logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ : ಮಂತ್ರಿಗಿರಿ ಇಲ್ಲದೆ ಸಂಗಮೇಶ್ವರ್ ರಾಜಕೀಯ ಅಂತ್ಯ ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾಗ್ಯ ಇಲ್ಲದಂತಾಗಿದೆ. ಇದರಿಂದಾಗಿ ಸಂಗಮೇಶ್ವರ್ ಅಭಿಮಾನಿ ಬಳಗ ಸೇರಿದಂತೆ ಕ್ಷೇತ್ರದ ನಾಗರೀಕರಲ್ಲಿ ನಿರಾಸೆಯನ್ನುಂಟು ಮಾಡಿದೆ.  ಕಾಂಗ್ರೆಸ್‌ನಿಂದ ನಿರಂತರ ಅನ್ಯಾಯ:  ಕಾಂಗ್ರೆಸ್ ಪಕ್ಷದ ಮೇಲೆ ಹೊಂದಿರುವ ಅಪಾರವಾದ ನಿಷ್ಠೆಯೇ ಸಂಗಮೇಶ್ವರ್ ಅವರನ್ನು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡುತ್ತಿದೆ ಎಂಬುದು ಸುಳ್ಳಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೂ ಸಹ ಮುಂದಿನ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡದೇ ಸಿ.ಎಂ ಇಬ್ರಾಹಿಂ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನಸಭಾ ಚುನಾವಣೆ ಮತಯಾಚನೆ ಸೇರಿದಂತೆ ಹಲವು  ಸಂದರ್ಭಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಗಮೇಶ್ವರ್ ಅವರಿಗೆ ಮಂತ್ರಿಗಿರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಲ್ಲ. ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಂಗಮೇಶ್ವರ್ ಅವರನ್ನು ಸಮಾಧಾನಪಡಿಸಲಾಗಿತ್ತು. ಇದೀಗ ರಾಜಕೀಯ ಜೀವನದ ಅಂತಿಮ ಸಮಯದಲ್ಲೂ ಸಚಿವ ಸ್ಥಾನ ನೀಡದೆ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡಲಾಗಿದೆ.  ಕಾಂಗ್ರೆಸ್ ಪಕ್ಷದಿಂದ ಮೋಸ:  ಸಚಿವ ಸ್ಥಾನ ಕೈತಪ್ಪಿರುವ ಹಿನ್ನಲೆಯಲ್ಲಿ ಪತ್ರಿಕೆ ಜೊತೆ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ೪ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ೨-೩ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಈ ಹಿಂದೆಯೇ ಸಚಿವ ಸ್ಥಾನ ಲಭಿಸಬೇಕಿತ್ತು. ಆದರೆ ನನಗೆ ಸಚಿವ ಸ್ಥಾನ ನೀಡದೆ ಮೋಸ ಮಾಡಲಾಯಿತು. ಈ ಹಿಂದೆ ೫೦ ಕೋ. ರು. ಅಮಿಷ ಬಂದರೂ ಸಹ ಕಾಂಗ್ರೆಸ್ ಪಕ್ಷ ಬಿಡದೆ ನಿಷ್ಟೆಯಿಂದ ಇದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಹ ನನಗೆ ಮೋಸಲಾಗಿದೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದು ಹಾಗು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಮುಂದಿನ ನಿರ್ಧಾರ ಕ್ಷೇತ್ರದ ಮತದಾರರು, ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದರು.

