Shuru
Apke Nagar Ki App…
ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಸಾವು ವಿಜಯಪುರ: ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ. ಇದೇ ವೇಳೆ ಮಕ್ಕಳನ್ನು ರಕ್ಷಿಸಲು ಹೋದ ತಂದೆಯೂ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ತೋಟದ ಮನೆಯ ಬಳಿ ಇದ್ದ ತೆರೆದ ಬಾವಿಗೆ ಬಿದ್ದು ಸಾಕ್ಷಿ (15), ರಕ್ಷಿತಾ (10) ಮೃತ ಪಟ್ಟಿದ್ದಾರೆ. ಮಕ್ಕಳನ್ನು ರಕ್ಷಿಸಲು ಬಾವಿಗೆ ಜಿಗಿದ ತಂದೆ ಸಾಬಣ್ಣ (40) ಅವರೂ ನಾಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿಯೇ ಇಬ್ಬರು ಹೆಣ್ಣು ಮಕ್ಕಳ ಮೃತದೇಹ ಪತ್ತೆಯಾಗಿದ್ದವು. ಸಾಬಣ್ಣ ಅವರ ಶವಕ್ಕಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Shubha @ SH

More news from ಕರ್ನಾಟಕ and nearby areas
- ಈದ್ ಮಿಲಾದ್ ಹಿನ್ನೆಲೆ ಜಮಖಂಡಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಈದ್ ಮಿಲಾದ್ ಮೆರವಣಿಗೆ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ ಶಾಂತಿಯುತ ಹಬ್ಬಕ್ಕೆ ಸಾರ್ವಜನಿಕರ ಸಹಕಾರ ಕೋರಿದ ಎಸ್‌ಪಿ ಸಿದ್ದಾರ್ಥ ಗೋಯಲ್1
- ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು1
- ಬಾಗಲಕೋಟೆ ನಗರದಲ್ಲಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಿಸಲಾಯಿತು.1
- ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು. ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು. ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು. ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿ ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.1
- ಮುಧೋಳದಲ್ಲಿ ಈದ್ ಮಿಲಾದ್: ಶಾಂತಿ ಸುವ್ಯವಸ್ಥೆಗಾಗಿ ಪೊಲೀಸರ ಆಕರ್ಷಕ ಪಥಸಂಚಲನ ಮುಧೋಳ: ನಾಳೆಯ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳವಾರ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಈ ಪಥಸಂಚಲನವು ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ, ತಂಬಾಕ್ ಚೌಕ, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತು. ಈ ವೇಳೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಮಾತನಾಡಿದ ಸಿಪಿಐ ಎಂ. ನಾಗರಡ್ಡಿ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಹಬ್ಬದ ವಾತಾವರಣವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಪಥಸಂಚಲನದಲ್ಲಿ ಸಿಪಿಐ ಎಂ. ನಾಗರಡ್ಡಿ, ಮುಧೋಳ ಪಿಎಸ್‌ಐ ಅಜೀತಕುಮಾರ ಹೊಸಮನಿ, ಲೋಕಾಪುರ ಪಿಎಸ್‌ಐ ಕಾಡಪ್ಪ ಜಕ್ಕಣ್ಣವರ, ಕ್ರೈಂ ಪಿಎಸ್‌ಐ ಪ್ರಕಾಶ ಮುರನಾಳ ಹಾಗೂ ಇಲಾಖೆಯ ಸಿಬ್ಬಂದಿಯಾದ ವಸಂತ್ ಬೀಳಗಿ, ಮಲ್ಲು ವಗ್ಗೇನವರ, ಹಣಮಂತ ಮಾದರ, ಮನೋಹರ ಕುರಿ ಸೇರಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಒಟ್ಟು 180ಕ್ಕೂ ಹೆಚ್ಚು ಅಧಿಕ ಸಿಬ್ಬಂದಿ ಭಾಗವಹಿಸಿದ್ದರು.1
- ಜಮಖಂಡಿಯಲ್ಲಿ ಗ್ಯಾಸ್ ಲೀಕ್; ಬೆಂಕಿ ಅವಘಡ! 🔴 ೬೭ ವರ್ಷದ ವೃದ್ಧೆಗೆ ಸಣ್ಣಪುಟ್ಟ ಸುಟ್ಟ ಗಾಯ 🔴 ಅಗ್ನಿಶಾಮಕ ದಳದಿಂದ ಸಮಯಕ್ಕೆ ಸರಿಯಾಗಿ ರಕ್ಷಣೆ 🔴 ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ1