logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೆಲ್ಮಟ್ ಧರಿಸಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ನಕಲಿ 'ಗೂಗಲ್ ಪೇ' ಪಾವತಿ,ಸಾವಿರಾರು ರೂ ವಂಚನೆ ಪುತ್ತೂರು: ಹೆಲ್ಮಟ್ ಧರಿಸಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನಕಲಿ 'ಗೂಗಲ್ ಪೇ' ಪಾವತಿಯ ನಟನೆಯಿಂದ ಸ್ಥಳೀಯ ಅಂಗಡಿಯೊಂದಕ್ಕೆ ಸಾವಿರಾರು ರೂಪಾಯಿ ವಂಚಿಸಿ ಪರಾರಿಯಾದ ಘಟನೆ ಆ. 26ರ ಸಂಜೆ ಪುತ್ತೂರು ತಾಲ್ಲೂಕು ಹೊರವಲಯದ ಕುಂಬ್ರದ ಗಾಣಿಗ ಆಯಿಲ್ ಮಿಲ್‌ನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದು ಇಳಿದ ಅಪರಿಚಿತ ವ್ಯಕ್ತಿಯೊಬ್ಬ, ತನ್ನ ಮುಖ ಕಾಣಿಸದಂತೆ ಹೆಲ್ಮಟ್ ಧರಿಸಿಕೊಂಡೇ ಅಂಗಡಿಗೆ ಪ್ರವೇಶಿಸಿದ್ದಾನೆ. ಬಳಿಕ 200 ರೂಪಾಯಿ ಮೌಲ್ಯದ ತೆಂಗಿನ ಎಣ್ಣೆ ಖರೀದಿಸಿ, ತನಗೆ ಜರೂರಾಗಿ 1,000 ರೂಪಾಯಿ ನಗದು (ಕ್ಯಾಶ್) ಅಗತ್ಯವಿದೆ ಎಂದು ಅಂಗಡಿ ಮಾಲಕಿಯಲ್ಲಿ ವಿನಂತಿಸಿಕೊಂಡಿದ್ದಾನೆ. ಬದಲಿಗೆ ಎಣ್ಣೆಯ ಬೆಲೆ ಸೇರಿ ಒಟ್ಟು 1,200 ರೂಪಾಯಿಯನ್ನು ತಕ್ಷಣವೇ ಗೂಗಲ್ ಪೇ ಮೂಲಕ ಪಾವತಿಸುವುದಾಗಿ ನಂಬಿಸಿದ್ದಾನೆ. ಅತನ ಮಾತನ್ನು ನಂಬಿದ ಅಂಗಡಿ ಮಾಲಕಿ, 200 ರೂ. ಮೌಲ್ಯದ ತೆಂಗಿನ ಎಣ್ಣೆ ಹಾಗೂ 1,000 ರೂ. ನಗದನ್ನು ಆತನಿಗೆ ನೀಡಿದ್ದಾರೆ. ಈ ವೇಳೆ ತನ್ನ ಮೊಬೈಲ್‌ನಲ್ಲಿ ಹಣ ಪಾವತಿಸಿದಂತೆ ನಟಿಸಿದ ಆ ವ್ಯಕ್ತಿ, ಕ್ಷಣಾರ್ಧದಲ್ಲಿ ಅಲ್ಲಿಂದ ಸ್ಕೂಟರ್ ಏರಿ ಕಾಲೆಗೆದಿದ್ದಾನೆ. ನಂತರ ಪರಿಶೀಲಿಸಿದಾಗ ಖಾತೆಗೆ ಹಣ ಜಮೆಯಾಗದಿರುವುದು ಬೆಳಕಿಗೆ ಬಂದಿದ್ದು, ಅಂಗಡಿಯವರಿಗೆ ಹಣವೂ ಸಿಗದೆ, ಎಣ್ಣೆಯೂ ಇಲ್ಲದೆ ವಂಚನೆಗೊಳಗಾಗಿದ್ದಾರೆ. ಘಟನೆಯುದ್ದಕ್ಕೂ ಆತ ಹೆಲ್ಮಟ್ ಕಳಚದೆ ಮುಖ ಮರೆಸಿಕೊಂಡೇ ಕೃತ್ಯ ಎಸಗಿದ್ದಾನೆ. ಡಿಜಿಟಲ್ ಪಾವತಿಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹೊಸ ಮಾದರಿಯ ವಂಚನೆಗಳ ಬಗ್ಗೆ ಸ್ಥಳೀಯ ವರ್ತಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕಾಗಿ ವಿನಂತಿಸಲಾಗಿದೆ.

54 min ago
user_UMAPRASAD
UMAPRASAD
ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
54 min ago
81b5acf9-e29d-412d-a5d1-12a9486bf573

ಹೆಲ್ಮಟ್ ಧರಿಸಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ನಕಲಿ 'ಗೂಗಲ್ ಪೇ' ಪಾವತಿ,ಸಾವಿರಾರು ರೂ ವಂಚನೆ ಪುತ್ತೂರು: ಹೆಲ್ಮಟ್ ಧರಿಸಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನಕಲಿ 'ಗೂಗಲ್ ಪೇ' ಪಾವತಿಯ ನಟನೆಯಿಂದ ಸ್ಥಳೀಯ ಅಂಗಡಿಯೊಂದಕ್ಕೆ ಸಾವಿರಾರು ರೂಪಾಯಿ ವಂಚಿಸಿ ಪರಾರಿಯಾದ ಘಟನೆ ಆ. 26ರ ಸಂಜೆ ಪುತ್ತೂರು ತಾಲ್ಲೂಕು ಹೊರವಲಯದ ಕುಂಬ್ರದ ಗಾಣಿಗ ಆಯಿಲ್ ಮಿಲ್‌ನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದು ಇಳಿದ ಅಪರಿಚಿತ ವ್ಯಕ್ತಿಯೊಬ್ಬ, ತನ್ನ ಮುಖ ಕಾಣಿಸದಂತೆ ಹೆಲ್ಮಟ್ ಧರಿಸಿಕೊಂಡೇ ಅಂಗಡಿಗೆ ಪ್ರವೇಶಿಸಿದ್ದಾನೆ. ಬಳಿಕ 200 ರೂಪಾಯಿ ಮೌಲ್ಯದ ತೆಂಗಿನ ಎಣ್ಣೆ ಖರೀದಿಸಿ, ತನಗೆ ಜರೂರಾಗಿ 1,000 ರೂಪಾಯಿ ನಗದು (ಕ್ಯಾಶ್) ಅಗತ್ಯವಿದೆ ಎಂದು ಅಂಗಡಿ ಮಾಲಕಿಯಲ್ಲಿ ವಿನಂತಿಸಿಕೊಂಡಿದ್ದಾನೆ. ಬದಲಿಗೆ ಎಣ್ಣೆಯ ಬೆಲೆ ಸೇರಿ ಒಟ್ಟು 1,200 ರೂಪಾಯಿಯನ್ನು ತಕ್ಷಣವೇ ಗೂಗಲ್ ಪೇ ಮೂಲಕ ಪಾವತಿಸುವುದಾಗಿ ನಂಬಿಸಿದ್ದಾನೆ. ಅತನ ಮಾತನ್ನು ನಂಬಿದ ಅಂಗಡಿ ಮಾಲಕಿ, 200 ರೂ. ಮೌಲ್ಯದ ತೆಂಗಿನ ಎಣ್ಣೆ ಹಾಗೂ 1,000 ರೂ. ನಗದನ್ನು ಆತನಿಗೆ ನೀಡಿದ್ದಾರೆ. ಈ ವೇಳೆ ತನ್ನ ಮೊಬೈಲ್‌ನಲ್ಲಿ ಹಣ ಪಾವತಿಸಿದಂತೆ ನಟಿಸಿದ ಆ ವ್ಯಕ್ತಿ, ಕ್ಷಣಾರ್ಧದಲ್ಲಿ ಅಲ್ಲಿಂದ ಸ್ಕೂಟರ್ ಏರಿ ಕಾಲೆಗೆದಿದ್ದಾನೆ. ನಂತರ ಪರಿಶೀಲಿಸಿದಾಗ ಖಾತೆಗೆ ಹಣ ಜಮೆಯಾಗದಿರುವುದು ಬೆಳಕಿಗೆ ಬಂದಿದ್ದು, ಅಂಗಡಿಯವರಿಗೆ ಹಣವೂ ಸಿಗದೆ, ಎಣ್ಣೆಯೂ ಇಲ್ಲದೆ ವಂಚನೆಗೊಳಗಾಗಿದ್ದಾರೆ. ಘಟನೆಯುದ್ದಕ್ಕೂ ಆತ ಹೆಲ್ಮಟ್ ಕಳಚದೆ ಮುಖ ಮರೆಸಿಕೊಂಡೇ ಕೃತ್ಯ ಎಸಗಿದ್ದಾನೆ. ಡಿಜಿಟಲ್ ಪಾವತಿಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹೊಸ ಮಾದರಿಯ ವಂಚನೆಗಳ ಬಗ್ಗೆ ಸ್ಥಳೀಯ ವರ್ತಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕಾಗಿ ವಿನಂತಿಸಲಾಗಿದೆ.

