Shuru
Apke Nagar Ki App…
WB ಚುನಾವಣೆ: BJP ಏಜೆಂಟ್ ಮೇಲೆ ಭೀಕರ ಹಲ್ಲೆ ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಾಗೂ ಕೊನೆ ಹಂತದ ಮತದಾನ ನಡೆಯುತ್ತಿದೆ. ಆದರೆ, ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ BJP ಏಜೆಂಟ್ ಮುಶರಫ್ ಮಿರ್ ಮೇಲೆ TMC ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಂದೂಕು & ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. BJP ಅಭ್ಯರ್ಥಿ ಸೈಕತ್ ಸರ್ಕಾರ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
JB NEWS ಕನ್ನಡ
WB ಚುನಾವಣೆ: BJP ಏಜೆಂಟ್ ಮೇಲೆ ಭೀಕರ ಹಲ್ಲೆ ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಾಗೂ ಕೊನೆ ಹಂತದ ಮತದಾನ ನಡೆಯುತ್ತಿದೆ. ಆದರೆ, ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ BJP ಏಜೆಂಟ್ ಮುಶರಫ್ ಮಿರ್ ಮೇಲೆ TMC ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಂದೂಕು & ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. BJP ಅಭ್ಯರ್ಥಿ ಸೈಕತ್ ಸರ್ಕಾರ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
More news from ಕರ್ನಾಟಕ and nearby areas
- ಬೀದರ್ ಚಿಟ್ಟಾ ಅರಣ್ಯದಲ್ಲಿ ಕಾಡ್ಗಿಚ್ಚು: ಪ್ರಯಾಣದ ಮಧ್ಯೆಯೇ ಇಳಿದು ಬೆಂಕಿ ಆರಿಸಿದ ಅರಣ್ಯ ಸಚಿವರುಮಾದರಿ ನಡೆ: ಬೆಂಕಿ ನಂದಿಸಲು ಅಖಾಡಕ್ಕಿಳಿದ ಸಚಿವ ಈಶ್ವರ ಖಂಡ್ರೆ; ಪರಿಸರ ಪ್ರೇಮಕ್ಕೆ ಸಾಕ್ಷಿಯಾದ ಕ್ಷಣ#JB_NEWS_KANNADA ಜೆಬಿ ನ್ಯೂಸ್ ಕನ್ನಡ1
- ದ್ವಿತೀಯ ಪಿಯುಸಿ ಪರೀಕ್ಷೆ - 2 ರ ಪರೀಕ್ಷೆಗಳು ಎಪ್ರಿಲ್ 30 ರಿಂದ ಮೇ 13 ರವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.1
- ಬೆಳಂದೂರುನಿಂದ, ಒಡ್ಯೆ,ಮೀಪಾಲು, ಪಾತಾಜೆ ರಸ್ತೆಯ ಮುಖಾಂತರ ಬೆಳ್ಳಾರೆಗೆ ಹೋಗುವ ವಾಹನ ಸವಾರರ ಗಮನಕ್ಕೆ ತಿಳಿಸುವುದೇನೆಂದರೇ ಇದೇ ಮಾರ್ಗದ ಮಧ್ಯದಲ್ಲಿ ಕಾಡು ಕೋಣಗಳು ಸಂಚರಿಸುವುದರಿಂದ ವಾಹನ ಸವಾರರು ಎಚ್ಚರವಹಿಸಿ ಪ್ರಯಾಣ ಮಾಡಬೇಕೆಂದು ಮನವಿ1
- ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ದ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿತು. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪ್ಲಾಟ್,ನಾಮಫಲಕ ಎಲ್ಲವನ್ನು ಪ್ರತಿಭಟನಾ ನಿರತ ವಿದ್ಯಾರ್ಥಿ ಗಳು ಪುಡಿ ಪುಡಿ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯ ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಖಂಡಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್‌ಗೆ ಕಪ್ಪು ಮಸಿ ಬಳಿದರು.ಅಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿಗಳು ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದರು.ವಿಶ್ವವಿದ್ಯಾಲಯದ ಆಂತರಿಕ ಕಲಹದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಕಳೆದ ಐದು ತಿಂಗಳ ಹಿಂದೆ ನಡೆದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿಲ್ಲ ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿ ಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾ ಗಿದೆ. ಈ ಬಗ್ಗೆ ಹಲವು ಬಾರಿ ಕುಲಪತಿಗಳಿಗೆ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರು ವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ ವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪ ಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆಗೆಡಿಸಿದೆ. ಈ ಅವ್ಯವಸ್ಥೆ ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸ ಬೇಕೆಂದು ಆಗ್ರಹಿಸಿದರು. ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ನ ಜಿಲ್ಲಾಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ ಕಟಿಕೆರೆ ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಮೊದಲಾದವರಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಿಇಓ-ಎಎಸ್ಪಿ: ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಕುವೆಂಪು ವಿವಿಯ ಕುಲಸಚಿವರು ಆಗಿರುವ ಶಿವಮೊಗ್ಗ ಜಿ.ಪಂ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಎನ್.ಹೇಮಂತ್ ಹಾಗೂ ಹೆಚ್ಚುವರಿಗೆ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪನವರು ಭೇಟಿ ನೀಡಿದರು. ಪೀಠೋಪಕರಣ ಧ್ವಂಸಗೊಂಡಿದ್ದನ್ನು ವೀಕ್ಷಿಸಿದ ಎನ್.ಹೇಮಂತ್ ಅವರು, ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಚರ್ಚೆ ನಡೆಸಿದರು.ಘಟನೆ ಸಂಬಂಧ ಕುಲಪತಿ, ರಿಜಿಸ್ಟ್ರಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಘಟನಾ ಸ್ಥಳಕ್ಕೆ ಶಿವಮೊಗ್ಗ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಪ್ರತಿಭಟನಾಕಾರರ ಜೊತೆ ಮಾತನಾಡಿದ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್, ಪ್ರತಿಭಟನಾನಿರತ ವಿದ್ಯಾರ್ಥಿ ಗಳ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ವಿದ್ಯಾರ್ಥಿಗಳ ಬೇಡಿಕೆಗಳೇನು: 1.ಕಳೆದ 5 ತಿಂಗಳ ಹಿಂದೆ ನಡೆದಿದ್ದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು. 2.ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು. 3.ಡಿಜಿಟೆಲ್ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಕೂಡಲೇ ಡಿಜಿಟೆಲ್ ಮೌಲ್ಯಮಾಪನವನ್ನು ಕೈಬಿಡಬೇಕು. 4. ಭ್ರಷ್ಟಾಚಾರದ ಆರೋಪ ಹಾಗು ವಿಶ್ವ ವಿದ್ಯಾಲಯದಲ್ಲಿ ಕಳಂಕ ಹೊತ್ತಿರುವ ಎಲ್ಲಾ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು 5. ಯು.ಯು.ಸಿ.ಎಮ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. 6. ವಿವಿ ಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು. 7.2021-22 ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು. 8.ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. 9. ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. 10. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಎಚ್ಚರಿಸಿದರು.1
