logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆನೇಕಲ್ ತಾಲೂಕಿನ ಸರ್ಜಾಪುರ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಆಟದ ಮೈದಾನದಲ್ಲಿ ಸರ್ಜಾಪುರ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಸಮಿತಿಯು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಗೆ ಗಣ್ಯರು ಪುಷ್ಪ ನಮನ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೋಂಫುರ ಪುನೀತ್ ರೆಡ್ಡಿ ಮತ್ತು ಆನೇಕಲ್ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸರ್ಜಾಪುರ ಅರವಿಂದ್ ರೆಡ್ಡಿ ಅವರು ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಯೋಗಾಭ್ಯಾಸದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು. ಎಸ್ ಎಸ್ ವೈ ನ ಹರೀಶ್ ಅವರು ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ದಿನಾಚರಣೆಯಲ್ಲಿ ಕ್ರೀಡಾ ಭಾರತೀಯ ಚಂದ್ರಶೇಖರ್ ಜಾಗೀರ್, ವೈದ್ಯರಾದ ಡಾ.ಯೋಗಾನಂದ, ಸಮಾಜ ಸೇವಕರಾದ ಟಿ.ವಿ. ಬಾಬು, ಬಿಜೆಪಿ ಮುಖಂಡರಾದ ಮುರಳಿಕೃಷ್ಣ, ಶ್ಯಾಮಣ್ಣರೆಡ್ಡಿ, ಗೋಪಾಲ್ ರೆಡ್ಡಿ, ನಾರಾಯಣಸ್ವಾಮಿ, ಗಣೇಶ್, ಆನೇಕಲ್ ತಾಲೂಕು ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಕೇಶುವ್, ನಿರ್ವಹಣ ಯೋಗ ಶಾಲೆಯ ಗುರುಗಳಾದ ಸ್ವಾತಿ, ಶಕ್ತಿ, ರೂಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸೋಂಪುರ ಪುನೀತ್ ರೆಡ್ಡಿ ಮತ್ತು ಸರ್ಜಾಪುರ ಅರವಿಂದ್ ರೆಡ್ಡಿ ಅವರ ನೇತೃತ್ವದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆಯಿತು.

10 hrs ago
user_Chakravarthy
Chakravarthy
Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
10 hrs ago
f2dab25d-3aa7-479e-8217-4e0553cdd39d

ಆನೇಕಲ್ ತಾಲೂಕಿನ ಸರ್ಜಾಪುರ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಆಟದ ಮೈದಾನದಲ್ಲಿ ಸರ್ಜಾಪುರ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಸಮಿತಿಯು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಗೆ ಗಣ್ಯರು ಪುಷ್ಪ ನಮನ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೋಂಫುರ ಪುನೀತ್ ರೆಡ್ಡಿ ಮತ್ತು ಆನೇಕಲ್ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸರ್ಜಾಪುರ ಅರವಿಂದ್ ರೆಡ್ಡಿ ಅವರು ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಯೋಗಾಭ್ಯಾಸದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು. ಎಸ್ ಎಸ್ ವೈ ನ ಹರೀಶ್ ಅವರು ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ದಿನಾಚರಣೆಯಲ್ಲಿ ಕ್ರೀಡಾ ಭಾರತೀಯ ಚಂದ್ರಶೇಖರ್ ಜಾಗೀರ್, ವೈದ್ಯರಾದ ಡಾ.ಯೋಗಾನಂದ, ಸಮಾಜ ಸೇವಕರಾದ ಟಿ.ವಿ. ಬಾಬು, ಬಿಜೆಪಿ ಮುಖಂಡರಾದ ಮುರಳಿಕೃಷ್ಣ, ಶ್ಯಾಮಣ್ಣರೆಡ್ಡಿ, ಗೋಪಾಲ್ ರೆಡ್ಡಿ, ನಾರಾಯಣಸ್ವಾಮಿ, ಗಣೇಶ್, ಆನೇಕಲ್ ತಾಲೂಕು ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಕೇಶುವ್, ನಿರ್ವಹಣ ಯೋಗ ಶಾಲೆಯ ಗುರುಗಳಾದ ಸ್ವಾತಿ, ಶಕ್ತಿ, ರೂಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸೋಂಪುರ ಪುನೀತ್ ರೆಡ್ಡಿ ಮತ್ತು ಸರ್ಜಾಪುರ ಅರವಿಂದ್ ರೆಡ್ಡಿ ಅವರ ನೇತೃತ್ವದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆಯಿತು.

