ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿ ವತಿಯಿಂದ ಜೂನ್ 12ರಿಂದ 19ರವರೆಗೆ ವಿಶೇಷ ಸಹಸ್ರ ಕಲಶ ಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ. ಅಯ್ಯಪ್ಪ ಸ್ವಾಮಿಯ ಅನುಗ್ರಹಕ್ಕಾಗಿ ನಡೆಸಲಾಗುತ್ತಿರುವ ಈ ಧಾರ್ಮಿಕ ಮಹೋತ್ಸವದಲ್ಲಿ ಪ್ರತಿದಿನ ವಿಶೇಷ ಪೂಜೆ, ಅಭಿಷೇಕ, ಅರ್ಚನೆ, ಭಜನೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರ ಸಂಕಷ್ಟ ನಿವಾರಣೆ, ಆರೋಗ್ಯ, ಐಶ್ವರ್ಯ ಹಾಗೂ ಲೋಕಕ್ಷೇಮಕ್ಕಾಗಿ ನಡೆಸಲಾಗುವ ಈ ಪವಿತ್ರ ಆಚರಣೆಯಲ್ಲಿ ಸಾವಿರ ಕಲಶಗಳ ಸ್ಥಾಪನೆ, ವೇದಮಂತ್ರಗಳ ಪಠಣ, ವಿಶೇಷ ಅಲಂಕಾರ ಮತ್ತು ತೀರ್ಥಪ್ರಸಾದ ವಿತರಣೆ ಸೇರಿವೆ. ಮೈಸೂರು ಹಾಗೂ ಸುತ್ತಮುತ್ತಲಿನ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪೂಜಾ ಸಮಿತಿಯು ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಶ್ರೀ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿಯ ಕಾರ್ಯದರ್ಶಿ ಹರಿದಾಸ್ ಅವರು, ಜೂನ್ 12ರಿಂದ 19ರವರೆಗೆ ನಡೆಯುವ ಸಹಸ್ರ ಕಲಶ ಪೂಜೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಅವಧಿಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆಗಳು ಹಾಗೂ ಪ್ರಸಾದ ವಿತರಣೆಯ ಸದುಪಯೋಗವನ್ನು ಎಲ್ಲರೂ ಕುಟುಂಬ ಸಮೇತರಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಜೂನ್ 19ರಂದು ಮಹಾಪೂಜೆ, ಸಹಸ್ರ ಕಲಶ ಪೂಜೆಯ ಸಮಾರೋಪ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆಯಲಿವೆ. ಈ ಪವಿತ್ರ ವಾತಾವರಣದಲ್ಲಿ ನಡೆಯುತ್ತಿರುವ ಧಾರ್ಮಿಕ ಮಹೋತ್ಸವವು ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಹೆಚ್ಚಿಸುವುದರ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಭಕ್ತಿಯ ಸಂದೇಶವನ್ನು ಸಾರಲಿದೆ. ಶ್ರೀ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿಯ ಈ ಧಾರ್ಮಿಕ ಸೇವಾಕಾರ್ಯಕ್ಕೆ ಭಕ್ತರು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿ ವತಿಯಿಂದ ಜೂನ್ 12ರಿಂದ 19ರವರೆಗೆ ವಿಶೇಷ ಸಹಸ್ರ ಕಲಶ ಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ. ಅಯ್ಯಪ್ಪ ಸ್ವಾಮಿಯ ಅನುಗ್ರಹಕ್ಕಾಗಿ ನಡೆಸಲಾಗುತ್ತಿರುವ ಈ ಧಾರ್ಮಿಕ ಮಹೋತ್ಸವದಲ್ಲಿ ಪ್ರತಿದಿನ ವಿಶೇಷ ಪೂಜೆ, ಅಭಿಷೇಕ, ಅರ್ಚನೆ, ಭಜನೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರ ಸಂಕಷ್ಟ ನಿವಾರಣೆ, ಆರೋಗ್ಯ, ಐಶ್ವರ್ಯ ಹಾಗೂ ಲೋಕಕ್ಷೇಮಕ್ಕಾಗಿ ನಡೆಸಲಾಗುವ ಈ ಪವಿತ್ರ ಆಚರಣೆಯಲ್ಲಿ ಸಾವಿರ ಕಲಶಗಳ ಸ್ಥಾಪನೆ, ವೇದಮಂತ್ರಗಳ ಪಠಣ, ವಿಶೇಷ ಅಲಂಕಾರ ಮತ್ತು ತೀರ್ಥಪ್ರಸಾದ ವಿತರಣೆ ಸೇರಿವೆ. ಮೈಸೂರು ಹಾಗೂ ಸುತ್ತಮುತ್ತಲಿನ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪೂಜಾ ಸಮಿತಿಯು ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಶ್ರೀ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿಯ ಕಾರ್ಯದರ್ಶಿ ಹರಿದಾಸ್ ಅವರು,
ಜೂನ್ 12ರಿಂದ 19ರವರೆಗೆ ನಡೆಯುವ ಸಹಸ್ರ ಕಲಶ ಪೂಜೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಅವಧಿಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆಗಳು ಹಾಗೂ ಪ್ರಸಾದ ವಿತರಣೆಯ ಸದುಪಯೋಗವನ್ನು ಎಲ್ಲರೂ ಕುಟುಂಬ ಸಮೇತರಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಜೂನ್ 19ರಂದು ಮಹಾಪೂಜೆ, ಸಹಸ್ರ ಕಲಶ ಪೂಜೆಯ ಸಮಾರೋಪ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ನಡೆಯಲಿವೆ. ಈ ಪವಿತ್ರ ವಾತಾವರಣದಲ್ಲಿ ನಡೆಯುತ್ತಿರುವ ಧಾರ್ಮಿಕ ಮಹೋತ್ಸವವು ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಹೆಚ್ಚಿಸುವುದರ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಭಕ್ತಿಯ ಸಂದೇಶವನ್ನು ಸಾರಲಿದೆ. ಶ್ರೀ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿಯ ಈ ಧಾರ್ಮಿಕ ಸೇವಾಕಾರ್ಯಕ್ಕೆ ಭಕ್ತರು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
- ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಮದ್ಯ ಸೇವಿಸಿ ಆಗಮಿಸುವ ಭಕ್ತಾದಿಗಳ ಕಾಟ ಮಿತಿಮೀರಿದ್ದು, ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕ ಭಕ್ತಾದಿಗಳು ಆರೋಪಿಸಿದ್ದಾರೆ. ಅಮಾವಾಸ್ಯೆ ವಿಶೇಷವಾಗಿ ಹಾಗೂ ಶನಿವಾರ, ಭಾನುವಾರ ರಜಾದಿನಗಳ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ಮದ್ಯ ಸೇವಿಸಿ ಅನಿಯಂತ್ರಿತವಾಗಿ ವರ್ತಿಸುವವರ ಸಮಸ್ಯೆ ಉಲ್ಬಣಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಅತಿಯಾದ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬರು ರಾತ್ರಿ ವೇಳೆ ನಡುರಸ್ತೆಯಲ್ಲಿ ಅರಬೆತ್ತಲೆಯಲ್ಲಿ ಮಲಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ವ್ಯಕ್ತಿ ನಿಯಂತ್ರಣವಿಲ್ಲದೆ ಎದ್ದು ಕಾರು ಹತ್ತಿಕೊಂಡು ಹೋಗಿರುವುದು ವಿಡಿಯೋದಲ್ಲಿದೆ. ಮಹದೇಶ್ವರ ಬೆಟ್ಟಕ್ಕೆ ಅಕ್ರಮವಾಗಿ ಮದ್ಯ ಸಾಗಿಸುವುದು ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವುದನ್ನು ತಡೆಯಲು ತಾಲೂಕು ಬೆಟ್ಟದ ಮೊದಲೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ವತಿಯಿಂದ ಚೆಕ್‌ಪೋಸ್ಟ್‌ಗಳಿದ್ದರೂ, ಅಲ್ಲಿನ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಎಷ್ಟರಮಟ್ಟಿಗೆ ನಿರ್ವಹಿಸುತ್ತಿದ್ದಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ. ತೀವ್ರವಾದ ತಿರುವುಗಳಿರುವ ಮತ್ತು ದಟ್ಟಾರಣ್ಯದ ನಡುವೆ ಹಾದುಹೋಗುವ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ, ಪ್ರಯಾಣಿಕರು, ಬೈಕ್ ಸವಾರರು, ಸಾರಿಗೆ ಬಸ್‌ಗಳು ಮತ್ತು ಖಾಸಗಿ ಬಸ್‌ಗಳು ವೇಗ ಮಿತಿಯಿಲ್ಲದೆ ಚಲಿಸುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಇಷ್ಟೇ ಅಲ್ಲದೆ, ಕಾರುಗಳು ಮತ್ತು ಇತರ ವಾಹನಗಳಲ್ಲಿ ಮದ್ಯ ಸೇವಿಸಿ ಚಾಲನೆ ಮಾಡುವುದು ಹಾಗೂ ಎಲ್ಲೆಂದರಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸುವುದರಿಂದ ಜಾಗರೂಕ ಸವಾರರಿಗೆ ತೊಂದರೆಯಾಗುವುದಲ್ಲದೆ, ಅಪಘಾತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯವರು ಇನ್ನಾದರೂ ಎಚ್ಚೆತ್ತುಕೊಂಡು, ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುವ ಮೂಲಕ ಮದ್ಯ ವ್ಯಸನಿಗಳ ಪ್ರವೇಶಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.2
- ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿ ಕ್ಷೇತ್ರದ ಸಂತೆಮರಳ್ಳಿ ಭಾಗದ ಕಾಂಗ್ರೆಸ್ ಮುಖಂಡರು ಮತ್ತು ಹಲವಾರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಸಂತೆಮರಳ್ಳಿಯ ವೃತ್ತದಲ್ಲಿ ಎ.ಆರ್. ಕೃಷ್ಣಮೂರ್ತಿ ಅವರ ಭಾವಚಿತ್ರವನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹೈಕಮಾಂಡ್‌ಗೆ ಒತ್ತಾಯಿಸಲಾಯಿತು. ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ಗೌಡಹಳ್ಳಿ ರೇವಣ್ಣ ಮಾತನಾಡಿ, ಎ.ಆರ್. ಕೃಷ್ಣಮೂರ್ತಿ ಅವರು ರಾಜಕೀಯ ಹಿರಿತನ ಹೊಂದಿರುವ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಕ್ಷೇತ್ರವನ್ನು ಮಾದರಿ ಮಾಡುವ ಕನಸನ್ನು ಹೊಂದಿರುವ ಇವರು, ಇಡೀ ಜಿಲ್ಲೆ ಹಾಗೂ ರಾಜ್ಯದ ರಾಜಕೀಯ ಅನುಭವದ ಹಿನ್ನೆಲೆಯ ಕುಟುಂಬದಿಂದ ಬಂದ ನಾಯಕರಾಗಿದ್ದಾರೆ. ದಲಿತ ಸಮುದಾಯದ ಪ್ರಭಾವಿ ಶಾಸಕರಾಗಿರುವ ಇವರು, ತಮ್ಮ ತಂದೆ ಬಿ. ರಾಚಯ್ಯನವರ ಕಾಲದಿಂದಲೂ ರಾಜಕೀಯದ ಅನೇಕ ಸೂಕ್ಷ್ಮಗಳನ್ನು ಕಲಿತಿದ್ದಾರೆ. ರಾಜಕೀಯ ಮುತ್ಸದ್ದಿತನವನ್ನು ಹೊಂದಿರುವ ಅವರಿಗೆ ಯಾವ ಖಾತೆಯನ್ನು ನೀಡಿದರೂ ನಿಭಾಯಿಸುವ ಶಕ್ತಿ ಇದೆ. ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅವರು, ದಾಖಲೆಯ ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ಕ್ಷೇತ್ರಕ್ಕೆ ₹500 ಕೋಟಿಗೂ ಹೆಚ್ಚು ಅನುದಾನವನ್ನು ತಂದು ಮಾದರಿ ಮಾಡಲು ಪಣ ತೊಟ್ಟಿದ್ದು, ಎಲ್ಲಾ ಜಾತಿ, ಧರ್ಮ, ಸಮುದಾಯದ ಜನರೂ ಅವರನ್ನು ಪ್ರೀತಿಸುತ್ತಾರೆ ಹಾಗೂ ಇಷ್ಟಪಡುತ್ತಾರೆ. ಎಲ್ಲರನ್ನೂ ಒಗ್ಗಟ್ಟಾಗಿ ಕರೆದುಕೊಂಡು ಹೋಗುವ ಚತುರತೆ ಇವರಿಗಿದ್ದು, ಎಲ್ಲ ದೃಷ್ಟಿಯಿಂದಲೂ ಸಚಿವ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಇವರಾಗಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು. ಅಹಿಂದ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಕೋಟಂಬಳ್ಳಿ ಸಿದ್ದು ಮಾತನಾಡಿ, ಎ.ಆರ್.ಕೆ. ಸಾಹೇಬರು ತಮ್ಮ ತಂದೆಯ ಕಾಲದಿಂದಲೂ ರಾಜಕೀಯದಲ್ಲಿದ್ದಾರೆ. ಕ್ಷೇತ್ರಕ್ಕೆ ತಾಲೂಕು ಆಸ್ಪತ್ರೆ, ವಿಭಾಗೀಯ ಆಸ್ಪತ್ರೆ, ರಸ್ತೆ, ಸಮುದಾಯ ಭವನಗಳು, ಎಳನೀರು ಮಾರುಕಟ್ಟೆ, ಸಿಲ್ಕ್ ಪಾರ್ಕ್, ಬಸ್ ನಿಲ್ದಾಣಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕೇವಲ ಮೂರು ವರ್ಷಗಳಲ್ಲಿ ನೂರಾರು ಕೋಟಿ ರೂಪಾಯಿ ಅನುದಾನವನ್ನು ತಂದಿರುವ ಇವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪಟ್ಟುಬಿಡದೆ ಅನುದಾನಗಳನ್ನು ತರುತ್ತಾ ಶ್ರಮಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಮತ್ತು ಕ್ಷೇತ್ರ ಮತ್ತಷ್ಟು ಪ್ರಗತಿಯಾಗುತ್ತದೆ ಎಂದು ರಾಜ್ಯ ಹೈಕಮಾಂಡ್‌ಗೆ ಒತ್ತಾಯಿಸಿದರು.1
- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಒಂದು ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಕಾರನ್ನು ನಡು ರಸ್ತೆಯಲ್ಲೇ ನಿಲ್ಲಿಸಿ, ಅರೆನಗ್ನ ಸ್ಥಿತಿಯಲ್ಲಿ ಮಲಗಿದ್ದಾರೆ. ಹಿಂದೆ ಬಂದ ವಾಹನ ಸವಾರರು ನಿರಂತರವಾಗಿ ಹಾರನ್ ಮಾಡಿದಾಗ, ಆ ವ್ಯಕ್ತಿ ಎದ್ದು ತೂರಾಡುತ್ತಾ ಕಾರಿನೊಳಗೆ ತೆರಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಧಾರ್ಮಿಕ ಕ್ಷೇತ್ರಕ್ಕೆ ತೆರಳುವಂತಹ ಪ್ರಮುಖ ರಸ್ತೆಯಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಪಾಸಣೆ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.1
- ಕೊಳ್ಳೇಗಾಲ ಪಟ್ಟಣದ ಪ್ರತಿಷ್ಠಿತ ಎಂ.ಜಿ.ಎಸ್.ವಿ ಕಾಲೇಜಿನ ಮೈದಾನದಲ್ಲಿ ಬಿದ್ದಿರುವ ಬೃಹತ್ ಆಲದ ಮರವನ್ನು ಕೂಡಲೇ ತೆರವುಗೊಳಿಸುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಕಳೆದ ಹಲವು ದಿನಗಳಿಂದ ಮೈದಾನದಲ್ಲಿ ಬಿದ್ದಿರುವ ಈ ಹೆಮ್ಮರವು ಅನಾಹುತಕ್ಕೆ ಆಹ್ವಾನ ನೀಡುತ್ತಿದ್ದು, ಮೈದಾನದ ಪ್ರಮುಖ ಭಾಗದಲ್ಲಿ ಓಡಾಟಕ್ಕೆ ತೀವ್ರ ತೊಂದರೆಯುಂಟಾಗಿದೆ. ವಿಶೇಷವಾಗಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ನಿತ್ಯ ಮೈದಾನವನ್ನು ಬಳಸುವ ಕ್ರೀಡಾಪಟುಗಳು