಿ ಖಡಾಖಂಡಿತವಾಗಿ ರಿಜೆಕ್ಟ್! ಫೆಬ್ರವರಿ 3ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಮಲಾಕರ ಭಟ್‌ ಹಾಗೂ ಆತನ ಪ್ರೇಯಸಿಗೆ ಈಗ ದೊಡ್ಡ ಆಘಾತ ಎದುರಾಗಿದೆ. ಕೊಲೆಯಾಗಿ ಆರು ತಿಂಗಳ ಬಳಿಕ "ನಮಗೆ ಜಾಮೀನು ಕೊಡಿ" ಅಂತ ಆರೋಪಿಗಳು ಕೋರ್ಟ್‌ ಮೆಟ್ಟಿಲೇರಿದ್ರು. ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಾಲಯ ಭಟ್ರ ಜಾಮೀನು ಅರ್ಜಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ! 'ಸುಚಿತ್ರಾ ನಂಬಿ ಕೆಟ್ಟೆ' ಅಂತ ಕಣ್ಣೀರಿಡ್ತಿರೋ ಭಟ್ರು! ಈ ಭೀಕರ ಕೊಲೆಯ ನಿಜವಾದ ಸೂತ್ರಧಾರಿ ಬೇರಾರೂ ಅಲ್ಲ, ಕೊಲೆಯಾದ ವಸಂತ್ ನಾಯ್ಕ್ ಹೆಂಡತಿ ಸುಚಿತ್ರಾ ನಾಯ್ಕ್. ಭಟ್ಟರ ತೋಳತೆಕ್ಕೆಯಲ್ಲಿ ಬಂಧಿಯಾಗಿದ್ದ ಈಕೆ, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಲಾಗಿದ್ದ ಗಂಡನ ಕಥೆಯನ್ನೇ ಮುಗಿಸಲು ಸ್ಕೆಚ್ ಹಾಕಿದ್ಳು. ಆಂಟಿಯ ಅಂತರಂಗದ ಅಸೆಗೆ ಬಿದ್ದು, ಕೊಲೆ ಕೇಸ್‌ನಲ್ಲಿ ಲಾಕ್ ಆಗಿರೋ ಕಮಲಾಕರ ಭಟ್ರಿಗೆ ಈಗ ಜಾಮೀನೂ ಸಿಗದೇ ಜೈಲೇ ಗತಿಯಾಗಿದೆ. ಕೋರ್ಟ್‌ನಲ್ಲಿ ಬೇಲ್ ರಿಜೆಕ್ಟ್ ಆಗ್ತಿದ್ದಂತೆಯೇ, "ಅಯ್ಯೋ ಈ ಸುಚಿತ್ರಾನ ನಂಬಿ ನನ್ನ ಬಂಗಾರದಂತಾ ಬದುಕನ್ನ ಹಾಳು ಮಾಡ್ಕೊಂಡ್ನಲ್ಲಾ" ಅಂತ ಭಟ್ರು ಕಣ್ಣೀರಿಡುತ್ತಿದ್ದಾರಂತೆ. ಒಟ್ಟಿನಲ್ಲಿ ಬೇರೆಯವರ ಜಾತಕ ನೋಡಿ ಭವಿಷ್ಯ ಹೇಳ್ತಿದ್ದ ಜ್ಯೋತಿಷಿಗೆ, ತನ್ನ ಜಾತಕದಲ್ಲೇ ಜೈಲು ಶಿಕ್ಷೆ ಬರೆದಿದೆ ಅನ್ನೋದು ತಿಳಿಯದೇ ಹೋದದ್ದು ದೊಡ್ಡ ವಿಪರ್ಯಾಸ. 'ಮಾಡಿದ್ದುಣ್ಣೋ ಮಹಾರಾಯ' ಅನ್ನೋ ಹಾಗೆ, ಮೋಹದ ಬಲೆಗೆ ಬಿದ್ದ ಅಡಿಕೆ ಭಟ್ರು ಈಗ ನಿತ್ಯ ಜೈಲಿನಲ್ಲಿ ಮುದ್ದೆ ಮುರಿಯುವಂತಾಗಿದೆ!

2 hrs ago
user_Nizamuddin
Nizamuddin
Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
2 hrs ago
41ce7bb1-766a-49e9-abfb-7ff40f405cb3

ಆಂಟಿ ಬಲೆಯಲ್ಲಿ ಬಿದ್ದ ಕಮಲಾಕರ ಭಟ್ರಿಗಿಲ್ಲ ಬೇಲ್! ಜೈಲಲ್ಲೇ ಮುದ್ದೆ ಮುರಿಯುತ್ತಿರುವ ಖ್ಯಾತ ಜ್ಯೋತಿಷಿ! ಆರೇ ಆರು ತಿಂಗಳ ಹಿಂದೆ ಇದೇ ಕಮಲಾಕರ ಭಟ್ ವೇದಿಕೆ ಏರಿದ್ರೆ ಸಾಕು, ಸಾವಿರಾರು ಜನ 'ಇವರ ಮಾತೇ ದೈವವಾಕ್ಯ' ಅಂತ ಕೈಮುಗಿದು ಕೇಳ್ತಿದ್ರು. ಅಂಗೈ ನೋಡಿ ಆಕಾಶ ತೋರಿಸ್ತಿದ್ದ ಈ 'ಅಡಿಕೆ ಭಟ್ರ' ಮಾತಿಗೆ ದೊಡ್ಡ ಅಭಿಮಾನಿ ಬಳಗವೇ ಇತ್ತು. ಆದರೆ, ಯಾವಾಗ ಈ ಜ್ಯೋತಿಷಿಗೆ ಆಂಟಿ ವ್ಯಾಮೋಹ ಶುರುವಾಯ್ತೋ... ಜ್ಯೋತಿಷ್ಯ ಶಾಸ್ತ್ರವೂ ಮರೆತು ಹೋಯ್ತು, ಭವಿಷ್ಯವೂ ಕತ್ತಲಾಯ್ತು! ಕೊನೆಗೆ ಇದೇ ಕುಂಟೆಬಿಲ್ಲೆ ಆಟ ಕಮಲಾಕರ ಭಟ್ರನ್ನು ಜೈಲು ಕಂಬಿ ಹಿಂದೆ ತಳ್ಳಿದೆ. ಜಾಮೀನು ಅರ್ಜಿ ಖಡಾಖಂಡಿತವಾಗಿ ರಿಜೆಕ್ಟ್! ಫೆಬ್ರವರಿ 3ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಮಲಾಕರ ಭಟ್‌ ಹಾಗೂ ಆತನ ಪ್ರೇಯಸಿಗೆ ಈಗ ದೊಡ್ಡ ಆಘಾತ ಎದುರಾಗಿದೆ. ಕೊಲೆಯಾಗಿ ಆರು ತಿಂಗಳ ಬಳಿಕ "ನಮಗೆ ಜಾಮೀನು ಕೊಡಿ" ಅಂತ ಆರೋಪಿಗಳು ಕೋರ್ಟ್‌ ಮೆಟ್ಟಿಲೇರಿದ್ರು. ಒಂದನೇ

03f91c57-d626-42d4-8d77-e1d2639ff1d1

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಾಲಯ ಭಟ್ರ ಜಾಮೀನು ಅರ್ಜಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ! 'ಸುಚಿತ್ರಾ ನಂಬಿ ಕೆಟ್ಟೆ' ಅಂತ ಕಣ್ಣೀರಿಡ್ತಿರೋ ಭಟ್ರು! ಈ ಭೀಕರ ಕೊಲೆಯ ನಿಜವಾದ ಸೂತ್ರಧಾರಿ ಬೇರಾರೂ ಅಲ್ಲ, ಕೊಲೆಯಾದ ವಸಂತ್ ನಾಯ್ಕ್ ಹೆಂಡತಿ ಸುಚಿತ್ರಾ ನಾಯ್ಕ್. ಭಟ್ಟರ ತೋಳತೆಕ್ಕೆಯಲ್ಲಿ ಬಂಧಿಯಾಗಿದ್ದ ಈಕೆ, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಲಾಗಿದ್ದ ಗಂಡನ ಕಥೆಯನ್ನೇ ಮುಗಿಸಲು ಸ್ಕೆಚ್ ಹಾಕಿದ್ಳು. ಆಂಟಿಯ ಅಂತರಂಗದ ಅಸೆಗೆ ಬಿದ್ದು, ಕೊಲೆ ಕೇಸ್‌ನಲ್ಲಿ ಲಾಕ್ ಆಗಿರೋ ಕಮಲಾಕರ ಭಟ್ರಿಗೆ ಈಗ ಜಾಮೀನೂ ಸಿಗದೇ ಜೈಲೇ ಗತಿಯಾಗಿದೆ. ಕೋರ್ಟ್‌ನಲ್ಲಿ ಬೇಲ್ ರಿಜೆಕ್ಟ್ ಆಗ್ತಿದ್ದಂತೆಯೇ, "ಅಯ್ಯೋ ಈ ಸುಚಿತ್ರಾನ ನಂಬಿ ನನ್ನ ಬಂಗಾರದಂತಾ ಬದುಕನ್ನ ಹಾಳು ಮಾಡ್ಕೊಂಡ್ನಲ್ಲಾ" ಅಂತ ಭಟ್ರು ಕಣ್ಣೀರಿಡುತ್ತಿದ್ದಾರಂತೆ. ಒಟ್ಟಿನಲ್ಲಿ ಬೇರೆಯವರ ಜಾತಕ ನೋಡಿ ಭವಿಷ್ಯ ಹೇಳ್ತಿದ್ದ ಜ್ಯೋತಿಷಿಗೆ, ತನ್ನ ಜಾತಕದಲ್ಲೇ ಜೈಲು ಶಿಕ್ಷೆ ಬರೆದಿದೆ ಅನ್ನೋದು ತಿಳಿಯದೇ ಹೋದದ್ದು ದೊಡ್ಡ ವಿಪರ್ಯಾಸ. 'ಮಾಡಿದ್ದುಣ್ಣೋ ಮಹಾರಾಯ' ಅನ್ನೋ ಹಾಗೆ, ಮೋಹದ ಬಲೆಗೆ ಬಿದ್ದ ಅಡಿಕೆ ಭಟ್ರು ಈಗ ನಿತ್ಯ ಜೈಲಿನಲ್ಲಿ ಮುದ್ದೆ ಮುರಿಯುವಂತಾಗಿದೆ!

