logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

* ರಾಜಕೀಯ ಸಿದ್ಧಾಂತದ ಬದ್ಧತೆ ಅಗತ್ಯ: ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ನೀಡಲು ಐದು ಗ್ಯಾರಂಟಿ ನೀಡಿದ್ದೇವೆ : ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ * ಬೆಂಗಳೂರು: “ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ನೀಡಲು ಐದು ಗ್ಯಾರಂಟಿ ನೀಡಿದ್ದೇವೆ. ಪ್ರತಿವರ್ಷ 52,000 ಕೋಟಿ ರೂ. ಖರ್ಚು ಮಾಡಲಾಗಿದೆ. ಅದಕ್ಕೆ ನಮ್ಮ ರಾಜಕೀಯ ಸಿದ್ಧಾಂತದ ಬದ್ಧತೆಯೇ ಕಾರಣ. ಎಸ್‌ಸಿಎಸ್‌ಪಿ- ಟಿಎಸ್‌ಪಿ ಯೋಜನೆಯನ್ನು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದರು. ಆದರೆ ಕೇಂದ್ರ ಸರ್ಕಾರ ಏಕೆ ಈ ಯೋಜನೆಯನ್ನು ಜಾರಿಗೆ ತರಬಾರದು. ಇದನ್ನು ಜಾರಿಗೆ ತರಲು ಬದ್ಧತೆ ಇರಬೇಕು” ಎಂದು ಅಭಿಪ್ರಾಯಪಟ್ಟರು. “ಡಬಲ್ ಇಂಜಿನ್ ಸರ್ಕಾರ ಇದ್ದರೂ ಜನ 2023ರಲ್ಲಿ 136 ಸೀಟುಗಳ ಮೂಲಕ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದರು. ಜನರ ಮನಸ್ಸನ್ನು ಅರಿಯುವುದು ಕಷ್ಟ. ಭಾರತ್ ಜೋಡೋ ಸಂದರ್ಭದಲ್ಲಿ ಜನರ, ನೋವು ಕಷ್ಟಗಳನ್ನು ಅರಿತುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು” ಎಂದು ಹೇಳಿದರು. ಮೀಸಲಾತಿಯನ್ನು ಕಾಪಾಡಿದ್ದು ಕಾಂಗ್ರೆಸ್ ಸರ್ಕಾರ: “ದೇಶದ ಜನರ ಮತದಾನ ಉಳಿಯಬೇಕು. ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ದೇವರು ವರವನ್ನು ಕೊಡುವುದಿಲ್ಲ, ಶಾಪವನೂ ಕೊಡುವುದಿಲ್ಲ. ಅವಕಾಶವನ್ನು ಮಾತ್ರ ಕೊಡುತ್ತಾನೆ. ಕೊಟ್ಟ ಅವಕಾಶವನ್ನು ಬಳಸಿಕೊಂಡು ಜನರಿಗೆ ಸರಿಯಾಗಿ ಅವಕಾಶ ಕೊಡಬೇಕು. ಭಾರತದ ಜನರಿಗೆ ನಾನು ಖಡ್ಗ ಕೊಡುವುದಿಲ್ಲ ಮತದಾನದ ಹಕ್ಕನ್ನು ನೀಡಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ಯಾವ ವರ್ಗದವರನ್ನು ನೋಯಿಸಲು ನಮಗೆ ಇಷ್ಟವಿಲ್ಲ. ನಮ್ಮ ಪಕ್ಷದ ಸಿದ್ಧಾಂತದ ಪ್ರಕಾರ ಸರ್ವರಿಗೂ ಸಮಬಾಳು ನೀಡಲಾಗುವುದು. ನಮಗೆ ಮನುಷ್ಯತ್ವ, ಮಾನವೀಯತೆ ಮುಖ್ಯ. ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡಲಾಗಿದೆ” ಎಂದು ಹೇಳಿದರು. “10-15 ಲಕ್ಷ ನಿವೇಶನಗಳನ್ನು ಬಡವರಿಗೆ ಹಂಚಬೇಕೆಂದು ಕಾರ್ಯಕ್ರಮ ರೂಪಿಸಿಸಲಾಗಿದೆ. ಉಳುವವನಿಗೆ ಭೂಮಿಯಂತಹ ಕಾರ್ಯಕ್ರಮವನ್ನು ಬಿಜೆಪಿ, ಜೆಡಿಎಸ್ ಪಕ್ಷಗಳು ಕೊಟ್ಟಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಮಾತ್ರ ಇಂಥ ಕಾರ್ಯಕ್ರಮ ನೀಡಿದೆ” ಎಂದರು.

1 hr ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
ಕೋಲಾರ, ಕೋಲಾರ, ಕರ್ನಾಟಕ•
1 hr ago
7956c3d7-a5e0-408b-b5af-ab103674c952

* ರಾಜಕೀಯ ಸಿದ್ಧಾಂತದ ಬದ್ಧತೆ ಅಗತ್ಯ: ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ನೀಡಲು ಐದು ಗ್ಯಾರಂಟಿ ನೀಡಿದ್ದೇವೆ : ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ * ಬೆಂಗಳೂರು: “ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ನೀಡಲು ಐದು ಗ್ಯಾರಂಟಿ ನೀಡಿದ್ದೇವೆ. ಪ್ರತಿವರ್ಷ 52,000 ಕೋಟಿ ರೂ. ಖರ್ಚು ಮಾಡಲಾಗಿದೆ. ಅದಕ್ಕೆ ನಮ್ಮ ರಾಜಕೀಯ ಸಿದ್ಧಾಂತದ ಬದ್ಧತೆಯೇ ಕಾರಣ. ಎಸ್‌ಸಿಎಸ್‌ಪಿ- ಟಿಎಸ್‌ಪಿ ಯೋಜನೆಯನ್ನು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದರು. ಆದರೆ ಕೇಂದ್ರ ಸರ್ಕಾರ ಏಕೆ ಈ ಯೋಜನೆಯನ್ನು ಜಾರಿಗೆ ತರಬಾರದು. ಇದನ್ನು ಜಾರಿಗೆ ತರಲು ಬದ್ಧತೆ ಇರಬೇಕು” ಎಂದು ಅಭಿಪ್ರಾಯಪಟ್ಟರು. “ಡಬಲ್ ಇಂಜಿನ್ ಸರ್ಕಾರ ಇದ್ದರೂ ಜನ 2023ರಲ್ಲಿ 136 ಸೀಟುಗಳ ಮೂಲಕ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದರು. ಜನರ ಮನಸ್ಸನ್ನು ಅರಿಯುವುದು ಕಷ್ಟ. ಭಾರತ್ ಜೋಡೋ ಸಂದರ್ಭದಲ್ಲಿ ಜನರ, ನೋವು ಕಷ್ಟಗಳನ್ನು ಅರಿತುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು” ಎಂದು ಹೇಳಿದರು. ಮೀಸಲಾತಿಯನ್ನು ಕಾಪಾಡಿದ್ದು ಕಾಂಗ್ರೆಸ್ ಸರ್ಕಾರ: “ದೇಶದ ಜನರ ಮತದಾನ ಉಳಿಯಬೇಕು. ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ದೇವರು ವರವನ್ನು ಕೊಡುವುದಿಲ್ಲ, ಶಾಪವನೂ ಕೊಡುವುದಿಲ್ಲ. ಅವಕಾಶವನ್ನು ಮಾತ್ರ ಕೊಡುತ್ತಾನೆ. ಕೊಟ್ಟ ಅವಕಾಶವನ್ನು ಬಳಸಿಕೊಂಡು ಜನರಿಗೆ ಸರಿಯಾಗಿ ಅವಕಾಶ ಕೊಡಬೇಕು. ಭಾರತದ ಜನರಿಗೆ ನಾನು ಖಡ್ಗ ಕೊಡುವುದಿಲ್ಲ ಮತದಾನದ ಹಕ್ಕನ್ನು ನೀಡಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ಯಾವ ವರ್ಗದವರನ್ನು ನೋಯಿಸಲು ನಮಗೆ ಇಷ್ಟವಿಲ್ಲ. ನಮ್ಮ ಪಕ್ಷದ ಸಿದ್ಧಾಂತದ ಪ್ರಕಾರ ಸರ್ವರಿಗೂ ಸಮಬಾಳು ನೀಡಲಾಗುವುದು. ನಮಗೆ ಮನುಷ್ಯತ್ವ, ಮಾನವೀಯತೆ ಮುಖ್ಯ. ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡಲಾಗಿದೆ” ಎಂದು ಹೇಳಿದರು. “10-15 ಲಕ್ಷ ನಿವೇಶನಗಳನ್ನು ಬಡವರಿಗೆ ಹಂಚಬೇಕೆಂದು ಕಾರ್ಯಕ್ರಮ ರೂಪಿಸಿಸಲಾಗಿದೆ. ಉಳುವವನಿಗೆ ಭೂಮಿಯಂತಹ ಕಾರ್ಯಕ್ರಮವನ್ನು ಬಿಜೆಪಿ, ಜೆಡಿಎಸ್ ಪಕ್ಷಗಳು ಕೊಟ್ಟಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಮಾತ್ರ ಇಂಥ ಕಾರ್ಯಕ್ರಮ ನೀಡಿದೆ” ಎಂದರು.