ಮರದ ಅವಶೇಷಗಳ ನಡುವೆ ಓಡಾಡಲಾಗದೆ ಪರದಾಡುತ್ತಿದ್ದಾರೆ. ಈ ಕುರಿತು ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಮರ ಬಿದ್ದು ದಿನಗಳೇ ಕಳೆದಿದ್ದರೂ ಸಂಬಂಧಪಟ್ಟ ಇಲಾಖೆಯಾಗಲಿ ಅಥವಾ ಕಾಲೇಜು ಆಡಳಿತ ಮಂಡಳಿಯಾಗಲಿ ಈವರೆಗೆ ತೆರವು ಕಾರ್ಯಕ್ಕೆ ಮುಂದಾಗಿಲ್ಲ ಎಂದು ದೂರಿದ್ದಾರೆ. ಮರ ಬಿದ್ದಿರುವ ಜಾಗದಲ್ಲಿ ರಾತ್ರಿ ವೇಳೆ ಅರಿವಿಲ್ಲದೆ ಬರುವವರಿಗೆ ಅಥವಾ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಆದ್ದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ತಕ್ಷಣ ಮರವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಲಾಗಿದೆ.1
- ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಡಿ. ಹಲಸಹಳ್ಳಿ ಗ್ರಾಮದ ಬಳಿ ಇರುವ ಗವಿಮಠಕ್ಕೆ ಮಠಾಧ್ಯಕ್ಷರಾದ ಷಡಕ್ಷರ ಸ್ವಾಮೀಜಿಯವರು ಹೊಸ ರೂಪ ನೀಡಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಮಠಾಧೀಶರಾದ ಸಿದ್ದಲಿಂಗ ಮಹಾಸ್ವಾಮೀಜಿಯವರು ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಕ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು, ಭಕ್ತರು ನೀಡಿದ ಸಹಕಾರದಿಂದ ಮಠದ ಅಭಿವೃದ್ಧಿಗಾಗಿ ಷಡಕ್ಷರ ಸ್ವಾಮೀಜಿಯವರು ನಿರಂತರವಾಗಿ ಶ್ರಮಿಸಿದ್ದಾರೆ. ಗವಿಮಠದಲ್ಲಿ ಮೇ ಒಂದರಂದು ನಡೆದ ಕಳಶಾರೋಹಣ, ರಾಜಗೋಪುರ, ಬಸವ ವಿಗ್ರಹ, ಶ್ರೀ ಷಡಕ್ಷರ ಮಂಗಳ ಮಂಟಪ, ಹಾಗೂ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮತ್ತು ಧಾರ್ಮಿಕ ಸಭೆಗಳಿಗೆ ಇಂದಿಗೆ 48 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಹಲಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಬೆಂಬಲದಿಂದ ಷಡಕ್ಷರ ಸ್ವಾಮಿಗಳು ಕಳೆದ ಮೇ ಒಂದರಂದು ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ಅವರು ತುಂಬಾ ಶ್ರಮಪಟ್ಟು, ಹಿಂದೆ ಬಂಡೆಗಳಿಂದ ತುಂಬಿ, ಸಾರ್ವಜನಿಕ ಸಂಪರ್ಕ ಸೌಲಭ್ಯಗಳಿಲ್ಲದ ಗವಿಮಠಕ್ಕೆ ಹೊಸ ರೂಪವನ್ನು ತಂದುಕೊಟ್ಟಿದ್ದಾರೆ. ಈಗ ಭಕ್ತರಿಗೆ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಕಲ್ಯಾಣ ಮಂಟಪ, ಅನ್ನದಾಸೋಹ ಗೃಹ ನಿರ್ಮಿಸಿರುವುದಲ್ಲದೆ, ರಾಜಗೋಪುರ ನಿರ್ಮಾಣ, ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಗಿಡಮರಗಳನ್ನು ಬೆಳೆಸಿ ಸುಂದರವಾದ ವಾತಾವರಣ ನಿರ್ಮಿಸಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಮಠದ ಶೋಭೆಯನ್ನು ಹೆಚ್ಚಿಸಿದ್ದಾರೆ. ತಾನು ಚಿಕ್ಕವನಿದ್ದಾಗ ಈ ಮಠಕ್ಕೆ ಬಂದಾಗ ಜಡೆ ಸ್ವಾಮಿಗಳು ಈ ಮಠದಲ್ಲಿದ್ದರು ಎಂಬುದನ್ನು