Shuru
Apke Nagar Ki App…
ಜಿಲ್ಲಾಸ್ಪತ್ರೆಯ ಆರೋಗ್ಯ ಸಮಿತಿಗೆ ಬೆಟ್ಟಬೆಣಜೇನಹಳ್ಳಿ ನದೀಂ ಬೇಗ್ ನೇಮಕ, ಕೋಲಾರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ತಾಲೂಕಿನ ವಕ್ಕಲೇರಿ ಹೋಬಳಿಯ ಬೆಟ್ಟಬೆಣಜೇನಹಳ್ಳಿ ಗ್ರಾಮದ ನದೀಂ ಬೇಗ್ ಅವರನ್ನು ಸದಸ್ಯರನ್ನಾಗಿ ಕೂಡಲೇ ಜಾರಿಗೆ ಬರುವಂತೆ ಸರ್ಕಾರದಿಂದ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಇದಕ್ಕಾಗಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿಗಳಾದ ನಸೀರ್ ಅಹಮದ್, ಎಂ.ಎಲ್ ಅನಿಲ್ ಕುಮಾರ್, ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
Rownak Ali khan
ಜಿಲ್ಲಾಸ್ಪತ್ರೆಯ ಆರೋಗ್ಯ ಸಮಿತಿಗೆ ಬೆಟ್ಟಬೆಣಜೇನಹಳ್ಳಿ ನದೀಂ ಬೇಗ್ ನೇಮಕ, ಕೋಲಾರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ತಾಲೂಕಿನ ವಕ್ಕಲೇರಿ ಹೋಬಳಿಯ ಬೆಟ್ಟಬೆಣಜೇನಹಳ್ಳಿ ಗ್ರಾಮದ ನದೀಂ ಬೇಗ್ ಅವರನ್ನು ಸದಸ್ಯರನ್ನಾಗಿ ಕೂಡಲೇ ಜಾರಿಗೆ ಬರುವಂತೆ ಸರ್ಕಾರದಿಂದ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಇದಕ್ಕಾಗಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿಗಳಾದ ನಸೀರ್ ಅಹಮದ್, ಎಂ.ಎಲ್ ಅನಿಲ್ ಕುಮಾರ್, ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
More news from ಕರ್ನಾಟಕ and nearby areas
- ಮಾಧ್ಯಮದವರ ಮೇಲೆ ಗೂಂಡಾ ವರ್ತನೆ ತೋರಿದ ರಾಮಮೂರ್ತಿನಗರ ಪೊಲೀಸ್ ಠಾಣಾ ಎಎಸ್ಐ ಶಿವಕುಮಾರ್1
- ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ1
- ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.1
- SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver1
- ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್1
- *ಭಾರತ ನಲ್ಲಿ ವೈರಲ್*1
- ಕೋಲಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಕೇಂದ್ರ ಸರ್ಕಾರದ ಟ್ರಾನ್ಸ್ ಜಂಡರ್ ತಿದ್ದುಪಡಿ ಕಾಯ್ದೆ 2026 ವಿರುದ್ಧ ಸೋಮವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸ ಕಾಯ್ದೆಯು ಹಕ್ಕುಗಳನ್ನು ರಕ್ಷಿಸುವ ಬದಲು ನಿಯಂತ್ರಣ ಹೇರುವಂತಿದೆ ಎಂದು ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ವೈದ್ಯಕೀಯ ಮಂಡಳಿಯ ಪರಿಶೀಲನೆ ಕಡ್ಡಾಯಗೊಳಿಸಿರುವುದು ಹಾಗೂ ವ್ಯಕ್ತಿಯ ಲಿಂಗತ್ವ ಗುರುತನ್ನು ರಾಜ್ಯವೇ ನಿರ್ಧರಿಸುವ ನಿಲುವು ಸ್ವಾಭಿಮಾನ ಮತ್ತು ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 15ರಂದು ಕೋಲಾರದಲ್ಲಿ “ಕರ್ನಾಟಕ ಸ್ವಾಭಿಮಾನಿ ನಡಿಗೆ” ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿ ಹಾಗೂ ಗೌರವಯುತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕಾಯ್ದೆ ವಿರುದ್ಧ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.1
- ಹನೂರು: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ನಂತರ ಮಾತನಾಡಿದರು. "ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ತತ್ವಗಳು ಪ್ರಸ್ತುತ ಸಮಾಜಕ್ಕೆ ಅತ್ಯಗತ್ಯ. ಅವರ ಹೋರಾಟ ಮತ್ತು ಜ್ಞಾನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಲಿ," ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾದ ಬಿ. ಕೇಶವಮೂರ್ತಿ ಅವರು ಅಂಬೇಡ್ಕರ್ ಅವರ ಜೀವನದ ಹಾದಿ ಮತ್ತು ಸಾಮಾಜಿಕ ಕೊಡುಗೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ಅಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರೇಖಾ, ಶಿಕ್ಷಣಾಧಿಕಾರಿ ಮಹೇಶ್, ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್, ಆರಕ್ಷಕ ನಿರೀಕ್ಷಕ ಆನಂದ್ ಮೂರ್ತಿ ಉಪಸ್ಥಿತರಿದ್ದರು. ಹಾಗೆಯೇ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಚಪ್ಪ, ಮುಖಂಡರುಗಳಾದ ಮಹೇಶ್, ಲಿಂಗರಾಜು, ಗುರುಸ್ವಾಮಿ, ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು, ನಾಗಣ್ಣ, ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ವರದಿ ಉಸ್ಮಾನ್ ಖಾನ್4
- . ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು. ನಂತರ ಸಮುದಾಯದ ಮುಖಂಡರಾದ ಮಹದೇವ ಮಾತನಾಡಿ ಜಗಜೀವನ್ ರಾಮ್ ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು. ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು ಎಂದು ತಿಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು "ಕಲಿಯಿರಿ, ಸಂಘಟಿತರಾಗಿ, ಹೋರಾಡಿ." "ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ." "ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು. ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.4