Shuru
Apke Nagar Ki App…
ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಯ ಸಂಪೂರ್ಣ ಅಧಿಕಾರವು ಇನ್ನು ಮುಂದೆ ನೇರವಾಗಿ ಎಐಸಿಸಿ (AICC) ಕೈಗೆ ಸೇರಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಅಧಿಕಾರವನ್ನು ಇನ್ಮೇಲೆ ಎಐಸಿಸಿ ನಿರ್ವಹಿಸಲಿದೆ.
Jogimatti maheshbabu
ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಯ ಸಂಪೂರ್ಣ ಅಧಿಕಾರವು ಇನ್ನು ಮುಂದೆ ನೇರವಾಗಿ ಎಐಸಿಸಿ (AICC) ಕೈಗೆ ಸೇರಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಅಧಿಕಾರವನ್ನು ಇನ್ಮೇಲೆ ಎಐಸಿಸಿ ನಿರ್ವಹಿಸಲಿದೆ.
More news from ಕರ್ನಾಟಕ and nearby areas
- ಗಾನ ಸರಸ್ವತಿ ಎಸ್. ಜಾನಕಿ ಅವರು ವಿಧಿವಶರಾಗಿದ್ದಾರೆ. ಅವರ ಈ ಅಗಲಿಕೆಯು ಸಂಗೀತ ಲೋಕಕ್ಕೆ ತುಂಬಲಾರದಷ್ಟು ದೊಡ್ಡ ನಷ್ಟವನ್ನು ಉಂಟುಮಾಡಿದೆ.1
- ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.1
- ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.2
- ಮೊಳಕಾಲ್ಮೂರು ಮಂಡಲದ ವತಿಯಿಂದ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ಅವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿನ ಬರ ಪರಿಸ್ಥಿತಿಯನ್ನು ಅವರು ಸ್ಥಳದಲ್ಲೇ ಅವಲೋಕಿಸಿದರು. ಪರಿಶೀಲನೆಯ ಸಂದರ್ಭದಲ್ಲಿ ಮಳೆಯ ಕೊರತೆಯಿಂದ ಬೆಳೆಗಳಿಗೆ ಉಂಟಾಗಿರುವ ಹಾನಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವಿನ ಲಭ್ಯತೆ ಹಾಗೂ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸಮಗ್ರ ವರದಿ ಸಲ್ಲಿಸಿ, ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಜೆಪಿ ಮಂಡಲ ಪದಾಧಿಕಾರಿಗಳ ಜೊತೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಬರ ಪರಿಹಾರ ಯೋಜನೆಗಳ ಸೌಲಭ್ಯಗಳು ತ್ವರಿತವಾಗಿ ತಲುಪುವಂತೆ ನೋಡಿಕೊಳ್ಳಬೇಕೆಂದು ಅವರು ಸೂಚಿಸಿದರು. ಈ ಕಾರ್ಯಕ್ರಮದಲ್ಲಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮತ್ತು ರಾಜೇಶ್ ಬುರುಡೆಕಟ್ಟೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಜಗದೀಶ್, ಮಂಡಲ ಅಧ್ಯಕ್ಷರಾದ ಶ್ರೀರಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಎನ್.ಪಿ. ಪ್ರಭಾಕರ, ರೈತ ಮೋರ್ಚಾ ಅಧ್ಯಕ್ಷರಾದ ಗೋವಿಂದರಾಜ್, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಹಾಗೂ ಶಾಂತಾರಾಂ ಬಸಪತಿ, ಮಂಜಣ್ಣ, ಗಂಗಮೂರ್ತಿ, ಕರಿಬಸಪ್ಪ ಸಿದ್ದಣ್ಣ, ಭೀಮಣ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.2
- ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.1
- ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.4
- ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಹತ್ತಿರ ಸುಮಾರು ₹2.5 ಕೋಟಿ ವೆಚ್ಚದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಚಳ್ಳಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ನೆರವೇರಿಸಿದ್ದಾರೆ. ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದ ಶಾಸಕರು ಬಳಿಕ ಮಾತನಾಡಿದರು. ಈ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಚಳ್ಳಕೆರೆ ನಗರಸಭೆಯ ಕೆರೆ ಅಭಿವೃದ್ಧಿ ಶುಲ್ಕದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ನಗರಸಭಾ ವ್ಯಾಪ್ತಿಯ ಸೂಜಿಮಲ್ಲೇಶ್ವರ ನಗರದಿಂದ ಕಾಟಪ್ಪನಹಟ್ಟಿ ವರೆಗೆ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಪೌರಾಯುಕ್ತರಾದ ಡಾ. ನಾಗವೇಣಿ, ಕೆ.ಯು.ಡಬ್ಲೂ.ಎಸ್.ಡಿ.ಬಿ. ಕಾರ್ಯಪಾಲಕ ಅಭಿಯಂತರರಾದ ಮಲ್ಲೇಶ್ ನಾಯ್ಕ್, ಎಇಇ ಕುಸುಮ, ಎಇ ಒಬನಾಯಕ, ಇಂಜಿನಿಯರ್‌ಗಳಾದ ಲೋಕೇಶ್, ಚೇತನ್, ತಿಪ್ಪೇಸ್ವಾಮಿ, ವೆಂಕಟೇಶಲು ಹಾಗೂ ರುದ್ರಮುನಿ ಉಪಸ್ಥಿತರಿದ್ದರು. ಇವರೊಂದಿಗೆ ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿಟಿ ಶ್ರೀನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ನಗರಸಭೆ ಮಾಜಿ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ಪ್ರಕಾಶ್, ಮಲ್ಲಿಕಾರ್ಜುನ, ಚಳ್ಳಕೇರಪ್ಪ ಸೇರಿದಂತೆ ಪ್ರಮುಖ ಮುಖಂಡರಾದ ಸೈಯದ್, ಅತೀಕ್ ಕುರ್ ರೆಹಮಾನ್, ಮುಜೀಬ್ ವುಲ್ಲಾ, ಗೋವಿಂದರಾಜು, ಪ್ರಹ್ಲಾದ್, ಕೃಷ್ಣಮೂರ್ತಿ, ವೀರಭದ್ರ, ಎಂಬ. ಭಾಗ್ಯಮ್ಮ, ರಾಜೇಶ್ವರಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.1