logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪತ್ರಿಕಾರಂಗದಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಸಿಗಬೇಕು* *ಪತ್ರಿಕಾರಂಗದಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಸಿಗಬೇಕು* *ಮಾಧ್ಯಮಗಳು ಕಟ್ಟಕಡೆಯ ಮನುಷ್ಯನ ಧ್ವನಿಯಾಗಬೇಕು; ಸತ್ಯವಾದ ಸುದ್ದಿಗಳನ್ನು ಜನರ ಮುಂದಿಡಬೇಕು* *ಸಂವಿಧಾನದ ಆಶಯಗಳು ಈಡೇರಬೇಕಾದರೆ ಸಾಮಾಜಿಕ ಅಸಮಾನತೆ ನಿವಾರಣೆಯಾಗಬೇಕು - ಸಿದ್ದರಾಮಯ್ಯ* ಬೆಂಗಳೂರು, ಸೆಪ್ಟೆಂಬರ್ 17 : ಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಈ ಸಮುದಾಯಗಳಿಗೆ ಬುದ್ಧಿ, ಪ್ರಾವೀಣ್ಯತೆ ಅಥವಾ ವ್ಯಕ್ತಿತ್ವದ ಕೊರತೆಯಿಲ್ಲ. ಐತಿಹಾಸಿಕವಾಗಿ ಅಕ್ಷರ ಸಂಸ್ಕೃತಿ ಮತ್ತು ಶಿಕ್ಷಣದ ಅವಕಾಶಗಳಿಂದ ವಂಚಿತರಾಗಿದ್ದ ಕಾರಣದಿಂದಾಗಿ ಪತ್ರಿಕಾರಂಗದಲ್ಲಿ ಅವರ ಸಂಖ್ಯೆ ಕಡಿಮೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಇಂದು ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಬಾಬಾಸಾಹೇಬ್ ಅಂಬೇಡ್ಕರ್, ಬಿ.ರಾಚಯ್ಯ, ಬಸವಲಿಂಗಪ್ಪ ಹಾಗೂ ಕೃಷ್ಣಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿರುವುದು ಸಂತೋಷದ ವಿಚಾರ. ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮೀಸಲಾತಿ ನೀಡಿದ್ದಾರೆ. ಆದರೆ ಪತ್ರಿಕಾರಂಗದಲ್ಲಿ ಮೀಸಲಾತಿ ಇಲ್ಲ. ಹೀಗಾಗಿ ಎಸ್‌ಸಿ, ಎಸ್‌ಟಿ, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಪತ್ರಿಕಾರಂಗದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಸಮಾನ ಅವಕಾಶಗಳು ದೊರೆತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ರೂಪುಗೊಳ್ಳುತ್ತಿದ್ದರು. ನಾವ್ಯಾರೂ ಯಾರಿಗಿಂತಲೂ ಕಡಿಮೆಯಿಲ್ಲ; ಅವಕಾಶಗಳಿಂದ ವಂಚಿತರಾಗಿದ್ದೇವೆ ಅಷ್ಟೇ ಎಂದರು. ನಾನು ಪತ್ರಿಕಾರಂಗಕ್ಕೆ ಹೋಗಬೇಕಾಗಿತ್ತು ಎಂಬ ಭಾವನೆ ಈಗ ಮೂಡುತ್ತಿದೆ. ಆದರೆ, ಕಾಲ ಮಿಂಚಿಹೋಗಿದೆ. ಶಿವಕುಮಾರ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಮುಖ್ಯ ವರದಿಗಾರರಾಗಿದ್ದರು. ಇಲ್ಲಿರುವ ಅನೇಕ ಸಂಪಾದಕರು ಹಾಗೂ ಪತ್ರಕರ್ತರು ಯಾರಿಗೂ ಕಡಿಮೆಯಿಲ್ಲ. ಅವರಲ್ಲಿ ಯೋಗ್ಯತೆ ಮತ್ತು ಪ್ರಾಮಾಣಿಕತೆ ಇದೆ. ಸತ್ಯವಾದ ಸುದ್ದಿಗಳನ್ನು ಜನರ ಮುಂದಿಡುವ ಪ್ರಯತ್ನವನ್ನು ಪತ್ರಕರ್ತರು ಮಾಡಬೇಕು ಎಂದು ಹೇಳಿದರು. ಸತ್ಯ ಜನರಿಗೆ ತಿಳಿಯದೇ ಹೋದರೆ ಅಸತ್ಯವನ್ನೇ ಸತ್ಯವೆಂದು ನಂಬುವ ಸಾಧ್ಯತೆ ಇದೆ. ಆದ್ದರಿಂದ ಊಹಾ ಮಾಧ್ಯಮಕ್ಕೆ ಅವಕಾಶ ಇರಬಾರದು. ಯಾವುದೇ ಊಹೆ ಮಾಡಿದರೂ ಅದು ಸತ್ಯಕ್ಕೆ ಹತ್ತಿರವಾಗಿರಬೇಕು. ಸತ್ಯಕ್ಕೆ ಹತ್ತಿರವಾಗದ ಮಾಹಿತಿಯನ್ನು ಜನರಿಗೆ ನೀಡಿದರೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ. ಮಾಧ್ಯಮದಲ್ಲಿ ಬದಲಾವಣೆ ಆಗಬೇಕು ಹಾಗೂ ಮಾಧ್ಯಮದ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು. ಕಟ್ಟಕಡೆಯ ಮನುಷ್ಯ, ಬಡವರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಅವರ ಕಷ್ಟ-ಸುಖಗಳನ್ನು ಮಾಧ್ಯಮಗಳು ಸಮಾಜದ ಮುಂದಿಡಬೇಕು ಎಂದರು. ನಮ್ಮ ಸಮಾಜವು ಅಸಮಾನತೆ, ಜಾತಿ ವ್ಯವಸ್ಥೆ ಹಾಗೂ ಮೇಲು-ಕೀಳು ಭಾವನೆಯಿಂದ ಕೂಡಿದೆ. ಸಂವಿಧಾನದ ಆಶಯಗಳು ಉತ್ತಮವಾಗಿದ್ದರೂ, ಅದನ್ನು ಜಾರಿಗೊಳಿಸುವವರು ಸಂವಿಧಾನದಲ್ಲಿ ನಂಬಿಕೆ ಹೊಂದಿರಬೇಕು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಸಂವಿಧಾನದಲ್ಲಿ ನಂಬಿಕೆ ಇಲ್ಲದಿದ್ದರೆ ಅದರ ಆಶಯಗಳು ಈಡೇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ತಿಳಿದುಕೊಳ್ಳಬೇಕು. ಸಂವಿಧಾನವೇ ತಿಳಿಯದಿದ್ದರೆ ಅದರ ಆಶಯಗಳನ್ನು ಹೇಗೆ ಈಡೇರಿಸಲು ಸಾಧ್ಯ ಎಂದು ಪ್ರಶ್ನಿಸಿದರು. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ಓದುವಂತೆ ಕ್ರಮ ಕೈಗೊಂಡಿದ್ದಾಗಿ ತಿಳಿಸಿದ ಅವರು, ಸಂವಿಧಾನದ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವದ ವಿರೋಧಿಗಳು ಅಧಿಕಾರದಲ್ಲಿದ್ದರೆ ಸಂವಿಧಾನದ ಆಶಯಗಳು ಹೇಗೆ ಈಡೇರುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಸ್ವಾತಂತ್ರ್ಯ ಬಂದು ಸುಮಾರು 80 ವರ್ಷ ಹಾಗೂ ಸಂವಿಧಾನ ಜಾರಿಗೆ ಬಂದು 76 ವರ್ಷಗಳಾಗುತ್ತಿದ್ದರೂ ಸಂವಿಧಾನದ ಎಲ್ಲ ಆಶಯಗಳು ಈಡೇರಿಲ್ಲ ಎಂದು ಹೇಳಿದರು. ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಬಡವರು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಸಬಲರಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿ ವ್ಯವಸ್ಥೆ ನಿರ್ಮೂಲನೆಯಾಗಲು ಇದರಿಂದಲೇ ಸಾಧ್ಯವಾಗುತ್ತದೆ ಎಂದರು. ಬಸವಣ್ಣನವರು ಸುಮಾರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕು. ಜಾತ್ಯತೀತ ಸಮಾಜ ನಿರ್ಮಾಣವಾಗಬೇಕು, ಗೊಡ್ಡು ಸಂಪ್ರದಾಯಗಳು ಮತ್ತು ಮೌಢ್ಯಗಳು ದೂರವಾಗಬೇಕು ಎಂದು ಪ್ರತಿಪಾದಿಸಿದ್ದರು. ಕರ್ಮ ಸಿದ್ಧಾಂತವನ್ನೂ ಬಸವಣ್ಣನವರು ತಿರಸ್ಕರಿಸಿದ್ದರು. ಆದರೆ ಇಂದಿಗೂ ಬಡತನ, ಅನಾರೋಗ್ಯ ಹಾಗೂ ಅಸಮಾನತೆಯನ್ನು ಹಿಂದಿನ ಜನ್ಮದ ಕರ್ಮದ ಫಲವೆಂದು ಸಮರ್ಥಿಸಿಕೊಳ್ಳುವ ಮನೋಭಾವ ಇದೆ. ಈ ವಿಚಾರವನ್ನು ಜನರ ಮನಸ್ಸಿನಲ್ಲಿ ಬಲವಾಗಿ ಬಿತ್ತಲಾಗಿದೆ. ಭಯವನ್ನು ಹುಟ್ಟಿಸುವ ಮೂಲಕ ಇಂತಹ ನಂಬಿಕೆಗಳನ್ನು ಬೆಳೆಸಲಾಗಿದೆ ಎಂದು ಹೇಳಿದರು. ವಿದ್ಯಾವಂತರೂ ಕೂಡ ಕರ್ಮ ಸಿದ್ಧಾಂತವನ್ನು ನಂಬುವ ಪರಿಸ್ಥಿತಿ ಇದೆ. ವೈದ್ಯರು, ಎಂಜಿನಿಯರ್‌ಗಳು, ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರಲ್ಲಿಯೂ ವೈಚಾರಿಕವಾಗಿ ಮತ್ತು ವೈಜ್ಞಾನಿಕವಾಗಿ ಚಿಂತಿಸುವವರಿಗಿಂತ ಕರ್ಮ ಸಿದ್ಧಾಂತವನ್ನು ನಂಬುವವರು ಹೆಚ್ಚಿನ ಸಂಖ್ಯೆಯಲ್ಲಿರುವುದು ಏಕೆ ಎಂಬುದನ್ನು ಪ್ರಶ್ನಿಸಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾವಂತರೇ ಜಾತಿ ಹಾಗೂ ಅಸ್ಪೃಶ್ಯತೆಯ ಆಚರಣೆಗಳನ್ನು ಮುಂದುವರಿಸುವುದನ್ನು ಕಾಣುತ್ತೇವೆ. ಹಾಗಾದರೆ ಅವರು ಕಲಿತ ಶಿಕ್ಷಣ ಎಲ್ಲಿಗೆ ಹೋಯಿತು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಸಮಾಜವಾದಿ ಚಿಂತಕ ರಾಮಮನೋಹರ ಲೋಹಿಯಾ ಅವರು ಭಾರತದ ಜಾತಿ ವ್ಯವಸ್ಥೆಗೆ ಚಲನೆಯೇ ಇಲ್ಲ ಎಂದು ಹೇಳಿದ್ದರು. ಚಲನಾರಹಿತ ಜಾತಿ ವ್ಯವಸ್ಥೆಯಿಂದಾಗಿ ಬದಲಾವಣೆ ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯಲ್ಲಿ ಪತ್ರಿಕಾ ಮಾಧ್ಯಮವು ಸಮಾಜದ ಕಟ್ಟಕಡೆಯ ವ್ಯಕ್ತಿಯ ಧ್ವನಿಯಾಗಬೇಕು. ಸಮಾಜದಲ್ಲಿ ಅನ್ಯಾಯ ಮತ್ತು ಅಸಮಾನತೆ ಏಕೆ ಇದೆ ಎಂಬುದನ್ನು ಪ್ರಶ್ನಿಸಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದರು. ಅಂಬೇಡ್ಕರ್ ಅವರ ಪುಸ್ತಕಗಳನ್ನು ಓದಿ, ಅವರ ಜೀವನ ಮತ್ತು ಹೋರಾಟಗಳನ್ನು ತಿಳಿದುಕೊಂಡಿರುವವರು ಅವರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು. 1949ರ ನವೆಂಬರ್ 25ರಂದು ಸಂವಿಧಾನ ಅಂಗೀಕಾರಕ್ಕೂ ಮುನ್ನ ಸಂವಿಧಾನ ಸಭೆಯಲ್ಲಿ ಮಾಡಿದ ಕೊನೆಯ ಭಾಷಣದಲ್ಲಿ ಅಂಬೇಡ್ಕರ್ ಅವರು ಅಸಮಾನತೆ ಮುಂದುವರಿದರೆ, ಅದರ ನೋವನ್ನು ಅನುಭವಿಸುವ ಜನರು ಪ್ರಜಾಪ್ರಭುತ್ವದ ವ್ಯವಸ್ಥೆಯ ವಿರುದ್ಧ ತಿರುಗಿಬೀಳುವ ಸಾಧ್ಯತೆಯ ಬಗ್ಗೆ ಎಚ್ಚರಿಸಿದ್ದರು ಎಂದು ಹೇಳಿದರು. ಸಂವಿಧಾನವನ್ನು ವಿರೋಧಿಸಿದವರು ಹಾಗೂ ಅಸ್ಪೃಶ್ಯತೆಯನ್ನು ಪ್ರತಿಪಾದಿಸಿದವರೊಂದಿಗೆ ಕೇವಲ ಸ್ವಾರ್ಥಕ್ಕಾಗಿ ಕೈಜೋಡಿಸುವುದು ಸರಿಯಲ್ಲ. ಮನುಸ್ಮೃತಿ ಹಾಗೂ ಮನುವಾದದ ಪರವಾಗಿರುವವರೊಂದಿಗೆ ಸೇರಿಕೊಂಡು ಸಾಮಾಜಿಕ ಬದಲಾವಣೆ ತರಲು ಸಾಧ್ಯವಿಲ್ಲ. ಒಬ್ಬರಿಗೆ ಸ್ಥಾನಮಾನ ಸಿಗಬಹುದು, ಶಾಸಕರಾಗಬಹುದು, ರಾಜ್ಯಸಭಾ ಸದಸ್ಯರಾಗಬಹುದು ಅಥವಾ ಲೋಕಸಭಾ ಸದಸ್ಯರಾಗಬಹುದು. ಆದರೆ ಇದರಿಂದ ಸಮಾಜದಲ್ಲಿ ಮೂಲಭೂತ ಬದಲಾವಣೆ ತರಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಲೇ ಇಷ್ಟು ವರ್ಷಗಳಾದರೂ ಜಾತಿ ವ್ಯವಸ್ಥೆ ಜೀವಂತವಾಗಿದೆ ಎಂದರು. ಯಾರನ್ನೂ ದ್ವೇಷಿಸುವ ಅಗತ್ಯವಿಲ್ಲ. ಆದರೆ ಸಾಮಾಜಿಕ ಬದಲಾವಣೆಯ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಇಲ್ಲದಿದ್ದರೆ ತಾವು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಲು ಸಾಧ್ಯವಾಗಿರುವುದಕ್ಕೂ ಸಂವಿಧಾನವೇ ಕಾರಣ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿರುವುದು ಸಂವಿಧಾನ ಎಂದು ಹೇಳಿದರು. ತಾವು 2013ರಿಂದ 2018ರವರೆಗೆ ಹಾಗೂ 2023ರಿಂದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಕಾಲ ಸಾಮಾಜಿಕ ಸಮಾನತೆಯ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಿರುವುದಾಗಿ ತಿಳಿಸಿದರು. ಇದರಿಂದ ಸಂಪೂರ್ಣ ಬದಲಾವಣೆ ಆಗಿದೆ ಎಂದು ಹೇಳಲಾಗದು. ಆದರೆ ಆ ದಿಕ್ಕಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಎಸ್‌ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಕೇಂದ್ರ ಸರ್ಕಾರದಲ್ಲೂ ಜಾರಿಗೆ ತರಬೇಕಾಗಿದೆ. ಜನರು ಮತ ನೀಡಿ ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಾರೆ. ಕೇಂದ್ರದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಏಕೆ ಜಾರಿಯಾಗಿಲ್ಲ ಎಂಬುದನ್ನು ಪ್ರಶ್ನಿಸಬೇಕು. ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಇಂತಹ ಕಾಯ್ದೆ ಜಾರಿಯಲ್ಲಿದೆ ಎಂದು ಹೇಳಿದರು. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಂಜನೇಯ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದರು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ರೂಪಿಸುವಂತೆ ಅವರಿಗೆ ಸೂಚಿಸಿ, ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಯನ್ನು ಅಂಗೀಕರಿಸಲಾಯಿತು. ಪ್ರಸ್ತುತ ಕರ್ನಾಟಕದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಸುಮಾರು 44 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗುತ್ತಿದೆ. ರಾಜ್ಯದ ಬಜೆಟ್‌ನಲ್ಲಿ ಶೇ.24.1ರಷ್ಟು ಅನುದಾನ ಇರಬೇಕೆಂಬ ನಿಯಮದಂತೆ ಈ ಅನುದಾನ ಮೀಸಲಿಡಲಾಗುತ್ತಿದೆ ಎಂದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಂಬಡ್ತಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಸಂದರ್ಭದಲ್ಲಿ ರತ್ನಪ್ರಭಾ ಸಮಿತಿಯ ವರದಿ ತರಿಸಿ, ದೇಶದಲ್ಲೇ ಮೊದಲ ಬಾರಿಗೆ ಕಾನೂನು ರೂಪಿಸುವ ಮೂಲಕ ಮುಂಬಡ್ತಿ ಮೀಸಲಾತಿಯನ್ನು ರಕ್ಷಿಸಿದ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿದರು. ಯಾವುದೇ ಹಕ್ಕುಗಳು ಸ್ವಯಂಚಾಲಿತವಾಗಿ ದೊರೆಯುವುದಿಲ್ಲ. ಹಕ್ಕುಗಳಿಗಾಗಿ ಒತ್ತಡ ಹೇರಿ, ಹೋರಾಟ ನಡೆಸಬೇಕು. ಸಾಮಾಜಿಕ ಬದಲಾವಣೆಗೆ ಸಂಘಟಿತರಾಗಿ ಪ್ರಯತ್ನಿಸುವುದು ಅಗತ್ಯ ಎಂದು ಸಿದ್ದರಾಮಯ್ಯ ಅವರು ಕರೆ ನೀಡಿದರು.

2 hrs ago
user_Nagesh BR Durgavara
Nagesh BR Durgavara
Photographer Chitradurga, Karnataka•
2 hrs ago
dc8c447f-dc77-4241-9864-046d9227aa56

More news from Karnataka and nearby areas
  • ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ‌ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.
    1
    ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ
ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ
ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ
ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ
ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ
ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ
ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್  ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ‌ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    4 hrs ago
  • ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
    1
    ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ!
ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ
ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ!
ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು.
ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು.
ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ!
ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ
ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು,   ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ.
ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    22 hrs ago
  • ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-
*ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ  10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು  , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    10 hrs ago
  • ಭದ್ರಾವತಿ ಸರ್ ಎಂ ವಿ ಕಾಲೇಜಿನಲ್ಲಿ ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರ ಭದ್ರಾವತಿ: ನಗರದ ನ್ಯೂಟೌನ್‌ನಲ್ಲಿರುವ ಸರ್. ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQAC ಸಹಯೋಗದಲ್ಲಿ “Essentials of Scouting: A Pathway to Leadership, Spirit and Service” ಎಂಬ ವಿಷಯದ ಕುರಿತು ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರವನ್ನು ಸೆ.11ರಂದು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ, ತಂಡದ ಕೆಲಸ, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು. ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಜಿ., IQAC ಸಂಯೋಜಕ ಮೊಹಮ್ಮದ್ ನಜೀಬ್ ಎಂ., ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಕ್ಷತಾ ಬಿ.ಜಿ., RL ಹಾಗೂ ಶ್ರೀ ಚಿರಂಜೀವಿ ವಿ.ಬಿ., RSL ಸೇರಿದಂತೆ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಕೌಟಿಂಗ್ ಕ್ಷೇತ್ರದ ಅನುಭವಿಗಳಾದ ಶಿವಮೊಗ್ಗದ ಶ್ರೀ ಎಚ್. ಶಿವಶಂಕರಪ್ಪ, ALT (S), DTC ಹಾಗೂ ಶ್ರೀ ಸಿ.ಎಂ. ಪರಮೇಶ್ವರಯ್ಯ, A.L.T (S) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ್ಕೌಟಿಂಗ್‌ನ ಮೂಲತತ್ವಗಳು, ಉದ್ದೇಶಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ, ಸೇವಾ ಮನೋಭಾವ, ಸಮಾಜಮುಖಿ ಚಿಂತನೆ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ, ಸಾಹಸ, ಸ್ನೇಹ ಹಾಗೂ ಸಮಾಜದಲ್ಲಿ ಯುವಜನರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿಶೇಷ ಆಹ್ವಾನಿತರಾಗಿ ತರೀಕೆರೆಯ SJM ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಡಾ. ಸುಮತಿ ಕೆ., RL ಹಾಗೂ ಡಾ. ಶಿವರಾಜ್‌ಕುಮಾರ್ ಕೆ., RSL ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು. ಸ್ಕೌಟಿಂಗ್ ಮೂಲಕ ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಸ್ವಾವಲಂಬನೆ, ಸಹಕಾರ, ಸಹಾನುಭೂತಿ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಬಹುದು. ಮುಂದಿನ ದಿನಗಳಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ, ಸಮುದಾಯ ಸೇವೆ ಹಾಗೂ ವಿದ್ಯಾರ್ಥಿ ನಾಯಕತ್ವ ಚಟುವಟಿಕೆಗಳನ್ನು ಕೈಗೊಳ್ಳಲು ಈ ಕಾರ್ಯಾಗಾರ ಪ್ರೇರಣೆ ನೀಡಿತು. ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQACನ ಸಮನ್ವಯದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. “ಸ್ಕೌಟಿಂಗ್ ಉತ್ತಮ ನಾಯಕನನ್ನು ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
    1
    ಭದ್ರಾವತಿ ಸರ್ ಎಂ ವಿ ಕಾಲೇಜಿನಲ್ಲಿ ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರ 
ಭದ್ರಾವತಿ: ನಗರದ ನ್ಯೂಟೌನ್‌ನಲ್ಲಿರುವ ಸರ್. ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQAC ಸಹಯೋಗದಲ್ಲಿ “Essentials of Scouting: A Pathway to Leadership, Spirit and Service” ಎಂಬ ವಿಷಯದ ಕುರಿತು ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರವನ್ನು ಸೆ.11ರಂದು ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ, ತಂಡದ ಕೆಲಸ, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು.
ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಜಿ., IQAC ಸಂಯೋಜಕ ಮೊಹಮ್ಮದ್ ನಜೀಬ್ ಎಂ., ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಕ್ಷತಾ ಬಿ.ಜಿ., RL ಹಾಗೂ ಶ್ರೀ ಚಿರಂಜೀವಿ ವಿ.ಬಿ., RSL ಸೇರಿದಂತೆ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ಕೌಟಿಂಗ್ ಕ್ಷೇತ್ರದ ಅನುಭವಿಗಳಾದ ಶಿವಮೊಗ್ಗದ ಶ್ರೀ ಎಚ್. ಶಿವಶಂಕರಪ್ಪ, ALT (S), DTC ಹಾಗೂ ಶ್ರೀ ಸಿ.ಎಂ. ಪರಮೇಶ್ವರಯ್ಯ, A.L.T (S) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ್ಕೌಟಿಂಗ್‌ನ ಮೂಲತತ್ವಗಳು, ಉದ್ದೇಶಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ, ಸೇವಾ ಮನೋಭಾವ, ಸಮಾಜಮುಖಿ ಚಿಂತನೆ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ, ಸಾಹಸ, ಸ್ನೇಹ ಹಾಗೂ ಸಮಾಜದಲ್ಲಿ ಯುವಜನರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ವಿಶೇಷ ಆಹ್ವಾನಿತರಾಗಿ ತರೀಕೆರೆಯ SJM ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಡಾ. ಸುಮತಿ ಕೆ., RL ಹಾಗೂ ಡಾ. ಶಿವರಾಜ್‌ಕುಮಾರ್ ಕೆ., RSL ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಸ್ಕೌಟಿಂಗ್ ಮೂಲಕ ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಸ್ವಾವಲಂಬನೆ, ಸಹಕಾರ, ಸಹಾನುಭೂತಿ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಬಹುದು. ಮುಂದಿನ ದಿನಗಳಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ, ಸಮುದಾಯ ಸೇವೆ ಹಾಗೂ ವಿದ್ಯಾರ್ಥಿ ನಾಯಕತ್ವ ಚಟುವಟಿಕೆಗಳನ್ನು ಕೈಗೊಳ್ಳಲು ಈ ಕಾರ್ಯಾಗಾರ ಪ್ರೇರಣೆ ನೀಡಿತು.
ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQACನ ಸಮನ್ವಯದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. “ಸ್ಕೌಟಿಂಗ್ ಉತ್ತಮ ನಾಯಕನನ್ನು ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
    user_Nandheesh kumar ac
    Nandheesh kumar ac
    ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    18 hrs ago
  • ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ....... ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ  ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ.  ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.
    3
    ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ.......

ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ.
ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ  ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ.
ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ.  ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    20 hrs ago
  • ಶಿವಮೊಗ್ಗ-ಪ್ರಧಾನಮಂತ್ರಿ ಮೋದಿಜಿಯವರ ಜನ್ಮದಿನ: ಬಿಜೆಪಿ ವತಿಯಿಂದ ಭಜನೆ ಕಾರ್ಯಕ್ರಮ ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಹಾಗೂ ದೀಪಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಜಿ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ದೀರ್ಘಾ ಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳ ಸದಸ್ಯರು ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷ ಮೆರುಗು ನೀಡಿದರು.
