ಗುರುಮಠಕಲ್ ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು. ಆ.10ರೊಳಗೆ ಬೆಳೆ ವಿಮೆ ಕಡ್ಡಾಯ: ರೈತರಿಗೆ ಸಚಿವ ಶರಣಪ್ರಕಾಶ ಪಾಟೀಲ್ ಕರೆ ಮಳೆ ಕೊರತೆಯಿಂದ ಸಂಕಷ್ಟ; ಬರ ವರದಿ ಶೀಘ್ರ ಸರ್ಕಾರಕ್ಕೆ ಸಲ್ಲಿಕೆ ಗುರುಮಠಕಲ್: ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಬೆಳೆ ವಿಮೆಯಿಂದ ವಂಚಿತರಾಗಬಾರದು. ಆಗಸ್ಟ್ 10ರೊಳಗೆ ಪ್ರತಿಯೊಬ್ಬ ಅರ್ಹ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಕಂದಕೂರು, ಗುಂಜನೂರ, ಬೋರಬಂಡಾ ಹಾಗೂ ಗುರುಮಠಕಲ್ ಭಾಗಗಳ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಬಳಿಕ ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಳೆ ಅಭಾವದಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆ ಕುಂಠಿತಗೊಂಡಿದ್ದು, ಹೆಸರು ಹಾಗೂ ಉದ್ದು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ವಿಮೆಯೇ ರೈತರಿಗೆ ಪ್ರಮುಖ ಆರ್ಥಿಕ ಆಸರೆಯಾಗಲಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ವಿಮೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕಳೆದ ವರ್ಷ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಎದುರಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ದೂರುಗಳು ಬಂದಿದ್ದವು. ಈ ಬಾರಿ ಪರಿಹಾರ ವಿತರಣೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಸರು ಹಾಗೂ ಉದ್ದು ಬೆಳೆ ಬೆಳೆದ ರೈತರಿಗೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಮಳೆ ಪ್ರಮಾಣ, ಬೆಳೆ ನಷ್ಟ ಹಾಗೂ ಇತರೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ರಸಗೊಬ್ಬರ ಕೊರತೆ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ನೋಟಿಸ್ ನೀಡಿ ಅಗತ್ಯವಿದ್ದರೆ ಪರವಾನಗಿ ರದ್ದುಪಡಿಸಲಾಗುವುದು. ಎಲ್ಲ ರಸಗೊಬ್ಬರ ಮಾರಾಟಗಾರರು ಅಂಗಡಿ ಮುಂಭಾಗದಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಶರಣುಗೌಡ ಕಂದಕೂರು, ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸಿರೆಡ್ಡಿ ಅನಪೂರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಗುರುಮಠಕಲ್ ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು. ಆ.10ರೊಳಗೆ ಬೆಳೆ ವಿಮೆ ಕಡ್ಡಾಯ: ರೈತರಿಗೆ ಸಚಿವ ಶರಣಪ್ರಕಾಶ ಪಾಟೀಲ್ ಕರೆ ಮಳೆ ಕೊರತೆಯಿಂದ ಸಂಕಷ್ಟ; ಬರ ವರದಿ ಶೀಘ್ರ ಸರ್ಕಾರಕ್ಕೆ ಸಲ್ಲಿಕೆ ಗುರುಮಠಕಲ್: ಜಿಲ್ಲೆಯ ರೈತರು ಯಾವುದೇ ಕಾರಣಕ್ಕೂ ಬೆಳೆ ವಿಮೆಯಿಂದ ವಂಚಿತರಾಗಬಾರದು. ಆಗಸ್ಟ್ 10ರೊಳಗೆ ಪ್ರತಿಯೊಬ್ಬ ಅರ್ಹ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಕಂದಕೂರು, ಗುಂಜನೂರ, ಬೋರಬಂಡಾ ಹಾಗೂ ಗುರುಮಠಕಲ್ ಭಾಗಗಳ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ಬಳಿಕ ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಳೆ ಅಭಾವದಿಂದ
ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆ ಕುಂಠಿತಗೊಂಡಿದ್ದು, ಹೆಸರು ಹಾಗೂ ಉದ್ದು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ವಿಮೆಯೇ ರೈತರಿಗೆ ಪ್ರಮುಖ ಆರ್ಥಿಕ ಆಸರೆಯಾಗಲಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ವಿಮೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕಳೆದ ವರ್ಷ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಎದುರಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ದೂರುಗಳು ಬಂದಿದ್ದವು. ಈ ಬಾರಿ ಪರಿಹಾರ ವಿತರಣೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಸರು ಹಾಗೂ ಉದ್ದು ಬೆಳೆ ಬೆಳೆದ ರೈತರಿಗೆ ವಿಮೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಮಳೆ ಪ್ರಮಾಣ, ಬೆಳೆ ನಷ್ಟ ಹಾಗೂ ಇತರೆ
ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ರಸಗೊಬ್ಬರ ಕೊರತೆ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ನೋಟಿಸ್ ನೀಡಿ ಅಗತ್ಯವಿದ್ದರೆ ಪರವಾನಗಿ ರದ್ದುಪಡಿಸಲಾಗುವುದು. ಎಲ್ಲ ರಸಗೊಬ್ಬರ ಮಾರಾಟಗಾರರು ಅಂಗಡಿ ಮುಂಭಾಗದಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಶರಣುಗೌಡ ಕಂದಕೂರು, ಜಿಲ್ಲಾಧಿಕಾರಿ ರಾಹುಲ್ ತುಕರಾಂ ಪಾಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸಿರೆಡ್ಡಿ ಅನಪೂರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
- .ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ ಯಾದಗೀರ, ಆ.5: ಜಿಲ್ಲೆಯ ಯಾದಗೀರ ತಾಲೂಕಿನ ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯೊಂದರಲ್ಲಿ ಸಂಭವಿಸಿದ ವಿಷಾನಿಲ (ಗ್ಯಾಸ್) ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೈಗಾರಿಕಾ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಬಳಿಕ ಕಂಪನಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಾರ್ಮಿಕರ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಮೃತರನ್ನು ವಿಕ್ರಮ್ ಸಿಂಗ್ (30), ಸಂಜಯ್ ಸಿಂಗ್ (29) ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಂಪನಿಯ ಉತ್ಪಾದನಾ ಘಟಕದಲ್ಲಿ ಕಾರ್ಮಿಕರು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿಷಾನಿಲ ಸೋರಿಕೆಯಾಗಿದ್ದು, ಮೂವರು ಕಾರ್ಮಿಕರು ಉಸಿರಾಟದ ತೊಂದರೆಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೈದಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳವನ್ನು ಭದ್ರತಾ ವಲಯವಾಗಿ ಪರಿಗಣಿಸಿ, ಸೋರಿಕೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ. ತಾಂತ್ರಿಕ ದೋಷ, ನಿರ್ವಹಣೆಯ ಲೋಪ ಅಥವಾ ಸುರಕ್ಷತಾ ನಿಯಮಗಳ ಉಲ್ಲಂಘನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ಸುರಕ್ಷತಾ ವ್ಯವಸ್ಥೆಗಳು