ನಾಗಸಮುದ್ರದಲ್ಲಿ ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಇಂದು ಭಕ್ತಿಭಾವದಿಂದ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಗ್ರಾಮದ ವಿವಿಧ ಬಾಗಗಳಲ್ಲಿ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದ್ದು, ಗಣಪತಿ ಮೂರ್ತಿಯನ್ನು ವಿಶೇಷವಾಗಿ ಸುಂದರವಾಗಿ ಅಲಂಕರಿಸಿ ಪ್ರತಿಷ್ಠಾಪಿಸಲಾಯಿತು. ವಿವಿಧ ಬಣ್ಣಗಳ ಹೂವುಗಳು ಹಾಗೂ ಅಲಂಕಾರಿಕ ವಸ್ತುಗಳಿಂದ ಗಣಪತಿ ಮಂಟಪವನ್ನು ಸಿಂಗಾರಿಸಲಾಗಿತ್ತು. ಗಣಪತಿಗೆ ಪ್ರಿಯವಾದ ಕಡಬು ಸೇರಿದಂತೆ ವಿವಿಧ ನೈವೇದ್ಯಗಳನ್ನು ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗಣಪತಿ ಮೂರ್ತಿಗೆ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆಯಿತು. ಗ್ರಾಮದ ಭಕ್ತರು, ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣಪತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಶಾಂತಿ, ಸಮೃದ್ಧಿ ಹಾಗೂ ಎಲ್ಲರಿಗೂ ಸುಖ-ಸಂತೋಷ ಕರುಣಿಸುವಂತೆ ಗಣಪತಿಯಲ್ಲಿ ಪ್ರಾರ್ಥಿಸಲಾಯಿತು.ಗಣಪತಿ ಬಪ್ಪಾ ಮೋರಿಯಾ ಎಂಬ ಘೋಷಣೆಗಳೊಂದಿಗೆ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.
ನಾಗಸಮುದ್ರದಲ್ಲಿ ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಇಂದು ಭಕ್ತಿಭಾವದಿಂದ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಗ್ರಾಮದ ವಿವಿಧ ಬಾಗಗಳಲ್ಲಿ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ
ಹಬ್ಬದ ವಾತಾವರಣ ಮನೆ ಮಾಡಿದ್ದು, ಗಣಪತಿ ಮೂರ್ತಿಯನ್ನು ವಿಶೇಷವಾಗಿ ಸುಂದರವಾಗಿ ಅಲಂಕರಿಸಿ ಪ್ರತಿಷ್ಠಾಪಿಸಲಾಯಿತು. ವಿವಿಧ ಬಣ್ಣಗಳ ಹೂವುಗಳು ಹಾಗೂ ಅಲಂಕಾರಿಕ ವಸ್ತುಗಳಿಂದ ಗಣಪತಿ ಮಂಟಪವನ್ನು ಸಿಂಗಾರಿಸಲಾಗಿತ್ತು. ಗಣಪತಿಗೆ ಪ್ರಿಯವಾದ ಕಡಬು ಸೇರಿದಂತೆ ವಿವಿಧ ನೈವೇದ್ಯಗಳನ್ನು
ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗಣಪತಿ ಮೂರ್ತಿಗೆ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆಯಿತು. ಗ್ರಾಮದ ಭಕ್ತರು, ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣಪತಿಯ ದರ್ಶನ ಪಡೆದು ವಿಶೇಷ
ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಶಾಂತಿ, ಸಮೃದ್ಧಿ ಹಾಗೂ ಎಲ್ಲರಿಗೂ ಸುಖ-ಸಂತೋಷ ಕರುಣಿಸುವಂತೆ ಗಣಪತಿಯಲ್ಲಿ ಪ್ರಾರ್ಥಿಸಲಾಯಿತು.ಗಣಪತಿ ಬಪ್ಪಾ ಮೋರಿಯಾ ಎಂಬ ಘೋಷಣೆಗಳೊಂದಿಗೆ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..2
- ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle1
- ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್1
- ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ *ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು. ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ , ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ‍್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ , ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯಾಯಲಯದ ಮೊರೆ ಹೋಗಲಾಗುವುದು. ತಾವು ಕಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು , ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು , ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲೆಗಳ ಕ್ಷೇಮಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಟ್ಟರು. ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು ಭರವಸೆ ನೀಡಿದರು , ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ. ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4