logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ* : *ಮುಖ್ಯಮಂತ್ರಿ ‌ಸಿದ್ದರಾಮಯ್ಯ* ಬೆಂಗಳೂರು, ಸಾಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ, ಅಂಬೇಡ್ಕರ್ ಅವರು ಹೇಳಿರುವಂತೆ *ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ* ಎಂದು ತಿಳಿಸಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, "ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ , ಸಮಾಜಿಕ , ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ" ಎಂದು ಸ್ಪಷ್ಟವಾಗಿ ಹೇಳಿದ್ದರು. ಅವರು, ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ಹೋರಾಟವನ್ನು ತಮ್ಮ ಜೀವನದುದ್ದಕ್ಕೂ ಮಾಡಿದ್ದರು. ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು ಎಂದರು. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದ ಮೂಲಕ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದ್ದರಿಂದಲೇ ದೇಶದ ಸಂವಿಧಾನವನ್ನು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದರು. ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗದೆ ಇರುವುದು ನೋವಿನ ಸಂಗತಿ ಎಂದ ಮುಖ್ಯಮಂತ್ರಿಗಳು, ಈ ಸಮಾಜವು ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯಿಂದ ಕೂಡಿದ್ದು, ಇವುಗಳನ್ನು ಹೋಗಲಾಡಿಸದಿದ್ದರೆ ದೇಶಕ್ಕೆ ಸ್ವಾತಂತ್ರ ಬಂದಿರುವುದು ಯಶಸ್ವಿಯಾಗಲಾರದು ಎಂದರು. ಅಂಬೇಡ್ಕರ್ ವಿದ್ವಾಂಸರಾಗಿದ್ದರೂ ದಮನಿತರ ಪರವಾಗಿ ಹೋರಾಡಿದರಲ್ಲದೆ, ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೆ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು. ಅಸಮಾನತೆಗೆ ಕಾರಣವಾದ ಮನುವಾದವನ್ನು ತಿರಸ್ಕರಿಸಿದ್ದರು ಎಂದರು. ಅಂಬೇಡ್ಕರ್ ಅವರು ವಿದ್ಯಾವಂತರಾಗದೆ ಹೋಗಿದ್ದರೆ, ಅವರಲ್ಲಿ ಹೋರಾಟದ ಮನೋಭಾವ ಇರದೇ ಹೋಗಿದ್ದರೆ ಇಂಥ ಸಂವಿಧಾನ ಸಿಗಲು ನಮಗೆ ಸಾಧ್ಯವಿರಲಿಲ್ಲ. ಅದಕ್ಕಾಗಿಯೇ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್, ರಾಮ್ ಮನೋಹರ್ ಲೋಹಿಯಾ, ಜವಾಹರ್ ಲಾಲ್ ನೆಹರೂ ಅವರು ಪಡೆದಂತಹ ಶಿಕ್ಷಣ ಪಡೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ, ಮಾನವೀಯತೆಯಿಂದ ಕೂಡಿರುವ ಶಿಕ್ಷಣ ನಮಗೆ ಸಿಗಬೇಕು. ಸಾಮಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದರಿಂದಲೇ ಇಂಥ ಸಂವಿಧಾನ ನೀಡಲು ಅಂಬೇಡ್ಕರ್ ಅವರಿಗೆ ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು. ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜದ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದರು. ಮನುವಾದಿಗಳು ಸಂವಿಧಾನ ವಿರೋಧಿಗಳಾಗಿದ್ದು, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುತ್ತಾರೆ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದರು, ದೆಹಲಿಯಲ್ಲಿ ಅಂಬೇಡ್ಕರ್ ಅವರ ಶವ ಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ ಎಂದೂ ಅಪಪ್ರಚಾರ ಮಾಡುತ್ತಾರೆ ಜನ ಇಂಥ ಸುಳ್ಳುಗಳನ್ನು ನಂಬಬಾರದು ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಏನು ಆಗುತ್ತಿತ್ತು ಎಂದು ಊಹಿಸುವುದೇ ಅಸಾಧ್ಯ ಎಂದ ಮುಖ್ಯಮಂತ್ರಿಗಳು ಅಂಬೇಡ್ಕರ್ ಅವರ ಬದುಕನ್ನು, ಉದ್ದೇಶವನ್ನು ಮನನ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತಾರೆ ಎಂದರು. ಸರ್ಕಾರ ನಡೆಸುವ ವಸತಿಶಾಲೆಗಳಲ್ಲಿ ಶೇ. 97.22% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಿಯುಸಿ ಪರೀಕ್ಷೆಯಲ್ಲಿಯೂ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರುವುದು ಇದು ಸರ್ಕಾರದ ಹೆಗ್ಗಳಿಕೆ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ, ಕೆ. ಹೆಚ್.ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯರಾದ ಭೋಜೇಗೌಡ, ಗೋವಿಂದರಾಜು, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

23 hrs ago
user_Savitha
Savitha
ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
23 hrs ago
85fc5622-bd8d-4278-814d-7999c8add18c

More news from ಕರ್ನಾಟಕ and nearby areas
  • ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    1
    ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    4
    ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ!
