ಚಿಕ್ಕಬಳ್ಳಾಪುರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ, ಜೂನ್ 12 ರಂದು ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಪಿ.ರಾಮಲಿಂಗೇಗೌಡ ಅವರು ಮಾತನಾಡಿ, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷಿತ ಬಾಲ್ಯ ದೊರೆಯುವಂತೆ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಬಾಲಾ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪಂಚಗಿರಿ ಬೋಧನಾ ಪ್ರೌಢ ಶಾಲೆ ಆವರಣದಲ್ಲಿ ನಡೆಸಲಾಯಿತು. ಬಾಲಾ ಕಾರ್ಮಿಕ ಪದ್ಧತಿಯು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇದು ದೇಶದ ಭವಿಷ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದು ನ್ಯಾಯಾಧೀಶ ರಾಮಲಿಂಗೇಗೌಡ ಅವರು ಒತ್ತಿ ಹೇಳಿದರು. ಯಾವುದೇ ಮಗು ಕಾರ್ಖಾನೆ, ಅಂಗಡಿ, ಹೋಟೆಲ್ ಅಥವಾ ಇನ್ನಾವುದೇ ಕೆಲಸಗಳಲ್ಲಿ ತೊಡಗಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಮಕ್ಕಳನ್ನು ಶಾಲೆಯಿಂದ ದೂರವಿಟ್ಟು ದುಡಿಮೆಗೆ ತಳ್ಳುವ ಪ್ರವೃತ್ತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ ಅವರು, ಶಿಕ್ಷಣವೇ ಮಕ್ಕಳ ಬದುಕನ್ನು ರೂಪಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಪೋಷಕರು ಮತ್ತು ಸಮಾಜ ಗಮನಹರಿಸಬೇಕು ಎಂದರು. ಸರ್ಕಾರದ ವಿವಿಧ ಇಲಾಖೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ನಾಗರಿಕ ಸಮಾಜ ಸಂಘಟನೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಬಾಲಾ ಕಾರ್ಮಿಕ ಪದ್ಧತಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ಜಿ ಪ್ರಭು ಅವರು ಮಾತನಾಡಿ, ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಶಾಲೆಗಳು, ವಸತಿ ಶಾಲೆಗಳು, ವಸತಿ ನಿಲಯಗಳು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ಸಹ ಕೆಲವು ಮಕ್ಕಳು ಪ್ರಸ್ತುತವೂ ಬಾಲಕಾರ್ಮಿಕತೆಗೆ ಒಳಗಾಗಿ ಶಿಕ್ಷಣದಿಂದ ವಂಚಿತರಾಗುತ್ತಿರುವುದು ದುರದೃಷ್ಟಕರ ಎಂದರು. ಬಾಲಕಾರ್ಮಿಕತೆಗೆ ಒಳಪಡಿಸುವುದು ಶಿಕ್ಷಾರ್ಹ ಮಹಾ ಅಪರಾಧವಾಗಿದ್ದು, ಇಂತಹ ಕೃತ್ಯಗಳಿಗೆ ಸಹಕರಿಸುವವರ ಮೇಲೆ ಜಿಲ್ಲೆಯಲ್ಲಿ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾರ್ಯಕ್ರಮದಲ್ಲಿ ಬಾಲಾ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಜಾಗೃತಿ ಜಾಥಾ ಕಾರ್ಯಕ್ರಮವು ಪಂಚಗಿರಿ ಬೋಧನಾ ಪ್ರೌಢ ಶಾಲೆಯಿಂದ ಜಿಲ್ಲಾ ಕನ್ನಡ ಭವನದವರೆಗೆ ಅದ್ದೂರಿಯಾಗಿ ನಡೆಯಿತು. ವಿವಿಧ ಶಾಲೆಗಳ ಮಕ್ಕಳು ಬಾಲಕಾರ್ಮಿಕತೆ ವಿರೋಧಿ ಸಂದೇಶಗಳ ಫಲಕಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಥಾ ಕಾರ್ಯಕ್ರಮದ ನಂತರ ಜಿಲ್ಲಾ ಕನ್ನಡ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಅವರು ಮಾತನಾಡಿ, ಕಾರ್ಮಿಕತೆಯನ್ನು ನಿಷೇಧಿಸಿ ಹಲವು ಕಾನೂನುಗಳು ಜಾರಿಯಲ್ಲಿದ್ದರೂ ಬಾಲಕಾರ್ಮಿಕತೆ ಪ್ರಸ್ತುತವೂ ಜಾರಿಯಲ್ಲಿರುವುದು ನಾಗರೀಕ ಸಮಾಜಕ್ಕೆ ತಲೆತಗ್ಗಿಸುವ ವಿಷಯ ಎಂದರು. ಮಕ್ಕಳ ಮೇಲೆ ಹಲವು ರೀತಿಯ ದೌರ್ಜನ್ಯ ಮತ್ತು ಶಿಕ್ಷೆ ನೀಡುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಸಂಬಂಧಪಟ್ಟವರನ್ನು ಗುರುತಿಸಿ ಮಕ್ಕಳ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ಉಪನ್ಯಾಸಕರು ಹಾಗೂ ಆಕಾಶವಾಣಿ ವರದಿಗಾರರಾದ ಎನ್ ಚಂದ್ರಶೇಖರ್ ಅವರು ಬಾಲಕಾರ್ಮಿಕತೆ ಪದ್ಧತಿಯ ನಿವಾರಣೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ, ಉಪವಿಭಾಗಾಧಿಕಾರಿ ಡಿ ಹೆಚ್ ಅಶ್ವಿನ್, ತಹಸೀಲ್ದಾರ್ ರಶ್ಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಮಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮುನಿರತ್ನಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಶಾಲಾ ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ವಿ.ರಮೇಶ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ, ಜೂನ್ 12 ರಂದು ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಪಿ.ರಾಮಲಿಂಗೇಗೌಡ ಅವರು ಮಾತನಾಡಿ, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷಿತ ಬಾಲ್ಯ ದೊರೆಯುವಂತೆ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಬಾಲಾ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪಂಚಗಿರಿ ಬೋಧನಾ ಪ್ರೌಢ ಶಾಲೆ ಆವರಣದಲ್ಲಿ ನಡೆಸಲಾಯಿತು. ಬಾಲಾ ಕಾರ್ಮಿಕ ಪದ್ಧತಿಯು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇದು ದೇಶದ ಭವಿಷ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ
ಎಂದು ನ್ಯಾಯಾಧೀಶ ರಾಮಲಿಂಗೇಗೌಡ ಅವರು ಒತ್ತಿ ಹೇಳಿದರು. ಯಾವುದೇ ಮಗು ಕಾರ್ಖಾನೆ, ಅಂಗಡಿ, ಹೋಟೆಲ್ ಅಥವಾ ಇನ್ನಾವುದೇ ಕೆಲಸಗಳಲ್ಲಿ ತೊಡಗಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಮಕ್ಕಳನ್ನು ಶಾಲೆಯಿಂದ ದೂರವಿಟ್ಟು ದುಡಿಮೆಗೆ ತಳ್ಳುವ ಪ್ರವೃತ್ತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ ಅವರು, ಶಿಕ್ಷಣವೇ ಮಕ್ಕಳ ಬದುಕನ್ನು ರೂಪಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಪೋಷಕರು ಮತ್ತು ಸಮಾಜ ಗಮನಹರಿಸಬೇಕು ಎಂದರು. ಸರ್ಕಾರದ ವಿವಿಧ ಇಲಾಖೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ನಾಗರಿಕ ಸಮಾಜ ಸಂಘಟನೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಬಾಲಾ ಕಾರ್ಮಿಕ ಪದ್ಧತಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ಜಿ ಪ್ರಭು ಅವರು ಮಾತನಾಡಿ, ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಶಾಲೆಗಳು, ವಸತಿ ಶಾಲೆಗಳು, ವಸತಿ ನಿಲಯಗಳು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ಸಹ