More news from ಕರ್ನಾಟಕ and nearby areas
  • ಆಗಸ್ಟ್ 29 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ ದಿನಾಂಕ 29.08.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ 110/33/11 ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಮರೋಳಿ ಫೀಡರ್‌ನಲ್ಲಿ ವ್ಯವಸ್ಥೆ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮರೋಳಿ, ಜಯನಗರ, ವಸಂತನಗರ, ಏಂಜಲೋರ್‌ ಚರ್ಚ್‌  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ಆಗಸ್ಟ್ 29 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ
ದಿನಾಂಕ 29.08.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ 110/33/11 ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಮರೋಳಿ ಫೀಡರ್‌ನಲ್ಲಿ ವ್ಯವಸ್ಥೆ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮರೋಳಿ, ಜಯನಗರ, ವಸಂತನಗರ, ಏಂಜಲೋರ್‌ ಚರ್ಚ್‌  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
  • ವೈರಲ್ ಆಗುತ್ತಿದೆ ಪುಟ್ಟ ಮಗುವಿನ ನಂದಿ ವೇಷ | ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದಿದ್ದ ಯಕ್ಷಗಾನ
    1
    ವೈರಲ್ ಆಗುತ್ತಿದೆ ಪುಟ್ಟ ಮಗುವಿನ ನಂದಿ ವೇಷ | ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದಿದ್ದ ಯಕ್ಷಗಾನ
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
    1
    ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್‌ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ
ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    11 hrs ago
  • ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.
    1
    ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    10 hrs ago
  • ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.
    1
    ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ
ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.
ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ  ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ  ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ.
ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ.
ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು.
ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    9 hrs ago
  • ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.
    1
    ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.
    user_ಸುರೇಶ್ ಕೆ ಆರ್
    ಸುರೇಶ್ ಕೆ ಆರ್
    Farmer ಚನ್ನಗಿರಿ, ದಾವಣಗೆರೆ, ಕರ್ನಾಟಕ•
    4 hrs ago
  • ಹುಳಿಯಾರಿನಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಪೊಲೀಸರಿಂದ ಪಥಸಂಚಲನ -------------------- ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಹುಳಿಯಾರ್ನ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥಸಂಚಲನ ನಡೆಸಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಿದರು. ಎಲ್ಲಾ ಸಮುದಾಯದವರು ಪರಸ್ಪರ ಸೌಹಾರ್ದ ಮತ್ತು ಸಹಬಾಳ್ವೆಯಿಂದ ಹಬ್ಬ ಆಚರಿಸಬೇಕೆಂದು ಪೊಲೀಸರು ಮನವಿ ಮಾಡಿದರು.
    1
    ಹುಳಿಯಾರಿನಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಪೊಲೀಸರಿಂದ ಪಥಸಂಚಲನ
--------------------
           ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಹುಳಿಯಾರ್ನ ಪ್ರಮುಖ ರಸ್ತೆಗಳಲ್ಲಿ ಗುರುವಾರ  ಪಥಸಂಚಲನ ನಡೆಸಿದರು.
            ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಿದರು. 