17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ
ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ
ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ
ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ
ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 
18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ
ಮಧ್ಯರಾತ್ರಿ 3 ಗಂಟೆಗೆ  ದಾಳಿ ನಡೆಸಿ ಬಾಲಕಿ ರಕ್ಷಣೆ
ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    10 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    12 min ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    9 hrs ago
  • #carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆ‌ರ್ ಅಂಬೇಡ್ಕ‌ರ್ ಜಯಂತಿ
    1
    #carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆ‌ರ್ ಅಂಬೇಡ್ಕ‌ರ್ ಜಯಂತಿ
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    23 hrs ago
  • ನಸೀರ್ ಅಹ್ಮದ್ ರವರನ್ನು ವಜಾ ಮಾಡಿರೋದು ಹೈಕಮಾಂಡ್ ತೀರ್ಮಾನ - ಎಂ.ಸಿ ಸುಧಾಕರ್..!
    1
    ನಸೀರ್ ಅಹ್ಮದ್ ರವರನ್ನು ವಜಾ ಮಾಡಿರೋದು ಹೈಕಮಾಂಡ್ ತೀರ್ಮಾನ - ಎಂ.ಸಿ ಸುಧಾಕರ್..!
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
  • ನಜೀರ್ ಅಹಮದ್ ಬೆಂಬಲಕ್ಕೆ ನಾಯಕರು ಒಗ್ಗಟ್ಟು ಟಿಕೆಟ್ ಗೊಂದಲ: ಅಲ್ಪಸಂಖ್ಯಾತರ ಅಸಮಾಧಾನ ಕಾಂಗ್ರೆಸ್‌ನಲ್ಲಿ ಕಲಹ, ದಾವಣಗೆರೆ ಹಾಟ್ ಟಾಪಿಕ್ ಜಮೀರ್–ನಜೀರ್ ವಿರುದ್ಧ ದೂರು: ನಾಯಕರ ಆಕ್ರೋಶ ಬೈಎಲೆಕ್ಷನ್‌ಗೆ ಮುನ್ನ ಕಾಂಗ್ರೆಸ್‌ನಲ್ಲಿ ಬಿರುಕು
    1
    ನಜೀರ್ ಅಹಮದ್ ಬೆಂಬಲಕ್ಕೆ ನಾಯಕರು ಒಗ್ಗಟ್ಟು
ಟಿಕೆಟ್ ಗೊಂದಲ: ಅಲ್ಪಸಂಖ್ಯಾತರ ಅಸಮಾಧಾನ
ಕಾಂಗ್ರೆಸ್‌ನಲ್ಲಿ ಕಲಹ, ದಾವಣಗೆರೆ ಹಾಟ್ ಟಾಪಿಕ್
ಜಮೀರ್–ನಜೀರ್ ವಿರುದ್ಧ ದೂರು: ನಾಯಕರ ಆಕ್ರೋಶ
ಬೈಎಲೆಕ್ಷನ್‌ಗೆ ಮುನ್ನ ಕಾಂಗ್ರೆಸ್‌ನಲ್ಲಿ ಬಿರುಕು
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    22 hrs ago
  • ಬೆಂಗಳೂರಿನ ಡಿ.ಜೆ. ಹಳ್ಳಿಯ ಕನಕನಗರದಲ್ಲಿ ಯುವತಿ ಹಾಗೂ ಇಬ್ಬರು ಯುವಕರ ಮೇಲೆ ಸ್ಥಳೀಯರ ಗುಂಪು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗಡಿ ಮುಂಭಾಗದಲ್ಲಿ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿ, ಅದು ಕೆಲವೇ ಕ್ಷಣಗಳಲ್ಲಿ ಹೊಡೆದಾಟಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ. ಏಳೆಂಟು ಮಂದಿಯ ತಂಡ ಮೂವರ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
    1
    ಬೆಂಗಳೂರಿನ ಡಿ.ಜೆ. ಹಳ್ಳಿಯ ಕನಕನಗರದಲ್ಲಿ ಯುವತಿ ಹಾಗೂ ಇಬ್ಬರು ಯುವಕರ ಮೇಲೆ ಸ್ಥಳೀಯರ ಗುಂಪು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗಡಿ ಮುಂಭಾಗದಲ್ಲಿ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿ, ಅದು ಕೆಲವೇ ಕ್ಷಣಗಳಲ್ಲಿ ಹೊಡೆದಾಟಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ. ಏಳೆಂಟು ಮಂದಿಯ ತಂಡ ಮೂವರ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.