logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭಾವೈಕ್ಯತೆ ಸಾರುವ ಅಥಣಿಯ ಭವ್ಯ "ಅಥಣಿ ಚಾ ರಾಜಾ" ಗಣಪತಿ ವೈಭವದ ಪ್ರತಿಷ್ಠಾಪನೆ ಅಥಣಿ ::  ತಾಲೂಕಿನ ಗ್ರಾಮೀಣ   ಹಾಗೂ ಪಟ್ಟಣ ಸೇರಿದಂತೆ ವಿವಿಧೆಡೆ ಗಣೇಶ ಉತ್ಸವವನ್ನು ಸರಳ ಮತ್ತು ಶ್ರದ್ಧಾ, ಭಕ್ತಿಯಿಂದ ಭಾವೈಕ್ಯತೆಯ ಮೂಲಕ ಹಲವೆಡೆ ಹಿಂದೂ ಮುಸ್ಲಿಂ ಹಾಗೂ ವಿವಿಧ ಕೋಮಿನ ಯುವಕರು ಸಾಮರಸ್ಯದಿಂದ ಗಣೇಶ ಹಬ್ಬ  ಆಚರಿಸಲಾಗುತ್ತಿದೆ .  ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸುಪುತ್ರ ಚಿದಾನಂದ ಸವದಿ ಸ್ವತಹ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಗಣೇಶನ ಬರಮಾಡಿಕೊಂಡರು. ಯುವಕರು ಕುಣಿದು ಕುಪ್ಪಳಿಸುತ್ತಾ ಸಂಭ್ರಮದಿಂದ ಭವ್ಯ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು. ಈ ವೇಳೆ ಮುಖಂಡ ಚಿದಾನಂದ ಸವದಿ ಅವರು "ಅಥಣಿ ಚಾ ರಾಜಾ" ಜಾತ್ಯಾತೀತವಾಗಿ ಅಥಣಿಯ ಎಲ್ಲಾ ಯುವಕರ ಹೆಮ್ಮೆಯ ಗಣಪತಿ ಉತ್ಸವ ವಾಗಿದ್ದು ಯುವಕರ ಒಗ್ಗಟ್ಟು ಭಕ್ತಿ ಹಾಗೂ ಸಂಭ್ರಮ ಸಂತಸವನ್ನುಂಟು ಮಾಡುತ್ತದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಯುವಕರು ಸೇರಿಕೊಂಡು ಪ್ರತಿ ವರ್ಷ ಈ ಗಣಪತಿ ಉತ್ಸವ ಆಚರಿಸುತ್ತಿದ್ದು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು. ಈ ವರ್ಷವೂ ವಿಜೃಂಭಣೆಯಿಂದ ಭವ್ಯ ಮೆರವಣಿಗೆ ಮೂಲಕ ಹಾಡು ನೃತ್ಯ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪಿಸಿದರು.

22 hrs ago
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
22 hrs ago

ಭಾವೈಕ್ಯತೆ ಸಾರುವ ಅಥಣಿಯ ಭವ್ಯ "ಅಥಣಿ ಚಾ ರಾಜಾ" ಗಣಪತಿ ವೈಭವದ ಪ್ರತಿಷ್ಠಾಪನೆ ಅಥಣಿ ::  ತಾಲೂಕಿನ ಗ್ರಾಮೀಣ   ಹಾಗೂ ಪಟ್ಟಣ ಸೇರಿದಂತೆ ವಿವಿಧೆಡೆ ಗಣೇಶ ಉತ್ಸವವನ್ನು ಸರಳ ಮತ್ತು ಶ್ರದ್ಧಾ, ಭಕ್ತಿಯಿಂದ ಭಾವೈಕ್ಯತೆಯ ಮೂಲಕ ಹಲವೆಡೆ ಹಿಂದೂ ಮುಸ್ಲಿಂ ಹಾಗೂ ವಿವಿಧ ಕೋಮಿನ ಯುವಕರು ಸಾಮರಸ್ಯದಿಂದ ಗಣೇಶ ಹಬ್ಬ  ಆಚರಿಸಲಾಗುತ್ತಿದೆ .  ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸುಪುತ್ರ ಚಿದಾನಂದ ಸವದಿ ಸ್ವತಹ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಗಣೇಶನ ಬರಮಾಡಿಕೊಂಡರು. ಯುವಕರು ಕುಣಿದು ಕುಪ್ಪಳಿಸುತ್ತಾ ಸಂಭ್ರಮದಿಂದ ಭವ್ಯ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು. ಈ ವೇಳೆ ಮುಖಂಡ ಚಿದಾನಂದ ಸವದಿ ಅವರು "ಅಥಣಿ ಚಾ ರಾಜಾ" ಜಾತ್ಯಾತೀತವಾಗಿ ಅಥಣಿಯ ಎಲ್ಲಾ ಯುವಕರ ಹೆಮ್ಮೆಯ ಗಣಪತಿ ಉತ್ಸವ ವಾಗಿದ್ದು ಯುವಕರ ಒಗ್ಗಟ್ಟು ಭಕ್ತಿ ಹಾಗೂ ಸಂಭ್ರಮ ಸಂತಸವನ್ನುಂಟು ಮಾಡುತ್ತದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಯುವಕರು ಸೇರಿಕೊಂಡು ಪ್ರತಿ ವರ್ಷ ಈ ಗಣಪತಿ ಉತ್ಸವ ಆಚರಿಸುತ್ತಿದ್ದು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು. ಈ ವರ್ಷವೂ ವಿಜೃಂಭಣೆಯಿಂದ ಭವ್ಯ ಮೆರವಣಿಗೆ ಮೂಲಕ ಹಾಡು ನೃತ್ಯ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪಿಸಿದರು.

