ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಅರ್ಥಪೂರ್ಣ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಮೈಸೂರು: ಹಿಂದೂಸ್ಥಾನ್ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜೆ. ಪ್ರಿಯ ಅವರು ಉಪಸ್ಥಿತರಿದ್ದು, ಗ್ರಂಥಾಲಯದ ಮಹತ್ವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗ್ರಂಥಪಾಲಕರ ಪಾತ್ರದ ಕುರಿತು ಮಾತನಾಡಿದರು. ಗ್ರಂಥಾಲಯವು ಜ್ಞಾನಾರ್ಜನೆಯ ಪ್ರಮುಖ ಕೇಂದ್ರವಾಗಿದ್ದು, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ, ಸಂಶೋಧನಾ ಮನೋಭಾವ ಹಾಗೂ ವಿಚಾರಶೀಲತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲರು ತಿಳಿಸಿದರು. ಇಂದಿನ ಡಿಜಿಟಲ್ ಯುಗದಲ್ಲಿಯೂ ಪುಸ್ತಕಗಳ ಮಹತ್ವ ಕಡಿಮೆಯಾಗಿಲ್ಲ; ಬದಲಾಗಿ ಮುದ್ರಿತ ಹಾಗೂ ಡಿಜಿಟಲ್ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಗ್ರಂಥಾಲಯ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು. ಗ್ರಂಥಪಾಲಕರ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಬಳಕೆ ಮಾಡಿಕೊಂಡು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು. ಕಾರ್ಯಕ್ರಮ ನಿರೂಪಣೆಯನ್ನು ವೆಂಕಟೇಶ್ ಅವರು, ಹೇಮಂತ್ ಕುಮಾರ್ ಬಿ.ಎನ್. ಅವರು ಸ್ವಾಗತಿಸಿದರು, ಮೋಹನ್ ಕುಮಾರ್ ಎಲ್.ಪಿ. ಅವರು ಗ್ರಂಥಾಲಯದ ಪಿತಾಮಹ ರಂಗನಾಥ್ ಅವರು ಜೀವನ ಚರಿತ್ರೆ ಹಾಗೂ ಗ್ರಂಥಾಲಯದ ಮಹತ್ವವನ್ನು ತಿಳಿಸಿದರು, ಡಾ. ಶಿವಕುಮಾರ್ ಆರ್. ಅವರು ವಂದಿಸಿದರು. ಪರಮೇಶ ಕೆ.ಉತ್ತನಹಳ್ಳಿ ಅವರು ಪ್ರಾರ್ಥಿಸಿದರು.
ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಅರ್ಥಪೂರ್ಣ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಮೈಸೂರು: ಹಿಂದೂಸ್ಥಾನ್ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜೆ. ಪ್ರಿಯ ಅವರು ಉಪಸ್ಥಿತರಿದ್ದು, ಗ್ರಂಥಾಲಯದ ಮಹತ್ವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗ್ರಂಥಪಾಲಕರ ಪಾತ್ರದ ಕುರಿತು ಮಾತನಾಡಿದರು. ಗ್ರಂಥಾಲಯವು ಜ್ಞಾನಾರ್ಜನೆಯ ಪ್ರಮುಖ ಕೇಂದ್ರವಾಗಿದ್ದು, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ, ಸಂಶೋಧನಾ ಮನೋಭಾವ ಹಾಗೂ ವಿಚಾರಶೀಲತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲರು ತಿಳಿಸಿದರು. ಇಂದಿನ ಡಿಜಿಟಲ್ ಯುಗದಲ್ಲಿಯೂ ಪುಸ್ತಕಗಳ ಮಹತ್ವ ಕಡಿಮೆಯಾಗಿಲ್ಲ; ಬದಲಾಗಿ ಮುದ್ರಿತ ಹಾಗೂ ಡಿಜಿಟಲ್ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಗ್ರಂಥಾಲಯ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು. ಗ್ರಂಥಪಾಲಕರ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಬಳಕೆ ಮಾಡಿಕೊಂಡು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು. ಕಾರ್ಯಕ್ರಮ ನಿರೂಪಣೆಯನ್ನು ವೆಂಕಟೇಶ್ ಅವರು, ಹೇಮಂತ್ ಕುಮಾರ್ ಬಿ.ಎನ್. ಅವರು ಸ್ವಾಗತಿಸಿದರು, ಮೋಹನ್ ಕುಮಾರ್ ಎಲ್.ಪಿ. ಅವರು ಗ್ರಂಥಾಲಯದ ಪಿತಾಮಹ ರಂಗನಾಥ್ ಅವರು ಜೀವನ ಚರಿತ್ರೆ ಹಾಗೂ ಗ್ರಂಥಾಲಯದ ಮಹತ್ವವನ್ನು ತಿಳಿಸಿದರು, ಡಾ. ಶಿವಕುಮಾರ್ ಆರ್. ಅವರು ವಂದಿಸಿದರು. ಪರಮೇಶ ಕೆ.ಉತ್ತನಹಳ್ಳಿ ಅವರು ಪ್ರಾರ್ಥಿಸಿದರು.
- All About,Misappropriation of funds by highly influential person in #Hyderabad *ಭಾರತ ನಲ್ಲಿ ವೈರಲ್*1
- ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.1
- ಮೈಕ್ರೋ ಗ್ರೀನ್ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್‌ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್‌ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್‌ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್‌ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್‌ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್‌ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್‌ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್, ಸ್ಯಾಂಡ್‌ವಿಚ್, ಸೂಪ್ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ಆ.28 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ಎಸ್ ಸಿ/ಎಸ್ ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ: ಸಿ.ಕೆ.ರಾಮಸ್ವಾಮಿ ವರದಿ: ಹೊಮ್ಮನಂಜುಂಡನಾಯಕ. ಜಿಲ್ಲೆಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ನೌಕರರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಕೇಂದ್ರ ನಮಿತಿ ಬೆಂಗಳೂರು ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8, ಶೃಂಗಾರ್ ಪ್ಯಾಲೇನ್‌ನಲ್ಲಿ ಬೆಳಿಗ್ಗೆ 10:30 ಗಂಟೆಗೆ ಆರಂಭವಾಗುವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಜೇತವನ ವಿಹಾರದ ಭೌದ್ಧ ಬಿಕ್ಕು ಮನೋರಕ್ಷಿತ ಬಂತೇಜಿ ವಹಿಸುವವರು, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸುವವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಚಿವರಾದ ಕೆ.ಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್‌ಖರ್ಗೆ, ಶಿವರಾಜ್ ತಂಗಡಗಿ : ಪಿ.ಎಂ.ನರೇಂದ್ರಸ್ವಾಮಿ.ಬಿ. ನಾಗೇಂದ್ರ ರುದ್ರಪ್ಪ ಲಮಾಣಿ, ಕೆ.ಎಸ್.ಬಸವಂತಪ್ಪ, ಟಿ.ರಘುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವವರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 5 ಬಸ್‌ಗಳಲ್ಲಿ ಹೊರಡಲು ವ್ಯವಸ್ಥೆ. ಮಾಡಲಾಗಿದೆ. ಚಾಮರಾಜೇಶ್ವರ ದೇವಸ್ಥಾನ ಮುಂಭಾಗ, ಹೌಸಿಂಗ್ ಬೋರ್ಡ್ ಹತ್ತಿರ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ, ಎಸ್‌ಟಿ ನೌಕರರು ಭಾಗವಹಿಸಿ ಯಶಸ್ವಿಕೊಳಿಸಿಕೊಡುವಂತೆ ಮನವಿ ಮಾಡಿದರು. ಮಾಜಿ ಅಧ್ಯಕ್ಷ ಮಂಜುನಾಥಪ್ರನನ್ನ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ನೌಕರರಿಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ನಾನು ಕೂಡ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ಜಾಗೃತ ನೌಕರರ 6ನೇ ರಾಜ್ಯ ಮಟ್ಟದ ಐಕ್ಯತಾ ಸಮಾವೇಶ ಮಾಡಿ ನೌಕರರು, ಸಮುದಾಯದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 50 ಸಾವಿರ ಜನರು ಸೇರುತ್ತಾರೆ ನಮ್ಮ ಜಿಲ್ಲೆಯಿಂದ 500 ಮಂದಿ ಭಾಗವಹಿಸುತ್ತಾರೆ. ಈ ಸಮಾವೇಶದಲ್ಲಿ ನಮ್ಮ ಮುಖ್ಯ ಬೇಡಿಕೆಗಳಾದ ಎಸ್ ಸಿ, ಎಸ್‌ಟಿಗಳಿಗೆ ಬ್ಯಾಕ್‌ಲಾಕ್ ಹುದ್ದೆಗಳನ್ನು ಭರ್ತಿ ಮಾಡುವುದು ಮೊದಲು ಆಗಬೇಕು. ಕಾನೂನು ವಿದ್ಯಾರ್ಥಿಗಳು, ಇಂಜಿನಿಯರ್‌ರಿಂಗ್ ವಿದ್ಯಾರ್ಥಿಗಳು, ಮೆಡಿಕಲ್ ವಿದ್ಯಾರ್ಥಿಗಳಿಗೆ ಒಳ ಮೀಸಲಾತಿಯಿಂದ ತುಂಬಾ ಇಕ್ಕಟ್ಟಾಗಿದ್ದು, ಸರಿಯಾಗಿ ಜಾತಿ ಪ್ರಮಾಣ ಕೊಡುತ್ತಿಲ್ಲ. ಅದಕ್ಕಾಗೆ 1 ಸಾವಿರದಿಂದ 2 ಸಾವಿರ ರೂ .ವೆಚ್ಚವಾಗುತ್ತಿದೆ. ಅದನ್ನು ಕಡಿಮೆ ಮಾಡಬೇಕು. ಬಗರ್‌ಹುಕುಂ ಸಾಗುವಳಿಯಲ್ಲಿ ವಿಳಂಬವಾಗುತ್ತಿದೆ. ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳಿಗೆ ಮಂಡಿಸಲಾಗುತ್ತದೆ ಎಂದರು. ಡಾ. ಬಿ.ಆರ್.ಅಂಬೇಡ್ಕರ್ ಮಹಾಸಭಾದ ಜಿಲ್ಲಾಧ್ಯಕ್ಷ ಉಮೇಶ್‌ಕುದರ್ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯು ಕಳೆದ 20 ವರ್ಷಗಳಿಂದಲ್ಲೂ ನಿರಂತರವಾಗಿ ಸಮುದಾಯಕ್ಕೆ ಆಗುವ ಎಲ್ಲ ಅನ್ಯಾಯಗಳನ್ನು ತಮ್ಮ ಧ್ವನಿಯ ಮುಖಾಂತರ, ಸಮಾವೇಶಗಳ ಮುಖಾಂತರ ಎಲ್ಲರಿಗೂ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಮ್ಮ ಸಂಘಟನೆಗಳ ವತಿಯಿಂದ ಎಲ್ಲ ರೀತಿ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಹಿರಿಯ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಕಾರ್ಯಾಧ್ಯಕ್ಷ ಶಿವಕುಮಾರಯ್ಯ, ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ವಾಸು, ಎಸ್ ಸಿ, ಎಸ್ ಟಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.4
- ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ವಿಎಸ್ ದೊಡ್ಡಿ ಬಳಿ ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.2
- All About,Crores Means Crores in #WaqfCommittees Accounts statement by #Chairman *ಭಾರತ ನಲ್ಲಿ ವೈರಲ್*1