*ಗುರಮಠಕಲ್ ತಾಲೂಕಿಗೆ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದೆ ಸರ್ಕಾರದಿಂದ ಮಲತಾಯಿ ಧೋರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಖಂಡನೆ :* ಜಿಲ್ಲೆಯ ಶಹಾಪುರ ಕ್ಷೇತ್ರ ವೊಂದನ್ನೇ ಬರ ಪೀಡಿತ ಎಂದು ಘೋಷಣೆ ಮಾಡಿದ ಸರ್ಕಾರ ಯಾದಗಿರಿ ಜಿಲ್ಲೆಯ ಇನ್ನುಳಿದ ಮೂರು ಕ್ಷೇತ್ರಗಳ ವ್ಯಾಪ್ತಿಯ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ, ಕೂಡಲೇ ಆಗಿರುವ ಅನ್ಯಾಯ ಸರಿಪಡಿಸಬೇಕು ಇಲ್ಲವಾದಲ್ಲಿ ಜಿಲ್ಲೆಗೆ ಭೇಟಿ ಕೊಡುವ ಸಚಿವರು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ ಎಂದು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಶರಣಬಸಪ್ಪ ಎಲೇರಿ ಗುಡುಗಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ನೆರೆಯ ಕಲಬುರಗಿ ಜಿಲ್ಲೆಯನ್ನು ಸಂಪೂರ್ಣ ಬರ ಪೀಡಿತ ಎಂದು ಘೋಷಿಸಿದ ಸರ್ಕಾರ, ಯಾದಗಿರಿ ಜಿಲ್ಲೆಗೆ ಕೈ ಬಿಟ್ಟು ಕೇವಲ ಶಹಾಪೂರ ಕ್ಷೇತ್ರವನ್ನು ಬರ ಪೀಡಿತ ಎಂದು ಘೋಷಿಸಿ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬತೆ ವರ್ತಿಸಿರುವುದು ಖಂಡನೀಯ ಸರ್ಕಾರದ ತಾರತಮ್ಯ ನೀತಿಯ ವಿರುದ್ಧ ಕರವೇ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದ್ದಾರೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಗುರುಮಿಟ್ಕಲ್ ತಾಲೂಕಿನಲ್ಲಿ ಬರ ಪರಿಶೀಲನೆ ನಡೆಸಿ ವರದಿ ಕೊಟ್ಟಿದ್ದರೂ ಅದನ್ನು ಪರಿಗಣಸದೇ ಹೀಗೆ ಅನ್ಯಾಯ ಮಾಡಲಾಗಿದೆಯೇ ಎಂಬುದು ಸ್ಪಷ್ಟಪಡಿಸಬೇಕು ಸರಿಯಾಗಿ ವರದಿ ನೀಡಿದ್ದರೆ ಜಿಲ್ಲೆಯ ಇನ್ನುಳಿದ ಮೂರು ಕ್ಷೇತ್ರಗಳನ್ನು ಕೈಬಿಟ್ಟಿದ್ದೇಕೆ? ಇಲ್ಲವೇ ವರದಿ ಸರಿಯಾಗಿ ನೀಡಿಲ್ಲ ಎಂದರ್ಥವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಸಚಿವರೂ ಶಾಸಕರು ಅಧಿಕಾರಿಗಳು ಲೋಪ ಎಸಗಿದರೇ ಎಂದು ಪ್ರಶ್ನಿಸಿರುವ ಅವರು ಆಗಿರುವ ಅಚಾತುರ್ಯ ತಕ್ಷಣ ಸರಿಪಡಿಸಬೇಕು ಇಲ್ಲವಾದಲ್ಲಿ ಜಿಲ್ಲೆಗೆ ಬರುವ ಸಚಿವ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ ಎಂದು