ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ "ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026" ಬಾಗೇಪಲ್ಲಿ:- ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026"ರ ಅಂಗವಾಗಿ ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ಪೋಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳು, ವಾಹನ ದಾಖಲಾತಿಗಳು, 112 ಸಹಾಯವಾಣಿ, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಗಳ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಚೇಳೂರು ಪೋಲೀಸ್ ಠಾಣೆಯ ವ್ಯಾಪ್ತಿಯ ಸರ್ಕಲ್ ಇನ್ಸ್‌ಪೆಕ್ಟರ್ ಎಂ. ಶ್ರೀನಿವಾಸ್ ಮಾತನಾಡಿ ಪ್ರತಿಯೊಬ್ಬರ ಸುರಕ್ಷತೆಗೆ ಪೊಲೀಸರು ಬೇಕು. ಆದರೆ ಸಂಚಾರ ನಿಯಮ ಉಲ್ಲಂಘಿಸಿದಾಗ ದಂಡ ಹಾಕಿದರೆ ಅವರ ವಿರುದ್ಧವೇ ತಿರುಗಿ ನಿಲ್ಲುವುದು ಎಷ್ಟು ಸರಿ? ಸಂಚಾರ ನಿಯಮವನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ವಾಹನಗಳನ್ನು ಓಡಿಸುತ್ತಲೇ ಮೊಬೈಲ್ ಫೋನ್‌ನಲ್ಲಿ ಮಾತಾನಾಡುವುದು ಅಪರಾಧ. ಅಪ್ರಾಪ್ತರಿಗೆ ವಾಹನ ನೀಡುವುದು ತಪ್ಪು ಎಂದರು. ವಾಹನದ ದಾಖಲಾತಿ ಸುರಕ್ಷಿತ ವಾಹನ ಚಾಲನೆ, ಸಂಚಾರ ನಿಯಮ ರಸ್ತೆ ಬದಿಗಳಲ್ಲಿ ಅಳವಡಿಸಲಾದ ಎಚ್ಚರಿಕೆ ಹಾಗೂ ಸೂಚನಾ ಫಲಕಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪಾತಪಾಳ್ಯ ಪೋಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸೈಯದ್ ಅನ್ಸರ್, ಎ.ಎಸ್.ಐ. ರಾಜಣ್ಣ ,ಹಾಗೂ ಸಾರ್ವಜನಿಕರು ಹಾಜರಿದ್ದರು.
ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ "ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026" ಬಾಗೇಪಲ್ಲಿ:- ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026"ರ ಅಂಗವಾಗಿ ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ಪೋಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳು, ವಾಹನ ದಾಖಲಾತಿಗಳು, 112 ಸಹಾಯವಾಣಿ, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಗಳ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಚೇಳೂರು ಪೋಲೀಸ್ ಠಾಣೆಯ ವ್ಯಾಪ್ತಿಯ ಸರ್ಕಲ್ ಇನ್ಸ್‌ಪೆಕ್ಟರ್ ಎಂ. ಶ್ರೀನಿವಾಸ್ ಮಾತನಾಡಿ ಪ್ರತಿಯೊಬ್ಬರ ಸುರಕ್ಷತೆಗೆ ಪೊಲೀಸರು ಬೇಕು. ಆದರೆ ಸಂಚಾರ ನಿಯಮ ಉಲ್ಲಂಘಿಸಿದಾಗ ದಂಡ ಹಾಕಿದರೆ ಅವರ ವಿರುದ್ಧವೇ ತಿರುಗಿ ನಿಲ್ಲುವುದು ಎಷ್ಟು ಸರಿ? ಸಂಚಾರ ನಿಯಮವನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ವಾಹನಗಳನ್ನು ಓಡಿಸುತ್ತಲೇ ಮೊಬೈಲ್ ಫೋನ್‌ನಲ್ಲಿ ಮಾತಾನಾಡುವುದು ಅಪರಾಧ. ಅಪ್ರಾಪ್ತರಿಗೆ ವಾಹನ ನೀಡುವುದು ತಪ್ಪು ಎಂದರು. ವಾಹನದ ದಾಖಲಾತಿ ಸುರಕ್ಷಿತ ವಾಹನ ಚಾಲನೆ, ಸಂಚಾರ ನಿಯಮ ರಸ್ತೆ ಬದಿಗಳಲ್ಲಿ ಅಳವಡಿಸಲಾದ ಎಚ್ಚರಿಕೆ ಹಾಗೂ ಸೂಚನಾ ಫಲಕಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪಾತಪಾಳ್ಯ ಪೋಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸೈಯದ್ ಅನ್ಸರ್, ಎ.ಎಸ್.ಐ. ರಾಜಣ್ಣ ,ಹಾಗೂ ಸಾರ್ವಜನಿಕರು ಹಾಜರಿದ್ದರು.
- ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಅಂತರರಾಜ್ಯ ಕಳ್ಳಿಯನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು!1
- ಶಿಡ್ಲಘಟ್ಟ ತಾಲೂಕಿನ ನೆಹರೂ ಕ್ರೀಡಾಂಗಣದಲ್ಲಿ ಜನವರಿ 13 ಸಂಜೆ 5 ಕ್ಕೆ ಕಲ್ಟ್ ಸಿನಿಮಾ ಪ್ರೊಫೆಷನಲ್ ಈವೆಂಟ್1
- ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.1
- ಗ್ರಾಮಕ್ಕೆ ಯಾರು ಬಾರದಂತೆ ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ... ಕಾವಲುಗಾರರ ನೇಮಕ. ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ ದಿಗ್ಭಂಧನ ಹಾಕುತ್ತಾರೆ. ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ... ಸುರೇಶಬೆಳಗೆರೆ1
- ಮಳವಳ್ಳಿ ತಾಲೂಕಿನ ಕಿಡಿಗೇಡಿಗಳ ದುಷ್ಕೃತ್ಯಕ್ಕೆ 15 ಕುರಿ ಒಂದು ಟಗರು ಸಾವು : ಕುಟುಂಬಸ್ಥರ ಅಕ್ರಂದನ ಮಳವಳ್ಳಿ ತಾಲೂಕಿನ ಚೆನ್ನಪಳ್ಳೆ ಕೊಪ್ಪಲು ಗ್ರಾಮದ ಜವನಿ ಸಿದ್ದಯ್ಯನವರ ಮಗ ಕರಿಯಪ್ಪನವರಿಗೆ ಸೇರಿದ 15 ಕುರಿ ಹಾಗೂ ಒಂದು ಟಗರು ವಿಷ ಪ್ರಾಸನದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಜರುಗಿದೆ . ಯಾರೋ ಕಿಡಿಗೇಡಿಗಳು ಕರಿಯಪ್ಪನವರ ಇತ್ತಲಿನಲ್ಲಿ ಇರಿಸಿದ್ದ ಕುಡಿಯುವ ನೀರಿನ ಬಕೇಟಿಗೆ ವಿಷವನ್ನು ಹಾಕಿದ್ದು ,ಕುರಿಗಳು ದಿನನಿತ್ಯದಂತೆ ಬಕೇಟಿನಲ್ಲಿದ್ದ ನೀರನ್ನು ಕುಡಿದ ನಂತರ ವಿಲವಿಲನೆ ಒದ್ದಾಡಿ ಅಸುನೀಗಿರುತವೆ ಕಣ್ಣೆದುರೆ ತಾವು ಸಾಕಿದ ಕುರಿಗಳು ಸಾಯುತ್ತಿರುವುದನ್ನು ನೋಡಿ ಕರಿಯಪ್ಪನವರ ಕುಟುಂಬ ಕಣ್ಣೀರಿನ ಕೋಡಿಯನ್ನೇ ಹರಿಸಿದ್ದಾರೆ.. ಲಕ್ಷಾಂತರ ರೂಗಳ ಕುರಿಗಳು ತನ್ನೆದುರೆ ಸತ್ತಿರುವುದು ಆ ಬಡ ಕುಟುಂಬಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ. ಈ ಕಿಡಿಗೇಡಿತನದ ಕೃತ್ಯ ನಡೆಸಿದ ಪಾಪಿಗಳಿಗೆ ಗ್ರಾಮಸ್ಥರು ಶಾಪವನ್ನು ಹಾಕುತ್ತಿದ್ದಾರೆ . ಇಂತಹ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಬಡ ಕುಟುಂಬದ ನೆರವಿಗೆ ಜಿಲ್ಲಾಡಳಿತ ಮುಂದಾಗಿ ಸಂಕಷ್ಟದಲ್ಲಿ ಸಿಲುಕು ಇರುವ ಬಡ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ1
- ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹುಲಿ ದಾಳಿ ವಿಚಾರ ತಿಳಿಯುತ್ತಿ ದ್ದಂತೆ ಸ್ಥಳೀಯ ಅರಣ್ಯಾ ಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ, ಹುಲಿ ತಿಂದು ಬಿಟ್ಟಿರುವ ಹಸುವಿನ ಕಳೇಬರವನ್ನು ಪರಿಶೀಲಿಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.ಮ.ಬೆಟ್ಟ ಸನಿಹದಲ್ಲಿರುವ ಗ್ರಾಮದ ನಿವಾಸಿಗಳು ಹುಲಿ ದಾಳಿಯಿಂದ ಭೀತಿಗೊಂಡಿದ್ದು, ಬೇರೆ ಕಡೆಯಿಂದ ಹುಲಿಯನ್ನು ತಂದು ಅರಣ್ಯ ಪ್ರದೇಶಕ್ಕೆ ಬಿಟ್ಟಿರುವುದರಿಂದ ಹುಲಿ ಹಸುವನ್ನು ಕೊಂದು ತಿಂದಿದೆ. ಶೀಘ್ರದಲ್ಲಿ ಹುಲಿಯನ್ನು ಸೆರೆಹಿಡಿಯಬೇಕೆಂದು ಒತ್ತಾಯಿಸಿದರು1
- *ಭಾರತ ನಲ್ಲಿ ವೈರಲ್*1
- ಮಳವಳ್ಳಿ ಹೆಬ್ಬೆಟ್ಟದ ಬಸವೇಶ್ವರನಿಗೆ ಹರಕೆ ಹೊತ್ತರೆ ಸಂತಾನ ಭಾಗ್ಯ. ಮಳವಳ್ಳಿ ಹಲಗೂರುಸಮೀಪದ ಬಸವನಹಳ್ಳಿ ಗ್ರಾಮದ ಬೆಟ್ಟದ ಮೇಲೆ ಪ್ರಕೃತಿ ಸೌಂದರ್ಯದ ನಡುವೆ ನೆಲೆಸಿರುವ ಹೆಬ್ಬೆಟ್ಟದ ಬಸವೇಶ್ವರ ದೇವರಿಗೆ ಪೂಜೆ ಸಲ್ಲಿಸಿ ಮಕ್ಕಳಿಲ್ಲದವರು ಮತ್ತು ಮದುವೆ ತಡವಾಗುತ್ತಿದ್ದರೆ, ಕೋರ್ಟ್ ಕೇಸ್ ಇತ್ಯರ್ಥವಾಗದೆ ತಡವಾಗಿದ್ದರೆದೇವರಿಗೆ ಹರಕೆ ಹೊತ್ತುಕೊಂಡರೆ ಭಕ್ತರ ಇಷ್ಟಾರ್ಥವನ್ನು ನೆರವೇರಿಸುವ ದೈವ ಈ ಹೆಬ್ಬಟ್ಟದ ಬಸಪ್ಪ ಎಂದು ಅರ್ಚಕರಾದ ಬಸಪ್ಪ ತಿಳಿಸಿದರು . ಪೂಜೆ ಪುನಸ್ಕಾರಗಳನ್ನು ನಡೆಸಿ ಭಕ್ತರಿಗೆ ಮಹಾಮಂಗಳಾರತಿ ಪ್ರಸಾದ ನೀಡಿದ ನಂತರ ಅವರು ಮಾತನಾಡುತ್ತಾ, ಧನುರ್ಮಾಸದ ಪ್ರಾರಂಭದಿಂದ ಪ್ರತಿದಿನ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಲಿದ್ದು, ಇಂದು ಹಲಗೂರಿನ ಭಕ್ತರು ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ದಿನ ಧನುರ್ಮಾಸದ ಕಡೆ ಸೋಮವಾರ ದಿನವಾದ್ದರಿಂದ ಬೆಳಗಿನ ಜಾವ ದೇವರ ಮೂರ್ತಿಯನ್ನು ಶುಚಿಗೊಳಿಸಿ ಪಂಚಾಮೃತಾಭಿಷೇಕ,ರುದ್ರಾಭಿಷೇಕ ನಡೆಸಿದ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ನಡೆದ ನಂತರ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ಸುಮಾರು ಸಾವಿರದನಾಲ್ಕುನೂರು ವರ್ಷಗಳ ಇತಿಹಾಸ ಹೊಂದಿರುವ ಚೋಳರ ಕಾಲದ ಹೆಬ್ಬೆಟ್ಟದ ಬಸವೇಶ್ವರ ಸ್ವಾಮಿ ದೇವಾಲಯವು ಸುತ್ತಮುತ್ತಲಿನ ಗ್ರಾಮಗಳ ಜನರ ಆರಾಧ್ಯ ದೈವ ಇಲ್ಲಿ ಮಕ್ಕಳಾಗದಿದ್ದವರು ಹರಕೆಹೊತ್ತರೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ. ಮದುವೆಯಾಗದ ಗಂಡು ಮತ್ತು ಹೆಣ್ಣು ಮಕ್ಕಳು ಹರಕೆ ಹೊತ್ತರೆ ಕಂಕಣ ಭಾಗ್ಯ ಕೂಡಿ ಬರುತ್ತದೆ. ಅಲ್ಲದೆ ಸುತ್ತಮುತ್ತಲಿನ ಗ್ರಾಮದವರು ತಮ್ಮ ಗ್ರಾಮಗಳಲ್ಲಿ ಯಾವುದೇ ಪೂಜಾ ಕಾರ್ಯಗಳನ್ನು ಜಾತ್ರೆಗಳನ್ನು ಹಮ್ಮಿಕೊಳ್ಳಬೇಕಿದ್ದರೆ ಮೊದಲು ಇಲ್ಲಿ ಪೂಜೆ ಸಲ್ಲಿಸಿ ಹೆಬ್ಬೆಟ್ಟದ ಬಸಪ್ಪದೇವರ ಅಪ್ಪಣೆ ಪಡೆದು ಮುಂದುವರೆಯಯುವುದು ಅನಾದಿಕಾಲದಿಂದಲೂ ಪ್ರತೀತಿ ಇದೆ .1