Shuru
Apke Nagar Ki App…
ಮಾರ್ಚ ೧೫ ರಂದು ಇಳಕಲ್ಲದಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ಪೋಲಿಸ್ ಠಾಣೆಯ ಯಲ್ಲಿ ಶಾಂತಿ ಸಮಿತಿ ಸಭೆ ಇಳಕಲ್ : ಮಾರ್ಚ ೧೫ ರವಿವಾರದಂದು ನಗರದಲ್ಲಿ ನಗರದಲ್ಲಿ ಹಿಂದೂ ಸೇವಾ ಟ್ರಸ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಾಗೂ ಬೃಹತ್ ಶೋಭಾಯಾತ್ರೆ ಹಿನ್ನಲೆಯಲ್ಲಿ ಇಳಕಲ್ ಶಹರ್ ಪೋಲಿಸ್ ಠಾಣೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ಮುಖಂಡರ ಶಾಂತಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಡಿವಾಯ್‌ಎಸ್‌ಪಿ ವಹಿಸಿ ಮಾತನಾಡಿ ಶಿವಾಜಿ ಜಯಂತಿಯಲ್ಲಿ ಎಲ್ಲಾ ಸಮುದಾಯದ ಮುಖಂಡರು, ಹಿರಿಯರು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಮತ್ತು ಪೋಲಿಸ್ ಇಲಾಖೆಗೆ ಸಹಕಾರಿ ನೀಡುವಂತೆ ಮನವಿ ಮಾಡಿದರು. ಸಭೆಯಲ್ಲಿ ಸಿಪಿಐ ಹಾಗೂ ಶಹರ್ ಪೋಲಿಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ, ಹಾಗೂ ಹಿಂದೂ ಸಮಾಜದ ಮುಖಂಡರು, ಮುಸ್ಲಿಂ ಸಮಾಜದ ಮುಖಂಡರು ಇದ್ದರು. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ
Aaryan Ganiger

More news from ಕರ್ನಾಟಕ and nearby areas
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- ಬೇಸಿಗೆ ಬಿಸಿ: ಮಾಗಡಿಯ 56 ಗ್ರಾಮಗಳಿಗೆ ತಪ್ಪಲಿದೆ ನೀರಡಿಕೆ; ಕುಡಿಯುವ ನೀರಿಗಾಗಿ ಸರ್ಕಾರದ ಮಾಸ್ಟರ್ ಪ್ಲಾನ್! #JB_News_Kannada1
- ಉತ್ತರ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಪಿ.ಎಚ್. ಪೂಜಾರ್ ಆಗ್ರಹಿಸಿದ್ದಾರೆ. ಸಂತ್ರಸ್ತರ ಪರಿಸ್ಥಿತಿ ದಿನೇದಿನೇ ಚಿಂತಾಜನಕವಾಗುತ್ತಿದೆ. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಸಂತ್ರಸ್ತರು ದೊಡ್ಡ ಮಟ್ಟದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು. ಉದ್ಯೋಗ ಸೃಷ್ಟಿಗೆ ಅಗತ್ಯವಾದ ಪೂರಕ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿ, ಸಂತ್ರಸ್ತರ ಜೀವನೋಪಾಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.1
- ಮೇಡಮ್ ಬರ್ತಾವ್ರೆ ತುಮಕೂರಿಗೆ1
- Bellary district siruguppa5
- ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ1
- ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.1