logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಮಕೂರು ದಸರಾ–2026ರ ಲಾಂಛನ ಬಿಡುಗಡೆ: ಎಲ್ಲರ ಸಹಭಾಗಿತ್ವಕ್ಕೆ ಮಾನ್ಯ ಡಾ. ಜಿ. ಪರಮೇಶ್ವರ ರವರು ಕರೆ ತುಮಕೂರು ದಸರಾ–2026ರ ಲಾಂಛನ ಬಿಡುಗಡೆ: ಎಲ್ಲರ ಸಹಭಾಗಿತ್ವಕ್ಕೆ ಮಾನ್ಯ ಡಾ. ಜಿ. ಪರಮೇಶ್ವರ ರವರು ಕರೆ 2024 ಮತ್ತು 2025ನೇ ಸಾಲಿನಲ್ಲಿ ಎಲ್ಲರನ್ನು ಒಳಗೊಂಡಂತೆ ಅತ್ಯಂತ ವಿಜೃಂಭಣೆಯಿಂದ ನಡೆದ ತುಮಕೂರು ದಸರಾ, ಜಿಲ್ಲೆಯ ಜನರ ಅಪಾರ ಬೆಂಬಲ, ಸಹಕಾರ ಹಾಗೂ ಸಕ್ರಿಯ ಭಾಗವಹಿಸುವಿಕೆಯಿಂದ ಮನೆಮಾತಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಹಾಗೂ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿಯೂ ಮತ್ತಷ್ಟು ವೈಭವ ಹಾಗೂ ವೈವಿಧ್ಯತೆಯಿಂದ ಆಚರಿಸಲಾಗುತ್ತಿದೆ. ತುಮಕೂರು ದಸರಾ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಜಿಲ್ಲೆಯ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು, ಕಲೆ, ಸಂಸ್ಕೃತಿ ಹಾಗೂ ಜನಸಹಭಾಗಿತ್ವವನ್ನು ಒಗ್ಗೂಡಿಸುವ ಉತ್ಸವವಾಗಿ ರೂಪುಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರು ದಸರಾ–2026ರ ಲಾಂಛನವನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ದಸರಾ ಮಹೋತ್ಸವದ ಉದ್ದೇಶ, ಕಳೆದ ಎರಡು ವರ್ಷಗಳ ಯಶಸ್ಸು ಹಾಗೂ ಈ ಬಾರಿಯ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕರು, ತುಮಕೂರು ದಸರಾ ಸೇರಿದಂತೆ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳಿಗೆ ತಮ್ಮ ಹಾಗೂ ತಮ್ಮ ಕ್ಷೇತ್ರದ ವತಿಯಿಂದ ಸದಾ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಪಂಜಿನ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ. ಉಪಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಮಾತನಾಡಿ, ತುಮಕೂರು ದಸರಾ–2026ರ ಎಲ್ಲಾ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಅತ್ಯಂತ ಗೌರವಪೂರ್ವಕವಾಗಿ ಮನವಿ ಮಾಡಿದರು. ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ಹಾಗೂ ಮಾಧ್ಯಮಗಳು ಸಹಕಾರ ನೀಡಿ ದಸರಾ ವೈಭವವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಕೋರಿದರು. Dr. G.PARAMESHWARA

1 hr ago
user_Kiran Kumar T S
Kiran Kumar T S
Video Creator ತುಮಕೂರು, ತುಮಕೂರು, ಕರ್ನಾಟಕ•
1 hr ago
71c53611-ce7b-42b1-89e1-8b900115588c