             ಎಲ್ಲಾ ಸಮುದಾಯದವರು ಪರಸ್ಪರ ಸೌಹಾರ್ದ ಮತ್ತು ಸಹಬಾಳ್ವೆಯಿಂದ ಹಬ್ಬ ಆಚರಿಸಬೇಕೆಂದು ಪೊಲೀಸರು ಮನವಿ ಮಾಡಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    31 min ago
  • ಮಂಗಳೂರು ರೈಲ್ವೇ ಪ್ರದೇಶವನ್ನು ಮೈಸೂರು ವಲಯಕ್ಕೆ ಸೇರ್ಪಡೆಗೆ ಬಿಜೆಪಿ ಸ್ವಾಗತ ಮಂಗಳೂರು ರೈಲ್ವೇ ಪ್ರದೇಶವನ್ನು ಮೈಸೂರು ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಹೇಳಿದರು. ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರ ಲಭ್ಯತೆ ಆಧರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಸಚಿವ ವಿ. ಸೋಮಣ್ಣ, ಸಂಸದ ಬ್ರಿಜೇಶ್‌ ಚೌಟ ಹಾಗೂ ದ. ಕ.ದ ಹಿಂದಿನ ಸಂಸದರು ಈ ಬಗ್ಗೆ ಬಹಳಷ್ಟು ಶ್ರಮಪಟ್ಟಿದ್ದಾರೆ. ಕೇಂದ್ರ ಸರಕಾರದ ನಿರ್ಧಾರವು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿದೆ. ಕೇರಳದ ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌ ಅವರೂ ಈ ನಿರ್ಧಾರದಿಂದ ಕೇರಳಕ್ಕೆ ತೊಂದರೆಯಾಗುವುದಿಲ್ಲ ಮತ್ತು ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಸ್ಥಳೀಯ ಕಾಂಗ್ರೆಸ್‌ ನಾಯಕರು ಬೆಂಬಲಿಸಿಲ್ಲ ಎಂದರು. ರೈಲುಗಳು ಮಂಗಳೂರು ಸೆಂಟ್ರಲ್‌ ಬದಲಿಗೆ ಪಡೀಲ್‌ ಮಾರ್ಗವಾಗಿ ಸಂಚರಿ ಸಿದರೆ ಸುಮಾರು ಒಂದೂ ವರೆ ಗಂಟೆ ಸಮಯ ಉಳಿತಾಯ ಆಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಉಡುಪಿ ಹಾಗೂ ದ.ಕ.ದ ಸಂಸದರ ಮಟ್ಟದಲ್ಲಿರುವ ಸಣ್ಣಪುಟ್ಟ ಅಭಿಪ್ರಾಯ ಭಿನ್ನತೆಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದರು.
    1
    ಮಂಗಳೂರು ರೈಲ್ವೇ ಪ್ರದೇಶವನ್ನು ಮೈಸೂರು ವಲಯಕ್ಕೆ ಸೇರ್ಪಡೆಗೆ ಬಿಜೆಪಿ ಸ್ವಾಗತ
ಮಂಗಳೂರು ರೈಲ್ವೇ ಪ್ರದೇಶವನ್ನು ಮೈಸೂರು ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಹೇಳಿದರು.
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರ ಲಭ್ಯತೆ ಆಧರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಸಚಿವ ವಿ. ಸೋಮಣ್ಣ, ಸಂಸದ ಬ್ರಿಜೇಶ್‌ ಚೌಟ ಹಾಗೂ ದ. ಕ.ದ ಹಿಂದಿನ ಸಂಸದರು ಈ ಬಗ್ಗೆ ಬಹಳಷ್ಟು ಶ್ರಮಪಟ್ಟಿದ್ದಾರೆ. ಕೇಂದ್ರ ಸರಕಾರದ ನಿರ್ಧಾರವು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿದೆ. ಕೇರಳದ ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌ ಅವರೂ ಈ ನಿರ್ಧಾರದಿಂದ ಕೇರಳಕ್ಕೆ ತೊಂದರೆಯಾಗುವುದಿಲ್ಲ ಮತ್ತು ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಸ್ಥಳೀಯ ಕಾಂಗ್ರೆಸ್‌ ನಾಯಕರು ಬೆಂಬಲಿಸಿಲ್ಲ ಎಂದರು.
ರೈಲುಗಳು ಮಂಗಳೂರು ಸೆಂಟ್ರಲ್‌ ಬದಲಿಗೆ ಪಡೀಲ್‌ ಮಾರ್ಗವಾಗಿ ಸಂಚರಿ ಸಿದರೆ ಸುಮಾರು ಒಂದೂ ವರೆ ಗಂಟೆ ಸಮಯ ಉಳಿತಾಯ ಆಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಉಡುಪಿ ಹಾಗೂ ದ.ಕ.ದ ಸಂಸದರ ಮಟ್ಟದಲ್ಲಿರುವ ಸಣ್ಣಪುಟ್ಟ ಅಭಿಪ್ರಾಯ ಭಿನ್ನತೆಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.