logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿಪಿಎಲ್ ಕಾರ್ಡ್ ರದ್ದು ವಿರೋಧಿಸಿ ಶ್ರೀನಿವಾಸಪುರದಲ್ಲಿ ಪ್ರತಿಭಟನೆ. ಸಿಪಿಐಎಂ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಸರ್ಕಾರಕ್ಕೆ ಆಗ್ರಹ.ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ.

15 hrs ago
user_Arunkumar H M
Arunkumar H M
ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
15 hrs ago

ಬಿಪಿಎಲ್ ಕಾರ್ಡ್ ರದ್ದು ವಿರೋಧಿಸಿ ಶ್ರೀನಿವಾಸಪುರದಲ್ಲಿ ಪ್ರತಿಭಟನೆ. ಸಿಪಿಐಎಂ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಸರ್ಕಾರಕ್ಕೆ ಆಗ್ರಹ.ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ.

More news from ಕರ್ನಾಟಕ and nearby areas
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುಖ್ಯಮಂತ್ರಿಗಳು ಡಿ ಕೆ ಶಿವಕುಮಾರ್ ಮಾಜಿ ಸಚಿವರ ಬಗ್ಗೆ ಹೇಳಿದ್ದೇನೋ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಮುಖ್ಯಮಂತ್ರಿಗಳು ಡಿ ಕೆ ಶಿವಕುಮಾರ್ ಮಾಜಿ ಸಚಿವರ ಬಗ್ಗೆ ಹೇಳಿದ್ದೇನೋ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
  • ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾ‌ರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ. ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ. ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾ‌ರ್ ತಿಳಿಸಿದರು.
    1
    ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ  ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾ‌ರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ.
ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ.
ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾ‌ರ್ ತಿಳಿಸಿದರು.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ಸಚಿವ ಸ್ಥಾನದ ಭರವಸೆ ಈಡೇರಿದೆ, ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ: ರುದ್ರಪ್ಪ ಲಮಾಣಿ ಬೆಂಗಳೂರು: "ಆರಂಭದಲ್ಲೇ ನನಗೆ ನೀಡಲಾಗಿದ್ದ ಸಚಿವ ಸ್ಥಾನದ ಭರವಸೆಯನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಈಗ ಈಡೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನಸಭೆಯ ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ" ಎಂದು ನೂತನ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಉಪಸಭಾಪತಿ ಹುದ್ದೆಯನ್ನು ನೀಡುವ ಮುನ್ನವೇ ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಈಗ ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ. ಈವರೆಗೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದರು. ತಮ್ಮ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, "ನಮ್ಮ ಸಮುದಾಯದಿಂದ ಉಪಸಭಾಪತಿಯಾಗಿದ್ದ ಏಕೈಕ ವ್ಯಕ್ತಿ ನಾನಾಗಿದ್ದೆ. ಇದೀಗ ಉಪಸಭಾಪತಿ ಹುದ್ದೆಯ ನಂತರ ಮಂತ್ರಿಯಾಗುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ" ಎಂದು ಹರ್ಷ ಹಂಚಿಕೊಂಡರು.
    1
    ಸಚಿವ ಸ್ಥಾನದ ಭರವಸೆ ಈಡೇರಿದೆ, ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ: ರುದ್ರಪ್ಪ ಲಮಾಣಿ
ಬೆಂಗಳೂರು: "ಆರಂಭದಲ್ಲೇ ನನಗೆ ನೀಡಲಾಗಿದ್ದ ಸಚಿವ ಸ್ಥಾನದ ಭರವಸೆಯನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಈಗ ಈಡೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನಸಭೆಯ ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ" ಎಂದು ನೂತನ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಉಪಸಭಾಪತಿ ಹುದ್ದೆಯನ್ನು ನೀಡುವ ಮುನ್ನವೇ ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಈಗ ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ. ಈವರೆಗೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದರು.