More news from Bengaluru Urban and nearby areas
  • ದೇಶಾದ್ಯಂತ ಇರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳ ಬದಲು ಇತರೆ ವಸ್ತುಗಳ ಮಾರಾಟದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಪರಿಶೀಲನೆಯು ದಾಳಿ (Raid) ಅಲ್ಲ, ಕೇವಲ ತಪಾಸಣೆ (Checking) ಮಾತ್ರ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವರು, ಪ್ರಾಮಾಣಿಕವಾಗಿ ಕೇಂದ್ರ ನಡೆಸುವವರು ಹೆದರಬೇಕಿಲ್ಲ ಎಂದು ತಿಳಿಸಿದ್ದಾರೆ. ಜನರಿಗೆ ಗುಣಮಟ್ಟದ ಔಷಧಿ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಅವರು ಒತ್ತಿ ಹೇಳಿದ್ದಾರೆ.
    1
    ದೇಶಾದ್ಯಂತ ಇರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳ ಬದಲು ಇತರೆ ವಸ್ತುಗಳ ಮಾರಾಟದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಪರಿಶೀಲನೆಯು ದಾಳಿ (Raid) ಅಲ್ಲ, ಕೇವಲ ತಪಾಸಣೆ (Checking) ಮಾತ್ರ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವರು, ಪ್ರಾಮಾಣಿಕವಾಗಿ ಕೇಂದ್ರ ನಡೆಸುವವರು ಹೆದರಬೇಕಿಲ್ಲ ಎಂದು ತಿಳಿಸಿದ್ದಾರೆ. ಜನರಿಗೆ ಗುಣಮಟ್ಟದ ಔಷಧಿ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಅವರು ಒತ್ತಿ ಹೇಳಿದ್ದಾರೆ.
    user_A News24Kannada
    A News24Kannada
    Newsagent Bengaluru South, Bengaluru Urban•
    19 hrs ago
  • ಕೋಲಾರ್ ಕಿ.ಆವಾಜ್ ಕೌಸರ್ ನ್ಯೂಸ್ ಎಂದು ಹೆಸರಿಸಲಾದ ಈ ಮೂಲದಿಂದ ಲಭ್ಯವಿರುವ ಮಾಹಿತಿ ಇಲ್ಲಿದೆ.
    1
    ಕೋಲಾರ್ ಕಿ.ಆವಾಜ್ ಕೌಸರ್ ನ್ಯೂಸ್ ಎಂದು ಹೆಸರಿಸಲಾದ ಈ ಮೂಲದಿಂದ ಲಭ್ಯವಿರುವ ಮಾಹಿತಿ ಇಲ್ಲಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    7 hrs ago
  • ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಸಮುದ್ರಾಹಾರ ರಫ್ತು ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಘೋರ ಘಟನೆಯಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, 67 ಜನರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
    1
    ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಸಮುದ್ರಾಹಾರ ರಫ್ತು ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಘೋರ ಘಟನೆಯಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, 67 ಜನರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
    user_JB NEWS ಕನ್ನಡ
    JB NEWS ಕನ್ನಡ
    Kolar, Karnataka•
    10 hrs ago
  • ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
    1
    ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಬಿಜೆಪಿ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು. ಈ ಹುಟ್ಟುಹಬ್ಬ ಆಚರಣೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ವರ್ತೂರ್ ಪ್ರಕಾಶ್, ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    2
    ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಬಿಜೆಪಿ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು.