ಕೆಲವು ಮಕ್ಕಳು ಪ್ರಸ್ತುತವೂ ಬಾಲಕಾರ್ಮಿಕತೆಗೆ ಒಳಗಾಗಿ ಶಿಕ್ಷಣದಿಂದ ವಂಚಿತರಾಗುತ್ತಿರುವುದು ದುರದೃಷ್ಟಕರ ಎಂದರು. ಬಾಲಕಾರ್ಮಿಕತೆಗೆ ಒಳಪಡಿಸುವುದು ಶಿಕ್ಷಾರ್ಹ ಮಹಾ ಅಪರಾಧವಾಗಿದ್ದು, ಇಂತಹ ಕೃತ್ಯಗಳಿಗೆ ಸಹಕರಿಸುವವರ ಮೇಲೆ ಜಿಲ್ಲೆಯಲ್ಲಿ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾರ್ಯಕ್ರಮದಲ್ಲಿ ಬಾಲಾ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಜಾಗೃತಿ ಜಾಥಾ ಕಾರ್ಯಕ್ರಮವು ಪಂಚಗಿರಿ ಬೋಧನಾ ಪ್ರೌಢ ಶಾಲೆಯಿಂದ ಜಿಲ್ಲಾ ಕನ್ನಡ ಭವನದವರೆಗೆ ಅದ್ದೂರಿಯಾಗಿ ನಡೆಯಿತು. ವಿವಿಧ ಶಾಲೆಗಳ ಮಕ್ಕಳು ಬಾಲಕಾರ್ಮಿಕತೆ ವಿರೋಧಿ ಸಂದೇಶಗಳ ಫಲಕಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಥಾ ಕಾರ್ಯಕ್ರಮದ ನಂತರ ಜಿಲ್ಲಾ ಕನ್ನಡ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಅವರು ಮಾತನಾಡಿ, ಕಾರ್ಮಿಕತೆಯನ್ನು ನಿಷೇಧಿಸಿ ಹಲವು ಕಾನೂನುಗಳು ಜಾರಿಯಲ್ಲಿದ್ದರೂ ಬಾಲಕಾರ್ಮಿಕತೆ ಪ್ರಸ್ತುತವೂ ಜಾರಿಯಲ್ಲಿರುವುದು ನಾಗರೀಕ ಸಮಾಜಕ್ಕೆ ತಲೆತಗ್ಗಿಸುವ ವಿಷಯ ಎಂದರು. ಮಕ್ಕಳ ಮೇಲೆ ಹಲವು ರೀತಿಯ ದೌರ್ಜನ್ಯ ಮತ್ತು
ಶಿಕ್ಷೆ ನೀಡುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಸಂಬಂಧಪಟ್ಟವರನ್ನು ಗುರುತಿಸಿ ಮಕ್ಕಳ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ಉಪನ್ಯಾಸಕರು ಹಾಗೂ ಆಕಾಶವಾಣಿ ವರದಿಗಾರರಾದ ಎನ್ ಚಂದ್ರಶೇಖರ್ ಅವರು ಬಾಲಕಾರ್ಮಿಕತೆ ಪದ್ಧತಿಯ ನಿವಾರಣೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ, ಉಪವಿಭಾಗಾಧಿಕಾರಿ ಡಿ ಹೆಚ್ ಅಶ್ವಿನ್, ತಹಸೀಲ್ದಾರ್ ರಶ್ಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಮಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮುನಿರತ್ನಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಶಾಲಾ ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ವಿ.ರಮೇಶ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
- ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 13ನೇ ವರ್ಷದ ಆಡಳಿತಕ್ಕೆ ಕಾಲಿಟ್ಟ ಸಂದರ್ಭದಲ್ಲಿ, ಶಿಡ್ಲಘಟ್ಟ ನಗರದ ಶ್ರೀರಾಮ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಹಾಲಿನ ಅಭಿಷೇಕವನ್ನು ನೆರವೇರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮವು ಪ್ರಧಾನಿಯವರ ಈ ಮೈಲಿಗಲ್ಲನ್ನು ಸ್ಮರಿಸಲು ಆಯೋಜಿಸಲಾಗಿತ್ತು.1
