logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗುಂಡ್ಲುಪೇಟೆ: ತುಂಡಾದ ಸಂಚಾರ ನಾಮಫಲಕಗಳು; ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಆಗ್ರಹ. ಗುಂಡ್ಲುಪೇಟೆ: ಪಟ್ಟಣದ ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯ ಬಿಇಒ ಕಚೇರಿ ಮುಂಭಾಗ, ಫುಟ್‌ಪಾತ್‌ಗೆ ಹೊಂದಿಕೊಂಡಿರುವ ‘ನೋ ಪಾರ್ಕಿಂಗ್’ ನಾಮಫಲಕ ತುಂಡಾಗಿ ಕೆಳಗೆ ಬಿದ್ದಿದ್ದು, ಕೂಡಲೇ ದುರಸ್ತಿಪಡಿಸಿ ವಾಹನ ಸವಾರರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಕರ್ನಾಟಕ ಕಾವಲು ಪಡೆ ಮನವಿ ಮಾಡಿದೆ. ಈ ಕುರಿತು ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷ ಎ. ಅಬ್ದುಲ್ ಮಾಲಿಕ್ ಮಾತನಾಡಿ, ಪಟ್ಟಣದ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ನಾಮಫಲಕಗಳನ್ನು ಅಳವಡಿಸಲಾಗಿದೆ. ಆದರೆ ಕೆಲವು ದಿನಗಳ ಹಿಂದೆ ಅಂಚೆ ಕಚೇರಿ, ಕ್ಯಾಸಿನೋ ಬೇಕರಿ ಹಾಗೂ ನೂರ್ ಸ್ಟೋರ್ ಮುಂಭಾಗದಲ್ಲಿದ್ದ ಸಂಚಾರ ನಿಯಮಗಳ ಜಾಗೃತಿ ಫಲಕಗಳು ಕೂಡ ತುಂಡಾಗಿ ಬಿದ್ದಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಫಲಕಗಳನ್ನು ಸಮರ್ಪಕವಾಗಿ ದುರಸ್ತಿಪಡಿಸಿ ಅಥವಾ ಗುಣಮಟ್ಟದ ಹೊಸ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಕನ್ನಡಪರ ಹೋರಾಟಗಾರ ರಂಗಪ್ಪ ಮಾತನಾಡಿ, ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಉತ್ತಮ ಗುಣಮಟ್ಟದ ಸಂಚಾರ ನಿಯಮಗಳ ನಾಮಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಷೀದ್, ಸಂಚಾಲಕ ಮಿಮಿಕ್ರಿ ರಾಜು, ರಹಮತ್ತುಲ್ಲಾ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

13 hrs ago
user_ಸುದ್ದಿ ಗುಂಡ್ಲುಪೇಟೆ
ಸುದ್ದಿ ಗುಂಡ್ಲುಪೇಟೆ
Local News Reporter ಗುಂಡ್ಲುಪೇಟೆ, ಚಾಮರಾಜನಗರ, ಕರ್ನಾಟಕ•
13 hrs ago
0d398641-6771-43b7-9673-03d24bab34f1

ಗುಂಡ್ಲುಪೇಟೆ: ತುಂಡಾದ ಸಂಚಾರ ನಾಮಫಲಕಗಳು; ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಆಗ್ರಹ. ಗುಂಡ್ಲುಪೇಟೆ: ಪಟ್ಟಣದ ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯ ಬಿಇಒ ಕಚೇರಿ ಮುಂಭಾಗ, ಫುಟ್‌ಪಾತ್‌ಗೆ ಹೊಂದಿಕೊಂಡಿರುವ ‘ನೋ ಪಾರ್ಕಿಂಗ್’ ನಾಮಫಲಕ ತುಂಡಾಗಿ ಕೆಳಗೆ ಬಿದ್ದಿದ್ದು, ಕೂಡಲೇ ದುರಸ್ತಿಪಡಿಸಿ ವಾಹನ ಸವಾರರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಕರ್ನಾಟಕ ಕಾವಲು ಪಡೆ ಮನವಿ ಮಾಡಿದೆ. ಈ ಕುರಿತು ಕಾವಲು ಪಡೆಯ ತಾಲ್ಲೂಕು

ಅಧ್ಯಕ್ಷ ಎ. ಅಬ್ದುಲ್ ಮಾಲಿಕ್ ಮಾತನಾಡಿ, ಪಟ್ಟಣದ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ನಾಮಫಲಕಗಳನ್ನು ಅಳವಡಿಸಲಾಗಿದೆ. ಆದರೆ ಕೆಲವು ದಿನಗಳ ಹಿಂದೆ ಅಂಚೆ ಕಚೇರಿ, ಕ್ಯಾಸಿನೋ ಬೇಕರಿ ಹಾಗೂ ನೂರ್ ಸ್ಟೋರ್ ಮುಂಭಾಗದಲ್ಲಿದ್ದ ಸಂಚಾರ ನಿಯಮಗಳ ಜಾಗೃತಿ ಫಲಕಗಳು ಕೂಡ ತುಂಡಾಗಿ ಬಿದ್ದಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಫಲಕಗಳನ್ನು ಸಮರ್ಪಕವಾಗಿ ದುರಸ್ತಿಪಡಿಸಿ

ಅಥವಾ ಗುಣಮಟ್ಟದ ಹೊಸ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಕನ್ನಡಪರ ಹೋರಾಟಗಾರ ರಂಗಪ್ಪ ಮಾತನಾಡಿ, ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಉತ್ತಮ ಗುಣಮಟ್ಟದ ಸಂಚಾರ ನಿಯಮಗಳ ನಾಮಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಷೀದ್, ಸಂಚಾಲಕ ಮಿಮಿಕ್ರಿ ರಾಜು, ರಹಮತ್ತುಲ್ಲಾ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • All About,Anchor requesting the common people to question the Responsible person for their Responsibilities *ಭಾರತ ನಲ್ಲಿ ವೈರಲ್*