4 hrs ago
user_ಪ್ರವೀಣ್ ಅಧ್ಯಕ್ಷ NAYAKA
ಪ್ರವೀಣ್ ಅಧ್ಯಕ್ಷ NAYAKA
Local News Reporter Bhadravati, Shivamogga•
4 hrs ago

ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ : ಮಂತ್ರಿಗಿರಿ ಇಲ್ಲದೆ ಸಂಗಮೇಶ್ವರ್ ರಾಜಕೀಯ ಅಂತ್ಯ ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾಗ್ಯ ಇಲ್ಲದಂತಾಗಿದೆ. ಇದರಿಂದಾಗಿ ಸಂಗಮೇಶ್ವರ್ ಅಭಿಮಾನಿ ಬಳಗ ಸೇರಿದಂತೆ ಕ್ಷೇತ್ರದ ನಾಗರೀಕರಲ್ಲಿ ನಿರಾಸೆಯನ್ನುಂಟು ಮಾಡಿದೆ.  ಕಾಂಗ್ರೆಸ್‌ನಿಂದ ನಿರಂತರ ಅನ್ಯಾಯ:  ಕಾಂಗ್ರೆಸ್ ಪಕ್ಷದ ಮೇಲೆ ಹೊಂದಿರುವ ಅಪಾರವಾದ ನಿಷ್ಠೆಯೇ ಸಂಗಮೇಶ್ವರ್ ಅವರನ್ನು ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡುತ್ತಿದೆ ಎಂಬುದು ಸುಳ್ಳಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರೂ ಸಹ ಮುಂದಿನ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡದೇ ಸಿ.ಎಂ ಇಬ್ರಾಹಿಂ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ವಿಧಾನಸಭಾ ಚುನಾವಣೆ ಮತಯಾಚನೆ ಸೇರಿದಂತೆ ಹಲವು  ಸಂದರ್ಭಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಹಾಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಗಮೇಶ್ವರ್ ಅವರಿಗೆ ಮಂತ್ರಿಗಿರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಲ್ಲ. ಎರಡು ಬಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಂಗಮೇಶ್ವರ್ ಅವರನ್ನು ಸಮಾಧಾನಪಡಿಸಲಾಗಿತ್ತು. ಇದೀಗ ರಾಜಕೀಯ ಜೀವನದ ಅಂತಿಮ ಸಮಯದಲ್ಲೂ ಸಚಿವ ಸ್ಥಾನ ನೀಡದೆ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುವಂತೆ ಮಾಡಲಾಗಿದೆ.  ಕಾಂಗ್ರೆಸ್ ಪಕ್ಷದಿಂದ ಮೋಸ:  ಸಚಿವ ಸ್ಥಾನ ಕೈತಪ್ಪಿರುವ ಹಿನ್ನಲೆಯಲ್ಲಿ ಪತ್ರಿಕೆ ಜೊತೆ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ೪ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ೨-೩ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ನನಗೆ ಈ ಹಿಂದೆಯೇ ಸಚಿವ ಸ್ಥಾನ ಲಭಿಸಬೇಕಿತ್ತು. ಆದರೆ ನನಗೆ ಸಚಿವ ಸ್ಥಾನ ನೀಡದೆ ಮೋಸ ಮಾಡಲಾಯಿತು. ಈ ಹಿಂದೆ ೫೦ ಕೋ. ರು. ಅಮಿಷ ಬಂದರೂ ಸಹ ಕಾಂಗ್ರೆಸ್ ಪಕ್ಷ ಬಿಡದೆ ನಿಷ್ಟೆಯಿಂದ ಇದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಹ ನನಗೆ ಮೋಸಲಾಗಿದೆ. ನಾನು ಕಾಂಗ್ರೆಸ್ ಪಕ್ಷ ತೊರೆಯುವುದು ಹಾಗು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಮುಂದಿನ ನಿರ್ಧಾರ ಕ್ಷೇತ್ರದ ಮತದಾರರು, ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದರು.

More news from ಕರ್ನಾಟಕ and nearby areas
  • ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ ಸಿಗುತ್ತೆ ಒಣ ಮೀನು‌.