ಅವರು ಗುಡುಗಿದ್ದಾರೆ. ಈ ಘೋರ ಅನ್ಯಾಯದ ವಿರುದ್ಧ ಕೂಡಲೇ ಜಿಲ್ಲೆಯ ಶಾಸಕರು, ಸಚಿವರು, ಸಂಸದರು ಇನ್ನುಳಿದ ಜನಪ್ರತಿನಿಧಿಗಳು ಈ ಅನ್ಯಾಯದ ವಿರುದ್ಧ ದನಿ ಎತ್ತಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ರೈತರು ಎರಡೆರಡು ಸಾರಿ ಹೆಸರು, ಹತ್ತಿ ಮುಂತಾದ ಬೆಳೆಗಳನ್ನು ಬಿತ್ತಿ ಬರದ ಕಾರಣದಿಂದ ಮೊಳಕೆ ಬಾರದ ಬಂದರೂ ಒಣಗಿ ಹೋದ ಬೆಳೆಯನ್ನು ಹರಗಿ ಮತ್ತೆ ಮತ್ತೆ ಬಿತ್ತನೆ ಮಾಡಿರುವುದು ಅಧಿಕಾರಿಗಳಿಗೆ, ವರದಿ ಕೊಟ್ಟವರಿಗೆ ಕಾಣಲಿಲ್ಲವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದು, ಕೂಡಲೇ ಆಗಿರುವ ಅಚಾತುರ್ಯ ಸರಿಪಡಿಸಬೇಕು ಇಲ್ಲವಾದಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ತಕ್ಷಣವೇ ಗುರುಮಠಕಲ್ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು. ಇಲ್ಲದಿದ್ದರೆ ಸಂಪೂರ್ಣ ಗುರುಮಠಕಲ್ ಬಂದು ಮಾಡಿ ಕರ್ನಾಟಕ ರಕ್ಷಣಾ ವೇದಿಕೆ ಇಂದ ಬೀದಿಗೆ ಇಳಿದು ಉಗ್ರವಾದ ಹೋರಾಟ ಮಾಡಲಾಗುವುದು .

- ಯಾದಗಿರಿ ನಗರದ ಗಾಂಧಿ ಚೌಕಿನಲ್ಲಿ ರಾಖಿಯ ಅಂಗಡಿಗಳು ಎಲ್ಲಿ ಮಕ್ಕಳು ಮತ್ತು ಮಹಿಳೆಯರು ರಾಖಿಯನ್ನು ಕರಿಸಲು ದೃಶ್ಯ1
- *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,4
- ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು1
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್‌ಬಿಎಸ್ ನಗರ, ರಾಯಚೂರು2
- ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.1
- ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.1
- ಯಾದಗಿರಿಯ ಗುತ್ತಿಗೆದಾರರ ಗೆ ಹಣ ಪಾವತಿಸಬೇಕಾದ ಒಂದು ಕೋಟಿ ತೊಂಬತ್ತು ಲಕ್ಷ ಹಣವನ್ನು ಗುತ್ತಿಗೆದಾರರಿಗೆ ಕೊಡಬೇಕಾದ ಅವರ ನ್ಯಾಯಾಲಯ ಮರೆ ಹೋಗಿ ಅವರ ನ್ಯಾಯಾಲಯವು ಆದೇಶದ ಮೇರೆಗೆ ಪಿಡಬ್ಲ್ಯೂಡಿ ಆಫೀಸ್ ಜತ್ತಿ ಮಾಡಲಾಯಿತು ಟೇಬಲ್ ತೋರಿಸಿ ಮತ್ತು ಕಂಪ್ಯೂಟರ್ ಹಲವಾರು ನ್ಯಾಯಾಲಯ ಕಡೆಯಿಂದ ವಿಜಯ್ ಅವರ ಸಿಬ್ಬ ಜಪ್ತಿ ಮಾಡಿ ನ್ಯಾಯಕ್ಕೆ ಒಪ್ಪಿಸಲಾಯಿತು ಎಂದು ವಿಜಯ ಸರ್ ತಿಳಿಸಿದರು1