    1
    ಶಿವಮೊಗ್ಗ-ಪ್ರಧಾನಮಂತ್ರಿ ಮೋದಿಜಿಯವರ ಜನ್ಮದಿನ: ಬಿಜೆಪಿ ವತಿಯಿಂದ ಭಜನೆ ಕಾರ್ಯಕ್ರಮ 
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಹಾಗೂ ದೀಪಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಜಿ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ  ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ದೀರ್ಘಾ ಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳ ಸದಸ್ಯರು ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷ ಮೆರುಗು ನೀಡಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 min ago
  • ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಂಡಿದ್ದು ಈ ಹಿನ್ನೆಲೆ ನೀಲಕಂಠೇಶ್ವರ ಸ್ವಾಮಿ ದೇವರಿಗೆ ವಿಶೇಷವಾಗಿ ರೇಷ್ಮೆ ವಸ್ತ್ರಗಳಿಂದ ಮಹಾರಾಜರ ಅಲಂಕಾರ ಮಾಡಿದ್ದು ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಿದ್ದು ಮಹಾ ಮಂಗಳಾರತಿ ಬೆಳಗಿ ಪೂಜೆ ಸಲ್ಲಿಸಿದ್ದು ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಅವರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡಿದ್ದು ಇದೇ ಸಂದರ್ಭದಲ್ಲಿ ಸಿಹಿಯನ್ನ ಸಹ ವಿತರಣೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನ ಕೂಗಿ ಹುಟ್ಟುಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ‌ ಟಿ ಕುಮಾರಸ್ವಾಮಿ ಹಾಗೂ ಜಿಲ್ಲಾ ಬಿಜೆಪಿಯ ಅನೇಕ ಮುಖಂಡರು ಮತ್ತು ಮಹಿಳಾ ಕಾರ್ಯಕರ್ತರು ಹಾಜರಿದ್ದರು
    1
    ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನಲ್ಲಿ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಂಡಿದ್ದು ಈ ಹಿನ್ನೆಲೆ ನೀಲಕಂಠೇಶ್ವರ ಸ್ವಾಮಿ ದೇವರಿಗೆ ವಿಶೇಷವಾಗಿ  ರೇಷ್ಮೆ ವಸ್ತ್ರಗಳಿಂದ ಮಹಾರಾಜರ ಅಲಂಕಾರ ಮಾಡಿದ್ದು ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಿದ್ದು ಮಹಾ ಮಂಗಳಾರತಿ ಬೆಳಗಿ ಪೂಜೆ ಸಲ್ಲಿಸಿದ್ದು ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಅವರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡಿದ್ದು ಇದೇ ಸಂದರ್ಭದಲ್ಲಿ ಸಿಹಿಯನ್ನ ಸಹ ವಿತರಣೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನ ಕೂಗಿ ಹುಟ್ಟುಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ‌ ಟಿ ಕುಮಾರಸ್ವಾಮಿ ಹಾಗೂ ಜಿಲ್ಲಾ ಬಿಜೆಪಿಯ ಅನೇಕ ಮುಖಂಡರು ಮತ್ತು ಮಹಿಳಾ ಕಾರ್ಯಕರ್ತರು ಹಾಜರಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ - ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ *ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ*- ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ ನೀಡಿದ್ದು , ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಖಂಡ ಬಳ್ಳಾರಿ ಲೋಕಾಯುಕ್ತ ಎಸ್ಪಿರವರು , ಇಂದು (ಸೆ 16) ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೆಲ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಲೋಕಾಯುಕ್ತಕ್ಕೆ , ಬಂದಿರುವ ಗಂಭೀರ ಆರೋಪ ಹ‍ಾಗೂ ದೂರಗಳನ್ನಾಧರಿಸಿ. ಪ್ರಲಣಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಕೊಂಡಿದ್ದು , ಸದರಿ ಪ್ರಕರಣಗಳ ಕುರಿತು ಪರಾಮರ್ಶಿಸಿ ಕಡತ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್ಪಿಯವರೊಂದಿಗೆ , ಇಬ್ಬರು ಲೋಕಾ ಡಿವೈಎಸ್ಪಿ ರವರು. ಇಬ್ಬರು ಲೋಕಾ ಸಿಪಿಐ ಹಾಗೂ ಲೋಕಾ ಮುಖ್ಯ ಪೇದೆ ಲೋಕಾ ಪೇದೆಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ , ಎಸ್ಡಿಎಮ್ಸಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರರವರು. ಎಸ್ಪಿಯವರನ್ನು ಭೇಟಿಯಾಗಿ ವಸತಿ ಹಂಚಿಕೆಯಲ್ಲಾಗಿರುವ , ಭಾರೀ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಂಬಂಧಿಸಿದಂತೆ ಪ್ರಕರಣವು , ನ್ಯಾಯಲಯದಲ್ಲಿ ವಿಚಾರ ಹಂತದಲ್ಲಿದ್ದರೂ ಕೂಡ. ಪಪಂ ಅಧಿಕಾರಿ ಹಾಗೂ ತಾಲೂಕಾಡಳಿತ , ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ. ಪಟ್ಟ ವಿತರಣೆ ಮಾಡಿದ್ದಾರೆಂದು ದ‍ಾಖಲುಗಳ ಸಮೇತ ದೂರಿದರು. ವಸತಿ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಮುಖ್ಯ ಕೆಲ ಕಡತಗಳು ಧಾಖಲುಗಳು ಪಪಂ ಕಚೇರಿಯಲ್ಲಿಯೇ ಇಲ್ಲವಾಗಿವೆ. ಕೆಲ ಪ್ರಮುಖ ದಾಖಲೆಗಳು , ನಾಪತ್ತೆಯಾಗಿದ್ದು ಇದರ ಹಿಂದೆ ಭಾರೀ ಹುನ್ನಾರವೇ ನಡೆದಿದೆ ಎಂದು ರಾಘವೇಂದ್ರ ಗಂಭೀರವಾಗಿ ದೂರಿದ್ದಾರೆ. ಮತ್ತು ಸಂಬಂಧಿಸಿದಂತೆ ಪಪಂ ಮುಖ್ಯಾಧಿಕಾರಿ , ಹಾಗೂ ತಾಲೂಕು ಜಿಲ್ಲಾಡಳಿತ ವಿರುದ್ಧ. ಲೋಕಾಯುಕ್ತ ಇಲಾಖಾ ಉನ್ನತಾಧಿಕಾರಿಗಳು , ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿಕೊಂಡು. ಅವರನ್ನು ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ,ಹೋರಾಟಗಾರ ಗುನ್ನಳ್ಳಿ ರಾಘವೇಂದ್ರ ಲೋಕಾ ಅಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭಲ್ಲಿ , ಕೆಲ ಹೋರಾಟಗಾರರು ಹಿರಿಯ ನಾಗರೀಕರು. ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಯವರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ - ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ
*ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ*- ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ ನೀಡಿದ್ದು , ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಖಂಡ ಬಳ್ಳಾರಿ ಲೋಕಾಯುಕ್ತ ಎಸ್ಪಿರವರು , ಇಂದು (ಸೆ 16) ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೆಲ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಲೋಕಾಯುಕ್ತಕ್ಕೆ , ಬಂದಿರುವ ಗಂಭೀರ ಆರೋಪ ಹ‍ಾಗೂ ದೂರಗಳನ್ನಾಧರಿಸಿ. ಪ್ರಲಣಗಳ ವಿರುದ್ಧ  ಸ್ವಯಂಪ್ರೇರಿತ ದೂರು ದಾಖಲಿಸಕೊಂಡಿದ್ದು , ಸದರಿ ಪ್ರಕರಣಗಳ ಕುರಿತು ಪರಾಮರ್ಶಿಸಿ ಕಡತ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್ಪಿಯವರೊಂದಿಗೆ , ಇಬ್ಬರು ಲೋಕಾ ಡಿವೈಎಸ್ಪಿ ರವರು. ಇಬ್ಬರು ಲೋಕಾ ಸಿಪಿಐ ಹಾಗೂ ಲೋಕಾ ಮುಖ್ಯ ಪೇದೆ ಲೋಕಾ ಪೇದೆಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ , ಎಸ್ಡಿಎಮ್ಸಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರರವರು. ಎಸ್ಪಿಯವರನ್ನು ಭೇಟಿಯಾಗಿ ವಸತಿ ಹಂಚಿಕೆಯಲ್ಲಾಗಿರುವ , ಭಾರೀ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಂಬಂಧಿಸಿದಂತೆ ಪ್ರಕರಣವು ,  ನ್ಯಾಯಲಯದಲ್ಲಿ ವಿಚಾರ ಹಂತದಲ್ಲಿದ್ದರೂ ಕೂಡ. ಪಪಂ ಅಧಿಕಾರಿ ಹಾಗೂ ತಾಲೂಕಾಡಳಿತ , ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ. ಪಟ್ಟ ವಿತರಣೆ ಮಾಡಿದ್ದಾರೆಂದು ದ‍ಾಖಲುಗಳ ಸಮೇತ ದೂರಿದರು.  ವಸತಿ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಮುಖ್ಯ ಕೆಲ ಕಡತಗಳು ಧಾಖಲುಗಳು ಪಪಂ ಕಚೇರಿಯಲ್ಲಿಯೇ ಇಲ್ಲವಾಗಿವೆ.  ಕೆಲ ಪ್ರಮುಖ ದಾಖಲೆಗಳು , ನಾಪತ್ತೆಯಾಗಿದ್ದು ಇದರ ಹಿಂದೆ ಭಾರೀ ಹುನ್ನಾರವೇ ನಡೆದಿದೆ ಎಂದು ರಾಘವೇಂದ್ರ ಗಂಭೀರವಾಗಿ ದೂರಿದ್ದಾರೆ. ಮತ್ತು ಸಂಬಂಧಿಸಿದಂತೆ ಪಪಂ ಮುಖ್ಯಾಧಿಕಾರಿ ,  ಹಾಗೂ ತಾಲೂಕು ಜಿಲ್ಲಾಡಳಿತ ವಿರುದ್ಧ.  ಲೋಕಾಯುಕ್ತ ಇಲಾಖಾ ಉನ್ನತಾಧಿಕಾರಿಗಳು , ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿಕೊಂಡು. ಅವರನ್ನು ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ,ಹೋರಾಟಗಾರ ಗುನ್ನಳ್ಳಿ ರಾಘವೇಂದ್ರ ಲೋಕಾ ಅಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭಲ್ಲಿ , ಕೆಲ ಹೋರಾಟಗಾರರು ಹಿರಿಯ ನಾಗರೀಕರು. ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಯವರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    22 hrs ago
  • ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು
    1
    ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.