Shuru
Apke Nagar Ki App…
ನೆಲಮಂಗಲದಲ್ಲಿ ಕಾರ್ ಬ್ರೋಕರ್ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಿಡ್ನಾಪ್ ಮಾಡಿ ₹1.09 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಯಶವಂತಪುರ ಮಾರುತಿ ಡಿ-360 ಸೆಕೆಂಡ್ ಕಾರ್ ಬ್ರೋಕರ್ ಶಿವಶಂಕರ್ ಎಂಬುವರ ಹಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ದರೋಡೆಕೋರರು ಕಾರಿನಲ್ಲಿದ್ದ ₹74 ಲಕ್ಷ ನಗದು ಮತ್ತು ಮನೆಯಲ್ಲಿದ್ದ ₹35 ಲಕ್ಷ ಸೇರಿ ಒಟ್ಟು ₹1.09 ಕೋಟಿ ರೂಪಾಯಿಗಳನ್ನು ದರೋಡೆ ಮಾಡಿ ಕಾರಿನಲ್ಲೇ ಪರಾರಿಯಾಗಿದ್ದಾರೆ. ಕಾರು ಮತ್ತು ಬೈಕ್‌ಗಳಲ್ಲಿ ಬಂದ ಐವರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಒಟ್ಟು ₹1 ಕೋಟಿ 9 ಲಕ್ಷ ರೂ. ದರೋಡೆ ಬಗ್ಗೆ ದೂರು ದಾಖಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ BNS 140(2), 310(2) ಅಡಿ ಪ್ರಕರಣ ದಾಖಲಾಗಿದ್ದು, ಬೆಂಗಳೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳು ಮತ್ತು ಅವರ ಸಹಚರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Bengaluru Rural News
ನೆಲಮಂಗಲದಲ್ಲಿ ಕಾರ್ ಬ್ರೋಕರ್ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಿಡ್ನಾಪ್ ಮಾಡಿ ₹1.09 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಯಶವಂತಪುರ ಮಾರುತಿ ಡಿ-360 ಸೆಕೆಂಡ್ ಕಾರ್ ಬ್ರೋಕರ್ ಶಿವಶಂಕರ್ ಎಂಬುವರ ಹಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ದರೋಡೆಕೋರರು ಕಾರಿನಲ್ಲಿದ್ದ ₹74 ಲಕ್ಷ ನಗದು ಮತ್ತು ಮನೆಯಲ್ಲಿದ್ದ ₹35 ಲಕ್ಷ ಸೇರಿ ಒಟ್ಟು ₹1.09 ಕೋಟಿ ರೂಪಾಯಿಗಳನ್ನು ದರೋಡೆ ಮಾಡಿ ಕಾರಿನಲ್ಲೇ ಪರಾರಿಯಾಗಿದ್ದಾರೆ. ಕಾರು ಮತ್ತು ಬೈಕ್‌ಗಳಲ್ಲಿ ಬಂದ ಐವರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಒಟ್ಟು ₹1 ಕೋಟಿ 9 ಲಕ್ಷ ರೂ. ದರೋಡೆ ಬಗ್ಗೆ ದೂರು ದಾಖಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ BNS 140(2), 310(2) ಅಡಿ ಪ್ರಕರಣ ದಾಖಲಾಗಿದ್ದು, ಬೆಂಗಳೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳು ಮತ್ತು ಅವರ ಸಹಚರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
More news from ಕರ್ನಾಟಕ and nearby areas
- ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯಟ್ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ಆಗಮಿಸಿದ್ದು, ಶಾಸಕರು ಬರುವುದಕ್ಕೂ ಮುನ್ನ ರೆಸಾರ್ಟ್ ವೀಕ್ಷಣೆ ನಡೆಸಿದ್ದಾರೆ.1
- ಪಾಂಡವಪುರದಲ್ಲಿ 2 ವರ್ಷದ ಮಗು ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.1
- ರಾಜ್ಯದ MBBS ಪದವೀಧರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯರಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಆಸಕ್ತ ವೈದ್ಯರು ನೇರವಾಗಿ DHO (ಜಿಲ್ಲಾ ಆರೋಗ್ಯ ಅಧಿಕಾರಿ) ಕಚೇರಿಗೆ ಅರ್ಜಿ ಸಲ್ಲಿಸಬಹುದು. ವಾಕ್-ಇನ್ ಇಂಟರ್ವ್ಯೂ ಮೂಲಕ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದೊಳಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.1
- ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸರ್ಕಾರಿ ಕಟ್ಟಡ ಕಾಮಗಾರಿ ಸ್ಥಳದಲ್ಲಿ ನಡೆದ ದುರ್ಘಟನೆಯಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅದೇ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜಪಾಲ್ ಮತ್ತು ಶ್ವೇತಾ ದಂಪತಿಯ ಮಗಳು ಪಲ್ಲವಿ (1.5) ದುರಂತವಾಗಿ ಸಾವನ್ನಪ್ಪಿದ್ದಾಳೆ. ಕಾಮಗಾರಿ ಸ್ಥಳದಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಅಗಲವಾದ ಗುಂಡಿ ತೋಡಲಾಗಿದ್ದು, ಇತ್ತೀಚಿನ ಮಳೆಯಿಂದಾಗಿ ಅದರಲ್ಲಿ ಸಾಕಷ್ಟು ನೀರು ತುಂಬಿಕೊಂಡಿತ್ತು. ಆಟವಾಡುತ್ತಿದ್ದ ವೇಳೆ ಮಗು ಪಲ್ಲವಿ ನೀರು ತುಂಬಿದ್ದ ಗುಂಡಿಗೆ ಜಾರಿ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಅಪಾಯಕಾರಿ ಗುಂಡಿಯ ಸುತ್ತ ಯಾವುದೇ ಸುರಕ್ಷತಾ ಬೇಲಿ, ಎಚ್ಚರಿಕೆ ಫಲಕ ಅಥವಾ ರಕ್ಷಣಾ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನೆ ನಂತರ, ದೂರದ ಊರಿನಿಂದ ಜೀವನೋಪಾಯಕ್ಕಾಗಿ ಗೌರಿಬಿದನೂರಿಗೆ ಬಂದಿದ್ದ ಕುಟುಂಬಕ್ಕೆ ಸ್ಥಳೀಯವಾಗಿ ಯಾವುದೇ ಸಂಬಂಧಿಕರು ಅಥವಾ ಬೆಂಬಲಿಗರು ಇಲ್ಲದ ಕಾರಣ, ಅವರು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿ ಮುಂಭಾಗದಲ್ಲೇ ಕಣ್ಣೀರು ಹಾಕುತ್ತಿರುವ ದೃಶ್ಯ ಕಂಡುಬಂದಿತು. ಇದನ್ನು ಕಂಡ ಸಾರ್ವಜನಿಕರು ಮತ್ತು ಸ್ಥಳೀಯರು ಕುಟುಂಬದ ನೋವಿಗೆ ಸ್ಪಂದಿಸಿದರು. ಕಾಮಗಾರಿ ಸ್ಥಳದಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದರೆ ಅಮಾಯಕ ಮಗುವಿನ ಜೀವ ಉಳಿಯಬಹುದಾಗಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನ ಬೇಜವಾಬ್ದಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತ ಮಗುವಿನ ಕುಟುಂಬಕ್ಕೆ ಸರ್ಕಾರದಿಂದ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದ ಗುತ್ತಿಗೆದಾರನ ವಿರುದ್ಧ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ದುರ್ಘಟನೆ ನಿರ್ಮಾಣ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.4
- ಕೋಲಾರ ನಗರದ ವಾರ್ಡ್ ಸಂಖ್ಯೆ 9, ಒಂದು ಕಾಲದಲ್ಲಿ ನಾಯಕರು ರೂಪುಗೊಳ್ಳುತ್ತಿದ್ದ ಪ್ರಾಚೀನ ಮತ್ತು ಪ್ರಮುಖ ಪ್ರದೇಶವಾಗಿತ್ತು. ಆದರೆ, ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಈ ಪ್ರದೇಶವು ಇಂದು ಅತ್ಯಂತ ಕಳಪೆ ಹಾಗೂ ದುರ್ಬಲ ಸ್ಥಿತಿಯಲ್ಲಿದೆ, ಅದರ ದುಃಸ್ಥಿತಿಯು ಗಮನ ಸೆಳೆಯುವಂತಾಗಿದೆ.1
- Post by Chand Pasha1
- ನೆಲಮಂಗಲದಲ್ಲಿ ಕಾರ್ ಬ್ರೋಕರ್ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಿಡ್ನಾಪ್ ಮಾಡಿ ₹1.09 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಯಶವಂತಪುರ ಮಾರುತಿ ಡಿ-360 ಸೆಕೆಂಡ್ ಕಾರ್ ಬ್ರೋಕರ್ ಶಿವಶಂಕರ್ ಎಂಬುವರ ಹಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ದರೋಡೆಕೋರರು ಕಾರಿನಲ್ಲಿದ್ದ ₹74 ಲಕ್ಷ ನಗದು ಮತ್ತು ಮನೆಯಲ್ಲಿದ್ದ ₹35 ಲಕ್ಷ ಸೇರಿ ಒಟ್ಟು ₹1.09 ಕೋಟಿ ರೂಪಾಯಿಗಳನ್ನು ದರೋಡೆ ಮಾಡಿ ಕಾರಿನಲ್ಲೇ ಪರಾರಿಯಾಗಿದ್ದಾರೆ. ಕಾರು ಮತ್ತು ಬೈಕ್‌ಗಳಲ್ಲಿ ಬಂದ ಐವರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಒಟ್ಟು ₹1 ಕೋಟಿ 9 ಲಕ್ಷ ರೂ. ದರೋಡೆ ಬಗ್ಗೆ ದೂರು ದಾಖಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ BNS 140(2), 310(2) ಅಡಿ ಪ್ರಕರಣ ದಾಖಲಾಗಿದ್ದು, ಬೆಂಗಳೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳು ಮತ್ತು ಅವರ ಸಹಚರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.1
- ದೊಡ್ಡಬಳ್ಳಾಪುರ-ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 648ರ ಲಕ್ಷ್ಮೀಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದ ದೃಶ್ಯವು ಹೆದ್ದಾರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.1