More news from ಕರ್ನಾಟಕ and nearby areas
  • Post by Chand Pasha
    4
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು  ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ  ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ  ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
    4
    * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ 
ದೊಡ್ಡವಲ್ಲಬಿ ಲಕ್ಷ್ಮಣಗೌಡ*
ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು  ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ
ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ,
ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು  ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ 
ಗೌರಿ ಗಣೇಶನ ಹಬ್ಬವನ್ನು 
ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು.
ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ  ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು,
ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ
ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು.
ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    22 hrs ago
  • ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ: ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, "ಪ್ರಜಾಪ್ರಭುತ್ವವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು," ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪ್ರಜಾಪ್ರಭುತ್ವದ ಮಹತ್ವ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
    1
    ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬಂಗಾರಪೇಟೆ: ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, "ಪ್ರಜಾಪ್ರಭುತ್ವವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು," ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಪ್ರಜಾಪ್ರಭುತ್ವದ ಮಹತ್ವ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
    user_KOLAR X PRESS
    KOLAR X PRESS
    Local News Reporter ಮುಳಬಾಗಿಲು, ಕೋಲಾರ, ಕರ್ನಾಟಕ•
    12 hrs ago
  • ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ. ​ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ​ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
    1
    ಸೆ.19 ರಂದು ಕೆ.ಜಿ.ಎಫ್‌ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಸಮಾಜಸೇವಕ ವಿ. ಮೋಹನ್‌ಕೃಷ್ಣ 

ಕೆ.ಜಿ.ಎಫ್: ನಗರದ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್‌ನಲ್ಲಿ ಸೆಪ್ಟೆಂಬರ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜಸೇವಕ ವಿ. ಮೋಹನ್‌ಕೃಷ್ಣ ತಿಳಿಸಿದ್ದಾರೆ.
​ಈ ಉದ್ಯೋಗ ಮೇಳದಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. 10ನೇ ತರಗತಿ, ಪಿಯುಸಿ, ಪದವಿ (ಡಿಗ್ರಿ) ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಯುವಕ-ಯುವತಿಯರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.
​ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನತೆ ನಿರುದ್ಯೋಗ ಮತ್ತು ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಿ, ಅವರ ಭವಿಷ್ಯವನ್ನು ಸನ್ಮಾರ್ಗದಲ್ಲಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ತರಬೇತಿ ಸೇರಿದಂತೆ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    15 hrs ago
  • ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    2
    ಹೆದ್ದಾರಿಯಲ್ಲಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ದೇವನಹಳ್ಳಿ 
ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. 
ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. 
ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. 
ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. 
ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. 
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. 
ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. 
ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. 
ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. 
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. 
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    16 hrs ago
  • ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!
    1
    ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    36 min ago
  • ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ
    1
    ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ 
ಮುಖಂಡರಿಂದ ಖಡಕ್ ಎಚ್ಚರಿಕೆ
ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ 
ಮುಖಂಡರಿಂದ ಖಡಕ್ ಎಚ್ಚರಿಕೆ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    1
    ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    40 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.