    1
    ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ  ಸಿಗುತ್ತೆ ಒಣ ಮೀನು‌.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ಈಗ ಹುಳಿಯಾರ್ ಬಸ್ ನಿಲ್ದಾಣದಲ್ಲಿ ಬಯಲು ಶೌಚಾಲಯ ಗತಿ ​ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ​------------------- ​ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಕಳೆದ 1 ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕೆ ಪರದಾಡುವಂತಾಗಿದೆ. ​ ​ಶೌಚಾಲಯದ ಬೀಗ ಹಾಕಿರುವ ಪರಿಣಾಮವಾಗಿ ಬಸ್ ನಿಲ್ದಾಣದ ಆವರಣದಲ್ಲೇ ಮತ್ತೆ ಬಯಲು ಶೌಚ ಆರಂಭಗೊಂಡಿದೆ. ಇದರಿಂದ ದುರ್ನಾತ ಹೆಚ್ಚಾಗಿದ್ದು, ದುರ್ನಾತದ ನಡುವೆಯೇ ಪ್ರಯಾಣಿಕರು ಸುತ್ತ ಮುತ್ತ ಓಡಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ​ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಬೀಗ ಹಾಕಿರುವುದಕ್ಕೆ ಸ್ಥಳೀಯ ವ್ಯಾಪಾರಿಗಳು, ಮಹಿಳಾ ಪ್ರಯಾಣಿಕರಿಗೆ ಸವಾಲಾಗಿ ಪರಿಣಮಿಸಿದೆ. ತುರ್ತು ಸಂದರ್ಭಗಳಲ್ಲಿ ಶೌಚಾಲಯ ಬಳಕೆ ಮಾಡಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿvತೀವ್ರ ಆಕ್ರೋಶ ವ್ಯಕ್ತವಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಬಂದು ಹೋಗುವ ಈ ಬಸ್ ನಿಲ್ದಾಣದಲ್ಲಿ ಗಂಭೀರ ಸಮಸ್ಯೆಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಮತ್ತೆ ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
    1
    ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ಈಗ ಹುಳಿಯಾರ್ ಬಸ್ ನಿಲ್ದಾಣದಲ್ಲಿ ಬಯಲು ಶೌಚಾಲಯ ಗತಿ
​ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!?
​-------------------
​ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಕಳೆದ 1 ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕೆ ಪರದಾಡುವಂತಾಗಿದೆ.
​         ​ಶೌಚಾಲಯದ ಬೀಗ ಹಾಕಿರುವ ಪರಿಣಾಮವಾಗಿ ಬಸ್ ನಿಲ್ದಾಣದ ಆವರಣದಲ್ಲೇ ಮತ್ತೆ ಬಯಲು ಶೌಚ ಆರಂಭಗೊಂಡಿದೆ. ಇದರಿಂದ ದುರ್ನಾತ ಹೆಚ್ಚಾಗಿದ್ದು, ದುರ್ನಾತದ ನಡುವೆಯೇ ಪ್ರಯಾಣಿಕರು ಸುತ್ತ ಮುತ್ತ ಓಡಾಡಬೇಕಾದ ಪರಿಸ್ಥಿತಿ ಬಂದೊದಗಿದೆ. 
​ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಬೀಗ ಹಾಕಿರುವುದಕ್ಕೆ ಸ್ಥಳೀಯ ವ್ಯಾಪಾರಿಗಳು, ಮಹಿಳಾ ಪ್ರಯಾಣಿಕರಿಗೆ ಸವಾಲಾಗಿ ಪರಿಣಮಿಸಿದೆ. ತುರ್ತು ಸಂದರ್ಭಗಳಲ್ಲಿ ಶೌಚಾಲಯ ಬಳಕೆ ಮಾಡಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿvತೀವ್ರ ಆಕ್ರೋಶ ವ್ಯಕ್ತವಾಗಿದೆ.
