ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ,ರಾಜ್ಯಪಾಲರಿಗೆ ವಕೀಲರ ಸಂಘದ ಪತ್ರ ಮದ್ದೂರು-ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಕನ್ನಂಬಾಡಿ (ಕೆಆರ್ ಎಸ್) ಅಣೆಕಟ್ಟಿನಿಂದ ತಮಿಳುನಾಡಿನ ಮೆಟ್ಟೂರು ಅಣೆಕಟ್ಟಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಮದ್ದೂರು ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟರಾಜು ಅವರು ತಹಶೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಶನಿವಾರ ನಡೆದ ಮದ್ದೂರು ವಕೀಲರ ಸಂಘದ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರವು ಅವೈಜ್ಞಾನಿಕವಾಗಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಿದ್ದು, ಇದರಿಂದ ರಾಜ್ಯದ ರೈತರು ಹಾಗೂ ಜನರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಸಂಘವು ಆರೋಪಿಸಿದೆ. ರೈತರ ಬೆಳೆಗಳಿಗೆ ಜೀವನಾಡಿಯಾಗಿರುವ ಕೆಆರ್ಎಸ್ ಜಲಾಶಯದಲ್ಲಿ ಕಳೆದ ಏಳು ವರ್ಷಗಳಲ್ಲಿಯೇ ಇದೇ ಮೊದಲ ಬಾರಿಗೆ ನೀರಿನ ಸಂಗ್ರಹ ಭಾರೀ ಪ್ರಮಾಣದಲ್ಲಿ ಕುಸಿದಿರುವುದು ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಳೆಯ ಕೊರತೆಯಿಂದ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಇಲ್ಲದ ಪರಿಣಾಮ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ನಾಲೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿರುವ ಕಾರಣ ಕಬ್ಬು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ಒಣಗುವ ಸ್ಥಿತಿಗೆ ತಲುಪಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ,ರಾಜ್ಯಪಾಲರಿಗೆ ವಕೀಲರ ಸಂಘದ ಪತ್ರ ಮದ್ದೂರು-ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಕನ್ನಂಬಾಡಿ (ಕೆಆರ್ ಎಸ್) ಅಣೆಕಟ್ಟಿನಿಂದ ತಮಿಳುನಾಡಿನ ಮೆಟ್ಟೂರು ಅಣೆಕಟ್ಟಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಮದ್ದೂರು ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟರಾಜು ಅವರು ತಹಶೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಶನಿವಾರ ನಡೆದ ಮದ್ದೂರು ವಕೀಲರ ಸಂಘದ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರವು ಅವೈಜ್ಞಾನಿಕವಾಗಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಿದ್ದು, ಇದರಿಂದ ರಾಜ್ಯದ ರೈತರು ಹಾಗೂ ಜನರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಸಂಘವು ಆರೋಪಿಸಿದೆ. ರೈತರ ಬೆಳೆಗಳಿಗೆ ಜೀವನಾಡಿಯಾಗಿರುವ ಕೆಆರ್ಎಸ್ ಜಲಾಶಯದಲ್ಲಿ ಕಳೆದ ಏಳು ವರ್ಷಗಳಲ್ಲಿಯೇ ಇದೇ ಮೊದಲ ಬಾರಿಗೆ ನೀರಿನ ಸಂಗ್ರಹ ಭಾರೀ ಪ್ರಮಾಣದಲ್ಲಿ ಕುಸಿದಿರುವುದು ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಳೆಯ ಕೊರತೆಯಿಂದ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಇಲ್ಲದ ಪರಿಣಾಮ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ನಾಲೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿರುವ ಕಾರಣ ಕಬ್ಬು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ಒಣಗುವ ಸ್ಥಿತಿಗೆ ತಲುಪಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
- ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ,ಪ್ರತಿಭಟನೆ ಮದ್ದೂರು-ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ, ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ ನೇತೃತ್ವದಲ್ಲಿ ಕೆಸ್ತೂರು ವೃತ್ತ ಘಟಕದ ವತಿಯಿಂದ ಶನಿವಾರ ರಸ್ತೆತಡೆ ಪ್ರತಿಭಟನೆ ನಡೆಸಲಾಯಿತು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ರೈತರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಪರಿಣಾಮ ಸುಮಾರು ಎರಡು ಕಿಲೋಮೀಟರ್ವರೆಗೆ ವಾಹನಗಳ ಸಂಚಾರ ದಟ್ಟಣೆ ಉಂಟಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ, ಕೆಆರ್ಎಸ್ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ವಿವಿಧ ತೋಟಗಾರಿಕೆ ಬೆಳೆಗಳು ನೀರಿನ ಕೊರತೆಯಿಂದ ಒಣಗುತ್ತಿವೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- ಕೆಆರ್‌ಎಸ್‌ನಲ್ಲಿ ನೀರಿದ್ದಾಗ ಮಾತ್ರ ತಮಿಳುನಾಡಿಗೆ ನೀರು ಬಿಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಬೇಕು- ವೆಂಕಟಗಿರಿ ಯಯ್ಯ ಮಂಡ್ಯ: ಕೇಂದ್ರ ಸರಕಾರ ರಾಷ್ಟೀಯಸ ಜಲನೀತಿ ರೂಪಿಸುವವರೆಗೂ ಕೆಆರ್‌ಎಸ್‌ನಲ್ಲಿ ನೀರಿದ್ದಾಗ ಮಾತ್ರ ತಮಿಳುನಾಡಿಗೆ ನೀರು ಬಿಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಬೇಕು ಎಂದು ಕರ್ನಾಟಕದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸಬಾರದು. ಸ್ವಾತಂತ್ರö್ಯ ಪೂರ್ವದ 1924ರ ಕಾವೇರಿ ಒಪ್ಪಂದವನ್ನುದ ಆಧಾರದ ಮೇಲೆ ಸ್ವತಂತ್ರ್ಯ ಭಾರತದ ವಿವಿಧ ನ್ಯಾಯಾಲಯ ಮತ್ತು ಪ್ರಾಧಿಕಾರಗಳ ಅಸಂವಿಧಾನಿಕ ಆದೇಶ ಗಳನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು. ಕಾವೇರಿ ನದಿ ನೀರು ಹಂಚಿಕೆ ಸಂಬಂಧ 1924ರ ಒಪ್ಪಂದವು 50 ವರ್ಷಗಳ ಅವಧಿಗೆ ಸೀಮಿತವಾಗಿ 1974ಕ್ಕೆ ಅಂತಿಮಗೊಂಡಿದೆ. ಸಂವಿಧಾನದ ಅನುಚ್ಛೇದ 262ರಂದು ದೇಶದ ಮತ್ತು ಅಂತರಾಜ್ಯಗಳ ಎಲ್ಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವುದು ಸರಕಾರಗಳ ಬದ್ಧತೆಯಾಗಿದೆ. ಅಂತರ ರಾಜ್ಯ ಜಲವಿವಾದ ಪರಿಹಾರ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, 1924ರ ಮೈಸೂರು- ತಮಿಳುನಾಡು ನಡುವಿನ ಒಪ್ಪಂದಕ್ಕೆ ಇಂದಿಗೂ ಕೇಂದ್ರ ಹಾಗೂ ರಾಜ್ಯ ಸರಕಾಗಳು ಇಂದಿಗೂ ತಲೆ ಬಾಗಿರುವುದು ಖಂಡನಾರ್ಹ ಎಂದು ಕಿಡಿ ಕಾರಿದರು. ಇಲ್ಲಿಂದ ಹರಿಬಿಟ್ಟ ನೀರು ಸಂಗ್ರಹಿಸಿಟ್ಟುಕೊಳ್ಳದ ತಮಿಳುನಾಡು ಸರಕಾರಸಮುದ್ರಕ್ಕೆಹರಿಬಿಡುತ್ತಿದೆ. ಬಿಕ್ಕಟ್ಟು ಬಗೆಹರಿಸು ನೀಡು ಬಿಡುವ ಹಕ್ಕನ್ನು ಕೇಂದ್ರ ಸರಕಾರ ತಮ್ಮಲ್ಲೆ ಇರಿಸಿಕೊಂಡು ರಾಷ್ಟಿçÃಯ ಜಲನೀತಿ ರೂಪಿಸಬೇಕು. ಅಲ್ಲಿವರೆಗೂ ರಾಜ್ಯ ಸರಕಾರ ಇದ್ದಾಗ ಮಾತ್ರ ತಮಿಳುನಾಡಿಗೆ ನೀರು ಬಿಡಲು ಮುಂದಾಗಬೇಕು. ಇಲ್ಲವಾದಲ್ಲಿ ತೀವ್ರತರದ ಚಳುವಳಿಗೆ ಮುಂದಾಗಬೇಕಾಗುವುದು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ, ಪ್ರಧಾನ ಕಾರ್ಯದರ್ಶಿ ಸುರೇಶ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಸಿದ್ದಯ್ಯ,ತಲ್ಲೊಕು ಅಧ್ಯಕ್ಷರಾದ ಕುಮಾರ್, ಬಸಸವರಾಜು, ಸದಸ್ಯ ಚಂದ್ರು ಇದ್ದರು.1
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.1
- ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು1
- ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ1
- ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು) ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು. ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.1