ಸಮರ್ಪಕವಾಗಿದ್ದವೆಯೇ, ಕಾರ್ಮಿಕರಿಗೆ ಅಗತ್ಯವಾದ ಸುರಕ್ಷತಾ ಸಾಧನಗಳನ್ನು ಒದಗಿಸಲಾಗಿತ್ತೇ ಹಾಗೂ ತುರ್ತು ಪರಿಸ್ಥಿತಿ ಎದುರಿಸಲು ಸೂಕ್ತ ವ್ಯವಸ್ಥೆ ಇತ್ತೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಕಾರ್ಮಿಕ ಸಂಘಟನೆಗಳು ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಜಿಲ್ಲಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿತ ಇಲಾಖೆಗಳ ಮೂಲಕ ಸಮಗ್ರ ತನಿಖೆಗೆ ಸೂಚನೆ ನೀಡಲಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ತನಿಖಾ ವರದಿ ಬಳಿಕ ಗ್ಯಾಸ್ ಸೋರಿಕೆಗೆ ನಿಖರ ಕಾರಣ ಹಾಗೂ ಜವಾಬ್ದಾರಿಯ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ನಿರೀಕ್ಷೆಯಿದೆ.. ವರದಿ ನಿಜಾಮುದ್ದಿನ್ ಯಾದಗಿರಿ4
- ಇನ್ನೂ ಹೆಚ್ಚು ದಿನ ನಮ್ಮ ಗಡವಂತಿ ಮಾಣಿಕ್ ನಗರ ಗ್ರಾಮಗಳು ಉಳಿಯಲ್ಲ ಕ್ಯಾಮಿಕಲ್ ನಂತರ ಹುಮನಾಬಾದ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಬಿಡುತ್ತಿರುವ ಸಾಲ್ಟ್ ವಾಟರ್ ಕುರಿತು ಭಜರಂಗ ತಿವಾರಿ ಕಳವಳ1
- ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಇಂದು ಮಾನ್ವಿ ಪಟ್ಣಣದ ಬಸವ ವೃತ್ತದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಮೂಲಕ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಯಪ್ಪ ಉಟಕನೂರು ಮಾತನಾಡಿ, 'ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ' ಎಂದು ದೂರಿದರು. 'ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹40 ಸಾವಿರ ಬರ ಪರಿಹಾರವನ್ನು ನೀಡಬೇಕು. ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿ ನೀರು ಸಂಗ್ರ-ಹವಾಗಿದ್ದು, ಈ ಬಾರಿ ಕಾರ್ಖಾನೆಗಳಿಗೆ ನೀರು ಕೊಡದೇ ರೈತರಿಗೆ ಕಾಲುವೆ ಮೂಲಕ ನೀರನ್ನು ನಿರಂತರವಾಗಿ ಹರಿಸಬೇಕು' ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ ಮಾತನಾಡಿ, 'ತಾಲ್ಲೂಕಿನಲ್ಲಿ ಸರ್ಕಾರಕ್ಕೆ ಜೋಳವನ್ನು ಮಾರಾಟ ಮಾಡಿದ ರೈತರಿಗೆ ಐದು ತಿಂಗಳು ಕಳೆದರೂ ಹಣ ಜಮಾ ಆಗಿಲ್ಲ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ತಾ.ಪಂ. ವತಿಯಿಂದ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ವಿಬಿ- ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಬೇಕು' ಎಂದು ಒತ್ತಾಯಿಸಿದರು.ರೈತ ಸಂಘದ ಪದಾಧಿಕಾರಿಗಳಾದ ಶ್ಯಾಮ ಸಿಂಗ್ ರಜಪೂತ್, ವೀರೇಶ ನಾಯಕ, ಶ್ರೀಧರ ಕೋಟೆಕಲ್, ಉರುಕುಂದ ನಾಯಕ ಬಜಾರ, ಬುಜ್ಜಿಗೌಡ, ವೆಂಕಟೇಶ ಕರಡಿಗುಡ್ಡ ಉಪಸ್ಥಿತರಿದ್ದರು. .3
- ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"1
- "ನಾವು ಶಾಂತಿಯಿಂದ ಪ್ರತಿಭಟನೆ ಮಾಡಿದ್ರೆ ದೇಶದ್ರೋಹಿಯೇ ?"ಪೊಲೀಸರು ನಮಗೆ ಬಹಳ ಕ್ರೂರವಾಗಿ " ಹೊಡೆದರು"ರಾಹುಲ್ ಗಾಂಧಿ ಜೊತೆ ಫರಾಹ್ ನಾಝ್ ಸುದ್ದಿಗೋಷ್ಠಿ1
- ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು1
- ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ;1