ದಿನಂಪ್ರತಿ ಸಾವಿರಾರು ಮಂದಿ ಬಂದು ಹೋಗುವ ಈ ಬಸ್ ನಿಲ್ದಾಣದಲ್ಲಿ ಗಂಭೀರ ಸಮಸ್ಯೆಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಮತ್ತೆ ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    6 hrs ago
  • ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ನನ್ನ ಸಹೋದ್ಯೋಗಿ ಮಿತ್ರರಿಗೆ, ಹಾಗೆಯೇ ವಿಧಾನಸಭಾ ಸಭಾಧ್ಯಕ್ಷರಾಗಿ ಹಾಗೂ ಉಪಸಭಾಧ್ಯಕ್ಷರಾಗಿ, ವಿಧಾನಪರಿಷತ್ ಸಭಾಪತಿಯಾಗಿ ಹಾಗೂ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಎಲ್ಲಾ ನಾಯಕರಿಗೆ ಹಾರ್ದಿಕ ಶುಭಾಶಯಗಳು. ನಿಮ್ಮೆಲ್ಲರ ಅಪಾರ ರಾಜಕೀಯ ಅನುಭವ ಹಾಗೂ ಬದ್ಧತೆ ನಮ್ಮ ಸರ್ಕಾರದ ಆಡಳಿತ ಯಂತ್ರಕ್ಕೆ ಇನ್ನಷ್ಟು ಚುರುಕು ಮತ್ತು ಶಕ್ತಿ ತುಂಬಲಿದೆ ಎಂಬ ವಿಶ್ವಾಸ ನನಗಿದೆ. ಪಾರದರ್ಶಕ, ದಕ್ಷ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ನಾವೆಲ್ಲರೂ ಒಟ್ಟಾಗಿ ನಿಭಾಯಿಸೋಣ. ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಕರುನಾಡನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸೋಣ. ಬಲಿಷ್ಠ ಕರ್ನಾಟಕಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ.
    1
    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ನನ್ನ ಸಹೋದ್ಯೋಗಿ ಮಿತ್ರರಿಗೆ, ಹಾಗೆಯೇ ವಿಧಾನಸಭಾ ಸಭಾಧ್ಯಕ್ಷರಾಗಿ ಹಾಗೂ ಉಪಸಭಾಧ್ಯಕ್ಷರಾಗಿ, ವಿಧಾನಪರಿಷತ್ ಸಭಾಪತಿಯಾಗಿ ಹಾಗೂ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಎಲ್ಲಾ ನಾಯಕರಿಗೆ ಹಾರ್ದಿಕ ಶುಭಾಶಯಗಳು.

ನಿಮ್ಮೆಲ್ಲರ ಅಪಾರ ರಾಜಕೀಯ ಅನುಭವ ಹಾಗೂ ಬದ್ಧತೆ ನಮ್ಮ ಸರ್ಕಾರದ ಆಡಳಿತ ಯಂತ್ರಕ್ಕೆ ಇನ್ನಷ್ಟು ಚುರುಕು ಮತ್ತು ಶಕ್ತಿ ತುಂಬಲಿದೆ ಎಂಬ ವಿಶ್ವಾಸ ನನಗಿದೆ. ಪಾರದರ್ಶಕ, ದಕ್ಷ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ನಾವೆಲ್ಲರೂ ಒಟ್ಟಾಗಿ ನಿಭಾಯಿಸೋಣ.

ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಕರುನಾಡನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸೋಣ. ಬಲಿಷ್ಠ ಕರ್ನಾಟಕಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    5 hrs ago
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    4
    ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ.
ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ.
ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.
ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು
ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ
ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    8 hrs ago
  • ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ನೌಕರರ ಭವನದಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಕ್ರಿಕೆಟ್ ಚೆಸ್ , ಸೇರಿದಂತೆ ವಿವಿಧ ಬಗೆಯ ಕ್ರೀಡಾಕೂಟ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿಗಳ ನೌಕರರು ಸಿಬ್ಬಂದಿಗಳಿಗೆ ವಿವಿಧ ಬಗೆಯ ಕ್ರೀಡೆಗಳನ್ನ ನಡೆಸಲಾಯಿತು. ಇದೇ ವೇಳೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಮಾತನಾಡಿದ್ದು ಕ್ರೀಡೆ ಮಾನವನ ದೇಹಕ್ಕೆ ಒಂದು ಉತ್ಸಾಹವನ್ನ ನೀಡುತ್ತದೆ. ಕೇವಲ ಮನರಂಜನೆಗೆ ಕ್ರೀಡೆಯನ್ನ ಆಡದೆ ಆರೋಗ್ಯದ ದೃಷ್ಟಿಯಿಂದಲೂ ಸಹ ಕ್ರೀಡೆಯನ್ನ ಮೈಗೂಡಿಸಿಕೊಳ್ಳಬೇಕು.‌ ಬೆಳಗ್ಗೆ ವ್ಯಾಯಾಮ ಮಾಡುವುದರ ಜೊತೆ ತಿಂಗಳಿಗೆ ಎರಡು ಬಾರಿ ಉಪವಾಸ ಮಾಡಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟವರು ಆದಷ್ಟು ಸಿಹಿ ಪದಾರ್ಥಗಳ ಸೇವೆನೆ ಕಡಿಮೆ ಮಾಡುವ ಮೂಲಕ ದೇಹದ ಸಮತೋಲನ ಕಾಪಾಡಲು ಗಮನ ಹರಿಸಬೇಕು ಎಂದು ತಿಳಿಸಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ
    1
    ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ನೌಕರರ ಭವನದಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಕ್ರಿಕೆಟ್ ಚೆಸ್ , ಸೇರಿದಂತೆ ವಿವಿಧ ಬಗೆಯ ಕ್ರೀಡಾಕೂಟ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿಗಳ ನೌಕರರು ಸಿಬ್ಬಂದಿಗಳಿಗೆ ವಿವಿಧ ಬಗೆಯ ಕ್ರೀಡೆಗಳನ್ನ ನಡೆಸಲಾಯಿತು. ಇದೇ ವೇಳೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಮಾತನಾಡಿದ್ದು ಕ್ರೀಡೆ ಮಾನವನ ದೇಹಕ್ಕೆ ಒಂದು ಉತ್ಸಾಹವನ್ನ ನೀಡುತ್ತದೆ. ಕೇವಲ ಮನರಂಜನೆಗೆ ಕ್ರೀಡೆಯನ್ನ ಆಡದೆ ಆರೋಗ್ಯದ ದೃಷ್ಟಿಯಿಂದಲೂ ಸಹ ಕ್ರೀಡೆಯನ್ನ ಮೈಗೂಡಿಸಿಕೊಳ್ಳಬೇಕು.‌ ಬೆಳಗ್ಗೆ ವ್ಯಾಯಾಮ ಮಾಡುವುದರ ಜೊತೆ ತಿಂಗಳಿಗೆ ಎರಡು ಬಾರಿ ಉಪವಾಸ ಮಾಡಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟವರು ಆದಷ್ಟು ಸಿಹಿ ಪದಾರ್ಥಗಳ ಸೇವೆನೆ ಕಡಿಮೆ ಮಾಡುವ ಮೂಲಕ ದೇಹದ ಸಮತೋಲನ ಕಾಪಾಡಲು ಗಮನ ಹರಿಸಬೇಕು ಎಂದು ತಿಳಿಸಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ ---------------------- ಚಿಕ್ಕನಾಯಕನಹಳ್ಳಿ: ತಾಲ್ಲೂಕಿಗೆ ಹೇಮಾವತಿ ನೀರು ಹರಿಸಬೇಕು ಹಾಗೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಮಾಜಿ ಶಾಸಕ ಬಿ.ಲಕ್ಕಪ್ಪ ಅವರು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣವೇ ಸೂಕ್ತ ಆಶ್ವಾಸನೆ ನೀಡದಿದ್ದರೆ 'ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಂದ್' ನಡೆಸಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತ ರೈತರೊಂದಿಗೆ ನೆಲದ ಮೇಲೆ ಕುಳಿತು ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗಮನ ಸೆಳೆಯಲು ತೀವ್ರ ಹೋರಾಟ: "ಸುಮ್ಮನೆ ಬಂದು