ದೇವರ ದನಗಳಿಗೆ ಉಚಿತ ಮೇವು – ಜಪಾನಂದ ಮಹಾಸ್ವಾಮಿಗಳ ಮಾನವೀಯ ಸೇವೆ ದೇವರ ದನಗಳಿಗೆ ಉಚಿತ ಮೇವು – ಜಪಾನಂದ ಮಹಾಸ್ವಾಮಿಗಳ ಮಾನವೀಯ ಸೇವೆ ಮೊಳಕಾಲ್ಮೂರು ತಾಲೂಕಿನಲ್ಲಿ ಬರದ ಪರಿಣಾಮ ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿರುವ ಸಂದರ್ಭದಲ್ಲಿ, ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಜಪಾನಂದ ಮಹಾಸ್ವಾಮಿಗಳು ಮಾನವೀಯ ಕಾರ್ಯದ ಮೂಲಕ ಗಮನಸೆಳೆದಿದ್ದಾರೆ. ಭಾನುವಾರ, ತಾಲೂಕು ಮುತ್ತಿಗರಹಳ್ಳಿ ಗ್ರಾಮದ ಸಮೀಪವಿರುವ ಶ್ರೀ ಶೈಲಾ ಮಲ್ಲಿಕಾರ್ಜುನ ಸ್ವಾಮಿ ದೇವರ ಹಸುಗಳಿಗೆ ಒಂದು ಟ್ರ್ಯಾಕ್ಟರ್ ಲೋಡ್ ಮೇವನ್ನು ಉಚಿತವಾಗಿ ನೀಡಲಾಯಿತು. ಈ ಸೇವೆ ಶ್ರೀಮತಿ ಸುಧಾ ಮೂರ್ತಿಯವರ ಇನ್ಫೋಸಿಸ್ ಫೌಂಡೇಶನ್ ಹಾಗೂ ಮೂರ್ತಿ ಫೌಂಡೇಶನ್ ಅವರ ಪ್ರಾಯೋಜಕತ್ವದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ತಾಲೂಕಿನ ಗೌರಸಮುದ್ರ ಕಾವಲು ಗ್ರಾಮದಲ್ಲಿ ಬೀಮರೆಡ್ಡಿ ಸಂಗ್ರಹಿಸಿದ್ದ ಮೇವಿನ ಬಣವೆಗೆ ಬೆಂಕಿ ಬಿದ್ದು ಸಂಪೂರ್ಣ ಮೇವು ಭಸ್ಮವಾಗಿದ್ದ ಹಿನ್ನೆಲೆಯಲ್ಲಿ, ಅವರಿಗೆ ಕೂಡ ಒಂದು ಲೋಡ್ ಮೇವು ಉಚಿತವಾಗಿ ನೀಡಲಾಯಿತು. ಸರಕಾರ ಮಾಡಬೇಕಿದ್ದ ಕಾರ್ಯವನ್ನು ಜಪಾನಂದಶ್ರೀಗಳು ಪ್ರತಿವರ್ಷ ದೇವರ ರಾಸುಗಳಿಗೆ ಉಚಿತ ಮೇವು ನೀಡುವ ಮೂಲಕ ನಿರಂತರವಾಗಿ ನೆರವೇರಿಸುತ್ತಿದ್ದು, ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಸೂರಮ್ಮನಹಳ್ಳಿ, ರಾಯಪುರ ಹಾಗೂ ವಲಸೆ ಗ್ರಾಮಗಳಿಂದ ಬಂದ ಕಿಲಾರಿಗಳು ಮೇವಿನ ಕೊರತೆಯ ಬಗ್ಗೆ ಸ್ವಾಮೀಜಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸ್ವಾಮೀಜಿಗಳು ಎಲ್ಲರಿಗೂ ಅಗತ್ಯವಿರುವ ಮೇವು ಪೂರೈಕೆ ಮಾಡುವ ಭರವಸೆ ನೀಡಿದರು. ಒಟ್ಟಿನಲ್ಲಿ, ಸಂಕಷ್ಟದ ಸಮಯದಲ್ಲಿ ಜಾನುವಾರುಗಳ ರಕ್ಷಣೆಗೆ ಮುಂದಾಗಿರುವ ಈ ಸೇವಾ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ದೇವರ ದನಗಳಿಗೆ ಉಚಿತ ಮೇವು – ಜಪಾನಂದ ಮಹಾಸ್ವಾಮಿಗಳ ಮಾನವೀಯ ಸೇವೆ ದೇವರ ದನಗಳಿಗೆ ಉಚಿತ ಮೇವು – ಜಪಾನಂದ ಮಹಾಸ್ವಾಮಿಗಳ ಮಾನವೀಯ ಸೇವೆ ಮೊಳಕಾಲ್ಮೂರು ತಾಲೂಕಿನಲ್ಲಿ ಬರದ ಪರಿಣಾಮ ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿರುವ ಸಂದರ್ಭದಲ್ಲಿ, ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಜಪಾನಂದ ಮಹಾಸ್ವಾಮಿಗಳು ಮಾನವೀಯ ಕಾರ್ಯದ ಮೂಲಕ ಗಮನಸೆಳೆದಿದ್ದಾರೆ. ಭಾನುವಾರ, ತಾಲೂಕು ಮುತ್ತಿಗರಹಳ್ಳಿ ಗ್ರಾಮದ ಸಮೀಪವಿರುವ ಶ್ರೀ ಶೈಲಾ ಮಲ್ಲಿಕಾರ್ಜುನ ಸ್ವಾಮಿ ದೇವರ ಹಸುಗಳಿಗೆ ಒಂದು ಟ್ರ್ಯಾಕ್ಟರ್ ಲೋಡ್ ಮೇವನ್ನು ಉಚಿತವಾಗಿ ನೀಡಲಾಯಿತು. ಈ ಸೇವೆ ಶ್ರೀಮತಿ ಸುಧಾ ಮೂರ್ತಿಯವರ ಇನ್ಫೋಸಿಸ್ ಫೌಂಡೇಶನ್ ಹಾಗೂ ಮೂರ್ತಿ ಫೌಂಡೇಶನ್ ಅವರ ಪ್ರಾಯೋಜಕತ್ವದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ತಾಲೂಕಿನ ಗೌರಸಮುದ್ರ ಕಾವಲು ಗ್ರಾಮದಲ್ಲಿ ಬೀಮರೆಡ್ಡಿ ಸಂಗ್ರಹಿಸಿದ್ದ ಮೇವಿನ ಬಣವೆಗೆ ಬೆಂಕಿ ಬಿದ್ದು ಸಂಪೂರ್ಣ ಮೇವು ಭಸ್ಮವಾಗಿದ್ದ ಹಿನ್ನೆಲೆಯಲ್ಲಿ, ಅವರಿಗೆ ಕೂಡ ಒಂದು ಲೋಡ್ ಮೇವು ಉಚಿತವಾಗಿ ನೀಡಲಾಯಿತು. ಸರಕಾರ ಮಾಡಬೇಕಿದ್ದ ಕಾರ್ಯವನ್ನು ಜಪಾನಂದಶ್ರೀಗಳು ಪ್ರತಿವರ್ಷ ದೇವರ ರಾಸುಗಳಿಗೆ ಉಚಿತ ಮೇವು ನೀಡುವ ಮೂಲಕ ನಿರಂತರವಾಗಿ ನೆರವೇರಿಸುತ್ತಿದ್ದು, ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಸೂರಮ್ಮನಹಳ್ಳಿ, ರಾಯಪುರ ಹಾಗೂ ವಲಸೆ ಗ್ರಾಮಗಳಿಂದ ಬಂದ ಕಿಲಾರಿಗಳು ಮೇವಿನ ಕೊರತೆಯ ಬಗ್ಗೆ ಸ್ವಾಮೀಜಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸ್ವಾಮೀಜಿಗಳು ಎಲ್ಲರಿಗೂ ಅಗತ್ಯವಿರುವ ಮೇವು ಪೂರೈಕೆ ಮಾಡುವ ಭರವಸೆ ನೀಡಿದರು. ಒಟ್ಟಿನಲ್ಲಿ, ಸಂಕಷ್ಟದ ಸಮಯದಲ್ಲಿ ಜಾನುವಾರುಗಳ ರಕ್ಷಣೆಗೆ ಮುಂದಾಗಿರುವ ಈ ಸೇವಾ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
- ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ.... ಚಳ್ಳಕೆರೆ: ಬೀದಿ ನಾಯಿಗಳ ಕಲ್ಯಾಣ ಮತ್ತು ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಸ್ಟ್ರೀಟ್ ಡಾಗ್ಸ್‌ಗೆ ಆಹಾರ ನೀಡಲು ಚಳ್ಳಕೆರೆ ನಗರದದಲ್ಲಿ 20 ಸ್ಥಳಗಳನ್ನು ‘ಫೀಡಿಂಗ್ ಸ್ಪಾಟ್’ಗಳ ಗುರುತಿಸಲಾಗಿದ್ದು ಈಗಾಗಲೆ 9 ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ ಮಾಡಲಗಿದೆ ಎಂದು ಪೌರಯುಕ್ತೆ ಡಾ.ನಾಗವೇಣಿ (ಕೆ.ಎ.ಎಸ್)ತಿಳಿಸಿದ್ದಾರೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮಾನವ ಮತ್ತು ಸಮುದಾಯ ಪ್ರಾಣಿಗಳ ನಡುವೆ ಸಹ ಕಾಳ ದ ಗೆ ವೃದ್ಧಿಸಲು ಮತ್ತು ಸಂಘರ್ಷ ಕಡಿಮೆಗೊಳಿಸಲು ಬೀದಿ/ಸಮುದಾಯ ನಾಯಿಗಳಿಗೆ ಆಹಾರ ನೀಡುವ ಕಾರ್ಯವು ಮಹತ್ತರವಾಗಿದೆ. ಈ ರೀತಿ ವ್ಯವಸ್ಥಿತವಾಗಿ ಆಹಾರ ಒದಗಿಸುವುದರಿಂದ ಶ್ವಾನಗಳ ಹಸಿವು ನೀಗಿಸುವ ಮೂಲಕ ಅವುಗಳ ಕ್ರೂರಸ್ವಭಾವ ಮತ್ತು ಕಚ್ಚುವ ಪ್ರವೃತ್ತಿಯನ್ನು ಕಡಿಮೆಗೊಳಿಸಬಹುದಾಗಿದೆ. ಜತೆಗೆ ಬೀದಿನಾಯಿಗಳ ಸಂತಾನಹರಣ ಶಸ್ತಚಿಕಿತ್ಸೆಗೆ ಹಾಗೂ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ನಿರ್ವಹಿಸಲು ಇದು ಸಹಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ . ಫೀಡಿಂಗ್ ಸ್ಪಾಟ್‌ಗಳನ್ನು ಗುರುತಿಸಿರುವ ರಾಗಗಳಲ್ಲಿ ಸೂಚನಾ ಫಲಕ ಅಳವಡಿಸಿ ನಾಗರಿಕರಿಗೆ ಮಾಹಿತಿ ಒದಗಿಸಲಾಗಿದೆ . ಯೋಜನೆ ಕೇವಲ ಪ್ರಾಣಿಗಳ ಕಲ್ಯಾಣಕ್ಕೆ ಮಾತ್ರವಲ್ಲ, ನಗರದಲ್ಲಿ ಮಾನವ-ಪ್ರಾಣಿ ಸಹಬಾಳ್ವೆಯತ್ತ ಒತ್ತು ನೀಡುತ್ತದೆ. ಬೀದಿ ನಾಯಿಗಳ ಸಮರ್ಥ ನಿರ್ವಹಣೆ ಮತ್ತು ನಿಯಂತ್ರಿತ ಬೆಳವಣಿಗೆ, ರಸ್ತೆ ಅಪಘಾತಗಳು ಮತ್ತು ಜನತೆ ನಡುವಿನ ಸಂಘರ್ಷವನ್ನು ಕಡಿಮೆ ಮಾಡಲು ಸಹಾಯಕ ಮಾಡುತ್ತದೆ. ಜೊತೆಗೆ, ಸಾರ್ವಜನಿಕರಲ್ಲಿ ಪ್ರಾಣಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಇದು ಪ್ರೇರಣೆಯಾಗಿದೆ. ಜನ ವಸತಿ ಕಡಿಮೆ ಇರುವ ಪ್ರದೇಶಗಳಲ್ಲಿ ನಾಯಿಗಳು ಇರುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಆಹಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಹಾಗೂ ಪ್ರಾಣಿ ಪ್ರಿಯರು ಆಹಾರವನ್ನು ತಂದು ಇಲ್ಲಿ ಹಾಕುವುದರ ಮೂಲಕ ಬೀದಿ ನಾಯಿಗಳ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು..1
- 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ1
- ಸೂರ್ಯನ ಬಿಸಿಲಿನ ತಾಪಕ್ಕೆ ನೀರನ್ನು ಅರಸಿ ಬಂದ ನಾಯಿಗೆ. ನೀರುಣಿಸಿ ಮಾನವೀಯತೆ ಮೆರೆದ ಮಾನವ ನೀರನ್ನು ಅರಸಿ ಬಂದ ನಾಯಿಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ನಾಯಿ ಯ ಬಾಯಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಸಾರ್ವಜನಿಕರು ತಮ್ಮ ತಮ್ಮ ಮನೆಯ ಮುಂದೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವುದಕ್ಕೆ ನೀರಿ ನ ವ್ಯವಸ್ಥೆ ಮಾಡಬೇಕಾಗಿರುವುದು ಮಾನವ ಧರ್ಮ ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಮನೆ ಹಾಗೂ ಊರಿನಲ್ಲಿ ಕುಡಿಯುವುದಕ್ಕೆ ವ್ಯವಸ್ಥೆ ಮಾಡಿ .1
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು. ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು. ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.1
- ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ. ಮದುವೆ ವಿಚಾರದಲ್ಲಿ ಮಾನಸಿಕವಾಗಿ ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- Snake rauf 99164034481
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- Post by Suresh Belagere1