ಶಿವಮೊಗ್ಗ-ಕಥೆಗಳು ಕಣ್ಮರೆ ಯಾಗುತ್ತಿದೆ: ಡಾ.ವಿಜಯಾ ದೇವಿ ಶಿವಮೊಗ್ಗ: ಈ ಹೊತ್ತಿಗೆ ಮಕ್ಕಳಿಂದ ಹಿಡಿದು ಎಲ್ಲರಲ್ಲೂ ನೈತಿಕತೆ ಪ್ರಜ್ಞೆ ಮೂಡಲು ಕಥೆಗಳು ಸಹಾಯಕವಾಗಿದೆ. ಆಧುನಿಕತೆಯಲ್ಲಿ ಕಣ್ಮರೆಯಾಗುತ್ತಿರುವುದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲ ಯದ ಎಮಿರೇಟ್ಸ್ ಪ್ರಾಧ್ಯಾಪಕರಾದ ಡಾ. ವಿಜಯ ದೇವಿ ಹೇಳಿದರು. ಅವರು ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಭದ್ರಾವತಿ ಆಕಾಶವಾಣಿ ಕೇಂದ್ರದ ಕೇಳುಗರ ಬಳಗ, ರೇಣುಕಪ್ಪಗೌಡ ಪ್ರತಿಷ್ಠಾನ, ಜಿಲ್ಲಾ ಸರ್ವೋದಯ ಮಂಡಲ, ಕಾಲೇಜಿನ ಕನ್ನಡ ವಿಭಾಗ, ಸಾಂಸ್ಕೃತಿಕ ವೇದಿಕೆ ಸಹಯೋಗ ದಲ್ಲಿ ಆರ್ ಜೆ ಗಣೇಶ್ ಕೆಂಚನಾಲ್ ಅವರ ಬಾನುಲಿಯಿಂದ 'ಕಥೆ ನಿಮ್ಮ ಜೊತೆ' ಪುಸ್ತಕವನ್ನು, ಆಕಾಶವಾಣಿ ಕೇಳುಗ ರೊಂದಿಗೆ ಬಿಡುಗಡೆ ಮಾಡಿ ಮಾತನಾಡಿದರು. ಜಗತಿನಲ್ಲಿ ಜೀವಂತಿಕೆ ನಡೆಯುತ್ತಿರುವುದು ಸೃಜನಶೀಲತೆಯ ಕಾರಣದಿಂದ. ಸಾಹಿತ್ಯದ ಮೂಲ ದ್ರವ್ಯ ಗ್ರಾಮೀಣ ಬದುಕಿನಲ್ಲಿದೆ. ಅಂತಹ ಗ್ರಾಮೀಣ ಬದುಕಿನ ಸತ್ವವು ಈ ಕತೆ ಪುಸ್ತಕದಲ್ಲಿದೆ. ನೈತಿಕ ಮೌಲ್ಯಗಳ ಅಂತಸತ್ವವವನ್ನು ಕತೆಗಳ ಮೂಲಕ ಬಿತ್ತರಿಸುವುದು ಅಗತ್ಯವಾಗಿದೆ. ಬರಹ ಕೇವಲ ಸಂತಸವನ್ನು ನೀಡುವುದಲ್ಲ. ಬದಲಿಗೆ ವೈಯಕ್ತಿಕ ಜವಾಬ್ದಾರಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಕಲಿಸುತ್ತದೆ. ವೃತ್ತಿಯ ಮೂಲಕ ಸಮಾಜದ ಆರೋಗ್ಯವನ್ನು ಬಯಸುವ ಆಶಯ ಬಹಳ ಮುಖ್ಯ. ಕೃತಿಯೊಂದು ಸಮಾಜದ ಮಾನವೀಯ ಮೌಲ್ಯಗಳನ್ನು ಬೆಳೆಸಿದರೆ ಅದಕ್ಕಿಂತಲೂ ಬೇರೆ ಯಾವುದೂ ಇಲ್ಲ. ಓಡುವ ಜಗತ್ತಿನಲ್ಲಿ ಬುದ್ದಿವಂತಿಕೆ ಮತ್ತು ಮಾನವೀಯತೆಗಳು ಮುಖ್ಯವಾಗುತ್ತವೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಮನೋವೈದ್ಯ ಕೆ.ಎಸ್ ಪವಿತ್ರ ಮಾತನಾಡಿ ಜನಪದರ ಕತೆಗಳು ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಪೂರಕ ವಾದುದು. ಕೇಳುವುದರ ಮೂಲಕ ಹೊಸದೊಂದು ಸನ್ನಿವೇಶ ತಂದು ಹೇಳ ಬಹುದು ಆದರೆ ಬರಹ ಸವಾಲಿನದು. ಅದನ್ನು ಗಣೇಶ ಕೆಂಚನಾಲ ಕೇಳುಗರ ಮೂಲಕ ಸಾಧ್ಯವಾಗಿಸಿದ್ದಾರೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಗಣೇಶ ಕೆಂಚನಾಲ ಕಥೆ ಕಟ್ಟುವ ಕಾರ್ಯಕ್ರಮ ಆಕಾಶವಾಣಿ ಕೇಂದ್ರದಿಂದ 2023 ರಿಂದ ಆರಂಭವಾಗಿದ್ದು ಈ ವರೆಗೆ ಸುಮಾರು ನೂರು ಕತೆಗಳು ಬಿತ್ತರಗೊಂಡಿವೆ. ಎಲ್ಲವೂ ಪುಸ್ತಕ ರೂಪದಲ್ಲಿ ತರಲಾಗುವುದು. ಕಥೆಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುತ್ತವೆ ಎಂದರು. ಯುವಜನತೆ ಒಳ್ಳೆಯದನ್ನು ಕೇಳುವ, ನೋಡುವ, ಓದುವ ಕೆಲಸದಲ್ಲಿ ನಿರತರಾಗಬೇಕು ಎಂದರು. ಪ್ರಾಂಶುಪಾಲ ಶಶಿಧರ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಬಸವರಾಜ ನೆಲ್ಲಿಸರ, ಕೇಳುಗ ಬಳಗದ ಸಂಚಾಲಕ ಜಿ.