Shuru
Apke Nagar Ki App…
ನೀರಿನ ತೋಡಿನ ವಿವಾದ: ನೆರೆಮನೆಯವರಿಗೆ ಹಲ್ಲೆ; ಕೊಣಾಜೆ ಠಾಣೆಯಲ್ಲಿ ದೂರು ದಾಖಲು ನೀರಿನ ತೋಡನ್ನು ಮುಚ್ಚಿದ ವಿಷಯಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊರ್ವ ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ರವಿವಾರ ಘಟನೆ ನಡೆದಿದೆ. ಪಟ್ನಮೊಗರು ನಿವಾಸಿ ನಾಗೇಶ್ ಶೇಣವ ಹಲ್ಲೆ ನಡೆಸಿರುವ ವ್ಯಕ್ತಿಯಾಗಿದ್ದು, ನೆರೆಮನೆಯ ಬೇಬಿ (56), ಅವರ ಪುತ್ರ ರವಿರಾಜ್ ಮತ್ತು ಸೊಸೆ ವರ್ಷಾ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
Shamsheer Budoli
ನೀರಿನ ತೋಡಿನ ವಿವಾದ: ನೆರೆಮನೆಯವರಿಗೆ ಹಲ್ಲೆ; ಕೊಣಾಜೆ ಠಾಣೆಯಲ್ಲಿ ದೂರು ದಾಖಲು ನೀರಿನ ತೋಡನ್ನು ಮುಚ್ಚಿದ ವಿಷಯಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊರ್ವ ನೆರೆಮನೆಯವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ರವಿವಾರ ಘಟನೆ ನಡೆದಿದೆ. ಪಟ್ನಮೊಗರು ನಿವಾಸಿ ನಾಗೇಶ್ ಶೇಣವ ಹಲ್ಲೆ ನಡೆಸಿರುವ ವ್ಯಕ್ತಿಯಾಗಿದ್ದು, ನೆರೆಮನೆಯ ಬೇಬಿ (56), ಅವರ ಪುತ್ರ ರವಿರಾಜ್ ಮತ್ತು ಸೊಸೆ ವರ್ಷಾ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
More news from ಕರ್ನಾಟಕ and nearby areas
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಉಕ್ಕಿನ ನಗರ ಗುಡುಗು ಸಹಿತ ಸುಮಾರು ಒಂದು ಗಂಟೆಗಳ ಕಾಲ ಮಳೆಯಾಗಿದೆ. ಸಿಡಿಲು, ಗುಡುಗಿನ ಜೊತೆ ಭಾರಿ ಗಾಳಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಬಿಸಿಲು ಹೆಚ್ಚಾಗಿದ್ದು ಮಳೆ ಬರುವ ಮುನ್ಸೂಚನೆಗಳಿದ್ದವು. ಮಧ್ಯಾಹ್ನ 3-30 ರ ವೇಳೆಹೆ ಗುಡುಗು ಮಿಂಚುವಿನೊಂದಿಗೆ ಸುರಿದ ಮಳೆಗೆ ಇಳೆ ತಂಪಾಗಿದೆ. ಇತ್ತ ಶಿವಮೊಗ್ಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.1
- Post by Md Aleemulla Shariff1
- ಮೈಸೂರು ಜಿಲ್ಲೆಯ “ದಕ್ಷಿಣ ಕಾಶಿ” ಎಂಬ ಹೆಗ್ಗಳಿಕೆಯನ್ನು ಪಡೆದ ಪವಿತ್ರ ಕ್ಷೇತ್ರಗಳಲ್ಲಿ ನಂಜನಗೂಡು ಶ್ರೀ ನಂಜುಂಡೇಶ್ವರ ದೇವಾಲಯದೊಂದಿಗೆ ತಿ. ನರಸೀಪುರದಲ್ಲಿರುವ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಮನೋನ್ಮಣಿ ಸಮೇತ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ದೇವಸ್ಥಾನ ವಿಶೇಷ ಸ್ಥಾನ ಹೊಂದಿದೆ. ಪರಶುರಾಮರಿಂದ ನಿರ್ಮಾಣಗೊಂಡ ನಂಜನಗೂಡು ದೇವಾಲಯದಂತೆ, ಅಗಸ್ತ್ಯ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿದೆ ಎಂಬ ನಂಬಿಕೆ ಇರುವ ಈ ದೇವಸ್ಥಾನವೂ ಭಕ್ತರ ಆಸ್ಥೆಯ ಕೇಂದ್ರವಾಗಿದೆ. ಇಂದು ತಿ. ನರಸೀಪುರದ ತ್ರಿವೇಣಿ ಸಂಗಮ ತಟದಲ್ಲಿರುವ ಮನೋನ್ಮಣಿ ಸಮೇತ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾ ರಥೋತ್ಸವವು ಭಕ್ತಿ ಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದ ಬಳಿಕ ದೇವಾಲಯದ ಮುಂಭಾಗದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಕ್ಕೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ನಂತರ ಭಕ್ತರಿಗೆ ರಥ ಎಳೆಯಲು ಅವಕಾಶ ಮಾಡಿಕೊಡಲಾಯಿತು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತಾದಿಗಳು ಹರ ಹರ ಮಹಾದೇವ ಘೋಷಣೆಗಳ ನಡುವೆ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥ ಸಾಗುವ ವೇಳೆ ಭಕ್ತರು ಹಣ್ಣು, ಜವನ ಹಾಗೂ ಪುಷ್ಪಗಳನ್ನು ಅರ್ಪಿಸಿ ಧಾರ್ಮಿಕ ಉತ್ಸಾಹ ಮೆರೆದರು. ಬಿಸಿಲಿನ ತಾಪದ ನಡುವೆಯೂ ಭಕ್ತರ ಸಂಭ್ರಮ ಕಡಿಮೆಯಾಗದೇ ಇದ್ದು, ದಾನಿಗಳಿಂದ ಮಜ್ಜಿಗೆ ಮತ್ತು ಪಾನಕ ವಿತರಣೆ ಮಾಡಿ ಭಕ್ತರ ದಾಹ ನೀಗಿಸಲಾಯಿತು. ತ್ರಿವೇಣಿ ಸಂಗಮ ತಟದಲ್ಲಿ ನಡೆಯುವ ಈ ಮಹಾ ರಥೋತ್ಸವವು ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಪ್ರಮುಖ ಉತ್ಸವವಾಗಿ ಗಮನ ಸೆಳೆಯಿತು.1
- ನಂಜನಗೂಡು: ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ವಿಶ್ವ ವಿಖ್ಯಾತ ನಂಜನಗೂಡು ದೊಡ್ಡಜಾತ್ರಾ ಮಹೋತ್ಸವದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಸೋಮವಾರ ಬೆಳಗ್ಗೆ 5.50ರಿಂದ 6.30ರೊಳಗೆ ಸಲುವ ಶುಭ ಮೀನ ಲಗ್ನದಲ್ಲಿ ಗೌತಮ ಪಂಚ ಮಹಾರಥೋತ್ಸವಕ್ಕೆ ದೇವಾಲಯದಲ್ಲಿ ಪೂಜಾ ವಿಧಿ ವಿಧಾನಗಳ ಬಳಿಕ ರಥೋತ್ಸವ ಚಾಲನೆ ದೊರೆಯಿತು. ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಡಾ.ಲಕ್ಷ್ಮಿಕಾಂತರೆಡ್ಡಿ, ಎಡಿಸಿ ಡಾ.ಪಿ.ಶಿವರಾಜು, ತಹಶೀಲ್ದಾರ್ ಡಾ.ಸ್ಮಿತಾ ರಾಮು, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ನಗರಸಭಾ ಆಯುಕ್ತ ಬಸವರಾಜ್ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಸವರಾಜು ವೃತ್ತ ನಿರೀಕ್ಷಕ ರವೀಂದ್ರ, ದೇವಸ್ಥಾನದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಸೇರಿದಂತೆ ಗಣ್ಯರು ರಥಕ್ಕೆ ಚಾಲನೆ ನೀಡಿದರು. ದೇವಸ್ಥಾನದ ಮುಂಭಾಗದಲ್ಲಿ ಹೊರಟು ರಥದ ಬೀದಿಯಲ್ಲಿ ಸಾಗಿದ ಶ್ರೀ ನಂಜುಂಡೇಶ್ವರ ಸ್ವಾಮಿ, ಪಾರ್ವತಮ್ಮ, ಗಣಪತಿ, ಸುಬ್ರಮಣ್ಯ, ಚಂಡಿಕೇಶ್ವರ ರಥಗಳನ್ನು ಭಕ್ತಿ ಭಾವದಿಂದ ಭಕ್ತರು ಎಳೆದರು. ಅದ್ದೂರಿ ರಥೋತ್ಸವ ಕಣ್ತುಂಬಿಕೊಳ್ಳಲು ಮಧ್ಯರಾತ್ರಿಯಿಂದಲ್ಲೇ ಭಕ್ತ ಸಾಗರ ಹರಿದು ಬಂದಿತ್ತು. ಸುಮಾರು 97 ಅಡಿ ಎತ್ತರದ 250 ಟನ್ ತೂಕ ವಿರುವ ಶ್ರೀ ನಂಜುಂಡೇಶ್ವರನ ದೊಡ್ಡ ರಥ ಎಳೆಯುವಾಗ,ಭಕ್ತರ ಪರಾಕಾಷ್ಠೆ ಮುಗಿಲು ಮುಟ್ಟಿತ್ತು. ಶ್ರೀ ಅಮ್ಮನವರ ರಥ, ಗಣಪತಿ ರಥ, ಸುಬ್ರಹ್ಮಣ್ಯ, ಚಂಡಿಕೇಶ್ವರ ಪಂಚ ರಥಗಳು ಸರತಿ ಸಾಲಿನಲ್ಲಿ ಸಾಗಿದವು. ವಿಶಿಷ್ಟ ಕುಸರಿ ಕಲಾ ಕೆತ್ತನೆಯಿಂದ ಕೂಡಿರುವ ರಥವನ್ನು ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪ ಹಾಗೂ ಬಣ್ಣದ ಧ್ವಜಗಳನ್ನು ಕಟ್ಟಿ ಶೃಂಗಾರ ಮಾಡಲಾಗಿತ್ತು. ಭಕ್ತಾದಿಗಳು ನಂಜುಂಡೇಶ್ವರನಿಗೆ ಜಯ ಘೋಷ ಮೊಳಗಿಸಿ ರಥವನ್ನು ಎಳೆದು ಪುನೀತರಾದರು. ಭಕ್ತರು ರಥಕ್ಕೆ ಹಣ್ಣು ಜವನ ಎಸೆದು ಭಕ್ತಿ ಭಾವವನ್ನು ಮೆರೆದರು. ದೊಡ್ಡ ಜಾತ್ರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆ ಸುವ್ಯವಸ್ಥಿತವಾಗಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಸಾರಿಗೆಯ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ರೈಲ್ವೆ ಇಲಾಖೆಯವರು ನಂಜನಗೂಡಿಗೆ ಜಾತ್ರೆಯ ದಿನ ಹೆಚ್ಚುವರಿಯಾಗಿ 3 ವಿಶೇಷ ರೈಲು ಸಂಚಾರದ ಸೌಕರ್ಯ ಕಲ್ಪಿಸಿದ್ದಾರೆ. ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಬೇಸಿಗೆ ಆರಂಭದಲ್ಲಿಯೇ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕದಳದವನ್ನು ನಿಯೋಜಿಸಲಾಗಿತ್ತು. ರಥ ಪ್ರದಕ್ಷಿಣೆ ಹಾಕುವ ಮಾರ್ಗಗಳ ಮಧ್ಯೆ ,ಹೆಲ್ತ್ ಕ್ಯಾಂಪ್ ಕೂಡ ತೆರೆಯಲಾಗಿತ್ತು. ಅಪಾರ ಜನಸ್ತೋಮ ನಿಯಂತ್ರಿಸಲು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ದೊಡ್ಡ ಜಾತ್ರೆಯ ದೃಶ್ಯಗಳನ್ನು ಖಾಸಗಿ ಡ್ರೋಣ್ ಬಳಸಿ ಚಿತ್ರಕರಣ ಮಾಡಲು ನಿಷೇಧಿಸಲಾಗಿತ್ತು. ಆದರೂ 8 ಡ್ರೋನ್ ಕ್ಯಾಮೆರಾಗಳು ಕಾಣಿಸಿಕೊಂಡಿವೆ. ಜಾತ್ರೆಯ ಅಂಗವಾಗಿ ದೇವಾಲಯದ ಆವರಣದಲ್ಲಿ ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಪ್ರದರ್ಶನಗೊಂಡವು. ಸ್ಥಳೀಯ ಜಾನಪದ ಕಲಾವಿದರಿಂದ ಭಕ್ತಿಗೀತೆಗಳನ್ನು ಹಾಡಿ ನೆರೆದಿದ್ದ ಜನರನ್ನು ರಂಜಿಸಿದರು.1