More news from ಕರ್ನಾಟಕ and nearby areas
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    37 min ago
  • ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಚಿವರಾದ ಸತೀಶ್ ಜಾರಕಿಹೊಳಿ ಸಾಹುಕಾರ್. 🏏❤️ ಯಾವುದೇ ರೀತಿಯ ಒತ್ತಡವಿಲ್ಲದೆ, ಮಕ್ಕಳೊಂದಿಗೆ ಬೆರೆತು ಆರಾಮಾಗಿ ಕೆಲ ಸಮಯ ಕಳೆದು, ಅವರ ಉತ್ಸಾಹವನ್ನು ಹೆಚ್ಚಿಸಿದರು. Satish Jarkiholi
    1
    ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ  ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಚಿವರಾದ ಸತೀಶ್ ಜಾರಕಿಹೊಳಿ ಸಾಹುಕಾರ್. 🏏❤️ ಯಾವುದೇ ರೀತಿಯ ಒತ್ತಡವಿಲ್ಲದೆ, ಮಕ್ಕಳೊಂದಿಗೆ ಬೆರೆತು ಆರಾಮಾಗಿ ಕೆಲ ಸಮಯ ಕಳೆದು, ಅವರ ಉತ್ಸಾಹವನ್ನು ಹೆಚ್ಚಿಸಿದರು. 
Satish Jarkiholi
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    23 hrs ago
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ
    1
    ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ

ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    21 hrs ago
  • ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ‌ ಮಹಿಳೆಯರ ಡೋಲ್ ತಾಶಾ ಫತಕ್ ವಾದನ
    1
    ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ‌ ಮಹಿಳೆಯರ ಡೋಲ್ ತಾಶಾ ಫತಕ್ ವಾದನ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • *ಹಿಂದೂ ಮಹಾಗಣಪತಿ , ತಾಳಿಕೋಟೆ 🕉* *ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ* 🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ. *🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.* ತಾಳಿಕೋಟಿ: ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು. ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು. ಗಣಪತಿ ಬಪ್ಪಾ ಮೋರಯಾ… ಮಂಗಳಮೂರ್ತಿ ಮೋರಯಾ…! ವರದಿ: ಸಂಗನಗೌಡ ಗಬಸಾವಳಗಿ SCN TV NEWS – ತಾಳಿಕೋಟಿ
    1
    *ಹಿಂದೂ ಮಹಾಗಣಪತಿ , ತಾಳಿಕೋಟೆ 🕉*
*ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ*
🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು
ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ.

*🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.*
ತಾಳಿಕೋಟಿ:
ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು.
ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು.
ಗಣಪತಿ ಬಪ್ಪಾ ಮೋರಯಾ…
ಮಂಗಳಮೂರ್ತಿ ಮೋರಯಾ…!
ವರದಿ: ಸಂಗನಗೌಡ ಗಬಸಾವಳಗಿ
SCN TV NEWS – ತಾಳಿಕೋಟಿ
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    12 hrs ago
  • ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ​ಗಣ್ಯರ ಉಪಸ್ಥಿತಿ ​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    4
    ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ
​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು.
​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು
​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು.
​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು.
​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ
​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
​ಗಣ್ಯರ ಉಪಸ್ಥಿತಿ
​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.