logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಮತ್ತು ಪರಿಸರ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿದ ಜನಪ್ರಿಯ ಶಾಸಕರಾದ ಬಿ .ವೈ. ವಿಜಯೇಂದ್ರ ಯಡಿಯೂರಪ್ಪ . ಕರ್ನಾಟಕ ರಾಜ್ಯ ಪರಿಸರ & ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ನಿ., ಶಿಕಾರಿಪುರ. ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ ನಿ., ಶಿಕಾರಿಪುರ. ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ನಿ., ಶಿಕಾರಿಪುರ. ಅರಣ್ಯ ಇಲಾಖೆ, ಸಾಮಾಜಿಕ ವಲಯ, ಶಿಕಾರಿಪುರ. ಪ್ರಾದೇಶಿಕ ವಲಯ ಅರಣ್ಯ, ಅಂಬ್ಲಿಗೊಳ. ಶ್ರೀ ಸಂಗಮೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ, ಸನ್ಯಾಸಿಕೊಪ್ಪ, ಚೂರ್ಚಿಗುಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸನ್ಯಾಸಿಕೊಪ್ಪ, ಚೂರ್ಚಿಗುಂಡಿ ಧರ್ಮಪರ್ವ ಸಮಾಜ ಸೇವಾ ಟ್ರಸ್ಟ್, ಶಿಕಾರಿಪುರ. ಇವರುಗಳು ಆಯೋಜಿಸಲಾಗಿದ್ದ ತಾಲೂಕಿನ ಸನ್ಯಾಸಿಕೊಪ್ಪ-ಚೂರ್ಚಿಗುಂಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಪರಿಸರದಿನಾಚರಣೆ-2026ರ ಅಂಗವಾಗಿ ವನಮಹೋತ್ಸವ, ಸಸಿಗಳ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಪರಿಸರ ಪ್ರಶಸ್ತಿ ವಿತರಿಸಿ, ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ಜನಪ್ರಿಯ ಶಾಸಕರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ರವರು ಅತ್ಯಂತ ಯಶಸ್ವಿಯಾಗಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಹಿರಿಯರಾದ ಕೆ. ಎಸ್. ಗುರುಮೂರ್ತಿ ರವರು, ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ, ಪ್ರಮುಖರಾದ ಬಿ. ಡಿ. ಭೂಕಾಂತ್ ಹಾಗೂ ಪಶು ಇಲಾಖೆ ವೈದ್ಯಧಿಕಾರಿಗಳಾದ ಡಾ.ರವಿ, ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಸಾರ್ವಜನಿಕರಿಗೆ ಮತ್ತು ಪರಿಸರ ಪ್ರೇಮಿಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ "ಪ್ರತಿಭಾ ಪುರಸ್ಕಾರ" ನೀಡಿ ಗೌರವಿಸಲಾಯಿತು. ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ "ಪರಿಸರ ಪ್ರಶಸ್ತಿ" ಪ್ರದಾನ ಮಾಡಿ ಸತ್ಕರಿಸಲಾಯಿತು.

16 hrs ago
user_Press Narashimha swamy SN
Press Narashimha swamy SN
ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
16 hrs ago
6316c9af-b07c-4b60-8ca3-97dc693a590a

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಮತ್ತು ಪರಿಸರ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿದ ಜನಪ್ರಿಯ ಶಾಸಕರಾದ ಬಿ .ವೈ. ವಿಜಯೇಂದ್ರ ಯಡಿಯೂರಪ್ಪ . ಕರ್ನಾಟಕ ರಾಜ್ಯ ಪರಿಸರ & ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ನಿ., ಶಿಕಾರಿಪುರ. ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ ನಿ., ಶಿಕಾರಿಪುರ. ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ನಿ., ಶಿಕಾರಿಪುರ. ಅರಣ್ಯ ಇಲಾಖೆ,