- "ಶ್ರೀನರಹರಿ ಸದ್ಗುರು ಆಶ್ರಮದಲ್ಲಿ ನಿತ್ಯಾನ್ನ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ". ಚಳ್ಳಕೆರೆ:-ನಗರದ ಹೊರವಲಯದ ನರಹರಿ ನಗರದ ಶ್ರೀನರಹರಿ ಸದ್ಗುರು ಆಶ್ರಮದಲ್ಲಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವ ಪ್ರಾರಂಭದ ಪ್ರಯುಕ್ತ ನಿತ್ಯಾನ್ನ ದಾಸೋಹ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ.ವೈ ರಾಜಾರಾಮ್ ಗುರುಗಳು ಗುರುತಾಯಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಪ್ರಾರಂಭದ ಹಿನ್ನೆಲೆಯಲ್ಲಿ ನರಹರಿ ನಗರದ ಆಶ್ರಮದಲ್ಲಿ ಪ್ರತಿನಿತ್ಯ ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಅನ್ನದಾಸೋಹ ನಡೆಯಲಿದ್ದು ಆಶ್ರಮದ ಭಕ್ತರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀನರಹರಿ ಸದ್ಗುರು ಆಶ್ರಮದ ಉಪಾಧ್ಯಕ್ಷರಾದ ಮಾಕಂ ಶ್ರೀನಿವಾಸಲು, ಬೆಂಗಳೂರಿನ ಐ.ಐ.ಎಂ ನ ನಿವೃತ್ತ ಪ್ರೊಫೆಸರ್ ಡಾ.ಬಿ.ಶೇಖರ್, ಪ್ರಗತಿಪರ ಬೇಸಾಯಗಾರರಾದ ಕುಂಕಲ ಕೃಷ್ಣಯ್ಯ, ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪೂಜ್ಯ ವೈ ಏಕಾಂತ ರಾಮ್,ಡಾ.ವೈ ನರಹರಿ, ಈಶ್ವರಗೆರೆ ರಂಗನಾಥ್, ರಾಜೇಶ್ವರಿ, ಲಾವಣ್ಯ, ಪದ್ಮಶ್ರೀ, ರವಿಶಂಕರ್ , ಯಾದಾಟಿ ಚೇತನ್, ದೇವರಾಜರೆಡ್ಡಿ, ರಾಮಚಂದ್ರಪ್ಪ , ಮಲ್ಲಿಕಾರ್ಜುನಪ್ಪ , ರೇವಣಸಿದ್ದಪ್ಪ , ಯತೀಶ್ ಎಂ ಸಿದ್ಧಾಪುರ, ಸುಹಾಸ್,ವೈಭವ, ಸರಸ್ವತಿ ಗೋವಿಂದರಾಜು, ಪ್ರೇಮಲೀಲಾ, ಗಂಗಾಧರಶೆಟ್ಟಿ, ನಾಗಲಕ್ಷ್ಮೀ, ಶಾಂತಮ್ಮ , ನಗರಂಗೆರೆ ಮಹೇಶ್ ಸೇರಿದಂತೆ ನರಹರಿ ಸದ್ಗುರು ಆಶ್ರಮದ ಸದ್ಭಕ್ತರು ಉಪಸ್ಥಿತರಿದ್ದರು.1
- ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಇಂದು ಮಧ್ಯಾಹ್ನ 3:00 ಸಮಯದಲ್ಲಿ ಸರ್ವೇ ನಂಬರ್ 210 ಜಮೀನಿನ ಪಕ್ಕದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ . ರೈತನ ಹೆಸರು ಗೋಪಾಲ ಶೆಟ್ಟಿ ತಿಳಿದುಬಂದಿದೆ, ಇದರಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿಯ ಹುಡುಕಾಟದಲ್ಲಿ ತೊಡಗಿದ್ದಾರೆ,1
- ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.1
- Post by Md Aleemulla Shariff1
- ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಬಿಸಾಡಿದ ಪರಿಣಾಮ ಸ್ಥಳ ಗಲೀಜಾಗಿರುವುದು ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರ ಗಮನಕ್ಕೆ ಬಂತು.* *ಈ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ಹಾಗೂ ಮುಖಂಡರೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ, ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು.*1