ಕುಳಿತು, ಎದ್ದು ಹೋಗುವಂತಹ ಹೋರಾಟದಿಂದ ಯಾವುದೇ ಪ್ರಯೋಜನವಿಲ್ಲ. ಸರ್ಕಾರ ಕಣ್ಣು ಮುಚ್ಚಿ ಕುಳಿತಿದ್ದು, ಅದರ ಗಮನ ಸೆಳೆಯಬೇಕಾದರೆ ಅತ್ಯಂತ ಪರಿಣಾಮಕಾರಿಯಾದ ನಿಲುವು ತಳೆಯಬೇಕಾಗಿದೆ. ನೀರಾವರಿ ಸೌಲಭ್ಯ ಸಿಗುವವರೆಗೂ ಹಾಗೂ ಸರ್ಕಾರದ ಸ್ಪಷ್ಟ ಆಶ್ವಾಸನೆ ಸಿಗುವವರೆಗೂ ಈ ಹೋರಾಟವನ್ನು ಅರ್ಧಕ್ಕೆ ಕೈಬಿಡಬಾರದು" ಎಂದು ಹೇಳಿದರು. ರಾಜಕೀಯ ರಹಿತ ಬೆಂಬಲ, ತಾಲ್ಲೂಕು ಬಂದ್‌ಗೆ ಕರೆ: "ಈ ಹೋರಾಟದಲ್ಲಿ ಯಾವುದೇ ಪಕ್ಷ ಅಥವಾ ರಾಜಕೀಯವಿಲ್ಲ. ಇದು ಇಡೀ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರ ಬದುಕಿನ ಪ್ರಶ್ನೆ. ರೈತರು ಒಗ್ಗಟ್ಟಾಗಿ ನಿಲ್ಲಬೇಕು. ಅಗತ್ಯಬಿದ್ದರೆ ಇಡೀ ಚಿಕ್ಕನಾಯಕನಹಳ್ಳಿ ತಾಲ್ಲೂಕನ್ನು ಬಂದ್ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಿ ಸರ್ಕಾರದ ಮೇಲೆ ತೀವ್ರ ಒತ್ತಡ ತರಬೇಕಾಗಿದೆ" ಎಂದು ಕರೆ ನೀಡಿದರು. ರೈತರ ಜೊತೆ ಕೊನೆಯವರೆಗೂ ನಿಲ್ಲುವ ಅಭಯ: "ನಾನು ಮೊದಲಿನಿಂದಲೂ ನೀರಾವರಿ ಯೋಜನೆಗಳ ಬಗ್ಗೆ ಹಾಗೂ ರೈತರ ಪರವಾಗಿ ಆಸಕ್ತಿ ಹೊಂದಿರುವವನು. ಹಿಂದೆ ಹಲವು ಬಾರಿ ಹೋರಾಟ ನಡೆಸಿದರೂ ಸೂಕ್ತ ಫಲಿತಾಂಶ ಸಿಕ್ಕಿಲ್ಲ. ಆದರೆ ಈಗ ರೈತ ಸಂಘಟನೆಗಳು ಆರಂಭಿಸಿರುವ ಈ ಹೋರಾಟ ತಾರ್ಕಿಕ ಅಂತ್ಯ ಕಾಣಲೇಬೇಕು. ರೈತರ ಈ ನ್ಯಾಯಯುತ ಹೋರಾಟದಲ್ಲಿ ನಾನು ನಿಮ್ಮೊಂದಿಗಿದ್ದು, ಸಂಪೂರ್ಣ ಬೆಂಬಲ ನೀಡುತ್ತೇನೆ" ಎಂದು ರೈತರಿಗೆ ಧೈರ್ಯ ತುಂಬಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು, ನೂರಾರು ರೈತರು ಹಾಗೂ ಸ್ಥಳೀಯ ಸಾರ್ವಜನಿಕರು ಹಸಿರು ಶಾಲು ಧರಿಸಿ ಭಾಗವಹಿಸಿದ್ದು, ಸ್ಥಳದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ 
ಚಿಕ್ಕನಾಯಕನಹಳ್ಳಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ. ಲಕ್ಕಪ್ಪ 
----------------------
ಚಿಕ್ಕನಾಯಕನಹಳ್ಳಿ: ತಾಲ್ಲೂಕಿಗೆ ಹೇಮಾವತಿ ನೀರು ಹರಿಸಬೇಕು ಹಾಗೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಮಾಜಿ ಶಾಸಕ ಬಿ.ಲಕ್ಕಪ್ಪ ಅವರು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣವೇ ಸೂಕ್ತ ಆಶ್ವಾಸನೆ ನೀಡದಿದ್ದರೆ 'ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಂದ್' ನಡೆಸಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತ ರೈತರೊಂದಿಗೆ ನೆಲದ ಮೇಲೆ ಕುಳಿತು ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸರ್ಕಾರದ ಗಮನ ಸೆಳೆಯಲು ತೀವ್ರ ಹೋರಾಟ:
"ಸುಮ್ಮನೆ ಬಂದು ಕುಳಿತು, ಎದ್ದು ಹೋಗುವಂತಹ ಹೋರಾಟದಿಂದ ಯಾವುದೇ ಪ್ರಯೋಜನವಿಲ್ಲ. ಸರ್ಕಾರ ಕಣ್ಣು ಮುಚ್ಚಿ ಕುಳಿತಿದ್ದು, ಅದರ ಗಮನ ಸೆಳೆಯಬೇಕಾದರೆ ಅತ್ಯಂತ ಪರಿಣಾಮಕಾರಿಯಾದ ನಿಲುವು ತಳೆಯಬೇಕಾಗಿದೆ. ನೀರಾವರಿ ಸೌಲಭ್ಯ ಸಿಗುವವರೆಗೂ ಹಾಗೂ ಸರ್ಕಾರದ ಸ್ಪಷ್ಟ ಆಶ್ವಾಸನೆ ಸಿಗುವವರೆಗೂ ಈ ಹೋರಾಟವನ್ನು ಅರ್ಧಕ್ಕೆ ಕೈಬಿಡಬಾರದು" ಎಂದು ಹೇಳಿದರು.