2e9fddcf-c85b-4d2f-acff-0991f5104dc7

ಸಾಮಾಜಿಕ ವಲಯ, ಶಿಕಾರಿಪುರ. ಪ್ರಾದೇಶಿಕ ವಲಯ ಅರಣ್ಯ, ಅಂಬ್ಲಿಗೊಳ. ಶ್ರೀ ಸಂಗಮೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿ, ಸನ್ಯಾಸಿಕೊಪ್ಪ, ಚೂರ್ಚಿಗುಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸನ್ಯಾಸಿಕೊಪ್ಪ, ಚೂರ್ಚಿಗುಂಡಿ ಧರ್ಮಪರ್ವ ಸಮಾಜ ಸೇವಾ ಟ್ರಸ್ಟ್, ಶಿಕಾರಿಪುರ. ಇವರುಗಳು ಆಯೋಜಿಸಲಾಗಿದ್ದ ತಾಲೂಕಿನ ಸನ್ಯಾಸಿಕೊಪ್ಪ-ಚೂರ್ಚಿಗುಂಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಪರಿಸರದಿನಾಚರಣೆ-2026ರ ಅಂಗವಾಗಿ ವನಮಹೋತ್ಸವ, ಸಸಿಗಳ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಪರಿಸರ ಪ್ರಶಸ್ತಿ ವಿತರಿಸಿ,

2ecf4e1b-bc44-4896-a2c2-c78c3cf0fb99

ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ಜನಪ್ರಿಯ ಶಾಸಕರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ರವರು ಅತ್ಯಂತ ಯಶಸ್ವಿಯಾಗಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಹಿರಿಯರಾದ ಕೆ. ಎಸ್. ಗುರುಮೂರ್ತಿ ರವರು, ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ, ಪ್ರಮುಖರಾದ ಬಿ. ಡಿ. ಭೂಕಾಂತ್ ಹಾಗೂ ಪಶು ಇಲಾಖೆ ವೈದ್ಯಧಿಕಾರಿಗಳಾದ ಡಾ.ರವಿ, ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು

fe3b8e10-21a4-44b7-9771-c71d7df0f9dd

ಉಪಸ್ಥಿತರಿದ್ದು, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಸಾರ್ವಜನಿಕರಿಗೆ ಮತ್ತು ಪರಿಸರ ಪ್ರೇಮಿಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ "ಪ್ರತಿಭಾ ಪುರಸ್ಕಾರ" ನೀಡಿ ಗೌರವಿಸಲಾಯಿತು. ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ "ಪರಿಸರ ಪ್ರಶಸ್ತಿ" ಪ್ರದಾನ ಮಾಡಿ ಸತ್ಕರಿಸಲಾಯಿತು.