ತಮ್ಮ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, "ನಮ್ಮ ಸಮುದಾಯದಿಂದ ಉಪಸಭಾಪತಿಯಾಗಿದ್ದ ಏಕೈಕ ವ್ಯಕ್ತಿ ನಾನಾಗಿದ್ದೆ. ಇದೀಗ ಉಪಸಭಾಪತಿ ಹುದ್ದೆಯ ನಂತರ ಮಂತ್ರಿಯಾಗುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ" ಎಂದು ಹರ್ಷ ಹಂಚಿಕೊಂಡರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    14 hrs ago
  • very important message city next News 24 7 WhatsApp Account Hack very important message city next News 24 7 WhatsApp Account Hack
    1
    very important message 
city next News 24 7 
WhatsApp Account Hack 
very important message 
city next News 24 7 
WhatsApp Account Hack
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶನ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದ ವಿವಿಧ ಕನ್ನಡಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಸಮೀಪ ಕಪ್ಪು ಬಾವುಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಲಿರುವ ವಾಟಾಳ್ ನಾಗರಾಜ್ ಅವರು, "ಕನ್ನಡಿಗರ ಕಣ್ಣೀರು ಕಾವೇರಿ ನೀರು. ರಾಜ್ಯದಲ್ಲೇ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪನ್ನು ಕರ್ನಾಟಕ ತೀವ್ರವಾಗಿ ತಿರಸ್ಕರಿಸಬೇಕು" ಎಂದು ಆಗ್ರಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಮಂಡಿಸಲಾಗುತ್ತಿರುವ ಪ್ರಮುಖ ಬೇಡಿಕೆಗಳು ಹೀಗಿವೆ: - ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪು ತಿರಸ್ಕರಿಸಬೇಕು. - ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು. - ಮೇಕೆದಾಟು ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು. - ಮಹಾದಾಯಿ–ಕಳಸ ಬಂಡೂರಿ ಯೋಜನೆ ಕಾರ್ಯಗತಗೊಳಿಸಬೇಕು. - ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಬೇಕು. - ಎಂ.ಇ.ಎಸ್. ಸಂಘಟನೆಯನ್ನು ನಿಷೇಧಿಸಬೇಕು. - ಗಡಿನಾಡು ಬೆಳಗಾವಿ ಹಾಗೂ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. - ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಹಾಗೂ ಬ್ಯಾಂಕ್‌ಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕು. - ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ಖಾಸಗೀಕರಣ ಮಾಡಬಾರದು. - ಗಡಿನಾಡಿನ ಕನ್ನಡ ಶಾಲೆಗಳಿಗೆ ವಾರ್ಷಿಕ ₹500 ಕೋಟಿ ಅನುದಾನ ನೀಡಬೇಕು. - ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಬೇಕು. - ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಪರಭಾಷೆಗಳ ದಬ್ಬಾಳಿಕೆಯನ್ನು ತಡೆಯಬೇಕು. - ಬಿಡದಿ ಉಪನಗರ ಯೋಜನೆ ಕೈಬಿಡಬೇಕು ಹಾಗೂ ಆನೇಕಲ್ ಮತ್ತು ಬಿಡದಿ ರೈತರ ಜಮೀನು ಸ್ವಾಧೀನ ಪ್ರಕ್ರಿಯೆಯನ್ನು ಹಿಂತೆಗೆದುಕೊಳ್ಳಬೇಕು. - ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಮರ್ಪಕ ಸ್ಥಾನಮಾನ ನೀಡಬೇಕು. - ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. - ಪೊಲೀಸ್ ಸಿಬ್ಬಂದಿಯನ್ನು ಅವರವರ ಮೂಲ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ಮುಂದೂಡಲ್ಪಟ್ಟಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಘೇರಾವ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘಟನೆ ತಿಳಿಸಿದೆ. ಈ ಕಪ್ಪು ಬಾವುಟ ಪ್ರದರ್ಶನ ಕಾರ್ಯಕ್ರಮವನ್ನು ವರದಿ ಮಾಡಲು ತಮ್ಮ ಮಾಧ್ಯಮ ಸಂಸ್ಥೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷ ಮನವಿ ಮಾಡಿದೆ.
    1
    ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶನ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದ ವಿವಿಧ ಕನ್ನಡಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಸಮೀಪ ಕಪ್ಪು ಬಾವುಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಲಿರುವ ವಾಟಾಳ್ ನಾಗರಾಜ್ ಅವರು, "ಕನ್ನಡಿಗರ ಕಣ್ಣೀರು ಕಾವೇರಿ ನೀರು. ರಾಜ್ಯದಲ್ಲೇ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪನ್ನು ಕರ್ನಾಟಕ ತೀವ್ರವಾಗಿ ತಿರಸ್ಕರಿಸಬೇಕು" ಎಂದು ಆಗ್ರಹಿಸಲಿದ್ದಾರೆ.