ರಾಜಕೀಯ ರಹಿತ ಬೆಂಬಲ, ತಾಲ್ಲೂಕು ಬಂದ್‌ಗೆ ಕರೆ:
"ಈ ಹೋರಾಟದಲ್ಲಿ ಯಾವುದೇ ಪಕ್ಷ ಅಥವಾ ರಾಜಕೀಯವಿಲ್ಲ. ಇದು ಇಡೀ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರ ಬದುಕಿನ ಪ್ರಶ್ನೆ. ರೈತರು ಒಗ್ಗಟ್ಟಾಗಿ ನಿಲ್ಲಬೇಕು. ಅಗತ್ಯಬಿದ್ದರೆ ಇಡೀ ಚಿಕ್ಕನಾಯಕನಹಳ್ಳಿ ತಾಲ್ಲೂಕನ್ನು ಬಂದ್ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಿ ಸರ್ಕಾರದ ಮೇಲೆ ತೀವ್ರ ಒತ್ತಡ ತರಬೇಕಾಗಿದೆ" ಎಂದು ಕರೆ ನೀಡಿದರು.
ರೈತರ ಜೊತೆ ಕೊನೆಯವರೆಗೂ ನಿಲ್ಲುವ ಅಭಯ:
"ನಾನು ಮೊದಲಿನಿಂದಲೂ ನೀರಾವರಿ ಯೋಜನೆಗಳ ಬಗ್ಗೆ ಹಾಗೂ ರೈತರ ಪರವಾಗಿ ಆಸಕ್ತಿ ಹೊಂದಿರುವವನು. ಹಿಂದೆ ಹಲವು ಬಾರಿ ಹೋರಾಟ ನಡೆಸಿದರೂ ಸೂಕ್ತ ಫಲಿತಾಂಶ ಸಿಕ್ಕಿಲ್ಲ. ಆದರೆ ಈಗ ರೈತ ಸಂಘಟನೆಗಳು ಆರಂಭಿಸಿರುವ ಈ ಹೋರಾಟ ತಾರ್ಕಿಕ ಅಂತ್ಯ ಕಾಣಲೇಬೇಕು. ರೈತರ ಈ ನ್ಯಾಯಯುತ ಹೋರಾಟದಲ್ಲಿ ನಾನು ನಿಮ್ಮೊಂದಿಗಿದ್ದು, ಸಂಪೂರ್ಣ ಬೆಂಬಲ ನೀಡುತ್ತೇನೆ" ಎಂದು ರೈತರಿಗೆ ಧೈರ್ಯ ತುಂಬಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು, ನೂರಾರು ರೈತರು ಹಾಗೂ ಸ್ಥಳೀಯ ಸಾರ್ವಜನಿಕರು ಹಸಿರು ಶಾಲು ಧರಿಸಿ ಭಾಗವಹಿಸಿದ್ದು, ಸ್ಥಳದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    12 hrs ago
  • ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ. "ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು
    1
    ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ.

"ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ
ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.