More news from ಕರ್ನಾಟಕ and nearby areas
  • ಸೊರಬದ ಜಡೆ ಸಂಸ್ಥಾನ ಮಠದ ಪರಮ ಪೂಜ್ಯ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಮತ್ತು ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಮತ್ತು ಉತ್ಸಾಹದಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಅವರು, ಯೋಗವು ಕೇವಲ ದೈಹಿಕ ಕಸರತ್ತಲ್ಲದೆ, ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ತಿಳಿಸಿದರು. ಭಾರತೀಯ ಸಂಸ್ಕೃತಿಯ ಈ ಅಮೂಲ್ಯ ಕೊಡುಗೆಯನ್ನು ಇಡೀ ಜಗತ್ತಿಗೆ ತಲುಪಿಸಿದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಪೂಜ್ಯ ಸ್ವಾಮೀಜಿಯವರ ಪ್ರೇರಣೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಾವಿರಾರು ಯುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಬೃಹತ್ ಪ್ರಮಾಣದಲ್ಲಿ ಪಾಲ್ಗೊಂಡು, ಶಿಸ್ತುಬದ್ಧವಾಗಿ ಯೋಗಾಭ್ಯಾಸ ಮಾಡುವ ಮೂಲಕ ಸದೃಢ ಹಾಗೂ ನಿರೋಗಿ ಭಾರತದ ಸಂಕಲ್ಪಕ್ಕೆ ಅಭೂತಪೂರ್ವ ಶಕ್ತಿಯನ್ನು ತುಂಬಿದರು. ಯುವಶಕ್ತಿಯ ಈ ಅಪಾರ ಉತ್ಸಾಹ ನಿಜಕ್ಕೂ ಪ್ರಶಂಸನೀಯ ಎಂದು ಅವರು ಹೇಳಿದರು. ಅಲ್ಲದೆ, ದೈನಂದಿನ ಜೀವನದಲ್ಲಿ ಯೋಗವನ್ನು ನಿರಂತರ ಹವ್ಯಾಸವಾಗಿಸಿಕೊಂಡು, ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಸೊರಬದ ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಹಾಗೂ ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
    4
    ಸೊರಬದ ಜಡೆ ಸಂಸ್ಥಾನ ಮಠದ ಪರಮ ಪೂಜ್ಯ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಮತ್ತು ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಮತ್ತು ಉತ್ಸಾಹದಿಂದ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಅವರು, ಯೋಗವು ಕೇವಲ ದೈಹಿಕ ಕಸರತ್ತಲ್ಲದೆ, ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ತಿಳಿಸಿದರು. ಭಾರತೀಯ ಸಂಸ್ಕೃತಿಯ ಈ ಅಮೂಲ್ಯ ಕೊಡುಗೆಯನ್ನು ಇಡೀ ಜಗತ್ತಿಗೆ ತಲುಪಿಸಿದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಪೂಜ್ಯ ಸ್ವಾಮೀಜಿಯವರ ಪ್ರೇರಣೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಾವಿರಾರು ಯುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಬೃಹತ್ ಪ್ರಮಾಣದಲ್ಲಿ ಪಾಲ್ಗೊಂಡು, ಶಿಸ್ತುಬದ್ಧವಾಗಿ ಯೋಗಾಭ್ಯಾಸ ಮಾಡುವ ಮೂಲಕ ಸದೃಢ ಹಾಗೂ ನಿರೋಗಿ ಭಾರತದ ಸಂಕಲ್ಪಕ್ಕೆ ಅಭೂತಪೂರ್ವ ಶಕ್ತಿಯನ್ನು ತುಂಬಿದರು. ಯುವಶಕ್ತಿಯ ಈ ಅಪಾರ ಉತ್ಸಾಹ ನಿಜಕ್ಕೂ ಪ್ರಶಂಸನೀಯ ಎಂದು ಅವರು ಹೇಳಿದರು. ಅಲ್ಲದೆ, ದೈನಂದಿನ ಜೀವನದಲ್ಲಿ ಯೋಗವನ್ನು ನಿರಂತರ ಹವ್ಯಾಸವಾಗಿಸಿಕೊಂಡು, ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಸೊರಬದ ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಹಾಗೂ ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    20 hrs ago
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಅನನ್ಯ ಪ್ರೌಢಶಾಲಾ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ನಾಗರಾಜ್ ಅವರು ಮಾತನಾಡಿ, ಮಾನವನಿಗೆ ಎಲ್ಲದಕ್ಕಿಂತಲೂ ಆರೋಗ್ಯವೇ ಮುಖ್ಯವಾಗಿದ್ದು, ಆರೋಗ್ಯವೇ ಭಾಗ್ಯವೆಂದು ಬಣ್ಣಿಸಿದರು. ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಅವರು ಈ ಸಂದರ್ಭದಲ್ಲಿ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಕುಮಾರ್ ಕೆ ಅವರು ಯೋಗ ದಿನದ ಇತಿಹಾಸ ಮತ್ತು ವಿಶೇಷತೆಗಳನ್ನು ತಿಳಿಸುತ್ತಾ, ಯೋಗವು ಬದುಕಿನ ಒಂದು ಕಲೆ ಎಂದು ಅದರ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದರು. ಈ ದಿನಾಚರಣೆಯ ಭಾಗವಾಗಿ, ದೈಹಿಕ ಶಿಕ್ಷಕ ಕುಮಾರ್ ಆರ್, ನಿಶ್ಚಿತ ಕೆ ಮತ್ತು ಅನನ್ಯ ಯೋಗ ಕೇಂದ್ರದ ಸದಸ್ಯರ ನೇತೃತ್ವದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಕುಮಾರ್ ಬಿ.ಎಸ್, ಆಡಳಿತಾಧಿಕಾರಿ ವೇಣುಗೋಪಾಲ್ ಎಸ್, ಮುಖ್ಯೋಪಾಧ್ಯಾಯರಾದ ಸುನಿತಾ ಆರ್, ತನುಜ ಎ ಸೇರಿದಂತೆ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು. ಶಾರದ ಅವರು ಪ್ರಾರ್ಥನೆ ಸಲ್ಲಿಸಿದರೆ, ಕುಮಾರಿ ಸೃಷ್ಟಿ ಎನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಲಿಪಿ ಮಿಲನ ಸ್ವಾಗತ ಭಾಷಣ ಮಾಡಿದರು ಹಾಗೂ ಕುಮಾರಿ ಪ್ರಾರ್ಥನಾ ವೈ ವಂದನಾರ್ಪಣೆ ಮಾಡಿದರು.
    1
    ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಅನನ್ಯ ಪ್ರೌಢಶಾಲಾ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ನಾಗರಾಜ್ ಅವರು ಮಾತನಾಡಿ, ಮಾನವನಿಗೆ ಎಲ್ಲದಕ್ಕಿಂತಲೂ ಆರೋಗ್ಯವೇ ಮುಖ್ಯವಾಗಿದ್ದು, ಆರೋಗ್ಯವೇ ಭಾಗ್ಯವೆಂದು ಬಣ್ಣಿಸಿದರು. ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಅವರು ಈ ಸಂದರ್ಭದಲ್ಲಿ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಕುಮಾರ್ ಕೆ ಅವರು ಯೋಗ ದಿನದ ಇತಿಹಾಸ ಮತ್ತು ವಿಶೇಷತೆಗಳನ್ನು ತಿಳಿಸುತ್ತಾ, ಯೋಗವು ಬದುಕಿನ ಒಂದು ಕಲೆ ಎಂದು ಅದರ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದರು.