ಸ್ಮರಿಸಿದ ಸಿದ್ದಗಂಗಾ ಶ್ರೀಗಳು, ಆಗಿನಿಂದಲೂ ಕನಕಪುರದ ದೇಗುಲ ಮಠಕ್ಕೂ, ಈ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಈಗಲೂ ಆ ಬಾಂಧವ್ಯ ಮುಂದುವರೆದಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಈ ಸ್ಥಳವು ಷಡಕ್ಷರ ದೇವನ ತಪೋನಿಷ್ಠ ಸ್ಥಳವಾಗಿದ್ದು, ರಾಜಶೇಖರ ವಿಲಾಸ ಎಂಬ ಗ್ರಂಥವನ್ನು ಬರೆದ ಸ್ಥಳವೆಂದು ತಿಳಿದುಬಂದಿದೆ. ಹಲವಾರು ಪುಣ್ಯ ಪುರುಷರ ತಪೋಭೂಮಿಯಾಗಿದ್ದ ಈ ಮಠವನ್ನು ಇನ್ನಷ್ಟು ಅಭಿವೃದ್ಧಿಪಡಿಸುವಲ್ಲಿ ಷಡಕ್ಷರ ಸ್ವಾಮೀಜಿಗೆ ನಿಮ್ಮ ಬೆಂಬಲ ಮತ್ತು ಸಹಕಾರ ಹೀಗೆ ಇರಲಿ ಎಂದು ಭಕ್ತಾದಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗವಿಮಠದ ಷಡಕ್ಷರ ಸ್ವಾಮೀಜಿಯವರು ಸಿದ್ದಗಂಗಾ ಶ್ರೀಗಳಿಗೆ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದ ಪಡೆದರು. ಈ ಸಮಯದಲ್ಲಿ ಅಪಾರ ಭಕ್ತಾದಿಗಳು ಆಗಮಿಸಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ನಂತರ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮಿಗಳು, ಡಾ. ಚನ್ನಬಸವಸ್ವಾಮಿಗಳು, ಆಂಗ್ರಾಪುರದ ಬಸವಲಿಂಗ ದೇಶಿ ಕೇಂದ್ರಸ್ವಾಮೀಜಿಗಳು, ಹೊಸಹಳ್ಳಿ ಮಠದ ಓಂಕಾರ ಸ್ವಾಮಿಗಳು, ಮೇದಿನಿ ಗ್ರಾಮ ಮಠದ ಶಿವಲಿಂಗ ಸ್ವಾಮಿಗಳು, ಪುರಿಗಾಲಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಹರಚರ ಮೂರ್ತಿಗಳು ಹಾಗೂ ಡಿ. ಹಲಸಳ್ಳಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.1
- ವಕ್ಫ್ ಸಮಿತಿಗಳಲ್ಲಿ ಹಾಗೂ ನಿರ್ದಿಷ್ಟವಾಗಿ ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯೊಂದರಲ್ಲಿ ನಡೆಯುವ ಅವ್ಯವಹಾರಗಳ ಸ್ವರೂಪದಲ್ಲಿನ ಸಾಮ್ಯತೆಗಳ ಕುರಿತಾದ ಮಾಹಿತಿ ಭಾರತದಲ್ಲಿ ವೈರಲ್ ಆಗಿದೆ. ಈ ವೈರಲ್ ಸಂದೇಶವು ಒಂದು ಸಮಿತಿಯಿಂದ ಇನ್ನೊಂದು ಸಮಿತಿಯ ನಡುವೆ ನಡೆಯುವ ದುರಾಚಾರಗಳ ವಿವರಗಳು ಮತ್ತು ಅವುಗಳ ನಡುವಿನ ಸಾಮ್ಯತೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ.1
- ಮಂಡ್ಯ ನಗರಸಭೆ ಮತ್ತೆ ತಮ್ಮ ಹೈಲು ದೊರೆಯ ದರ್ಬಾರು ಮುಂದುವರಿಸಿದೆ ಎಂದು ಆರೋಪಿಸಲಾಗಿದೆ. ಹೊಸದಾಗಿ ನಿರ್ಮಿಸಲಾಗಿರುವ ನಗರಸಭೆ ಕಟ್ಟಡಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಕಳೆದ ಎರಡು-ಮೂರು ವರ್ಷಗಳಿಂದ ಸಾರ್ವಜನಿಕರ ಕಾಲ್ನಡಿಗೆ ದಾರಿಯನ್ನು ಅತಿಕ್ರಮಿಸಿ ಖಾಸಗಿ ವ್ಯಕ್ತಿಯೊಬ್ಬರು ಅದ್ದೂರಿ ವ್ಯಾಪಾರ ನಡೆಸುತ್ತಿದ್ದು, ಇದಕ್ಕೆ ನಗರಸಭೆಯ ಒಳಗಿನಿಂದಲೇ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ನಗರಶಕ್ತಿ ಕೇಂದ್ರಕ್ಕೆ ಬೀಗ ಹಾಕಿ, ಪ್ರಜಾಪ್ರಭುತ್ವದಲ್ಲಿ ಪ್ರಜೆಯನ್ನೇ ಒಳಗೆ ಬಾರದಂತೆ ಮಾಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರಶ್ನಿಸಿದಾಗ, ಸಾರ್ವಜನಿಕರು ಇಲ್ಲಿ ಬಂದು ಗಲಾಟೆ ಮಾಡುತ್ತಾರೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ. ಈ ವಿಚಾರ ಜಿಲ್ಲಾಧಿಕಾರಿಗಳಿಗೆ ಬೇಕಾಗಿಲ್ಲ ಎಂದು ಹೇಳಲಾಗಿದೆ. ಆದರೆ ರಾಜಕಾರಣಿಗಳಿಗೆ ಮತ್ತು ಅವರ ಚೇಲಾ ಚಮಚಗಳಿಗೆ ಮುಕ್ತ ಪ್ರವೇಶವಿದ್ದು, ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ ನಾಗರಿಕರಿಗೆ ಮಾತ್ರ ಹೊರಗೆ ಬಿಸಿಲಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಲಾಗುತ್ತಿದ್ದು, ಅವರ ವಾಹನಗಳನ್ನೂ ಬಿಸಿಲಿನಲ್ಲಿ ನಿಲ್ಲಿಸಬೇಕಾಗಿದೆ. ಈ ನಗರಸಭೆ ಕಚೇರಿಯು ಜನರಿಂದ ಜನರಿಗಾಗಿ ಇದೆಯೋ ಅಥವಾ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗಾಗಿ ಮಾತ್ರ ಇದೆಯೋ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸಾರ್ವಜನಿಕರ ವಾಹನಗಳಿಗೆ ನಿರ್ಬಂಧ ವಿಧಿಸಿ, ಗೇಟ್‌ಗೆ ಬೀಗ ಹಾಕಿ, ಪಾರ್ಕಿಂಗ್‌ಗೆ ಬೀಗ ಜಡಿದು ಪ್ರಜಾಪ್ರಭುತ್ವದ ವಾಹನಗಳನ್ನು ಬಿಸಿಲಿನಲ್ಲಿ ನಿಲ್ಲಿಸುವ ಈ ನಡೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.3
- ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಬಳಿ, ಭೀಮನಹಳ್ಳಿ ಮತ್ತು ಹಿಟ್ಟನಹಳ್ಳಿ ಕೊಪ್ಪಲು ಮಾರ್ಗಮಧ್ಯದಲ್ಲಿ 34 ವರ್ಷದ ಯುವಕ ಮಹೇಶ್ ಅವರನ್ನು ಕಿಡಿಗೇಡಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಿರುಗವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಭೀಮನಹಳ್ಳಿ ಗ್ರಾಮದ ಮರಿಯಯ್ಯ ಮತ್ತು ಪುಟ್ಟ ಚೆನ್ನಮ್ಮ ದಂಪತಿಯ ಪುತ್ರರಾದ ಮಹೇಶ್ ಅವರೇ ಕೊಲೆಯಾದ ಯುವಕ. ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ಇವರನ್ನು ಸ್ನೇಹಿತರು ಕರೆದುಕೊಂಡು ಹೋಗಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಅವರನ್ನು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿಯಲ್ಲಿ ಬೈಕ್‌ನ ಪೆಟ್ರೋಲ್ ಖಾಲಿಯಾಗಿ ನಿಂತ ಸಂದರ್ಭದಲ್ಲಿ ಈ ಪ್ರಕರಣ ಬಹಿರಂಗಗೊಂಡಿದೆ. ಕೊಲೆಯಾದ ಮಹೇಶ್ ಅವರು ಮದುವೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳನ್ನು ಹೊಂದಿದ್ದರು. ಈ ಘಟನೆ ಕಾಡ್ಗಿಚ್ಚಿನಂತೆ ಹರಡಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಬೆಚ್ಚಿಬಿದ್ದಿದ್ದಾರೆ. ಕಿರುಗಾವಲು ಪೊಲೀಸರ ತಂಡ ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದೆ. ಕೊಲೆಯಾದ ಯುವಕನ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.1