    1
    All About,Anchor requesting the common people to question the Responsible person for their Responsibilities 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.
    1
    ತಾಲ್ಲೂಕಿನ ಕಿರುಗಾವಲು ಠಾಣೆ ಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಮಳವಳ್ಳಿ ; ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರೆ ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿ ಅರಕೆರೆ ಠಾಣೆಗೆ ವರ್ಗಾವಣೆಗೊಂಡಿರುವ ಡಿ ರವಿಕುಮಾರ್ ಅವರಿಗೆ ಹೃದಯಸ್ಪರ್ಶಿ ಬೀಳ್ಕೊ ಡುಗೆ ನೀಡುವ ಸಮಾರಂಭ ವೊಂದು ಮಳವಳ್ಳಿ ತಾಲ್ಲೂಕಿನ ಎಂ ಕಾಗೇಪುರ ಗ್ರಾಮದ ಶ್ರೀ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಾಡಿತ್ತು.‌ ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಕಿರುಗಾವಲು ಠಾಣೆ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದ ಸಮಾರಂಭ ದಲ್ಲಿ  ಪಾಲ್ಗೊಂಡಿದ್ದ ಡಿವೈಎಸ್ಪಿ ಯಶವಂತ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಮತ್ತಿತರ ಅಧಿಕಾರಿಗಳು  ಸಿಬ್ಬಂದಿ ಪಾಲ್ಗೊಂಡು ವರ್ಗಾ ವಣೆ ಗೊಂಡಿರುವ ಪಿ ಎಸ್ ಐ ರವಿಕುಮಾರ್ ಅವರಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಸಿಬ್ಬಂದಿ ಪರವಾಗಿ ಭಾರಿ ಹಾರ ತುರಾಯಿ ಜೊತೆಗೆ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ನೆನೆಪಿನ ಕಾಣಿಕೆ ನೀಡುವುದರೊಂದಿಗೆ ಅದ್ದೂರಿ ಬೀಳ್ಕೊಡುಗೆ ನೀಡಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಅವರು ರವಿಕುಮಾರ್ ಅವರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು. ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಡಿ ರವಿಕುಮಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿ ಸಿದ ಎಲ್ಲಾ ಹಿರಿಯ ಅಧಿಕಾರಿ ಗಳು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹಲಗೂರು ಪಿಎಸ್ ಐ ಲೋಕೇಶ್, ಬೆಳಕವಾಡಿ  ಪಿ ಎಸ್ ಐ ಪ್ರಕಾಶ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    6 hrs ago
  • ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,, ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ ಅಮದಜ್ ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    4
    ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,,
ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ  ಅಮದಜ್  ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    user_Suri suresh
    Suri suresh
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    7 hrs ago
  • ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    1
    ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.

ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.
ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    10 hrs ago
  • ಕೇಂದ್ರ ಸರ್ಕಾರದ ದ್ವೇಶ ರಾಜಕೀಯಾ ರಾಹುಲ್ ವಿರುದ್ದ FIR -ಕಾಂಗ್ರೆಸ್ ಆಕ್ರೋಶ ಮಂಡ್ಯ- ರಹುಲ್ ಗಾಂದಿ ವಿರುದ್ದ ದ್ವೇಶ ರಾಜಕೀಯ ಮಾಡುತ್ತಿರು ಕೇಂದ್ರ ಸರ್ಕಾರ ಸುಳ್ಳು FIR ದಾಖಲಿಸಿದ್ದು,ಕೂಡಲೆ ಅದನ್ನ ಹಿಂದೆ‌ಪಡೆಯಬೇಕು ಅಂತ‌ಆಗ್ರಹಿಸಿ ಕಾಂಗ್ರೆಸ‌್ ಮಂಡ್ಯಲ್ಲಿ‌ ಪ್ರತಿಭಟನೆ ನಡೆಸಿತು.
    1
    ಕೇಂದ್ರ ಸರ್ಕಾರದ ದ್ವೇಶ ರಾಜಕೀಯಾ ರಾಹುಲ್ ವಿರುದ್ದ FIR -ಕಾಂಗ್ರೆಸ್ ಆಕ್ರೋಶ
ಮಂಡ್ಯ- ರಹುಲ್ ಗಾಂದಿ ವಿರುದ್ದ ದ್ವೇಶ ರಾಜಕೀಯ ಮಾಡುತ್ತಿರು ಕೇಂದ್ರ ಸರ್ಕಾರ ಸುಳ್ಳು  FIR ದಾಖಲಿಸಿದ್ದು,ಕೂಡಲೆ ಅದನ್ನ ಹಿಂದೆ‌ಪಡೆಯಬೇಕು ಅಂತ‌ಆಗ್ರಹಿಸಿ ಕಾಂಗ್ರೆಸ‌್ ಮಂಡ್ಯಲ್ಲಿ‌ ಪ್ರತಿಭಟನೆ ನಡೆಸಿತು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು. ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು. ==================================
    2
    ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ
ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ  ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ  ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್  ತಿಳಿಸಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ  ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು.
ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.
ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು.
==================================
    user_Srinivas krpet
    Srinivas krpet
    Newspaper distribution ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    1 hr ago
  • All About,Well & Good advice by a Social Activist to Hon'ble Minister for #Waqf for rooting out all Malpractices in #KSBA #Bengaluru *ಭಾರತ ನಲ್ಲಿ ವೈರಲ್*
    1
    All About,Well & Good advice by a Social Activist to Hon'ble Minister for #Waqf for rooting out all Malpractices in #KSBA #Bengaluru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    11 hrs ago
  • ಯೂಜಿಸಿ ಕ್ವಾಲಿಫಿಕೇಷನ್ ಇಲ್ಲ ಅಂತ ಅತಿಥಿ ಉಪನ್ಯಾಸಕರ ಸೇವೆ ರದ್ದು ಸರಯಲ್ಲ - ರಾಜೇಂದ್ರಸಿಂಗ್ ಬಾಬು ಮಂಡ್ಯ: ಮಾಡಿಕೊಳ್ಳುವಂತೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಎನ್.ರಾಜೇಂದ್ರಸಿAಗ್ ಬಾಬು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸುಮಾರು 3,500ಕ್ಕೂ ಹೆಚ್ಚು ಮಾಜಿ ಯುಜಿಸಿ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಪ್ರಸ್ತುತ ಸಾಲಿನಲ್ಲಿಯೂ ನಿರಂತರವಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ನಿರುದ್ಯೋಗ ಸಮಸ್ಯೆಯಿಂದ ಬಳಲುವಂತಾಗಿದೆ ಎಂದು ಅಳಲು ತೋಡಿಕೊಂಡರು. ​ಹಿAದಿನ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಆರ್.ಸೀತಾರಾA ನೇತೃತ್ವದ ಸರ್ಕಾರದಲ್ಲಿ ಶೈಕ್ಷಣಿಕ ಸಂಯೋಜಕರ ಹುದ್ದೆಗಳಿಗೆ ಸೇರ್ಪಡೆಗೊಳಿಸಲು ಆದೇಶ ನೀಡಿದ್ದರು. ​ಆದರೆ, ಈಗ ಉನ್ನತ ಶಿಕ್ಷಣ ಇಲಾಖೆಯು ಮರು ಆಯ್ಕೆ ಪ್ರಕ್ರಿಯೆ ಮುಂದುವರಿಸುತ್ತಿರುವುದರಿAದ ಉಪನ್ಯಾಸಕರಲ್ಲಿ ಆತಂಕ ಮೂಡಿದೆ ಎಂದು ಹೇಳಿದರು. ಕೂಡಲೇ ಕಾಲೇಜು ಶಿಕ್ಷಣ ಇಲಾಖೆಯ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳಬೇಕು. ​2025-26ರ ಸೇವೆಯಲ್ಲಿದವರನ್ನು ಕೈಬಿಡದೇ ಎಲ್ಲರನ್ನೂ ಆಯ್ಕೆ ಮಾಡಿಕೊಳ್ಳಬೇಕು. 10 ದಿನದೊಳಗೆ ಕ್ರಮ ವಹಿಸದಿದ್ದರೆ, ರಾಜ್ಯದ ಎಲ್ಲ ಅತಿಥಿ ಉಪನ್ಯಾಸರನ್ನು ಒಗ್ಗೂಡಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂಎದು ಎಚ್ಚರಿಸಿದರು. ಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಎಂ.ಎಸ್‌ಕೃಷ್ಣ, ಬಿ.ಎಸ್.ಕುಮಾರ್, ಶಿವಕುಮಾರ್ ಇದ್ದರು.
    1
    ಯೂಜಿಸಿ ಕ್ವಾಲಿಫಿಕೇಷನ್ ಇಲ್ಲ ಅಂತ ಅತಿಥಿ ಉಪನ್ಯಾಸಕರ ಸೇವೆ ರದ್ದು ಸರಯಲ್ಲ - ರಾಜೇಂದ್ರಸಿಂಗ್ ಬಾಬು
ಮಂಡ್ಯ:  ಮಾಡಿಕೊಳ್ಳುವಂತೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಎನ್.ರಾಜೇಂದ್ರಸಿAಗ್ ಬಾಬು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸುಮಾರು 3,500ಕ್ಕೂ ಹೆಚ್ಚು ಮಾಜಿ ಯುಜಿಸಿ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಪ್ರಸ್ತುತ ಸಾಲಿನಲ್ಲಿಯೂ ನಿರಂತರವಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ನಿರುದ್ಯೋಗ ಸಮಸ್ಯೆಯಿಂದ ಬಳಲುವಂತಾಗಿದೆ ಎಂದು ಅಳಲು ತೋಡಿಕೊಂಡರು.
​ಹಿAದಿನ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಆರ್.ಸೀತಾರಾA ನೇತೃತ್ವದ ಸರ್ಕಾರದಲ್ಲಿ ಶೈಕ್ಷಣಿಕ ಸಂಯೋಜಕರ ಹುದ್ದೆಗಳಿಗೆ ಸೇರ್ಪಡೆಗೊಳಿಸಲು ಆದೇಶ ನೀಡಿದ್ದರು. ​ಆದರೆ, ಈಗ ಉನ್ನತ ಶಿಕ್ಷಣ ಇಲಾಖೆಯು ಮರು ಆಯ್ಕೆ ಪ್ರಕ್ರಿಯೆ ಮುಂದುವರಿಸುತ್ತಿರುವುದರಿAದ ಉಪನ್ಯಾಸಕರಲ್ಲಿ ಆತಂಕ ಮೂಡಿದೆ ಎಂದು ಹೇಳಿದರು.
ಕೂಡಲೇ ಕಾಲೇಜು ಶಿಕ್ಷಣ ಇಲಾಖೆಯ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳಬೇಕು. ​2025-26ರ ಸೇವೆಯಲ್ಲಿದವರನ್ನು ಕೈಬಿಡದೇ ಎಲ್ಲರನ್ನೂ ಆಯ್ಕೆ ಮಾಡಿಕೊಳ್ಳಬೇಕು. 10 ದಿನದೊಳಗೆ ಕ್ರಮ ವಹಿಸದಿದ್ದರೆ, ರಾಜ್ಯದ ಎಲ್ಲ ಅತಿಥಿ ಉಪನ್ಯಾಸರನ್ನು ಒಗ್ಗೂಡಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂಎದು ಎಚ್ಚರಿಸಿದರು.
ಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಎಂ.ಎಸ್‌ಕೃಷ್ಣ, ಬಿ.ಎಸ್.ಕುಮಾರ್, ಶಿವಕುಮಾರ್ ಇದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.
    1
    ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ
ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.