ಈ ದಿನಾಚರಣೆಯ ಭಾಗವಾಗಿ, ದೈಹಿಕ ಶಿಕ್ಷಕ ಕುಮಾರ್ ಆರ್, ನಿಶ್ಚಿತ ಕೆ ಮತ್ತು ಅನನ್ಯ ಯೋಗ ಕೇಂದ್ರದ ಸದಸ್ಯರ ನೇತೃತ್ವದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಕುಮಾರ್ ಬಿ.ಎಸ್, ಆಡಳಿತಾಧಿಕಾರಿ ವೇಣುಗೋಪಾಲ್ ಎಸ್, ಮುಖ್ಯೋಪಾಧ್ಯಾಯರಾದ ಸುನಿತಾ ಆರ್, ತನುಜ ಎ ಸೇರಿದಂತೆ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು. ಶಾರದ ಅವರು ಪ್ರಾರ್ಥನೆ ಸಲ್ಲಿಸಿದರೆ, ಕುಮಾರಿ ಸೃಷ್ಟಿ ಎನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಲಿಪಿ ಮಿಲನ ಸ್ವಾಗತ ಭಾಷಣ ಮಾಡಿದರು ಹಾಗೂ ಕುಮಾರಿ ಪ್ರಾರ್ಥನಾ ವೈ ವಂದನಾರ್ಪಣೆ ಮಾಡಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    22 hrs ago
  • ಪೊಲೀಸರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಖಾಕಿ ಪಡೆ ನೀಟ್ ವಿದ್ಯಾರ್ಥಿಗಳನ್ನು ಅವರ ಸರಿಯಾದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮೂಲಕ ಅವರ ಭವಿಷ್ಯವನ್ನು ಉಳಿಸಿದೆ. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ನೀಡಿ, ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು.
    1
    ಪೊಲೀಸರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಖಾಕಿ ಪಡೆ ನೀಟ್ ವಿದ್ಯಾರ್ಥಿಗಳನ್ನು ಅವರ ಸರಿಯಾದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮೂಲಕ ಅವರ ಭವಿಷ್ಯವನ್ನು ಉಳಿಸಿದೆ. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ನೀಡಿ, ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಸಿದ್ದರಾಮಯ್ಯ ಅವರು ಮನವಿಯೊಂದನ್ನು ಮಾಡಿದ್ದಾರೆ. ತಮ್ಮನ್ನು ಕಾರ್ಯಕ್ರಮಗಳಲ್ಲಿ ಕೊನೆಯ ಭಾಷಣಕಾರರನ್ನಾಗಿ ಮಾಡಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
    1
    ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಸಿದ್ದರಾಮಯ್ಯ ಅವರು ಮನವಿಯೊಂದನ್ನು ಮಾಡಿದ್ದಾರೆ. ತಮ್ಮನ್ನು ಕಾರ್ಯಕ್ರಮಗಳಲ್ಲಿ ಕೊನೆಯ ಭಾಷಣಕಾರರನ್ನಾಗಿ ಮಾಡಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಶಿಗ್ಗಾವಿ ಪಟ್ಟಣದಲ್ಲಿ ಪುಟ್ಟರಾಜ ಗವಾಯಿ ಸೌಹಾರ್ದ ಸಹಕಾರಿ ಶಾಖೆಯ ನೂತನ ಬಾಡಿಗೆ ಕಟ್ಟಡ ಸ್ಥಳಾಂತರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ, ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವದ ನಿಮಿತ್ತ ಶ್ರೀ ಸತ್ಯನಾರಾಯಣ ಪೂಜಾ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಶ್ರೀ ರುದ್ರಮುನಿ ಹೀರೆಮಠ ಸ್ವಾಮಿಜಿಗಳು ಹಾಗೂ ಸಹಕಾರಿಯ ಅಧ್ಯಕ್ಷರಾದ ಹನುಮಂತಪ್ಪ ಯು.ವಿ. ತಮ್ಮ ದಂಪತಿಗಳೊಂದಿಗೆ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಸುಭಾಸ್‌ಗೌಡ ಪಾಟೀಲ, ಕುಮಾರಿ ಪ್ರತಿಕ್ಷಾ ಗೌಳಿ, ನಿರ್ದೇಶಕರಾದ ರಾಜಶೇಖರ ಶೆಟ್ಟರ್, ಬಸಯ್ಯ ಈಳಿಗೇರ, ನಿರ್ಮಲಾ ಈಳಿಗೇರ, ರೇಖಾ ವಡ್ಡರ್, ಸಿ.ಪಿ.ಐ. ಅನಿಲ್ ರಾಠೋಡ, ಶಿವಾನಂದ ಮ್ಯಾಗೇರಿ, ಉಮೇಶ್ ಗೌಳಿ, ಸಿ.ಡಿ. ಯತ್ನಳ್ಳಿ, ನಾಗಪ್ಪ ಬೆಂತೂರ, ವಿನೋದಾ ಪಾಟೀಲ, ಭರಮಜ್ಜ ನವಲಗುಂದ, ರಮೇಶ್ ಹರಿಜನ, ಶಾಖೆಯ ವ್ಯವಸ್ಥಾಪಕರಾದ ಅಶೋಕ್ ಹೋಳಲ ಹಾಗೂ ಎಲ್ಲ ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
    2
    ಶಿಗ್ಗಾವಿ ಪಟ್ಟಣದಲ್ಲಿ ಪುಟ್ಟರಾಜ ಗವಾಯಿ ಸೌಹಾರ್ದ ಸಹಕಾರಿ ಶಾಖೆಯ ನೂತನ ಬಾಡಿಗೆ ಕಟ್ಟಡ ಸ್ಥಳಾಂತರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ, ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವದ ನಿಮಿತ್ತ ಶ್ರೀ ಸತ್ಯನಾರಾಯಣ ಪೂಜಾ ಸಮಾರಂಭವನ್ನೂ ಆಯೋಜಿಸಲಾಗಿತ್ತು.

ಶ್ರೀ ರುದ್ರಮುನಿ ಹೀರೆಮಠ ಸ್ವಾಮಿಜಿಗಳು ಹಾಗೂ ಸಹಕಾರಿಯ ಅಧ್ಯಕ್ಷರಾದ ಹನುಮಂತಪ್ಪ ಯು.ವಿ. ತಮ್ಮ ದಂಪತಿಗಳೊಂದಿಗೆ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಸುಭಾಸ್‌ಗೌಡ ಪಾಟೀಲ, ಕುಮಾರಿ ಪ್ರತಿಕ್ಷಾ ಗೌಳಿ, ನಿರ್ದೇಶಕರಾದ ರಾಜಶೇಖರ ಶೆಟ್ಟರ್, ಬಸಯ್ಯ ಈಳಿಗೇರ, ನಿರ್ಮಲಾ ಈಳಿಗೇರ, ರೇಖಾ ವಡ್ಡರ್, ಸಿ.ಪಿ.ಐ. ಅನಿಲ್ ರಾಠೋಡ, ಶಿವಾನಂದ ಮ್ಯಾಗೇರಿ, ಉಮೇಶ್ ಗೌಳಿ, ಸಿ.ಡಿ. ಯತ್ನಳ್ಳಿ, ನಾಗಪ್ಪ ಬೆಂತೂರ, ವಿನೋದಾ ಪಾಟೀಲ, ಭರಮಜ್ಜ ನವಲಗುಂದ, ರಮೇಶ್ ಹರಿಜನ, ಶಾಖೆಯ ವ್ಯವಸ್ಥಾಪಕರಾದ ಅಶೋಕ್ ಹೋಳಲ ಹಾಗೂ ಎಲ್ಲ ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    21 hrs ago
  • ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 'ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಕೆ.ಎಸ್. ನವೀನ್ ಭಾಗವಹಿಸಿದ್ದರು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಂಎಲ್‌ಸಿ ಕೆ.ಎಸ್. ನವೀನ್ ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು.
    1
    ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 'ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಕೆ.ಎಸ್. ನವೀನ್ ಭಾಗವಹಿಸಿದ್ದರು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಂಎಲ್‌ಸಿ ಕೆ.ಎಸ್. ನವೀನ್ ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ದಿ. ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವನ್ನು ನಗರಂಗೆರೆ ಗ್ರಾಮಪಂಚಾಯಿತಿ ಮತ್ತು ಮೂರ್ತಿ ಇಂಎಸ್ಟೀಸ್ ಅಂಡ್ ಡೆವಲಪ್ಪರ್ಸ್ ಗ್ರೂಪ್ ವತಿಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು. ತಾವು ಇಂದು ಈ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದೇವೆ ಎಂದರೆ ಅದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೊಡ್ಡ ಕೊಡುಗೆ ಎಂದು ಸಂಜೀವಮೂರ್ತಿ ನುಡಿದರು. ಡಾ. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದು, ಭಾರತದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿವೆ. ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ರಚಿಸದಿದ್ದರೆ, ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ. ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವನ್ನು ಸ್ಮರಿಸಲಾಯಿತು. ಅವರ ತತ್ವಗಳು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿವೆ. ಬಸವಣ್ಣನವರ ಮುಖ್ಯ ಗುರಿ ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದಾಗಿತ್ತು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು. ದಿ. ಡಿ. ಸುಧಾಕರ್ ಅವರು ಉತ್ತಮ ರಾಜಕಾರಣಿಯಾಗಿದ್ದರು ಮತ್ತು ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ರಾಜಕೀಯ ನಾಯಕರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಯಿತು. ಈ ಮಹನೀಯರ ಜಯಂತಿ ಪ್ರಯುಕ್ತ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಕವಿ ಕೊರ್ಲಕುಂಟೆ ತಿಪ್ಪೇದಸ್ವಾಮಿ, ಬಿ.ಸಿ. ಸತೀಶ್ ಕುಮಾರ್, ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    1
    ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ದಿ. ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವನ್ನು ನಗರಂಗೆರೆ ಗ್ರಾಮಪಂಚಾಯಿತಿ ಮತ್ತು ಮೂರ್ತಿ ಇಂಎಸ್ಟೀಸ್ ಅಂಡ್ ಡೆವಲಪ್ಪರ್ಸ್ ಗ್ರೂಪ್ ವತಿಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು.

