ಕೊಳ್ಳೇಗಾಲ. ಪಟ್ಟಣದ ರೋಟರಿ ಕ್ಲಬ್ ನಲ್ಲಿ ಹಿರಿಯ ನಾಗರೀಕರ ದಿನಾಚರಣೆಯನ್ನು ಆಚರಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರು ಎ. ದೊರೆಸ್ವಾಮಿ ಅವರು ವಹಿಸಿದ್ದರು. ಈ ವೇಳೆ ಹಿರಿಯ ನಾಗರಿಕರು ಸಂಸ್ಥಾಪಕ ಸದಸ್ಯರು ಸುರೇಶ್ ಬಾಬು, ಸೋಮಶೇಖರ್, ಪುಟ್ಟ ಅರಸಶೆಟ್ಟಿ ಸನ್ಮಾನಿಸಲಾಯಿತು. ನಂತರ ರೋಟರಿ ಕ್ಲಬ್ ಅಧ್ಯಕ್ಷರು ಎ.ದೊರೆಸ್ವಾಮಿ ಮಾತನಾಡಿ, ಹಿರಿಯರು ನಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಿರಬೇಕು. ಅವರ ವಯಕ್ತಿಕ ಜೀವನದಲ್ಲಿ ಹಲವಾರು ಏಳು ಬೀಳು ಗಳನ್ನು ಕಂಡು ಜೀವನವನ್ನು ಸಾಗಿಸಿರುತ್ತಾರೆ. ಅವರ ಮಾರ್ಗದರ್ಶದಲ್ಲಿ ನಾವು ಸಮಾಜದಲ್ಲಿ ಮುನ್ನಡೆಯಬೇಕು.ಇತ್ತೀಚಿನ ದಿನಗಳಲ್ಲಿ ಹಿರಿಯರು ಬಹಳ ಕಡಿಮೆಯಾಗುತ್ತಿದ್ದಾರೆ ಎಂದು ಪ್ರಸಂಶಿಸಿದರು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರಾಜಮಲ್ಲು, ವಲಯ ಸೇನಾನಿ ನಂದೀಶ್, ಮಾಜಿ ಅಧ್ಯಕ್ಷರಾದ ಬಸವರಾಜು, ವೆಂಕಟಾಚಲ, ಜಗದೀಶ್ ಮಹದೇವ್, ಪ್ರವೀಣ್, ಕಿರಣ್, ವಿರಭದ್ರಯ್ಯ, ನರೇಂದ್ರನಾಥ್, ಬಿ.ಕೆ. ಪ್ರಕಾಶ್, ಆಶಾಕಿರಣ್, ಉಷಾ ವೆಂಕಟಾಚಲ, ಶೋಭ ಇದ್ದರು.
ಕೊಳ್ಳೇಗಾಲ. ಪಟ್ಟಣದ ರೋಟರಿ ಕ್ಲಬ್ ನಲ್ಲಿ ಹಿರಿಯ ನಾಗರೀಕರ ದಿನಾಚರಣೆಯನ್ನು ಆಚರಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರು ಎ. ದೊರೆಸ್ವಾಮಿ ಅವರು ವಹಿಸಿದ್ದರು. ಈ ವೇಳೆ ಹಿರಿಯ ನಾಗರಿಕರು ಸಂಸ್ಥಾಪಕ ಸದಸ್ಯರು ಸುರೇಶ್ ಬಾಬು, ಸೋಮಶೇಖರ್, ಪುಟ್ಟ ಅರಸಶೆಟ್ಟಿ ಸನ್ಮಾನಿಸಲಾಯಿತು. ನಂತರ ರೋಟರಿ ಕ್ಲಬ್ ಅಧ್ಯಕ್ಷರು ಎ.ದೊರೆಸ್ವಾಮಿ ಮಾತನಾಡಿ, ಹಿರಿಯರು ನಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಿರಬೇಕು. ಅವರ ವಯಕ್ತಿಕ ಜೀವನದಲ್ಲಿ ಹಲವಾರು ಏಳು ಬೀಳು ಗಳನ್ನು ಕಂಡು ಜೀವನವನ್ನು ಸಾಗಿಸಿರುತ್ತಾರೆ. ಅವರ ಮಾರ್ಗದರ್ಶದಲ್ಲಿ ನಾವು ಸಮಾಜದಲ್ಲಿ ಮುನ್ನಡೆಯಬೇಕು.ಇತ್ತೀಚಿನ ದಿನಗಳಲ್ಲಿ ಹಿರಿಯರು ಬಹಳ ಕಡಿಮೆಯಾಗುತ್ತಿದ್ದಾರೆ ಎಂದು ಪ್ರಸಂಶಿಸಿದರು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರಾಜಮಲ್ಲು, ವಲಯ ಸೇನಾನಿ ನಂದೀಶ್, ಮಾಜಿ ಅಧ್ಯಕ್ಷರಾದ ಬಸವರಾಜು, ವೆಂಕಟಾಚಲ, ಜಗದೀಶ್ ಮಹದೇವ್, ಪ್ರವೀಣ್, ಕಿರಣ್, ವಿರಭದ್ರಯ್ಯ, ನರೇಂದ್ರನಾಥ್, ಬಿ.ಕೆ. ಪ್ರಕಾಶ್, ಆಶಾಕಿರಣ್, ಉಷಾ ವೆಂಕಟಾಚಲ, ಶೋಭ ಇದ್ದರು.
- ಹನೂರು: ತಾಲೂಕಿನ ಪೊನ್ನಾಚ್ಚಿ ಸಮೀಪದ ಮರೂರು ಗ್ರಾಮದಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ವರದಿಯಾಗಿದೆ. ಮರೂರು ಗ್ರಾಮದ ಅಕ್ಕಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗ್ರಾಮದ ನಾಗೇಶ್ ಅವರ ಮನೆಯಿಂದ ಬೆಳ್ಳಿಯ ಕೈ ಕಡಗ, ಕಾಲು ಚೈನ್ ಹಾಗೂ ಚಿನ್ನದ ಕಿವಿ ಮತ್ತು ಮೂಗಿನ ಆಭರಣಗಳು, ಜುಮಿಕಿ, ಓಲೆ ಸೇರಿದಂತೆ ಆಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ. ಇನ್ನು ಶಿವಣ್ಣ ಅವರ ಮನೆಯಿಂದ ಸುಮಾರು 2.5 ಲಕ್ಷ ನಗದು ಕಳವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಕಬ್ಬಾಳಮ್ಮ ಅವರ ಮನೆಯಿಂದ 2,000 ನಗದು ಹಾಗೂ ಸುಮಾರು 3.50 ಲಕ್ಷ ಮೌಲ್ಯದ ಮಾಂಗಲ್ಯ ಸರ, ತಾಳಿ ಮತ್ತು ತಾಳಿ ಗುಂಡು ಕಳವಾಗಿರುವುದಾಗಿ ತಿಳಿದುಬಂದಿದೆ. ಶಿವಮಾದಮ್ಮ ಅವರ ಮನೆಯಲ್ಲೂ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಹದೇಶ್ವರಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನಕ್ಕೊಳಗಾದ ಮನೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ಹನೂರು: ತಾಲೂಕಿನ ಪೊನ್ನಾಚ್ಚಿ ಸಮೀಪದ ಮರೂರು ಗ್ರಾಮದಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ವರದಿಯಾಗಿದೆ. ಮರೂರು ಗ್ರಾಮದ ಅಕ್ಕಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗ್ರಾಮದ ನಾಗೇಶ್ ಅವರ ಮನೆಯಿಂದ ಬೆಳ್ಳಿಯ ಕೈ ಕಡಗ, ಕಾಲು ಚೈನ್ ಹಾಗೂ ಚಿನ್ನದ ಕಿವಿ ಮತ್ತು ಮೂಗಿನ ಆಭರಣಗಳು, ಜುಮಿಕಿ, ಓಲೆ ಸೇರಿದಂತೆ ಆಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ. ಇನ್ನು ಶಿವಣ್ಣ ಅವರ ಮನೆಯಿಂದ ಸುಮಾರು 2.5 ಲಕ್ಷ ನಗದು ಕಳವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಕಬ್ಬಾಳಮ್ಮ ಅವರ ಮನೆಯಿಂದ 2,000 ನಗದು ಹಾಗೂ ಸುಮಾರು 3.50 ಲಕ್ಷ ಮೌಲ್ಯದ ಮಾಂಗಲ್ಯ ಸರ, ತಾಳಿ ಮತ್ತು ತಾಳಿ ಗುಂಡು ಕಳವಾಗಿರುವುದಾಗಿ ತಿಳಿದುಬಂದಿದೆ. ಶಿವಮಾದಮ್ಮ ಅವರ ಮನೆಯಲ್ಲೂ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಹದೇಶ್ವರಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನಕ್ಕೊಳಗಾದ ಮನೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.2