ವಿಜಯ ಕುಮಾರ, ಆರ್ ಮನೋಹರ, ಕನ್ನಡ ವಿಭಾಗದ ಮುಖ್ಯಸ್ಥ ರವಿ ಎನ್. ಪ್ರಾಧ್ಯಾಪಕರಾದ ಕೆ.ಪಿ.ಪವಿತ್ರ, ಡಾ.ಚಿಕ್ಕ ಹೆಗಡೆ, ಮಂಜುಳ, ಶ್ವೇತ ಉಪಸ್ಥಿತಿ ಇದ್ದರು. ಡಾ.ಮಂಜುನಾಥ ಪ್ರಾರ್ಥಿಸಿ,ನಂದಿನಿ ನಿರೂಪಿಸಿದರೆ,ಡಾ.ಅಣ್ಣಪ್ಪ ಎನ್. ಮಳೀಮಠ್ ವಂದಿಸಿದರು. ಆಕಾಶವಾಣಿ ಆರ್ ಜೆ ಬಳಗ ಸೇರಿದಂತೆ ಆಕಾಶವಾಣಿ ಕೇಳುಗರು, ಸಾಹಿತ್ಯಾಸಕ್ತರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.

- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- Post by Mayur TV Hangal YouTube c1
- ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವ ಹಾಗೂ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ, ಇತ್ತೀಚಿಗೆ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಹಣ್ಣು ಹಂಪಲು, ಪುಸ್ತಕ ಹಾಗೂ ಇತರ ಅವಶ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು. ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದ್ದು ಕಾರ್ಯಕ್ರಮದ ರೂವಾರಿಗಳಿಗೆ ತುಂಬು ಹೃದಯದ ಅಭಿನಂದನೆಗಳು. ಬೆಥನಿ ಕನ್ಯಾ ಮಠದ ಭಗಿನಿ ಶುಭಾ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸ್ಥಾಪಕ ಸಂಚಾಲಕ ಫ್ರಾಂಕ್ಲಿನ್ ಮೊಂತೆರೊ, ಪ್ರೀತಿ ಮಿನೇಜಸ್, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಸೈಂಟ್ ತೆರೆಸಾ ಶಾಲೆಯ ಉಪ ಪ್ರಾಂಶುಪಾಲೆ ಸಿ.ವಿದ್ಯಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ್, ಉದ್ಯಮಿ ಸಿಂಥಿಯಾ ಮೊರಾಸ್, ಅರುಣ್ ಡಿಸೋಜ ಉರ್ವ, ಜೂಲಿಯೆಟ್ ಡಿಕುನ್ಹಾ ಉರ್ವಸ್ಟೋರ್, ಪ್ರೀಮಾ ಫೆರ್ನಾಂಡಿಸ್ ಎಕ್ಕೂರು, ಜೂಲಿಯನಾ ಮೊರಾಸ್, ಆಗ್ನೆಸ್ ರೆಬೆಲ್ಲೊ ಮುಂಬೈ, ರಿಯೊ ಮಿನೇಜಸ್, ಓಸ್ವಾಲ್ಡ್ ಡಿಕುನ್ಹ ಬಿಜೈ, ಮಧು ಬಿಜೈ, ಕೊರ್ಡೆಲ್ ಕ್ರಿಕೆಟರ್ಸ್‌ನ ನವೀನ್ ಫರ್ನಾಂಡಿಸ್, ಪ್ರವೀಣ್ ಫರ್ನಾಂಡಿಸ್, ಜೊನ್ಸಿ ರೇಗೊ, ಫಿಲಿಪ್ ಡಿಸೋಜ, ಸಂದೀಪ್ ಡಿಸೋಜ, ರೊನಾಲ್ಡ್ ಕೊರ್ಡೆಲ್ ಮತ್ತು ರಾಬರ್ಟ್ ಕೊರ್ಡೆಲ್ ಉಪಸ್ಥಿತರಿದ್ದರು.1
- ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.1