ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ ---------------------- ಚಿಕ್ಕನಾಯಕನಹಳ್ಳಿ: ತಾಲ್ಲೂಕಿಗೆ ಹೇಮಾವತಿ ನೀರು ಹರಿಸಬೇಕು ಹಾಗೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಮಾಜಿ ಶಾಸಕ ಬಿ.ಲಕ್ಕಪ್ಪ ಅವರು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣವೇ ಸೂಕ್ತ ಆಶ್ವಾಸನೆ ನೀಡದಿದ್ದರೆ 'ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಂದ್' ನಡೆಸಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತ ರೈತರೊಂದಿಗೆ ನೆಲದ ಮೇಲೆ ಕುಳಿತು ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗಮನ ಸೆಳೆಯಲು ತೀವ್ರ ಹೋರಾಟ: "ಸುಮ್ಮನೆ ಬಂದು ಕುಳಿತು, ಎದ್ದು ಹೋಗುವಂತಹ ಹೋರಾಟದಿಂದ ಯಾವುದೇ ಪ್ರಯೋಜನವಿಲ್ಲ. ಸರ್ಕಾರ ಕಣ್ಣು ಮುಚ್ಚಿ ಕುಳಿತಿದ್ದು, ಅದರ ಗಮನ ಸೆಳೆಯಬೇಕಾದರೆ ಅತ್ಯಂತ ಪರಿಣಾಮಕಾರಿಯಾದ ನಿಲುವು ತಳೆಯಬೇಕಾಗಿದೆ. ನೀರಾವರಿ ಸೌಲಭ್ಯ ಸಿಗುವವರೆಗೂ ಹಾಗೂ ಸರ್ಕಾರದ ಸ್ಪಷ್ಟ ಆಶ್ವಾಸನೆ ಸಿಗುವವರೆಗೂ ಈ ಹೋರಾಟವನ್ನು ಅರ್ಧಕ್ಕೆ ಕೈಬಿಡಬಾರದು" ಎಂದು ಹೇಳಿದರು. ರಾಜಕೀಯ ರಹಿತ ಬೆಂಬಲ, ತಾಲ್ಲೂಕು ಬಂದ್‌ಗೆ ಕರೆ: "ಈ ಹೋರಾಟದಲ್ಲಿ ಯಾವುದೇ ಪಕ್ಷ ಅಥವಾ ರಾಜಕೀಯವಿಲ್ಲ. ಇದು ಇಡೀ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರ ಬದುಕಿನ ಪ್ರಶ್ನೆ. ರೈತರು ಒಗ್ಗಟ್ಟಾಗಿ ನಿಲ್ಲಬೇಕು. ಅಗತ್ಯಬಿದ್ದರೆ ಇಡೀ ಚಿಕ್ಕನಾಯಕನಹಳ್ಳಿ ತಾಲ್ಲೂಕನ್ನು ಬಂದ್ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಿ ಸರ್ಕಾರದ ಮೇಲೆ ತೀವ್ರ ಒತ್ತಡ ತರಬೇಕಾಗಿದೆ" ಎಂದು ಕರೆ ನೀಡಿದರು. ರೈತರ ಜೊತೆ ಕೊನೆಯವರೆಗೂ ನಿಲ್ಲುವ ಅಭಯ: "ನಾನು ಮೊದಲಿನಿಂದಲೂ ನೀರಾವರಿ ಯೋಜನೆಗಳ ಬಗ್ಗೆ ಹಾಗೂ ರೈತರ ಪರವಾಗಿ ಆಸಕ್ತಿ ಹೊಂದಿರುವವನು. ಹಿಂದೆ ಹಲವು ಬಾರಿ ಹೋರಾಟ ನಡೆಸಿದರೂ ಸೂಕ್ತ ಫಲಿತಾಂಶ ಸಿಕ್ಕಿಲ್ಲ. ಆದರೆ ಈಗ ರೈತ ಸಂಘಟನೆಗಳು ಆರಂಭಿಸಿರುವ ಈ ಹೋರಾಟ ತಾರ್ಕಿಕ ಅಂತ್ಯ ಕಾಣಲೇಬೇಕು. ರೈತರ ಈ ನ್ಯಾಯಯುತ ಹೋರಾಟದಲ್ಲಿ ನಾನು ನಿಮ್ಮೊಂದಿಗಿದ್ದು, ಸಂಪೂರ್ಣ ಬೆಂಬಲ ನೀಡುತ್ತೇನೆ" ಎಂದು ರೈತರಿಗೆ ಧೈರ್ಯ ತುಂಬಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು, ನೂರಾರು ರೈತರು ಹಾಗೂ ಸ್ಥಳೀಯ ಸಾರ್ವಜನಿಕರು ಹಸಿರು ಶಾಲು ಧರಿಸಿ ಭಾಗವಹಿಸಿದ್ದು, ಸ್ಥಳದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

- ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ1
- ತಡರಾತ್ರಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರ ಜೊತೆ ಚರ್ಚೆ ನಡೆಸಿದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ಚಿಕ್ಕನಾಯಕನಹಳ್ಳಿ: ಹೇಮಾವತಿ ನೀರು ಹಾಗೂ ಬಾಕಿ ಉಳಿದಿರುವ ನಾಲೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಮುಂಭಾಗ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ. ತಡರಾತ್ರಿ ಧರಣಿ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ಭೇಟಿ ನೀಡಿ ಪ್ರತಿಭಟನಾನಿರತ ರೈತರೊಂದಿಗೆ ಚರ್ಚೆ ನಡೆಸಿದರು. ರೈತರ ಸಮಸ್ಯೆಗಳು, ಹೇಮಾವತಿ ನಾಲೆ ಕಾಮಗಾರಿ ವಿಳಂಬ ಹಾಗೂ ನೀರಾವರಿ ಯೋಜನೆಯ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ರೈತರು ಹಲವು ವರ್ಷಗಳಿಂದ ಹೇಮಾವತಿ ನೀರಿಗಾಗಿ ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ತಹಶೀಲ್ದಾರ್ ಮಮತಾ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಷಯ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಇದೀಗ ರೈತರ ಅಹೋರಾತ್ರಿ ಧರಣಿ ಮುಂದುವರಿದಿದ್ದು, ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತರು ತಿಳಿಸಿದ್ದಾರೆ. ಹೇಮಾವತಿ ನಾಲೆ ಯೋಜನೆ ಹಲವು ವರ್ಷಗಳಿಂದ ವಿಳಂಬವಾಗಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಿದೆ.1
- ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.4
- ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.1
- tumkur hanumanthapura jathre kollapuradamma,,&karugalamma jathre tumkur jathre1
- ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ1
- ದೇವರ ಹೆಸರಿನಲ್ಲಿ ಪ್ರಮಾಣದ ಪತ್ರ ಸ್ವೀಕರಿಸಿದ ನೂತನ ಸಚಿವ ಟಿ ರಘುಮೂರ್ತಿ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಟಿ .ರಘುಮೂರ್ತಿ ಅವರಿಗೆ ಮಂತ್ರಿ ಸ್ಥಾನ ಒಲಿದು ಬಂದಿದೆ.. ನೂತನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ..1
- ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ಈಗ ಹುಳಿಯಾರ್ ಬಸ್ ನಿಲ್ದಾಣದಲ್ಲಿ ಬಯಲು ಶೌಚಾಲಯ ಗತಿ ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ------------------- ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಕಳೆದ 1 ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕೆ ಪರದಾಡುವಂತಾಗಿದೆ. ಶೌಚಾಲಯದ ಬೀಗ ಹಾಕಿರುವ ಪರಿಣಾಮವಾಗಿ ಬಸ್ ನಿಲ್ದಾಣದ ಆವರಣದಲ್ಲೇ ಮತ್ತೆ ಬಯಲು ಶೌಚ ಆರಂಭಗೊಂಡಿದೆ. ಇದರಿಂದ ದುರ್ನಾತ ಹೆಚ್ಚಾಗಿದ್ದು, ದುರ್ನಾತದ ನಡುವೆಯೇ ಪ್ರಯಾಣಿಕರು ಸುತ್ತ ಮುತ್ತ ಓಡಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಬೀಗ ಹಾಕಿರುವುದಕ್ಕೆ ಸ್ಥಳೀಯ ವ್ಯಾಪಾರಿಗಳು, ಮಹಿಳಾ ಪ್ರಯಾಣಿಕರಿಗೆ ಸವಾಲಾಗಿ ಪರಿಣಮಿಸಿದೆ. ತುರ್ತು ಸಂದರ್ಭಗಳಲ್ಲಿ ಶೌಚಾಲಯ ಬಳಕೆ ಮಾಡಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿvತೀವ್ರ ಆಕ್ರೋಶ ವ್ಯಕ್ತವಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಬಂದು ಹೋಗುವ ಈ ಬಸ್ ನಿಲ್ದಾಣದಲ್ಲಿ ಗಂಭೀರ ಸಮಸ್ಯೆಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಮತ್ತೆ ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಮನವಿ ಮಾಡಿದ್ದಾರೆ.1