- ಒಂಟಿಸಲಗನ ಪುಂಡಾಟ: ಹಸು ಬಲಿ , ರೈತನಿಗೆ ತೀವ್ರಗಾಯ ಆಸ್ಪತ್ರೆಗೆ ದಾಖಲು ಮಳವಳ್ಳಿ: ಒಂಟಿ ಸಲಗದ ಪುಂಡಾಟಕ್ಕೆ ಒಂದು ಹಸು ಬಲಿಯಾಗಿ ರೈತನಿಗೆ ಕಾಲು ಮುರಿತಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಬಾಳೆಹೊನ್ನಿಗ ಬಳಿ ನಡೆದಿದೆ. ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದ ರಾಜಶೇಖರರವರಿಗೆ ಸೇರಿದ ಹಸುವೇ ಸಾವನ್ನಪ್ಪಿದ್ದು , ಇದಲ್ಲದೇ ಎಲೆತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಳ್ಳಾಡಿ ಜೋಗಯ್ಯ ಎಂಬುವರ ಮೇಲೆ ದಾಳಿ ಮಾಡಿ ಕಾಲು ಮುರಿತಗೊಂಡಿದೆ. ಗಾಯಗೊಂಡ ವ್ಯಕ್ತಿಯನ್ನು ಅರಣ್ಯ ಇಲಾಖೆ ಅರಣ್ಯಾಧಿಕಾರಿ ಪ್ರಮೋದ್ ಹಾಗೂ ಸಿಬ್ಬಂದಿಗಳು ಹಲಗೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅರಣ್ಯ ಇಲಾಖೆ ಆಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಹಲಗೂರು ಪೊಲೀಸರು ಕಾಡಾನೆಯನ್ನು ಬೀಮನಕಿಂಡಿ ಅರಣ್ಯ ಪ್ರದೇಶಕ್ಕೆ ಓಡಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ.1
- ಹನೂರಿನಲ್ಲಿ ತಾಲೂಕು ಆಡಳಿತದಿಂದ ನುಲಿಯ ಚಂದಯ್ಯ ಜಯಂತಿ ಆಚರಣೆ: ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ಹನೂರು: ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಶರಣ ನುಲಿಯ ಚಂದಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ನಂತರ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕರು, ಶರಣರ ತತ್ವಾದರ್ಶಗಳು ಮತ್ತು ಕಾಯಕ ನಿಷ್ಠೆ ಸಮಾಜಕ್ಕೆ ಸದಾ ಪ್ರೇರಣಾದಾಯಕ ಎಂದು ನುಡಿದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ, ಸಮುದಾಯದ ರಾಜ್ಯಾಧ್ಯಕ್ಷ ಪಂಚಾಕ್ಷರಿ, ತಾಲೂಕು ಅಧ್ಯಕ್ಷ ಮಾದೇಶ್ ಹಾಗೂ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಉಪಸ್ಥಿತರಿದ್ದರು. ಅಲ್ಲದೆ, ಅನುಷ್ಠಾನ ಸಮಿತಿ ಸದಸ್ಯೆ ರಾಣಿ, ಉಪಾಧ್ಯಕ್ಷರಾದ ರಾಜು, ಶಾಂತರಾಜು, ರಾಮಚಂದ್ರ, ಶಿವಕುಮಾರ್, ರಾಮು ಸೇರಿದಂತೆ ಸಮುದಾಯದ ಪ್ರಮುಖ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.4
- ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ1
- ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಮುಖ್ಯ : ಸಚಿವ ಸಿ. ಪುಟ್ಟರಂಗಶೆಟ್ಟಿ ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಮುಖ್ಯ : ಸಚಿವ ಸಿ. ಪುಟ್ಟರಂಗಶೆಟ್ಟಿ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ: ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಬಹು ಮುಖ್ಯವಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ತಾಲೂಕು ಮಟ್ಟದ ಶಾಲಾ ಶಿಕ್ಷಣ (ಪದವಿ ಪೂರ್ವ) ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಎಷ್ಟೇ ಚಟುವಟಿಕೆಗಳಿದ್ದರು ಕ್ರೀಡಾ ಚಟುವಟಿಕೆ ಅತ್ಯಂತ ಅವಶ್ಯವಾಗಿದೆ. ಆರೋಗ್ಯ ಜೀವನಕ್ಕೆ ಕ್ರೀಡೆ ಸಹಕಾರಿಯಾಗಲಿದೆ. ದೈಹಿಕವಾಗಿ ಸಧೃಡರಾಗಲು ಕ್ರೀಡೆ ಆಟೋಟಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಸಲಹೆ ನೀಡಿದರು. ಕ್ರೀಡಾ ಆಸಕ್ತರಿಗೆ ಉತ್ತೇಜನ ನೀಡುವ ಸಲುವಾಗಿ ಇನ್ನಷ್ಟು ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 13 ಕೋಟಿ ರೂ. ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಹಾಗೂ ಈಜುಕೊಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ. ಲೋಕಸಭಾ ಸದಸ್ಯರಾಗಿದ್ದ ಧ್ರುವನಾರಾಯಣ್ ಅವರ ಅವಧಿಯಲ್ಲಿ ಸುಸಜ್ಜಿತ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಯಿತು. ಕ್ರೀಡಾ ಚಟುವಟಿಕೆಗಳಿಗೆ ಈ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದರು. ಪ್ರಸ್ತುತ ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಬೇಕು. ರಾಜ್ಯ, ರಾಷ್ಟ್ರ ಮಟ್ಟದಲ್ಲಿಯೂ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಾರೈಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವಕಾಶ ಮಾಡಿಕೊಡಲು ಪ್ರೋತ್ಸಾಹ ನೀಡಬೇಕು. ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸೋಲಿಗೆ ಧೃತಿಗೆಡಬಾರದು ಗೆಲುವು ಸೋಲನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಮಹಾಸಂಸ್ಥಾನ ಮಠಾಧ್ಯಕ್ಷರು ಹಾಗೂ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಿಂದ ಸಾಧ್ಯವಾಗಲಿದೆ. ಧ್ಯಾನ, ಯೋಗದಂತಹ ಆಧ್ಯಾತ್ಮಿಕ ಶಿಕ್ಷಣವು ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ. ಪ್ರಿಯಾ ಶಂಕರ್, ಖಜಾಂಚಿ ಹೆಚ್.ಎನ್ ಸ್ವಾಮಿ, ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ. ಮಹದೇವಸ್ವಾಮಿ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ. ಮಧು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜು, ದೈಹಿಕ ಶಿಕ್ಷಣ ಶಿಕ್ಷಕ ಚಿಕ್ಕಬಸವಯ್ಯ, ವಿಶ್ರಾಂತ ಪ್ರಾಂಶುಪಾಲರಾದ ಸೋಮಣ್ಣ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.4
- *"ನೀರಾವರಿ ಯೋಜನೆಗಳಿಗೆ ವೇಗ ನೀಡಿ - ಭೂಸ್ವಾಧೀನ ವ್ಯಾಜ್ಯ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಮೊರೆ"* *"ಕೆರೆಗಳಿಗೆ ನೀರು ತುಂಬಿಸಿ, ಅಂತರಜಲ ಹೆಚ್ಚಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ"* *ಬೆಂಗಳೂರು, ಆ, 28:* ರಾಜ್ಯದ ಜಲಸಂಪನ್ಮೂಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ *ಎನ್. ಚಲುವರಾಯಸ್ವಾಮಿ* ಇಂದು ವಿಧಾನಸೌಧದ 3ನೇ ಮಹಡಿಯಲ್ಲಿ *ನಾಲ್ಕು ನಿಗಮಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ* ನಡೆಸಿದರು. ಕೃಷ್ಣಾ, ಕಾವೇರಿ, ವಿಶ್ವೇಶ್ವರಯ್ಯ ಹಾಗೂ ಕರ್ನಾಟಕ ನೀರಾವರಿ ನಿಗಮಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಸುದೀರ್ಘವಾಗಿ ಪರಾಮರ್ಶಿಸಿದ ಸಚಿವರು, ಬಾಕಿ ಯೋಜನೆಗಳಿಗೆ ವೇಗ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು. *ಕೆರೆಗಳ ಭರ್ತಿಗೆ ಆದ್ಯತೆ:* ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರನ್ನು ಪಂಪ್ ಮಾಡಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು. ಅಂತರಜಲ ಹೆಚ್ಚಳಕ್ಕೆ ಸಾಂಪ್ರದಾಯಿಕ ವಿಧಾನದ ಜೊತೆಗೆ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ಯುಕೆಪಿ-3 ವಿವಾದಗಳಿಗೆ 'ಮಧ್ಯಸ್ಥಿಕೆ' ಮದ್ದು:* ಕೃಷ್ಣಾ ಮೇಲ್ದಂಡೆ ಯೋಜನೆ (UKP-3) ಹಂತ 1 ಮತ್ತು 2ರಲ್ಲಿ 20 ವರ್ಷಗಳ ಹಿಂದಿನ ಸುಮಾರು *1500 ಭೂಸ್ವಾಧೀನ ಪ್ರಕರಣಗಳು* ನ್ಯಾಯಾಲಯದಲ್ಲಿ ಬಾಕಿ ಇವೆ. ಇವುಗಳನ್ನು *'ಮಧ್ಯಸ್ಥಿಕೆ' (Mediation) ಮೂಲಕ* ತ್ವರಿತವಾಗಿ ಇತ್ಯರ್ಥಪಡಿಸಿ 9 ಉಪ-ಯೋಜನೆಗಳ ಭೂಸ್ವಾಧೀನ ಚುರುಕುಗೊಳಿಸುವಂತೆ ತಾಕೀತು ಮಾಡಿದರು. ಇತ್ತೀಚೆಗೆ ಸಚಿವ ಸಂಪುಟ ಘೋಷಿಸಿರುವ ಪರಿಹಾರದ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ದೇಶಿಸಿದರು. *ಮೇಕೆದಾಟು ಯೋಜನೆ:* 67 ಟಿಎಂಸಿ ಸಾಮರ್ಥ್ಯದ ಪರಿಷ್ಕೃತ ಡಿಪಿಆರ್ ಅನ್ನು ಆಗಸ್ಟ್ 13ರಂದು ಕೇಂದ್ರಕ್ಕೆ ಕಳುಹಿಸಲಾಗಿದೆ. ಡ್ಯಾಂ ಸುತ್ತಲೂ ನೀರಾವರಿ ಪ್ರದೇಶವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡಿನ ಅನುಮಾನಗಳಿಗೆ ತಾರ್ಕಿಕ ಅಂತ್ಯ ಹಾಡಲಾಗಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ಸೂಚನೆ. *ಮಹದಾಯಿ (ಕಳಸಾ-ಬಂಡೂರಿ):* ಜಲವಿವಾದ ನ್ಯಾಯಾಧಿಕರಣ ಅಂತಿಮ ತೀರ್ಪು ನೀಡಿದ್ದು, ಕೇಂದ್ರ ಜಲ ಆಯೋಗ (CWC) ಪರಿಷ್ಕೃತ ಡಿಪಿಆರ್‌ಗೆ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲದಿದ್ದರೂ ಅರಣ್ಯ ಇಲಾಖೆ ಪ್ರಕರಣದ ಬಗ್ಗೆ ಪ್ರಸ್ತಾಪಿಸುತ್ತಿದೆ. ಹೀಗಾಗಿ ಅರಣ್ಯ ಇಲಾಖೆಗೆ ಪತ್ರ ಬರೆದು ವಾಸ್ತವ ತಿಳಿಸಿ, *ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ (NBWL) ಕ್ಲಿಯರೆನ್ಸ್* ಚುರುಕುಗೊಳಿಸಲು ಸೂಚನೆ. *ಎತ್ತಿನಹೊಳೆ ಯೋಜನೆ:* 256 ಕಿ.ಮೀ ಉದ್ದದ ಗುರುತ್ವಾಕರ್ಷಣಾ ಕಾಲುವೆಯಲ್ಲಿ ಈಗಾಗಲೇ 40 ಕಿ.ಮೀ ವರೆಗೆ ನೀರು ಹರಿದಿದೆ. ಮೊದಲ ಹಂತದಲ್ಲಿ 111 ಹೆಕ್ಟೇರ್ ಅರಣ್ಯ ಬಳಕೆಗೆ ಕೇಂದ್ರದ ಒಪ್ಪಿಗೆ ಸಿಕ್ಕಿದ್ದು, ಸಣ್ಣಪುಟ್ಟ ಸಮಸ್ಯೆ ಬಗೆಹರಿಸಲು ಹಾಸನ ಜಿಲ್ಲಾಧಿಕಾರಿಗೆ ಸೂಚನೆ. *ಭದ್ರಾ ಮೇಲ್ದಂಡೆ:* 2023-24ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ *5,300 ಕೋಟಿ ರೂ. ನೆರವು* ಇನ್ನೂ ಬಿಡುಗಡೆಯಾಗದ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತ. *ತುಂಗಭದ್ರಾ ಡ್ಯಾಂ:* ಎಲ್ಲಾ ಗೇಟ್‌ಗಳನ್ನು ಹೊಸದಾಗಿ ಅಳವಡಿಸಲಾಗಿದ್ದು, ನವಲಿ ಸಮತೋಲನಾ ಜಲಾಶಯ ನಿರ್ಮಾಣದ ಬಗ್ಗೆಯೂ ಪ್ರಸ್ತಾಪ. *ಆರ್ಥಿಕ ಸಮಸ್ಯೆಗಳಿಗೆ ಸಿಎಂ ಜೊತೆ ಚರ್ಚೆ:* ಇಲಾಖೆಯ ಬಾಕಿ ಬಿಲ್‌ಗಳ ಪಾವತಿ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪ್ರತ್ಯೇಕ ಸಭೆಯಲ್ಲಿ ಪರಿಹಾರ ಕಂಡುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಪ್ರಸ್ತುತ ಇಲಾಖೆಯಲ್ಲಿ *16,000 ಕೋಟಿ ರೂ. ಮೊತ್ತದ ಹೊಸ ಯೋಜನೆಗಳು* ಪ್ರಗತಿಯಲ್ಲಿವೆ. ವಿಶ್ವಬ್ಯಾಂಕ್ ನೆರವಿನ DRIP ಮತ್ತು ಜಲಶಕ್ತಿ ಸಚಿವಾಲಯದ M-CADWM ಯೋಜನೆಗಳ ಕುರಿತೂ ಪರಾಮರ್ಶೆ ನಡೆಯಿತು. ರಾಜ್ಯದಲ್ಲಿ 140.60 ಲಕ್ಷ ಹೆಕ್ಟೇರ್ ಬೇಸಾಯ ಯೋಗ್ಯ ಭೂಮಿ ಇದ್ದು, 107 ಲಕ್ಷ ಹೆಕ್ಟೇರ್ ಬಿತ್ತನೆ ಕ್ಷೇತ್ರದಲ್ಲಿ ಬೃಹತ್ ನೀರಾವರಿ ಯೋಜನೆಯಡಿ 42 ಲಕ್ಷ ಹೆಕ್ಟೇರ್ ಪ್ರದೇಶವನ್ನು ತರಲಾಗಿದೆ. ಸಭೆಯಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ *ಗೌರವ್ ಗುಪ್ತ* ಸೇರಿದಂತೆ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.1
- ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ. ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಪ್ರದೀಪ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.4
- ಖರ್ಗೆರವರನ್ನು ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರತಿಭಟನೆ ಮಳವಳ್ಳಿ: ಉತ್ತರಕಾಂಡ ರಾಜ್ಯದ ಹಲ್ದ್ವಾನಿಯಲ್ಲಿ ಮನುವಾಧಿಗಳು ಆಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರನ್ನು ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮುಖಂಡರು ಮಳವಳ್ಳಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮನುವಾದಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಡಿಪಿ ಸದಸ್ಯ ಶಶಿರಾಜ್ ಮಾತನಾಡಿ,ಬಹುಜನರನ್ನು ಒಡೆಯುವ ಕೆಲಸವನ್ನು ಮನುವಾದಿಗಳು ಮಾಡುತ್ತಿದ್ದಾರೆ. ದಲಿತರು ,ಅಲ್ಪ ಸಂಖ್ಯಾತರು,ಹಿಂದುಳಿದವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಮನುವಾದಿಗಳಿಗೆ ನಾವೆಲ್ಲರೂ ತಕ್ಕಪಾಠ ಕಲಿಸಬೇಕಾಗಿದೆ ಎಂದರು. ಇದೇ ವೇಳೆ ಶಿರಸೇಲ್ದಾರ್ ಗುರುಪ್ರಸಾದರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು ಪ್ರತಿಭಟನೆಯಲ್ಲಿ ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ, ಕಸಾಪ ಅಧ್ಯಕ್ಷ ಚೇತನಕುಮಾರ್,ಕೆಡಿ ಪಿ ಸದಸ್ಯ ಶಶಿರಾಜ್ ,ಡಾ.ಪ್ರಸಾದ,ಶಂಕರ , ಶೇಖರ , ಕಲ್ಕುಣಿನಂಜುಂಡಸ್ವಾಮಿ, ಚಿನ್ನಸ್ವಾಮಿ, ಶಾಂತರಾಜು ಸೇರಿದಂತೆ ಹಲವರು ಇದ್ದರು.1