- ಕಡೂರು (ಬೀರೂರು): ಬೇಸಿಗೆ ರಜೆ ಹಿನ್ನೆಲೆಯಲ್ಲಿ ಊರಿಗೆ ಕಳಿಸಲಿಲ್ಲ ಎಂಬ ಸಣ್ಣದೊಂದು ಗಲಾಟೆಯ ನಡುವೆ ಪೊಲೀಸ್ ಅಧಿಕಾರಿಯ ಪತ್ನಿ ಮನನೊಂದು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬೀರೂರು ಪಟ್ಟಣದ ಪೊಲೀಸ್ ಠಾಣೆಯ ಪಿಎಸೈ ಡಿ.ವಿ. ತಿಪ್ಪೇಶ್ ಅವರ ಪತ್ನಿ ಪದ್ಮ(35) ಮೃತ ದುರ್ದೈವಿಯಾಗಿದ್ದು. ಬೀರೂರು ಪಟ್ಟಣದ ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೂಲತಃ ತುಮಕೂರು ಜಿಲ್ಲೆಯವರಾದ ಪದ್ಮ ಮತ್ತು ದಾವಣಗೆರೆ ಮೂಲದ ತಿಪ್ಪೇಶ್ 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳಿಗೆ ಶಾಲೆ ರಜೆಯಿದ್ದು ಊರಿಗೆ ಕಳಿಸುವಂತೆ ಪತಿ ಪಿಎಸ್ಐ ತಿಪ್ಪೇಶ್ ಗೆ ಹೇಳಿದ್ದರು. ಮಕ್ಕಳಿಗೆ ಬೇಸಿಗೆ ರಜೆ ಇರೋದ್ರಿಂದ ಊರಿಗೆ ಹೋಗ್ತೀನಿ ಎಂದಿದ್ದರು. ಆದರೆ, ಪತಿ ತಿಪ್ಪೇಶ್ ನೈಟ್ ಡ್ಯೂಟಿ ಇದೆ. ನಾಳೆ ಹೋಗುವಂತೆ ಎಂದು ತಿಳಿ ಹೇಳಿದ್ದರು. ಅಷ್ಟಕ್ಕೆ ಮಾತಿಗೆ ಮಾತು ಬೆಳೆದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದೇ ವಿಚಾರ ದಂಪತಿಗಳ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪತಿ ಮಕ್ಕಳನ್ನ ಊರಿಗೆ ಕಳಿಸಲಿಲ್ಲವೆಂದು ಆಕ್ರೋಶಗೊಂಡ ಪದ್ಮ ಕಳೆದ ರಾತ್ರಿ 12 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ರೋಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಕೌಟುಂಬಿಕವಾಗಿ ಸಣ್ಣದೊಂದು ವಿಚಾರದ ಮಾತಿನ ಚಕಮಕಿಯಿಂದಾಗಿ ತನ್ನ ಜೀವವನ್ನೇ ಬಲಿಕೊಟ್ಟಿರುವ ಪದ್ಮಾ ಅವರ ಆತ್ಮಹತ್ಯೆಯ ನಿರ್ಧಾರದ ಧಾರುಣ ಘಟನೆಯ ಬಗ್ಗೆ ಪೊಲೀಸ್ ಸಿಬ್ಬಂದಿಗಳು ಮತ್ತು ನಾಗರೀಕರು ಮಮ್ಮುಲ ಮರುಗಿದರು. ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.2
- ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು.2
- Post by Karibasava Balal1
- ಐವಿ ಡ್ರಿಪ್‌ನೊಂದಿಗೆ ಕರ್ತವ್ಯಕ್ಕೆ ಹಾಜರಾದ ಮಹಿಳೆ ಹುಷಾರಿಲ್ಲ ರಜೆ ಬೇಕು ಅಂತ ಕೇಳಿದಕ್ಕೆ ಅಧಿಕಾರಿ ಪ್ರೊಫ್ ಕೇಳಿದ್ದಾರೆ. ಹೀಗಾಗಿ, ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಕರ್ತವ್ಯಕ್ಕೆ ಹಾಜರಾದ ಘಟನೆ ಬಿಹಾರದಲ್ಲಿ ನಡೆದಿದೆ. ಮಹಿಳೆಯೋರ್ವಳು ಕೆಲಸಕ್ಕೆ ಬಾರದೇ ಇದ್ದಾಗ ಅಧಿಕಾರಿ ಕರೆ ಮಾಡಿದ್ದಾರೆ. ಈ ವೇಳೆ ತನಗೆ ಹುಷಾರಿಲ್ಲ ಎಂದಿದ್ದಾಳೆ. ಬಳಿಕ ಅಧಿಕಾರಿಗಳು ಪುರಾವೆ ಕೇಳಿದ್ದಾರೆ. ಹೀಗಾಗಿ ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡು, ಪತಿಯ ಸಹಾಯದಿಂದ ನಡೆದುಕೊಂಡು ಕೆಲಸಕ್ಕೆ ಹೋಗುತ್ತಿರುವ ವಿಡಿಯೋ SMನಲ್ಲಿ ವೈರಲ್ ಆಗುತ್ತಿದೆ.1