ಈ ಹುಟ್ಟುಹಬ್ಬ ಆಚರಣೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ವರ್ತೂರ್ ಪ್ರಕಾಶ್, ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಮಾತಿನ ಸಮರ ತೀವ್ರಗೊಂಡಿದೆ. ಕೇಂದ್ರ ಸಚಿವ ಅಮಿತ್ ಶಾ ಮತ್ತು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು 'ಕರ್ಮ ಈಸ್ ಬ್ಯಾಕ್' ಎಂದು ಟೀಕಿಸಿದ್ದಾರೆ. ಅಧಿಕಾರಕ್ಕೆ ಬರಲು 'ಆಪರೇಷನ್ ಕಮಲ' ಮಾಡಿದ್ದು ಚಾಣಕ್ಯತನವಾದರೆ, ಬೇರೆಯವರು ಕ್ರಾಸ್ ವೋಟ್ ಮಾಡಿದರೆ ಅದು ದೇಶದ್ರೋಹವೇ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಅವರು 'ಕರ್ನಾಟಕ ಈಸ್ ಡಿಫರೆಂಟ್... ಇಲ್ಲಿ ಡಿ.ಕೆ. ಶಿವಕುಮಾರ್ ಇದ್ದಾರೆ' ಎಂದು ಸವಾಲು ಹಾಕಿದ್ದಾರೆ.
    1
    ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಮಾತಿನ ಸಮರ ತೀವ್ರಗೊಂಡಿದೆ. ಕೇಂದ್ರ ಸಚಿವ ಅಮಿತ್ ಶಾ ಮತ್ತು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು 'ಕರ್ಮ ಈಸ್ ಬ್ಯಾಕ್' ಎಂದು ಟೀಕಿಸಿದ್ದಾರೆ.

ಅಧಿಕಾರಕ್ಕೆ ಬರಲು 'ಆಪರೇಷನ್ ಕಮಲ' ಮಾಡಿದ್ದು ಚಾಣಕ್ಯತನವಾದರೆ, ಬೇರೆಯವರು ಕ್ರಾಸ್ ವೋಟ್ ಮಾಡಿದರೆ ಅದು ದೇಶದ್ರೋಹವೇ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಅವರು 'ಕರ್ನಾಟಕ ಈಸ್ ಡಿಫರೆಂಟ್... ಇಲ್ಲಿ ಡಿ.ಕೆ. ಶಿವಕುಮಾರ್ ಇದ್ದಾರೆ' ಎಂದು ಸವಾಲು ಹಾಕಿದ್ದಾರೆ.
    user_A News24Kannada
    A News24Kannada
    Newsagent Bengaluru South, Bengaluru Urban•
    20 hrs ago
  • ಐಷಾರಾಮಿ ಫಸ್ಟ್ ಎಸಿ ಕೋಚ್‌ನಲ್ಲಿ ನೀರು ಸೋರಿಕೆಯಾಗಿದೆ, ಇದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಅನಿರೀಕ್ಷಿತವಾಗಿ 'ಜಲಪಾತ ಸೇವೆ'ಯ ಅನುಭವವಾಗಿದೆ. ಈ ಘಟನೆ ಐಷಾರಾಮಿ ಕೋಚ್‌ಗಳಲ್ಲೂ ಗುಣಮಟ್ಟದ ಕೊರತೆಯನ್ನು ಎತ್ತಿ ತೋರಿಸುತ್ತದೆ.
    1
    ಐಷಾರಾಮಿ ಫಸ್ಟ್ ಎಸಿ ಕೋಚ್‌ನಲ್ಲಿ ನೀರು ಸೋರಿಕೆಯಾಗಿದೆ, ಇದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಅನಿರೀಕ್ಷಿತವಾಗಿ 'ಜಲಪಾತ ಸೇವೆ'ಯ ಅನುಭವವಾಗಿದೆ. ಈ ಘಟನೆ ಐಷಾರಾಮಿ ಕೋಚ್‌ಗಳಲ್ಲೂ ಗುಣಮಟ್ಟದ ಕೊರತೆಯನ್ನು ಎತ್ತಿ ತೋರಿಸುತ್ತದೆ.
    user_Veega News Kannada
    Veega News Kannada
    Newspaper advertising department ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.