ಪ್ರತಿಭಟನೆಯಲ್ಲಿ ಮಂಡಿಸಲಾಗುತ್ತಿರುವ ಪ್ರಮುಖ ಬೇಡಿಕೆಗಳು ಹೀಗಿವೆ:
- ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪು ತಿರಸ್ಕರಿಸಬೇಕು.
- ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು.
- ಮೇಕೆದಾಟು ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು.
- ಮಹಾದಾಯಿ–ಕಳಸ ಬಂಡೂರಿ ಯೋಜನೆ ಕಾರ್ಯಗತಗೊಳಿಸಬೇಕು.
- ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಬೇಕು.
- ಎಂ.ಇ.ಎಸ್. ಸಂಘಟನೆಯನ್ನು ನಿಷೇಧಿಸಬೇಕು.
- ಗಡಿನಾಡು ಬೆಳಗಾವಿ ಹಾಗೂ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.
- ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಹಾಗೂ ಬ್ಯಾಂಕ್‌ಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕು.
- ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ಖಾಸಗೀಕರಣ ಮಾಡಬಾರದು.
- ಗಡಿನಾಡಿನ ಕನ್ನಡ ಶಾಲೆಗಳಿಗೆ ವಾರ್ಷಿಕ ₹500 ಕೋಟಿ ಅನುದಾನ ನೀಡಬೇಕು.
- ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಬೇಕು.
- ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಪರಭಾಷೆಗಳ ದಬ್ಬಾಳಿಕೆಯನ್ನು ತಡೆಯಬೇಕು.
- ಬಿಡದಿ ಉಪನಗರ ಯೋಜನೆ ಕೈಬಿಡಬೇಕು ಹಾಗೂ ಆನೇಕಲ್ ಮತ್ತು ಬಿಡದಿ ರೈತರ ಜಮೀನು ಸ್ವಾಧೀನ ಪ್ರಕ್ರಿಯೆಯನ್ನು ಹಿಂತೆಗೆದುಕೊಳ್ಳಬೇಕು.
- ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಮರ್ಪಕ ಸ್ಥಾನಮಾನ ನೀಡಬೇಕು.
- ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು.
- ಪೊಲೀಸ್ ಸಿಬ್ಬಂದಿಯನ್ನು ಅವರವರ ಮೂಲ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು.
ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ಮುಂದೂಡಲ್ಪಟ್ಟಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಘೇರಾವ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘಟನೆ ತಿಳಿಸಿದೆ.
ಈ ಕಪ್ಪು ಬಾವುಟ ಪ್ರದರ್ಶನ ಕಾರ್ಯಕ್ರಮವನ್ನು ವರದಿ ಮಾಡಲು ತಮ್ಮ ಮಾಧ್ಯಮ ಸಂಸ್ಥೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷ ಮನವಿ ಮಾಡಿದೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಡಿಸಿಎಂ ನೀಡುವುದಕ್ಕೆ ಇನ್ನೂ ಕಾಲ ಮಿಂಚಿಲ್ಲ ಕಾದು ನೋಡೋಣ:ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು:ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ .ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ .ಓಬಿಸಿ ಎಸ್ಸಿ ಎಸ್ಟಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಸಿಕ್ಕಿದೆ.ಹೊಸಬರಿಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಉಪಯೋಗವಾಗಲಿದೆ .ಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿತ್ತು ನೀಡಿಲ್ಲ ಇನ್ನು ಸಮಯಾವಕಾಶವಿದೆ.ಬೇರೆ ಬೇರೆ ಸಮುದಾಯಗಳಿಗೆ ಡಿಸಿಎಂ ಕೊಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿತ್ತು.ಡಿಸಿಎಂ ನೀಡುವುದಕ್ಕೆ ಇನ್ನೂ ಕಾಲ ಮಿಂಚಿಲ್ಲ ಕಾದು ನೋಡೋಣ ಎಂದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    1