- ಕೊಳ್ಳೇಗಾಲ. ಪಟ್ಟಣದ ಪುಟ್ ಬಾತ್ ತೆರವುಗೊಳಿಸುವ ವೇಳೆ ವ್ಯಾಪಾರಿಗಳಿಂದ ಹೈಡ್ರಾಮಾ ನಡೆದಿದ್ದು, ಟಿ.ವಿ ವರದಿಗಾರನ ಮೇಲೆ ಪೆಟ್ರೋಲ್ ಸುರಿದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಜರುಗಿದೆ. ಪಟ್ಟಣದ ಕುಮಾರ ಎಲೆಕ್ಟ್ರಿಕಲ್ ರಸ್ತೆ, ಚಿನ್ನಬೆಳ್ಳಿ ರಸ್ತೆ, ಎಸ್.ಟಿ ರಸ್ತೆ, ರಾಜ್ ಕುಮಾರ್ ರಸ್ತೆ, ಬಸ್ತೀಪುರ ರಸ್ತೆ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಪುಟ್ಬಾತ್ ತೆರವುಗೊಳಿಸಿದರು. ಸುಪ್ರೀಂ ಕೋರ್ಟ್ ಆದೇಶದಂತೆ ಪುಟ್ಬಾತ್ ಅಂಗಡಿ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ತೆರವು ಮಾಡಲು ಅಧಿಕಾರಿಗಳ ಬಂದ ವೇಳೆ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಮುಂಭಾಗದಲ್ಲಿ ಒತ್ತುವರಿಯನ್ನು ತೆರವು ಮಾಡಿಕೊಂಡರು. ಡಾ.ರಾಜಕುಮಾರ್ ರಸ್ತೆಯಿಂದ ಹಳೇ ಕುರುಬರ ಬೀದಿಗೆ ತೆರಳುವ ರಸ್ತೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಪುಟ್ಬಾತ್ ಅಂಗಡಿಗಳನ್ನು ತೆರವು ಮಾಡಲು ಅಧಿಕಾರಿಗಳು ಬಂದಾಗ ಅಲ್ಲಿನ್ ನ್ಯೂ ಮದೀನ ಚಿಕನ್ ಸೆಂಟರ್ ಮಾಲೀಕ ಸೈಯದ್ ಆಸೀಫ್ ಎಂಬಾತ ನನ್ನ ಅಂಗಡಿ ತೆರವು ಮಾಡಿದ್ದದೇ ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಬೆದರಿಕೆ ಹೊಡುತ್ತಿದ್ದನು. ಈ ವೇಳೆ ನ್ಯೂಸ್ ಗಾಗಿ ಬಂದಿದ್ದ ವರದಿಗಾರ ಬಸಂತ್ ಕುಮಾರ್ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಬಂದ ಚಿಕನ್ ಅಂಗಡಿಯ ಸೈಯದ್ ಆಸೀಫ್ ಎನುವನ್ನು ಪಕ್ಕದಲ್ಲಿದ್ದ ಅಧಿಕಾರಿಗಳು ಹಾಗೂ ಪೊಲೀಸರು ಹಿಡಿದುಕೊಂಡಾಗ ಬಸಂತ್ ಕುಮಾರ್ ಮೇಲೆ ಹಾಗೂ ಆಹಾರ ನಿರೀಕ್ಷಕ ಚೇತನ್, ಪೌರಯುಕ್ತರು ನಟರಾಜು ಹಾಗೂ ಇನ್ನೀತರ ಮೇಲೆ ಪೆಟ್ರೋಲ್ ಸುರಿದಿತ್ತು. ನಂತರ ಪೊಲೀಸರು ಆಸೀಫ್ ನನ್ನು ವಶಕ್ಕೆ ಪಡೆದು, ಪೆಟ್ರೋಲ್ ಬಾಟಲ್ ನನ್ನು ಜಪ್ತಿ ಮಾಡಿದರು. ಮುಂದುವರಿದು, ಕಾರ್ಯಾಚರಣೆ ಮಾಡಲು ಜೆಸಿಬಿ ಮಿಷನ್ ರಭಸವಾಗಿ ಬಂದಾಗ ಚಿಕನ್ ಅಂಗಡಿ ಮುಂದೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಾಗ ಒಂದು ಕ್ಷಣ ಕಂಬ ಅಲುಗಾಡಿ ನೆರೆದಿದ್ದ ಜನರು ಭಯ ಬೀಳುವಂತಾಯಿತು. ಸದ್ಯಕ್ಕೆ ಯಾವುದೇ ಹಾನಿಯಾಗದೇ ವಿದ್ಯುತ್ ಕಂಬ ಸಡಿಲಗೊಂಡಿತ್ತು. ನಂತರ ಹಳೇ ಕುರುಬರ ಬೀದಿಗೆ ತೆರಳು ಮಾರ್ಗದ ಅಂಗಡಿಗಳ ಮುಂದಿನ ಒತ್ತುವರಿ ತೆರವು ಮಾಡಿ, ಕಾರ್ಯಾಚರಣೆಯನ್ನು ಮುಂದುವರೆಸಿದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪತ್ರಕರ್ತರ ಜೊತೆ ಆಗಮಿಸಿದ್ದ ಬಸಂತ್ ಕುಮಾರ್ ರನ್ನು ದೂರು ನೀಡದಂತೆ ಮುಸ್ಲಿಂ ಮುಖಂಡರು ಮನವೋಲಿಸಿ ಆಸೀಫ್ ರನ್ನು ವಾಪಸ್ಸು ಕರೆದ್ಯೋದರು. ಈ ಕಾರ್ಯಾಚರಣೆಯಲ್ಲಿ ನಗರಸಭೆ ಪೌರಯುಕ್ತರು ನಟರಾಜು, ಎಇಇ ಪ್ರಸನ್ನ, ಲಕ್ಷ್ಮೀ, ಮ್ಯಾನೇಜರ್ ಲಿಂಗರಾಜು, ಆಹಾರ ನಿರೀಕ್ಷಕ ಚೇತನ್, ವಿಭೂತಿ ಸೇರಿದಂತೆ ಇತರರು ಇದ್ದರು.2