More news from ಕರ್ನಾಟಕ and nearby areas
  • ಕಲ್ಯಾಣ ವಾರ್ತೆ - "ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಮುದ್ನಾಳ ಮನವಿ" 'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ' ಕಲ್ಯಾಣ ವಾರ್ತೆ -ಯಾದಗಿರಿ ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು ಭೇಟಿ ನೀಡಿದರು. ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.
    1
    ಕಲ್ಯಾಣ ವಾರ್ತೆ -
"ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ  ಸಾರ್ವಜನಿಕರಿಗೆ ಮುದ್ನಾಳ ಮನವಿ"
'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ'
ಕಲ್ಯಾಣ ವಾರ್ತೆ -ಯಾದಗಿರಿ
ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ  ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ  ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು  ಭೇಟಿ ನೀಡಿದರು.
ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    15 hrs ago
  • ಯಾದಗಿರಿ || ನಾರಾಯಣಪುರ ಜಲಾಶಯದಿಂದ 24 ಗೆಟ್ ಓಪನ್ ಕೃಷ್ಣಾ ನದಿಗೆ ನೀರು
    1
    ಯಾದಗಿರಿ || ನಾರಾಯಣಪುರ ಜಲಾಶಯದಿಂದ 24 ಗೆಟ್ ಓಪನ್ ಕೃಷ್ಣಾ ನದಿಗೆ ನೀರು
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    22 hrs ago
  • ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    4
    ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು.
ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ
ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ
ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು.
ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು.
ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಬಾಕ್ಸ್: ೦೧
ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು
ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ಕೋಟ್: ೦೧
ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ
"ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ.
– – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    10 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    11 hrs ago
  • ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews
    1
    ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ
🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ
⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ
🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ
ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ.
ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ.
🏷️
#KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews
    user_AsnNews24Kannada
    AsnNews24Kannada
    Local News Reporter Shorapur, Yadgir•
    21 hrs ago
  • ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು. ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು. ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.
    1
    ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ
ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು.
ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    13 hrs ago
  • ಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಭೇಟಿ- ಭದ್ರತಾ ಕುರಿತು ತಪಾಸಣೆ ಇತ್ತೀಚಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಪ್ರಕರಣದ ಕುರಿತು ಈಗಾಗಲೇ ಇಬ್ಬರು ಕೈದಿಗಳನ್ನು ಬಂಧಿಸಿರುವ ಕಲಬುರ್ಗಿ ಬೀದರ್ ಪೊಲೀಸರು ಇನ್ನೊಬ್ಬ ಕೈದಿ ಪರಾರಿಯಾಗಿ 15 ದಿನ ಕಳೆದರು ಪತ್ತೆಯಾಗಿಲ್ಲ. ಇಂದು ಮುಂಜಾನೆ ಡಿಸಿಪಿ ಅಲೋಕ್ ಕುಮಾರ್ ಬೇಟಿ ನೀಡಿದ್ದು, ಕೇಂದ್ರ ಕಾರಾಗೃಹದ ಒಳಗಡೆ ತೆರಳುವ ಮುನ್ನ ಗೌರವ ವಂದನೆ ಸ್ವೀಕರಿಸಿದರು.ಜೈಲಿನ ಒಳಗೆ ಅಧಿಕಾರಿಗಳ ಸಭೆ ನಡೆಸಲಿರುವ ಡಿಸಿಪಿ ಅಲೋಕ್ ಕುಮಾರ್ ಅವರು‌ ಸಭೆಯ ಬಳಿಕ ಜೈಲಿನ ಆಡಳಿತ ಮತ್ತು ಭದ್ರತೆ ಕುರಿತು ತಪಾಸಣೆ ಮಾಡಲಿದ್ದಾರೆ
    1
    ಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಭೇಟಿ- ಭದ್ರತಾ ಕುರಿತು ತಪಾಸಣೆ
ಇತ್ತೀಚಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಪ್ರಕರಣದ ಕುರಿತು ಈಗಾಗಲೇ ಇಬ್ಬರು ಕೈದಿಗಳನ್ನು ಬಂಧಿಸಿರುವ ಕಲಬುರ್ಗಿ ಬೀದರ್ ಪೊಲೀಸರು ಇನ್ನೊಬ್ಬ ಕೈದಿ ಪರಾರಿಯಾಗಿ 15 ದಿನ ಕಳೆದರು ಪತ್ತೆಯಾಗಿಲ್ಲ. ಇಂದು ಮುಂಜಾನೆ ಡಿಸಿಪಿ ಅಲೋಕ್ ಕುಮಾರ್ ಬೇಟಿ ನೀಡಿದ್ದು, ಕೇಂದ್ರ ಕಾರಾಗೃಹದ ಒಳಗಡೆ ತೆರಳುವ ಮುನ್ನ ಗೌರವ ವಂದನೆ ಸ್ವೀಕರಿಸಿದರು.ಜೈಲಿನ ಒಳಗೆ ಅಧಿಕಾರಿಗಳ ಸಭೆ ನಡೆಸಲಿರುವ ಡಿಸಿಪಿ ಅಲೋಕ್ ಕುಮಾರ್ ಅವರು‌ ಸಭೆಯ ಬಳಿಕ ಜೈಲಿನ ಆಡಳಿತ ಮತ್ತು ಭದ್ರತೆ ಕುರಿತು ತಪಾಸಣೆ ಮಾಡಲಿದ್ದಾರೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    19 hrs ago
  • ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು. ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು. ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು. ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು. ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    3
    ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು.  
ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ
ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ
ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು.
ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು.
ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು.
ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.