ತುಮಕೂರು ದಸರಾ–2026ರ ಲಾಂಛನ ಬಿಡುಗಡೆ: ಎಲ್ಲರ ಸಹಭಾಗಿತ್ವಕ್ಕೆ ಮಾನ್ಯ ಡಾ. ಜಿ. ಪರಮೇಶ್ವರ ರವರು ಕರೆ ತುಮಕೂರು ದಸರಾ–2026ರ ಲಾಂಛನ ಬಿಡುಗಡೆ: ಎಲ್ಲರ ಸಹಭಾಗಿತ್ವಕ್ಕೆ ಮಾನ್ಯ ಡಾ. ಜಿ. ಪರಮೇಶ್ವರ ರವರು ಕರೆ 2024 ಮತ್ತು 2025ನೇ ಸಾಲಿನಲ್ಲಿ ಎಲ್ಲರನ್ನು ಒಳಗೊಂಡಂತೆ ಅತ್ಯಂತ ವಿಜೃಂಭಣೆಯಿಂದ ನಡೆದ ತುಮಕೂರು ದಸರಾ, ಜಿಲ್ಲೆಯ ಜನರ ಅಪಾರ ಬೆಂಬಲ, ಸಹಕಾರ ಹಾಗೂ ಸಕ್ರಿಯ ಭಾಗವಹಿಸುವಿಕೆಯಿಂದ ಮನೆಮಾತಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ, ವಿಜ್ಞಾನ,

781c3d01-8bf9-4730-bda3-757cf1d48caf

ತಂತ್ರಜ್ಞಾನ ಹಾಗೂ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿಯೂ ಮತ್ತಷ್ಟು ವೈಭವ ಹಾಗೂ ವೈವಿಧ್ಯತೆಯಿಂದ ಆಚರಿಸಲಾಗುತ್ತಿದೆ. ತುಮಕೂರು ದಸರಾ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಜಿಲ್ಲೆಯ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು, ಕಲೆ, ಸಂಸ್ಕೃತಿ ಹಾಗೂ ಜನಸಹಭಾಗಿತ್ವವನ್ನು ಒಗ್ಗೂಡಿಸುವ ಉತ್ಸವವಾಗಿ ರೂಪುಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರು ದಸರಾ–2026ರ ಲಾಂಛನವನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ

188e0782-ecb5-4c18-a3a7-841a9b00648b

ಜಿಲ್ಲಾಧಿಕಾರಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ದಸರಾ ಮಹೋತ್ಸವದ ಉದ್ದೇಶ, ಕಳೆದ ಎರಡು ವರ್ಷಗಳ ಯಶಸ್ಸು ಹಾಗೂ ಈ ಬಾರಿಯ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕರು, ತುಮಕೂರು ದಸರಾ ಸೇರಿದಂತೆ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳಿಗೆ ತಮ್ಮ ಹಾಗೂ ತಮ್ಮ ಕ್ಷೇತ್ರದ ವತಿಯಿಂದ ಸದಾ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಪಂಜಿನ ಕವಾಯತು, ಸಾಂಸ್ಕೃತಿಕ

c61ed393-a149-46fe-bc37-8d9ce8f2c03b

ಕಾರ್ಯಕ್ರಮಗಳು ಹಾಗೂ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ. ಉಪಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಮಾತನಾಡಿ, ತುಮಕೂರು ದಸರಾ–2026ರ ಎಲ್ಲಾ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಅತ್ಯಂತ ಗೌರವಪೂರ್ವಕವಾಗಿ ಮನವಿ ಮಾಡಿದರು. ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ಹಾಗೂ ಮಾಧ್ಯಮಗಳು ಸಹಕಾರ ನೀಡಿ ದಸರಾ ವೈಭವವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಕೋರಿದರು. Dr. G.PARAMESHWARA

More news from ಕರ್ನಾಟಕ and nearby areas
  • ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    1
    ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ
    1
    ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ 
ಮುಖಂಡರಿಂದ ಖಡಕ್ ಎಚ್ಚರಿಕೆ
ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ 
ಮುಖಂಡರಿಂದ ಖಡಕ್ ಎಚ್ಚರಿಕೆ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    1
    ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ
ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು.
ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ
ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    16 hrs ago
  • ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು
    1
    ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು
    user_Lokesh bvINCHARATV
    Lokesh bvINCHARATV
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    1
    ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    10 hrs ago
  • ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    3
    ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ.
ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    15 hrs ago
  • ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ
    1
    ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ 
ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ 
ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ 
ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    13 hrs ago
  • ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    1
    ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ
ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ .
ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ .
44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ 
ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ
44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು
    1
    ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ
ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ  ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.