    ಡಿಸಿಎಂ ನೀಡುವುದಕ್ಕೆ ಇನ್ನೂ ಕಾಲ ಮಿಂಚಿಲ್ಲ ಕಾದು ನೋಡೋಣ:ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು:ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ .ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ .ಓಬಿಸಿ ಎಸ್ಸಿ ಎಸ್ಟಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಸಿಕ್ಕಿದೆ.ಹೊಸಬರಿಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಉಪಯೋಗವಾಗಲಿದೆ .ಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿತ್ತು ನೀಡಿಲ್ಲ ಇನ್ನು ಸಮಯಾವಕಾಶವಿದೆ.ಬೇರೆ ಬೇರೆ ಸಮುದಾಯಗಳಿಗೆ ಡಿಸಿಎಂ ಕೊಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿತ್ತು.ಡಿಸಿಎಂ ನೀಡುವುದಕ್ಕೆ ಇನ್ನೂ ಕಾಲ ಮಿಂಚಿಲ್ಲ ಕಾದು ನೋಡೋಣ  ಎಂದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ರಾತ್ರೋರಾತ್ರಿ ಪೊಲೀಸರ ಸ್ಪೆಷಲ್ ಡ್ರೈವ್ – ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ ಉಮಾರಾಣಿ ನೆಲಮಂಗಲ ನಗರದಲ್ಲಿ ಹೆಚ್ಚುತ್ತಿರುವ ಗಲಾಟೆ, ಪುಂಡಾಟಿಕೆ ಹಾಗೂ ಸಾರ್ವಜನಿಕ ಶಾಂತಿ ಕದಡುವ ಘಟನೆಗಳ ಹಿನ್ನೆಲೆಯಲ್ಲಿ ಟೌನ್ ಪೊಲೀಸರು ಸೋಮವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದರು. ಡಿವೈಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಭರತ್ ನೇತೃತ್ವದ ತಂಡ ನಗರದ ವಿವಿಧ ಬಾರ್‌ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿತು. ಕಾರ್ಯಾಚರಣೆ ವೇಳೆ ಬಾರ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ದಾಖಲೆಗಳು ಹಾಗೂ ಅಪ್ರಾಪ್ತ ವಯಸ್ಕರನ್ನು ಕೆಲಸಕ್ಕೆ ನಿಯೋಜಿಸಿರುವ ಬಗ್ಗೆ ತಪಾಸಣೆ ನಡೆಸಲಾಯಿತು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರ ಸುಳಿವಿನ ಹಿನ್ನೆಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಯಿತು. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುಡಿ ರೌಡಿಗಳ ಪುಂಡಾಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಪೊಲೀಸ್ ಠಾಣೆಗೆ ಕರೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.
    1
    ರಾತ್ರೋರಾತ್ರಿ ಪೊಲೀಸರ ಸ್ಪೆಷಲ್ ಡ್ರೈವ್ – ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ ಉಮಾರಾಣಿ

ನೆಲಮಂಗಲ ನಗರದಲ್ಲಿ ಹೆಚ್ಚುತ್ತಿರುವ ಗಲಾಟೆ, ಪುಂಡಾಟಿಕೆ ಹಾಗೂ ಸಾರ್ವಜನಿಕ ಶಾಂತಿ ಕದಡುವ ಘಟನೆಗಳ ಹಿನ್ನೆಲೆಯಲ್ಲಿ ಟೌನ್ ಪೊಲೀಸರು ಸೋಮವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದರು.
ಡಿವೈಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಭರತ್ ನೇತೃತ್ವದ ತಂಡ ನಗರದ ವಿವಿಧ ಬಾರ್‌ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿತು.
ಕಾರ್ಯಾಚರಣೆ ವೇಳೆ ಬಾರ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ದಾಖಲೆಗಳು ಹಾಗೂ ಅಪ್ರಾಪ್ತ ವಯಸ್ಕರನ್ನು ಕೆಲಸಕ್ಕೆ ನಿಯೋಜಿಸಿರುವ ಬಗ್ಗೆ ತಪಾಸಣೆ ನಡೆಸಲಾಯಿತು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರ ಸುಳಿವಿನ ಹಿನ್ನೆಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುಡಿ ರೌಡಿಗಳ ಪುಂಡಾಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಪೊಲೀಸ್ ಠಾಣೆಗೆ ಕರೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.