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ದೇವನಹಳ್ಳಿಯಲ್ಲಿ ಜಿಲ್ಲಾ ಪಂಚಾಯಿತಿ (ಜಿ.ಪಂ.) ಮತ್ತು ತಾಲ್ಲೂಕು ಪಂಚಾಯಿತಿ (ತಾ.ಪಂ.) ಚುನಾವಣೆಗಳ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ಖಂಡಿತವಾಗಿಯೂ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಚುನಾವಣೆಗಳನ್ನು ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಗ್ರಾಮ ಪಂಚಾಯಿತಿ, ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ನಡೆಸುವುದಾಗಿ ಸಚಿವ ಈಶ್ವರ್ ಖಂಡ್ರೆ ಪುನರುಚ್ಚರಿಸಿದ್ದಾರೆ.1
- ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.1
- ಮುಂಗಾರು ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಡಿಎಪಿ ಮತ್ತು ಯೂರಿಯಾ ಗೊಬ್ಬರದ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಕೆಲವೆಡೆ ಗೊಬ್ಬರದ ಕೃತಕ ಅಭಾವವನ್ನು ಸೃಷ್ಟಿಸಿ ರೈತರನ್ನು ಶೋಷಿಸಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೆಆರ್‌ಎಸ್ ಪಕ್ಷದ ಬಳ್ಳಾರಿ ಜಿಲ್ಲಾ ಘಟಕವು ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಮಾರುಕಟ್ಟೆ ಪರಿಶೀಲನೆ ನಡೆಸಿ, ಅಕ್ರಮ ದರದಲ್ಲಿ ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಅಲ್ಲದೆ, ರೈತರಿಗೆ ನಿಗದಿತ ದರದಲ್ಲಿ ಗೊಬ್ಬರ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ರೈತರ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ, ಪಕ್ಷವು ಹೋರಾಟ ನಡೆಸಲಿದೆ ಎಂದು ಕೆಆರ್‌ಎಸ್ ಪಕ್ಷ ಎಚ್ಚರಿಕೆ ನೀಡಿದೆ.1
- ಹೆಚ್.ಎಂ. ಆನಂದ್ ಕುಮಾರ್ ಅವರು ಹೆಬ್ಬಟದಲ್ಲಿ 65 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಲೇಖನಿಗಳನ್ನು ವಿತರಿಸಿದ್ದಾರೆ. ವಿದ್ಯಾರ್ಥಿಗಳ ಕಲಿಕೆಗೆ ಕೈಜೋಡಿಸುವ ಉದ್ದೇಶದಿಂದ ಕೈಗೊಂಡ ಈ ಕಾರ್ಯವು, ಶಿಕ್ಷಣ ಸೇವೆಗೆ ಮತ್ತೊಂದು ಮೆಚ್ಚುಗೆಯ ಹೆಜ್ಜೆಯಾಗಿದೆ.1
- ಅಬೀಬಾ ಟೆಂಟ್ ಹೌಸ್ ಬೆಂಗಳೂರಿನಲ್ಲಿ ಬಾಡಿಗೆ ಸೇವೆಗಳನ್ನು ಒದಗಿಸುತ್ತದೆ. ಈ ಸೇವೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಅಥವಾ ಬಾಡಿಗೆ ಪಡೆಯಲು 7760976887 ಮತ್ತು 9900619376 ಸಂಖ್ಯೆಗಳಿಗೆ ಸಂಪರ್ಕಿಸಬಹುದು.1
- ಬೆಂಗಳೂರು ನಗರದ ವೈಟ್‌ಫೀಲ್ಡ್‌ನಲ್ಲಿ ಪೂಜೆಯ ನೆಪದಲ್ಲಿ ಚಿನ್ನಾಭರಣ ಕಳವು ಮಾಡಿದ ಆರೋಪ ಕೇಳಿಬಂದಿದೆ. ಒಬ್ಬ ಮಹಿಳೆ ನಂಬಿಸಿ ಚಿನ್ನಾಭರಣಗಳನ್ನು ಕಳವು ಮಾಡಿ ನಂತರ ಸ್ಥಳದಿಂದ ಪರಾರಿಯಾಗಿದ್ದಾಳೆ ಎಂದು ಆರೋಪಿಸಲಾಗಿದೆ.1
- ಶಿಕ್ಷಕರಿಂದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಒಂದು ವಿಡಿಯೋ ವೈರಲ್ ಆಗಿದೆ. ಈ ವೈರಲ್ ವಿಡಿಯೋ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡು ಎಫ್‌ಐಆರ್ ನೊಂದಾಯಿಸಲಾಗಿದೆ. ವೇಗ ನ್ಯೂಸ್ ಕನ್ನಡವು ಈ ಘಟನೆಯನ್ನು ಕೇವಲ ಸುದ್ದಿಯಾಗಿ ಮಾತ್ರವೇ ವರದಿ ಮಾಡಿದ್ದು, ಯಾವುದೇ ರೀತಿಯ ಹಿಂಸಾಚಾರವನ್ನು ಪ್ರಚೋದಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.1