ತಾವು ಇಂದು ಈ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದೇವೆ ಎಂದರೆ ಅದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೊಡ್ಡ ಕೊಡುಗೆ ಎಂದು ಸಂಜೀವಮೂರ್ತಿ ನುಡಿದರು. ಡಾ. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದು, ಭಾರತದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿವೆ. ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ರಚಿಸದಿದ್ದರೆ, ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ. ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವನ್ನು ಸ್ಮರಿಸಲಾಯಿತು. ಅವರ ತತ್ವಗಳು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿವೆ. ಬಸವಣ್ಣನವರ ಮುಖ್ಯ ಗುರಿ ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದಾಗಿತ್ತು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು.

ದಿ. ಡಿ. ಸುಧಾಕರ್ ಅವರು ಉತ್ತಮ ರಾಜಕಾರಣಿಯಾಗಿದ್ದರು ಮತ್ತು ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ರಾಜಕೀಯ ನಾಯಕರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಯಿತು. ಈ ಮಹನೀಯರ ಜಯಂತಿ ಪ್ರಯುಕ್ತ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಕವಿ ಕೊರ್ಲಕುಂಟೆ ತಿಪ್ಪೇದಸ್ವಾಮಿ, ಬಿ.ಸಿ. ಸತೀಶ್ ಕುಮಾರ್, ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಬೆಂಗಳೂರಿನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿನಿಯರು ಕಣ್ಣೀರಿಟ್ಟ ಘಟನೆ ವರದಿಯಾಗಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಲವಾರು ವಿದ್ಯಾರ್ಥಿನಿಯರು ದುಃಖಿತರಾಗಿ ಕಣ್ಣೀರು ಹಾಕುತ್ತಿರುವುದು ಕಂಡುಬಂದಿದೆ.
    1
    ಬೆಂಗಳೂರಿನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿನಿಯರು ಕಣ್ಣೀರಿಟ್ಟ ಘಟನೆ ವರದಿಯಾಗಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಲವಾರು ವಿದ್ಯಾರ್ಥಿನಿಯರು ದುಃಖಿತರಾಗಿ ಕಣ್ಣೀರು ಹಾಕುತ್ತಿರುವುದು ಕಂಡುಬಂದಿದೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.