Shuru
Apke Nagar Ki App…
ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು–2026ರ ಪೊಲೀಸ್ ಟೀಮ್ 10ಕೆ ಓಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಮ.ಪಿ.ಸಿ. 450 ಕು. ಜಯಶ್ರೀ ಬಗಲಿ ಅವರು ಪ್ರಥಮ ಸ್ಥಾನ ಪಡೆದು ವಿಜೇತರಾಗಿದ್ದರೆ, ಮ.ಪಿ.ಸಿ. 397 ಶ್ರೀಮತಿ ಕುಸುಮ ಅವರು ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡು ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಪ್ರತಿಮ ಸಾಧನೆ ತೋರಿದ ಈ ವಿಜೇತ ಸಿಬ್ಬಂದಿಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು (ಡಿಜಿ) ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಅವರಿಂದ ಪ್ರತಿಷ್ಠಿತ ಟಿಸಿಎಸ್ ಕಪ್ ಪ್ರದಾನ ಮಾಡಿ ಗೌರವಿಸಲಾಯಿತು. ಈ ಹೆಮ್ಮೆಯ ಸಾಧನೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯು ಇಬ್ಬರೂ ಸಿಬ್ಬಂದಿಯನ್ನು ಆತ್ಮೀಯವಾಗಿ ಅಭಿನಂದಿಸಿದ್ದು, ಅವರ ಮುಂದಿನ ಯಶಸ್ಸು ಹಾಗೂ ಸಾಧನೆಗಳಿಗೆ ಶುಭ ಹಾರೈಸಿದೆ.
ಸುನೀಲ್ ಲ್ ಬೆಟಗೇರಿ
ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು–2026ರ ಪೊಲೀಸ್ ಟೀಮ್ 10ಕೆ ಓಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಮ.ಪಿ.ಸಿ. 450 ಕು. ಜಯಶ್ರೀ ಬಗಲಿ ಅವರು ಪ್ರಥಮ ಸ್ಥಾನ ಪಡೆದು ವಿಜೇತರಾಗಿದ್ದರೆ, ಮ.ಪಿ.ಸಿ. 397 ಶ್ರೀಮತಿ ಕುಸುಮ ಅವರು ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡು ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಪ್ರತಿಮ ಸಾಧನೆ ತೋರಿದ ಈ ವಿಜೇತ ಸಿಬ್ಬಂದಿಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು (ಡಿಜಿ) ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಅವರಿಂದ ಪ್ರತಿಷ್ಠಿತ ಟಿಸಿಎಸ್ ಕಪ್ ಪ್ರದಾನ ಮಾಡಿ ಗೌರವಿಸಲಾಯಿತು. ಈ ಹೆಮ್ಮೆಯ ಸಾಧನೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯು ಇಬ್ಬರೂ ಸಿಬ್ಬಂದಿಯನ್ನು ಆತ್ಮೀಯವಾಗಿ ಅಭಿನಂದಿಸಿದ್ದು, ಅವರ ಮುಂದಿನ ಯಶಸ್ಸು ಹಾಗೂ ಸಾಧನೆಗಳಿಗೆ ಶುಭ ಹಾರೈಸಿದೆ.
More news from ಕರ್ನಾಟಕ and nearby areas
- ಬೆಂಗಳೂರಿನಲ್ಲಿ ವ್ಯಾಪಾರ ಮಾಡಲು ಕನ್ನಡಿಗರಿಗೆ ಮಾತ್ರ ಅವಕಾಶ ಇರಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.1
- ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.1
- ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ ಪಾಟೀಲ ಅವರು, ಜಿ.ಬಿ.ಎ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರವು ಕುಂಟು ನೆಪ ಹೇಳುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಿದ್ಧತೆ ಮಾಡಿಕೊಂಡಿದ್ದರೂ ಸಹ, ಸರ್ಕಾರವು ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದ ಎಸ್.ಐ.ಆರ್ ಎಂಬ ಕುಂಟು ನೆಪವನ್ನು ಹೇಳಿ ಅರ್ಜಿ ಸಲ್ಲಿಸಿದೆ ಎಂದು ಅವರು ದೂರಿದ್ದಾರೆ. ಪ್ರತಿಯೊಂದಕ್ಕೂ ಎಸ್.ಐ.ಆರ್ ಎನ್ನುವುದು ಸೂಕ್ತವಲ್ಲ ಮತ್ತು ಬಹುತೇಕ ಕಾಂಗ್ರೆಸ್ ಮುಖಂಡರಿಗೆ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವೇ ಇಲ್ಲ ಎಂದು ಅವರು ಟೀಕಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಿ.ಬಿ.ಎ ಚುನಾವಣೆ ನಡೆದಿಲ್ಲ ಎಂದಾಕ್ಷಣ ಈ ಸರ್ಕಾರವೂ ಅದನ್ನು ನಡೆಸಬಾರದೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದ್ದು, ಇನ್ನು ಆರು ತಿಂಗಳು ಇರುವಾಗಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದರು. ನಮಗೆ ಇರುವುದೇ ನಾಲ್ಕೂವರೆ ವರ್ಷಗಳ ಅಧಿಕಾರ ಅವಧಿಯಾಗಿದ್ದು, ಈ ಅವಧಿಯಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.1
- ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.2
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.4
- ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.2
- Available for Sale Item : ಅಕ್ಕಿ Quantity Available : 500 Price : 60 City / Locality : ಹೊಸನಗರ Farming Sector : Crops ಕೆಂಪಕ್ಕಿ ದೊರೆಯುತ್ತದೆ1
- ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.2